< ಧರ್ಮೋಪದೇಶಕಾಂಡ 17 >

1 ಯಾವುದೇ ಕುಂದುಕೊರತೆ ಅಥವಾ ಊನ ಇರುವ ಎತ್ತು ಮತ್ತು ಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವುದು ಆತನಿಗೆ ಅಸಹ್ಯವಾಗಿದೆ.
לֹא־תִזְבַּח֩ לַיהוָ֨ה אֱלֹהֶ֜יךָ שׁ֣וֹר וָשֶׂ֗ה אֲשֶׁ֨ר יִהְיֶ֥ה בוֹ֙ מ֔וּם כֹּ֖ל דָּבָ֣ר רָ֑ע כִּ֧י תוֹעֲבַ֛ת יְהוָ֥ה אֱלֹהֶ֖יךָ הֽוּא׃ ס
2 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ ಅಥವಾ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ,
כִּֽי־יִמָּצֵ֤א בְקִרְבְּךָ֙ בְּאַחַ֣ד שְׁעָרֶ֔יךָ אֲשֶׁר־יְהוָ֥ה אֱלֹהֶ֖יךָ נֹתֵ֣ן לָ֑ךְ אִ֣ישׁ אוֹ־אִשָּׁ֗ה אֲשֶׁ֨ר יַעֲשֶׂ֧ה אֶת־הָרַ֛ע בְּעֵינֵ֥י יְהוָֽה־אֱלֹהֶ֖יךָ לַעֲבֹ֥ר בְּרִיתֽוֹ׃
3 ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡಿಸಿದರೆ,
וַיֵּ֗לֶךְ וַֽיַּעֲבֹד֙ אֱלֹהִ֣ים אֲחֵרִ֔ים וַיִּשְׁתַּ֖חוּ לָהֶ֑ם וְלַשֶּׁ֣מֶשׁ ׀ א֣וֹ לַיָּרֵ֗חַ א֛וֹ לְכָל־צְבָ֥א הַשָּׁמַ֖יִם אֲשֶׁ֥ר לֹא־צִוִּֽיתִי׃
4 ನೀವು ಆ ಸಂಗತಿಯನ್ನು ಕೇಳಿದಾಗ ಸೂಕ್ಷ್ಮವಾಗಿ ವಿಚಾರಣೆಯನ್ನು ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ನಿಷಿದ್ಧಕಾರ್ಯವು ನಡೆದದ್ದು ನಿಜವೆಂದು ತಿಳಿದು ಬಂದರೆ,
וְהֻֽגַּד־לְךָ֖ וְשָׁמָ֑עְתָּ וְדָרַשְׁתָּ֣ הֵיטֵ֔ב וְהִנֵּ֤ה אֱמֶת֙ נָכ֣וֹן הַדָּבָ֔ר נֶעֶשְׂתָ֛ה הַתּוֹעֵבָ֥ה הַזֹּ֖את בְּיִשְׂרָאֵֽל׃
5 ಆಗ ಆ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು.
וְהֽוֹצֵאתָ֣ אֶת־הָאִ֣ישׁ הַה֡וּא אוֹ֩ אֶת־הָאִשָּׁ֨ה הַהִ֜וא אֲשֶׁ֣ר עָ֠שׂוּ אֶת־הַדָּבָ֨ר הָרָ֤ע הַזֶּה֙ אֶל־שְׁעָרֶ֔יךָ אֶת־הָאִ֕ישׁ א֖וֹ אֶת־הָאִשָּׁ֑ה וּסְקַלְתָּ֥ם בָּאֲבָנִ֖ים וָמֵֽתוּ׃
6 ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರ ಸಾಕ್ಷಿಗಳು ಬೇಕು.
עַל־פִּ֣י ׀ שְׁנַ֣יִם עֵדִ֗ים א֛וֹ שְׁלֹשָׁ֥ה עֵדִ֖ים יוּמַ֣ת הַמֵּ֑ת לֹ֣א יוּמַ֔ת עַל־פִּ֖י עֵ֥ד אֶחָֽד׃
7 ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
יַ֣ד הָעֵדִ֞ים תִּֽהְיֶה־בּ֤וֹ בָרִאשֹׁנָה֙ לַהֲמִית֔וֹ וְיַ֥ד כָּל־הָעָ֖ם בָּאַחֲרֹנָ֑ה וּבִֽעַרְתָּ֥ הָרָ֖ע מִקִּרְבֶּֽךָ׃ פ
8 ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.
כִּ֣י יִפָּלֵא֩ מִמְּךָ֨ דָבָ֜ר לַמִּשְׁפָּ֗ט בֵּֽין־דָּ֨ם ׀ לְדָ֜ם בֵּֽין־דִּ֣ין לְדִ֗ין וּבֵ֥ין נֶ֙גַע֙ לָנֶ֔גַע דִּבְרֵ֥י רִיבֹ֖ת בִּשְׁעָרֶ֑יךָ וְקַמְתָּ֣ וְעָלִ֔יתָ אֶל־הַמָּק֔וֹם אֲשֶׁ֥ר יִבְחַ֛ר יְהוָ֥ה אֱלֹהֶ֖יךָ בּֽוֹ׃
9 ಅಲ್ಲಿ ಯಾಜಕಸೇವೆಯನ್ನು ಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಲು ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.
וּבָאתָ֗ אֶל־הַכֹּהֲנִים֙ הַלְוִיִּ֔ם וְאֶל־הַשֹּׁפֵ֔ט אֲשֶׁ֥ר יִהְיֶ֖ה בַּיָּמִ֣ים הָהֵ֑ם וְדָרַשְׁתָּ֙ וְהִגִּ֣ידוּ לְךָ֔ אֵ֖ת דְּבַ֥ר הַמִּשְׁפָּֽט׃
10 ೧೦ ಯೆಹೋವನು ಆರಿಸಿಕೊಂಡ ಆ ಸ್ಥಳದಿಂದ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು.
וְעָשִׂ֗יתָ עַל־פִּ֤י הַדָּבָר֙ אֲשֶׁ֣ר יַגִּ֣ידֽוּ לְךָ֔ מִן־הַמָּק֣וֹם הַה֔וּא אֲשֶׁ֖ר יִבְחַ֣ר יְהוָ֑ה וְשָׁמַרְתָּ֣ לַעֲשׂ֔וֹת כְּכֹ֖ל אֲשֶׁ֥ר יוֹרֽוּךָ׃
11 ೧೧ ಅವರು ಕಲಿಸಿಕೊಡುವ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತಿರುಗಬಾರದು.
עַל־פִּ֨י הַתּוֹרָ֜ה אֲשֶׁ֣ר יוֹר֗וּךָ וְעַל־הַמִּשְׁפָּ֛ט אֲשֶׁר־יֹאמְר֥וּ לְךָ֖ תַּעֲשֶׂ֑ה לֹ֣א תָס֗וּר מִן־הַדָּבָ֛ר אֲשֶׁר־יַגִּ֥ידֽוּ לְךָ֖ יָמִ֥ין וּשְׂמֹֽאל׃
12 ೧೨ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.
וְהָאִ֞ישׁ אֲשֶׁר־יַעֲשֶׂ֣ה בְזָד֗וֹן לְבִלְתִּ֨י שְׁמֹ֤עַ אֶל־הַכֹּהֵן֙ הָעֹמֵ֞ד לְשָׁ֤רֶת שָׁם֙ אֶת־יְהוָ֣ה אֱלֹהֶ֔יךָ א֖וֹ אֶל־הַשֹּׁפֵ֑ט וּמֵת֙ הָאִ֣ישׁ הַה֔וּא וּבִֽעַרְתָּ֥ הָרָ֖ע מִיִּשְׂרָאֵֽל׃
13 ೧೩ ಆಗ ಜನರೆಲ್ಲರೂ ಕೇಳಿ ಭಯಪಟ್ಟು ಇನ್ನು ಅಹಂಕಾರದಿಂದ ನಡೆಯದೆ ಇರುವರು.
וְכָל־הָעָ֖ם יִשְׁמְע֣וּ וְיִרָ֑אוּ וְלֹ֥א יְזִיד֖וּן עֽוֹד׃ ס
14 ೧೪ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ, “ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇಮಿಸಿಕೊಳ್ಳೋಣ” ಎಂದು ಹೇಳಿಕೊಳ್ಳುವ ಸಂದರ್ಭದಲ್ಲಿ,
כִּֽי־תָבֹ֣א אֶל־הָאָ֗רֶץ אֲשֶׁ֨ר יְהוָ֤ה אֱלֹהֶ֙יךָ֙ נֹתֵ֣ן לָ֔ךְ וִֽירִשְׁתָּ֖הּ וְיָשַׁ֣בְתָּה בָּ֑הּ וְאָמַרְתָּ֗ אָשִׂ֤ימָה עָלַי֙ מֶ֔לֶךְ כְּכָל־הַגּוֹיִ֖ם אֲשֶׁ֥ר סְבִיבֹתָֽי׃
15 ೧೫ ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡ ವ್ಯಕ್ತಿಯನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇಮಿಸಬಾರದು.
שׂ֣וֹם תָּשִׂ֤ים עָלֶ֙יךָ֙ מֶ֔לֶךְ אֲשֶׁ֥ר יִבְחַ֛ר יְהוָ֥ה אֱלֹהֶ֖יךָ בּ֑וֹ מִקֶּ֣רֶב אַחֶ֗יךָ תָּשִׂ֤ים עָלֶ֙יךָ֙ מֶ֔לֶךְ לֹ֣א תוּכַ֗ל לָתֵ֤ת עָלֶ֙יךָ֙ אִ֣ישׁ נָכְרִ֔י אֲשֶׁ֥ר לֹֽא־אָחִ֖יךָ הֽוּא׃
16 ೧೬ ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.
רַק֮ לֹא־יַרְבֶּה־לּ֣וֹ סוּסִים֒ וְלֹֽא־יָשִׁ֤יב אֶת־הָעָם֙ מִצְרַ֔יְמָה לְמַ֖עַן הַרְבּ֣וֹת ס֑וּס וַֽיהוָה֙ אָמַ֣ר לָכֶ֔ם לֹ֣א תֹסִפ֗וּן לָשׁ֛וּב בַּדֶּ֥רֶךְ הַזֶּ֖ה עֽוֹד׃
17 ೧೭ ಅವನು ಅನೇಕ ಸ್ತ್ರೀಯರನ್ನು ಮದುವೆ ಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವುದಕ್ಕೆ ಅವಕಾಶವಾಗುವುದು. ಅವನು ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.
וְלֹ֤א יַרְבֶּה־לּוֹ֙ נָשִׁ֔ים וְלֹ֥א יָס֖וּר לְבָב֑וֹ וְכֶ֣סֶף וְזָהָ֔ב לֹ֥א יַרְבֶּה־לּ֖וֹ מְאֹֽד׃
18 ೧೮ ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.
וְהָיָ֣ה כְשִׁבְתּ֔וֹ עַ֖ל כִּסֵּ֣א מַמְלַכְתּ֑וֹ וְכָ֨תַב ל֜וֹ אֶת־מִשְׁנֵ֨ה הַתּוֹרָ֤ה הַזֹּאת֙ עַל־סֵ֔פֶר מִלִּפְנֵ֥י הַכֹּהֲנִ֖ים הַלְוִיִּֽם׃
19 ೧೯ ಅವನು ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ಮತ್ತು ವಿಧಿಗಳನ್ನೂ ಅನುಸರಿಸುವುದಕ್ಕೆ ಅಭ್ಯಾಸಮಾಡಿಕೊಳ್ಳುವಂತೆ ಆ ಗ್ರಂಥವು ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದನ್ನು ಓದಿಕೊಳ್ಳುತ್ತಾ ಇರಬೇಕು.
וְהָיְתָ֣ה עִמּ֔וֹ וְקָ֥רָא ב֖וֹ כָּל־יְמֵ֣י חַיָּ֑יו לְמַ֣עַן יִלְמַ֗ד לְיִרְאָה֙ אֶת־יְהוָ֣ה אֱלֹהָ֔יו לִ֠שְׁמֹר אֶֽת־כָּל־דִּבְרֵ֞י הַתּוֹרָ֥ה הַזֹּ֛את וְאֶת־הַחֻקִּ֥ים הָאֵ֖לֶּה לַעֲשֹׂתָֽם׃
20 ೨೦ ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು.
לְבִלְתִּ֤י רוּם־לְבָבוֹ֙ מֵֽאֶחָ֔יו וּלְבִלְתִּ֛י ס֥וּר מִן־הַמִּצְוָ֖ה יָמִ֣ין וּשְׂמֹ֑אול לְמַעַן֩ יַאֲרִ֨יךְ יָמִ֧ים עַל־מַמְלַכְתּ֛וֹ ה֥וּא וּבָנָ֖יו בְּקֶ֥רֶב יִשְׂרָאֵֽל׃ ס

< ಧರ್ಮೋಪದೇಶಕಾಂಡ 17 >