< ಧರ್ಮೋಪದೇಶಕಾಂಡ 17 >
1 ೧ ಯಾವುದೇ ಕುಂದುಕೊರತೆ ಅಥವಾ ಊನ ಇರುವ ಎತ್ತು ಮತ್ತು ಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವುದು ಆತನಿಗೆ ಅಸಹ್ಯವಾಗಿದೆ.
तू ख़ुदावन्द अपने ख़ुदा के लिए कोई बैल या भेड़ — बकरी, जिसमें कोई 'ऐब या बुराई हो, ज़बह मत करना क्यूँकि यह ख़ुदावन्द तेरे ख़ुदा के नज़दीक मकरूह है।
2 ೨ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ ಅಥವಾ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ,
'अगर तेरे बीच तेरी बस्तियों में जिनको ख़ुदावन्द तेरा ख़ुदा तुझको दे, कहीं कोई मर्द या 'औरत मिले जिसने ख़ुदावन्द तेरे ख़ुदा के सामने यह बदकारी की हो कि उसके 'अहद को तोड़ा हो,
3 ೩ ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡಿಸಿದರೆ,
और जाकर और मा'बूदों की या सूरज या चाँद या अजराम — ए — फ़लक में से किसी की, जिसका हुक्म मैंने तुझको नहीं दिया, इबादत और परस्तिश की हो,
4 ೪ ನೀವು ಆ ಸಂಗತಿಯನ್ನು ಕೇಳಿದಾಗ ಸೂಕ್ಷ್ಮವಾಗಿ ವಿಚಾರಣೆಯನ್ನು ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ನಿಷಿದ್ಧಕಾರ್ಯವು ನಡೆದದ್ದು ನಿಜವೆಂದು ತಿಳಿದು ಬಂದರೆ,
और यह बात तुझको बताई जाए और तेरे सुनने में आए, तो तू जाँफ़िशानी से तहक़ीक़ात करना और अगर यह ठीक हो और कत'ई तौर पर साबित हो जाए कि इस्राईल में ऐसा मकरूह काम हुआ,
5 ೫ ಆಗ ಆ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು.
तो तू उस मर्द या उस 'औरत को जिसने यह बुरा काम किया हो, बाहर अपने फाटकों पर निकाल ले जाना और उनको ऐसा संगसार करना कि वह मर जाएँ।
6 ೬ ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರ ಸಾಕ್ಷಿಗಳು ಬೇಕು.
जो वाजिब — उल — क़त्ल ठहरे वह दो या तीन आदमियों की गवाही से मारा जाए, सिर्फ़ एक ही आदमी की गवाही से वह मारा न जाए।
7 ೭ ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
उसको क़त्ल करते वक़्त गवाहों के हाथ पहले उस पर उठे उसके बाद बाक़ी सब लोगों के हाथ, यूँ तू अपने बीच से शरारत को दूर किया करना।
8 ೮ ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.
अगर तेरी बस्तियों में कहीं आपस के ख़ून या आपस के दा'वे या आपस की मार पीट के बारे में कोई झगड़े की बात उठे, और उसका फ़ैसला करना तेरे लिए निहायत ही मुश्किल हो, तो तू उठ कर उस जगह जिसे ख़ुदावन्द तेरा ख़ुदा चुनेगा जाना।
9 ೯ ಅಲ್ಲಿ ಯಾಜಕಸೇವೆಯನ್ನು ಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಲು ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.
और लावी काहिनों और उन दिनों के क़ाज़ियों के पास पहुँच कर उनसे दरियाफ़्त करना, और वह तुझको फ़ैसले की बात बताएँगे;
10 ೧೦ ಯೆಹೋವನು ಆರಿಸಿಕೊಂಡ ಆ ಸ್ಥಳದಿಂದ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು.
और तू उसी फ़ैसले के मुताबिक़ जो वह तुझको उस जगह से जिसे ख़ुदावन्द चुनेगा बताए 'अमल करना। जैसा वह तुमको सिखाएँ उसी के मुताबिक़ सब कुछ एहतियात करके मानना।
11 ೧೧ ಅವರು ಕಲಿಸಿಕೊಡುವ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತಿರುಗಬಾರದು.
शरी'अत की जो बात वह तुझको सिखाएँ और जैसा फ़ैसला तुझको बताएँ, उसी के मुताबिक़ करना और जो कुछ फ़तवा वह दें उससे दहने या बाएँ न मुड़ना।
12 ೧೨ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.
और अगर कोई शख़्स गुस्ताख़ी से पेश आए कि उस काहिन की बात, जो ख़ुदावन्द तेरे ख़ुदा के सामने ख़िदमत के लिए खड़ा रहता है या उस क़ाज़ी का कहा न सुने, तो वह शख़्स मार डाला जाए और तू इस्राईल में से ऐसी बुराई को दूर कर देना।
13 ೧೩ ಆಗ ಜನರೆಲ್ಲರೂ ಕೇಳಿ ಭಯಪಟ್ಟು ಇನ್ನು ಅಹಂಕಾರದಿಂದ ನಡೆಯದೆ ಇರುವರು.
और सब लोग सुन कर डर जाएँगे और फिर गुस्ताख़ी से पेश नहीं आएँगे।
14 ೧೪ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ, “ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇಮಿಸಿಕೊಳ್ಳೋಣ” ಎಂದು ಹೇಳಿಕೊಳ್ಳುವ ಸಂದರ್ಭದಲ್ಲಿ,
जब तू उस मुल्क में जिसे ख़ुदावन्द तेरा ख़ुदा तुझको देता है पहुँच जाये, और उस पर क़ब्ज़ा कर के वहाँ रहने और कहने लगे, कि उन क़ौमों की तरह जो मेरे चारों तरफ़ हैं मैं भी किसी को अपना बादशाह बनाऊँ।
15 ೧೫ ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡ ವ್ಯಕ್ತಿಯನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇಮಿಸಬಾರದು.
तो तू बहरहाल सिर्फ़ उसी को अपना बादशाह बनाना जिसको ख़ुदावन्द तेरा ख़ुदा चुन ले, तू अपने भाइयों में से ही किसी को अपना बादशाह बनाना, और परदेसी को जो तेरा भाई नहीं अपने ऊपर हाकिम न कर लेना।
16 ೧೬ ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.
इतना ज़रूर है कि वह अपने लिए बहुत घोड़े न बढ़ाए, और न लोगों को मिस्र में भेजे ताकि उसके पास बहुत से घोड़े हो जाएँ, इसलिए कि ख़ुदावन्द ने तुमसे कहा है कि तुम उस राह से फिर कभी उधर न लौटना।
17 ೧೭ ಅವನು ಅನೇಕ ಸ್ತ್ರೀಯರನ್ನು ಮದುವೆ ಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವುದಕ್ಕೆ ಅವಕಾಶವಾಗುವುದು. ಅವನು ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.
और वह बहुत सी बीवियाँ भी न रख्खे ऐसा न हो कि उसका दिल फिर जाए, और न वह अपने लिए सोना चाँदी ज़ख़ीरा करे।
18 ೧೮ ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.
और जब वह तख़्त — ए — सल्तनत पर बैठा करे तो उस शरी'अत की जो लावी काहिनों के पास रहेगी, एक नक़ल अपने लिए एक किताब में उतार ले।
19 ೧೯ ಅವನು ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ಮತ್ತು ವಿಧಿಗಳನ್ನೂ ಅನುಸರಿಸುವುದಕ್ಕೆ ಅಭ್ಯಾಸಮಾಡಿಕೊಳ್ಳುವಂತೆ ಆ ಗ್ರಂಥವು ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದನ್ನು ಓದಿಕೊಳ್ಳುತ್ತಾ ಇರಬೇಕು.
और वह उसे अपने पास रख्खे और अपनी सारी उम्र उसको पढ़ा करे, ताकि वह ख़ुदावन्द अपने ख़ुदा का ख़ौफ़ मानना और उस शरी'अत और आईन की सब बातों पर 'अमल करना सीखे;
20 ೨೦ ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು.
जिससे उसके दिल में ग़ुरूर न हो कि वह अपने भाइयों को हक़ीर जाने, और इन अहकाम से न तो दहने न बाएँ मुड़े; ताकि इस्राईलियों के बीच उसकी और उसकी औलाद की सल्तनत ज़माने तक रहे।