< ಧರ್ಮೋಪದೇಶಕಾಂಡ 19 >

1 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಜನಾಂಗಗಳನ್ನು ಆತನು ನಾಶಮಾಡಿ ಬಿಟ್ಟ ತರುವಾಯ, ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರ ಗ್ರಾಮಗಳಲ್ಲಿಯೂ,
네 하나님 여호와께서 이 열국을 멸절하시고 네 하나님 여호와께서 그 땅을 네게 주시므로 네가 필경 그것을 얻고 그들의 각 성읍과 각 가옥에 거할 때에
2 ಮನೆಗಳಲ್ಲಿಯೂ ವಾಸವಾಗಿರುವಾಗ, ಆ ನಿಮ್ಮ ದೇಶದ ಮಧ್ಯದಲ್ಲಿ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು.
네 하나님 여호와께서 네게 기업으로 주신 땅 가운데서 세 성읍을 너를 위하여 구별하고
3 ನರಹತ್ಯಮಾಡಿದವರು ಆ ನಗರಗಳಿಗೆ ಓಡಿಹೊಗುವುದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಗಳನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ದೇಶವನ್ನು ಮೂರು ಭಾಗ ಮಾಡಬೇಕು.
네 하나님 여호와께서 네게 유업으로 주시는 땅의 전체를 삼 구로 분하여 그 도로를 닦고 무릇 살인자를 그 성읍으로 도피케 하라
4 ಆ ನಗರಗಳ ವಿವರ ಹೀಗಿದೆ, ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.
살인자가 그리로 도피하여 살만한 경위는 이러하니 곧 누구든지 본래 혐원이 없이 부지 중에 그 이웃을 죽인 일,
5 ಉದಾಹರಣೆ, ಒಬ್ಬ ಮನುಷ್ಯನು ಕಟ್ಟಿಗೆಯನ್ನು ಕಡಿಯಬೇಕೆಂದು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋಗಿ, ಅಲ್ಲಿ ಒಂದು ಮರವನ್ನು ಕಡಿಯಬೇಕೆಂದು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿಯು ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿದ್ದರಿಂದ ಅವನು ಸತ್ತರೆ, ಹೊಡೆದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.
가령 사람이 그 이웃과 함께 벌목하러 삼림에 들어가서 손에 도끼를 들고 벌목하려고 찍을 때에 도끼가 자루에서 빠져 그 이웃을 맞춰 그로 죽게함 같은 것이라 이런 사람은 그 성읍 중 하나로 도피하여 생명을 보존할 것이니라
6 ಸತ್ತವನ ಮೇಲೆ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಮತ್ತು ಅವನನ್ನು ಸಾಯಿಸುವ ಉದ್ದೇಶವಿಲ್ಲದ ಕಾರಣ ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪ ಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಿ ಹೋಗಬಹುದು ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದು ಹಾಕಿಬಿಡಬಹುದು.
그 사람이 그에게 본래 혐원이 없으니 죽이기에 합당치 아니하나 두렵건대 보수자의 마음이 뜨거워서 살인자를 따르는데 그 가는 길이 멀면 그를 따라 미쳐서 죽일까 하노라
7 ಈ ಕಾರಣದಿಂದ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕೆಂದು ಆಜ್ಞಾಪಿಸಿದ್ದೇನೆ.
그러므로 내가 네게 명하기를 세 성읍을 너를 위하여 구별하라 하노라
8 ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ತಾನು ನಿಮ್ಮ ಪೂರ್ವಿಕರಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವಾಗ, ಇನ್ನೂ ಮೂರು ನಗರಗಳನ್ನು ನಿಮಗಾಗಿ ಗೊತ್ತುಮಾಡಬೇಕು. ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ,
네 하나님 여호와께서 네 열조에게 맹세하신 대로 네 지경을 넓혀 네 열조에게 주리라고 말씀하신 땅을 다 네게 주실 때
9 ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳುವ ಮಾರ್ಗದಲ್ಲೇ ಯಾವಾಗಲೂ ನಡೆಯುವುದಾದರೆ, ಆಗ ಯೆಹೋವನು ಈ ಮೂರು ನಗರಗಳನ್ನು ನಿಮಗೆ ಕೊಡುವನು.
또 네가 나의 오늘날 네게 명하는 이 모든 명령을 지켜 행하여 네 하나님 여호와를 사랑하고 항상 그 길로 행할 때에는 이 셋 외에 세 성읍을 더하여
10 ೧೦ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗದಂತೆ; ಆ ದೋಷವು ನಿಮ್ಮದಾಗದಂತೆ ನೀವು ಹೀಗೆ ಮಾಡಬೇಕು.
네 하나님 여호와께서 네게 기업으로 주시는 땅에서 무죄한 피를 흘림이 없게 하라 이같이 하면 그 피가 네게로 돌아가지 아니하리라
11 ೧೧ ಆದರೆ ಯಾವನಾದರೂ ಒಬ್ಬನಲ್ಲಿ ದ್ವೇಷವನ್ನೇ ಇಟ್ಟು ಸಮಯನೋಡಿಕೊಂಡು, ಅವನ ಮೇಲೆ ಬಿದ್ದು ಅವನನ್ನು ಹೊಡೆದು ಕೊಂದ ತರುವಾಯ ಈ ಪಟ್ಟಣಗಳಲ್ಲಿ
그러나 만일 사람이 그 이웃을 미워하여 엎드려 그를 기다리다가 일어나 쳐서 그 생명을 상하여 죽게 하고 이 한 성읍으로 도피하거든
12 ೧೨ ಒಂದಕ್ಕೆ ಓಡಿಹೋದರೆ, ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಒಪ್ಪಿಸಬೇಕು.
그 본 성읍 장로들이 사람을 보내어 그를 거기서 잡아다가 보수자의 손에 넘겨 죽이게 할 것이라
13 ೧೩ ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನನ್ನು ಇಸ್ರಾಯೇಲರಲ್ಲಿ ಉಳಿಯದಂತೆ ಮಾಡಬೇಕು.
네 눈이 그를 긍휼히 보지 말고 무죄한 피 흘린 죄를 이스라엘에서 제하라 그리하면 네게 복이 있으리라
14 ೧೪ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವತ್ತಿನಲ್ಲಿ ನೆರೆಯವನ ಭೂಮಿಯ ಹಿಂದಿನ ಕಾಲದ ಗಡಿಯನ್ನು ಒತ್ತಬಾರದು.
네 하나님 여호와께서 네게 주어 얻게 하시는 땅 곧 네 기업된 소유의 땅에서 선인의 정한 네 이웃의 경계표를 이동하지 말지니라
15 ೧೫ ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ರುಜುವಾತಾಗುವುದಕ್ಕೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳು ಬೇಕು.
사람이 아무 악이든지 무릇 범한 죄는 한 증인으로만 정할 것이 아니요 두 증인의 입으로나 세 증인의 입으로 그 사건을 확정할 것이며
16 ೧೬ ಯಾವನಾದರೂ ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿಹೇಳಿದರೆ,
만일 위증하는 자가 있어 아무 사람이 악을 행하였다 말함이 있으면
17 ೧೭ ವ್ಯಾಜ್ಯವಾಡುವ ಆ ಇಬ್ಬರೂ ಯೆಹೋವನ ಸನ್ನಿಧಿಯಲ್ಲಿ ಯಾಜಕರ ಮುಂದೆಯೂ, ಆಗ ಇರುವ ನ್ಯಾಯಾಧಿಪತಿಗಳ ಮುಂದೆಯೂ ನಿಲ್ಲಬೇಕು.
그 논쟁하는 양방이 같이 하나님 앞에 나아가 당시 제사장과 재판장 앞에 설 것이요
18 ೧೮ ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆ ಮಾಡಿದ ಮೇಲೆ ಆ ಮನುಷ್ಯನ ಸಾಕ್ಷಿ ಸುಳ್ಳೆಂದು ತೋರಿಬಂದರೆ,
재판장은 자세히 사실하여 그 증인이 위증인이라 그 형제를 거짓으로 무함한 것이 판명되거든
19 ೧೯ ಅವನು ಆ ಮತ್ತೊಬ್ಬನಿಗೆ ಕೊಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.
그가 그 형제에게 행하려고 꾀 한대로 그에게 행하여 너희 중에서 악을 제하라
20 ೨೦ ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಅಂಥ ದುಷ್ಟತ್ವವನ್ನು ನಡೆಸುವುದಿಲ್ಲ.
그리하면 그 남은 자들이 듣고 두려워하여 이후부터는 이런 악을 너희 중에서 다시 행하지 아니하리라
21 ೨೧ ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನೂ, ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ, ಕೈಗೆ ಪ್ರತಿಯಾಗಿ ಕೈಯನ್ನೂ ಮತ್ತು ಕಾಲಿಗೆ ಪ್ರತಿಯಾಗಿ ಕಾಲನ್ನೂ ತೆಗೆದುಬಿಡಬೇಕು.
네 눈이 긍휼히 보지 말라 생명은 생명으로, 눈은 눈으로, 이는 이로, 손은 손으로, 발은 발로니라

< ಧರ್ಮೋಪದೇಶಕಾಂಡ 19 >