< ಧರ್ಮೋಪದೇಶಕಾಂಡ 2 >
1 ೧ ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.
Then turned we, and set forward towards the desert by way of the Red Sea, as Yahweh, spake unto me; and we encompassed Mount Seir many days.
And Yahweh spake unto me, saying:
3 ೩ “ನೀವು ಈ ಬೆಟ್ಟದ ಸೀಮೆಯನ್ನು ಸುತ್ತಿದ್ದು ಸಾಕು; ಉತ್ತರದಿಕ್ಕಿಗೆ ತಿರುಗಿಕೊಳ್ಳಿರಿ.
Long enough, have ye encompassed this mountain, —turn yourselves north, wards.
4 ೪ ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.
And, the people, command thou saying, Ye are about to pass through the boundary of your brethren the sons of Esau, who are dwelling in Seir, —and should they be afraid of you, take ye good heed to yourselves:
5 ೫ ನಾನು ಸೇಯೀರ್ ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.
do not engage in strife with them, for I will not give you of their land, so much as place for the tread of a foot-sole, —for as a possession to Esau, have I given Mount Seir.
6 ೬ ನೀವು ಅಲ್ಲಿ ಹಣವನ್ನು ಕೊಟ್ಟು ಆಹಾರಪದಾರ್ಥಗಳನ್ನು ತಿನ್ನಬೇಕು; ನೀರನ್ನು ಕೊಂಡುಕೊಂಡು ಕುಡಿಯಬೇಕು.
Food, shall ye buy of them with silver so shall ye eat, —yea even water, shall ye buy of them with silver so shall ye drink.
7 ೭ ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’” ಎಂದು ಹೇಳಿದನು.
For Yahweh thy God, hath blessed thee in all the work of thy hand, he hath considered thy traversing of this great desert, —these forty years, hath Yahweh thy God been with thee, thou hast lacked, nothing.
8 ೮ ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರಿಗೆ ಗೊತ್ತಾಗದಂತೆ ಎಚ್ಚರಿಕೆಯಿಂದ ಅರಾಬದ ಮಾರ್ಗವನ್ನು ಬಿಟ್ಟು ಏಲತ್ ಮತ್ತು ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.
So we passed on, a way from our brethren the sons of Esau who dwell in Seir, from the way of the waste plain, from Elath, and from Ezion-geber, —and we turned and passed on by way of the desert of Moab.
9 ೯ ಆಗ ಯೆಹೋವನು ನನಗೆ, “ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ” ಎಂದು ಆಜ್ಞಾಪಿಸಿದನು.
And Yahweh said unto me—Do not lay siege to Moab, nor engage in strife with them in battle, —for I will not give unto thee of this land as a possession, for unto the sons of Lot, have I given Ar, as a possession.
10 ೧೦ ಏಮಿಯರು ಮೊದಲು ಆ ದೇಶದಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕೀಮ್ಯರಂತೆ ಎತ್ತರವಾದ ಪುರುಷರಾಗಿದ್ದರು.
the Emim, formerly dwelt therein, —a people great and many and tall, like the Anakim.
11 ೧೧ ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳುವುದುಂಟು; ಆದರೆ ಮೋವಾಬ್ಯರು ಅವರನ್ನು ಏಮಿಯರೆಂದು ಹೇಳುತ್ತಾರೆ.
Giants, used, they also, to be accounted like the Anakim, —but the Moabites, called them Emim.
12 ೧೨ ಹೋರಿಯರು ಸಹ ಪೂರ್ವಕಾಲದಲ್ಲಿ ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವನು ಕೊಟ್ಟ ದೇಶವನ್ನು ಹೇಗೆ ಸ್ವಾಧೀನಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ದೇಶದಲ್ಲಿ ವಾಸಮಾಡಿದರು.
And in Seir, dwelt the Horim aforetime, but, the sons of Esau, dispossessed them, and destroyed them from before them, and dwelt in their stead, —as did Israel unto the land of his own possession, which Yahweh had given unto them.
13 ೧೩ ಆಗ ನಾನು, “ಎದ್ದು ಜೆರೆದ್ ಹಳ್ಳವನ್ನು ದಾಟಿರಿ” ಎಂದು ಹೇಳಲು ನಾವು ಜೆರೆದ್ ಹಳ್ಳವನ್ನು ದಾಟಿದೆವು.
Now, arise, and pass ye over the ravine of Zered. So we passed over the ravine of Zered.
14 ೧೪ ನಾವು ಕಾದೇಶ್ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.
Now, the days in which we journeyed from Kadesh-barnea, as far as where we crossed the ravine of Zered, were thirty-eight years, —until all the generation of the men of war were consumed out of the midst of the camp, as Yahweh had sworn unto them.
15 ೧೫ ಯೆಹೋವನ ಹಸ್ತವು ಅವರಿಗೆ ವಿರುದ್ಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.
Yea, even the hand of Yahweh was against them, to destroy them out of the midst of the camp, —until they were consumed.
16 ೧೬ ಆ ಕಾಲದಲ್ಲಿ ಯುದ್ಧನಿಪುಣರಾಗಿದ್ದ ಸೈನಿಕರೆಲ್ಲರೂ ಸತ್ತುಹೋದರು.
So it came to pass when all the men of war were consumed by dying, out of the midst of the people,
17 ೧೭ ಆಗ ಯೆಹೋವನು ನನ್ನೊಂದಿಗೆ ಮಾತನಾಡಿ ನನಗೆ,
then spake Yahweh unto me, saying:
18 ೧೮ “ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವವರಾಗಿದ್ದೀರಿ.
Thou, art passing, to-day, the boundary of Moab even Ar;
19 ೧೯ ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.”
so wilt thou draw near over against the sons of Ammon, do not thou besiege them neither engage in strife with them, —for I will not give of the land of the sons of Ammon unto thee as a possession, for unto the sons of Lot, have I given it as a possession.
20 ೨೦ ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರನ್ನು ಜಂಜುಮ್ಯರೆಂದು ಹೇಳುತ್ತಾರೆ.
A land of giants, used, that also, to be accounted, —giants, dwelt therein aforetime, but the Ammonites, called them Zamzummim:
21 ೨೧ ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕ್ಯರಂತೆ ಎತ್ತರವಾದ ಪುರುಷರೂ ಆಗಿದ್ದರು.
a people great and many and tall, like the Anakim, —but Yahweh destroyed them from before them, and they took their possessions, and dwelt in their stead:
22 ೨೨ ಆದರೆ ಹೇಗೆ ಯೆಹೋವನು ಸೇಯೀರಿನಲ್ಲಿರುವ ಏಸಾವ್ಯರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,
as he did for the sons of Esau, who are dwelling in Seir, —when he destroyed the Horim from before them, and they took their possessions and have dwelt in their stead, even unto this day.
23 ೨೩ ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ನಾಡಿನಿಂದ ಹೊರಗೆ ಹೋಗುವಂತೆ ಮಾಡಿದನು. ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರಲ್ಲಿ ವಾಸಮಾಡ ತೊಡಗಿದರು.
The Avvim also, who dwelt in settlements as far as Gaza, Caphtorim, who were coming forth out of Caphtor, destroyed them, and dwelt in their stead.
24 ೨೪ “ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತುಹೋಗುವನು, ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಾನು ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.
Arise ye, set forward and cross over the ravine of Arnon, see! I have given into thy hand—Sihon king of Heshbon, the Amorite and his land, begin—take possession, —and engage in strife with him in battle.
25 ೨೫ ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು.
This day, will I begin to extend the dread of thee and the fear of thee over the face of the peoples under all the heavens, —who will hear the report of thee, then will they quake and writhe in pain because of thee.
26 ೨೬ ಆಗ ನಾನು ಕೆದೇಮೋತಿನ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,
So I sent messengers out of the desert of Kademoth, unto Sihon, king of Heshbon, —with words of peace saying:
27 ೨೭ “ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು.
I would pass along through thy land, by the road, by the road, will I go, —I will not turn aside, to the right hand or to the left:
28 ೨೮ ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಮತ್ತು ಕುಡಿಯಲಿಕ್ಕೆ ನೀರನ್ನೂ ಕೊಡಿರಿ.
Food for silver, shalt thou sell me so will I eat, and water for silver, shalt thou let me have, so will I drink, —only I would pass through on my feet; —
29 ೨೯ ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ” ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದೆನು.
as the sons of Esau, who are dwelling in Seir, did to me, and the Moabites who are dwelling in Ar, —until that I pass over the Jordan, into the land which, Yahweh our God, is giving unto us.
30 ೩೦ ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.
But Sihon king of Heshbon, was not willing, to let us pass along through it, —for Yahweh thy God had suffered him to make his spirit harsh and his heart bold, that he might give him into thy hand—(as [appeareth] this day).
31 ೩೧ ತರುವಾಯ ಯೆಹೋವನು ನನಗೆ, “ಈಗ ನಾನು ಸೀಹೋನನನ್ನೂ ಮತ್ತು ಅವನ ದೇಶವನ್ನೂ ನಿಮಗೆ ವಶಪಡಿಸುವುದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಮಾಡಿರಿ” ಎಂದು ಹೇಳಿದನು.
Then said Yahweh unto me, See! I have begun to deliver up before thee Sihon and his land, —begin take possession, that thou mayest make a possession of his land.
32 ೩೨ ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಜಿಗೆ ಹೊರಟುಬಂದನು.
So then Sihon came out to meet us he, and all his people, to give battle at Jahaz.
33 ೩೩ ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ, ಅವನ ಮಕ್ಕಳನ್ನೂ ಮತ್ತು ಜನರೆಲ್ಲರನ್ನೂ ಸಂಹರಿಸಿದೆವು.
And Yahweh our God delivered him up before us, —and we smote him and his sons, and all his people
34 ೩೪ ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡು ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನು ಮತ್ತು ಮಕ್ಕಳನ್ನೂ ನಿಶ್ಶೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.
And we captured all his cities, at that time, and devoted to destruction every city of males, with the women and the little ones, —we left not remaining a survivor:
35 ೩೫ ಪಶುಗಳನ್ನು ಮಾತ್ರ ಉಳಿಸಿ ನಮ್ಮ ಸ್ವಂತಕ್ಕಾಗಿ ತೆಗೆದುಕೊಂಡು ಊರುಗಳನ್ನು ಸೂರೆಮಾಡಿಬಿಟ್ಟೆವು.
only the cattle, made we our prey, —and the spoil of the cities which we captured.
36 ೩೬ ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.
From Aroer, which is on the edge of the ravine of Arnon and the city that is in the ravine even as far as Gilead, there was not a fortress that proved too high for us, —the whole, did Yahweh our God deliver up before us.
37 ೩೭ ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇ ಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನು.
Only unto the land of the sons of Ammon, didst thou not come near, —all the side of the Jabbok ravine, nor the cities of the hill country, nor any which Yahweh our God had forbidden to us.