< ಧರ್ಮೋಪದೇಶಕಾಂಡ 2 >

1 ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.
וַנֵּ֜פֶן וַנִּסַּ֤ע הַמִּדְבָּ֙רָה֙ דֶּ֣רֶךְ יַם־ס֔וּף כַּאֲשֶׁ֛ר דִּבֶּ֥ר יְהוָ֖ה אֵלָ֑י וַנָּ֥סָב אֶת־הַר־שֵׂעִ֖יר יָמִ֥ים רַבִּֽים׃ ס
2 ಆ ಮೇಲೆ ಯೆಹೋವನು ನನಗೆ,
וַיֹּ֥אמֶר יְהוָ֖ה אֵלַ֥י לֵאמֹֽר׃
3 “ನೀವು ಈ ಬೆಟ್ಟದ ಸೀಮೆಯನ್ನು ಸುತ್ತಿದ್ದು ಸಾಕು; ಉತ್ತರದಿಕ್ಕಿಗೆ ತಿರುಗಿಕೊಳ್ಳಿರಿ.
רַב־לָכֶ֕ם סֹ֖ב אֶת־הָהָ֣ר הַזֶּ֑ה פְּנ֥וּ לָכֶ֖ם צָפֹֽנָה׃
4 ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.
וְאֶת־הָעָם֮ צַ֣ו לֵאמֹר֒ אַתֶּ֣ם עֹֽבְרִ֗ים בִּגְבוּל֙ אֲחֵיכֶ֣ם בְּנֵי־עֵשָׂ֔ו הַיֹּשְׁבִ֖ים בְּשֵׂעִ֑יר וְיִֽירְא֣וּ מִכֶּ֔ם וְנִשְׁמַרְתֶּ֖ם מְאֹֽד׃
5 ನಾನು ಸೇಯೀರ್ ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.
אַל־תִּתְגָּר֣וּ בָ֔ם כִּ֠י לֹֽא־אֶתֵּ֤ן לָכֶם֙ מֵֽאַרְצָ֔ם עַ֖ד מִדְרַ֣ךְ כַּף־רָ֑גֶל כִּֽי־יְרֻשָּׁ֣ה לְעֵשָׂ֔ו נָתַ֖תִּי אֶת־הַ֥ר שֵׂעִֽיר׃
6 ನೀವು ಅಲ್ಲಿ ಹಣವನ್ನು ಕೊಟ್ಟು ಆಹಾರಪದಾರ್ಥಗಳನ್ನು ತಿನ್ನಬೇಕು; ನೀರನ್ನು ಕೊಂಡುಕೊಂಡು ಕುಡಿಯಬೇಕು.
אֹ֣כֶל תִּשְׁבְּר֧וּ מֵֽאִתָּ֛ם בַּכֶּ֖סֶף וַאֲכַלְתֶּ֑ם וְגַם־מַ֜יִם תִּכְר֧וּ מֵאִתָּ֛ם בַּכֶּ֖סֶף וּשְׁתִיתֶֽם׃
7 ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’” ಎಂದು ಹೇಳಿದನು.
כִּי֩ יְהוָ֨ה אֱלֹהֶ֜יךָ בֵּֽרַכְךָ֗ בְּכֹל֙ מַעֲשֵׂ֣ה יָדֶ֔ךָ יָדַ֣ע לֶכְתְּךָ֔ אֶת־הַמִּדְבָּ֥ר הַגָּדֹ֖ל הַזֶּ֑ה זֶ֣ה ׀ אַרְבָּעִ֣ים שָׁנָ֗ה יְהוָ֤ה אֱלֹהֶ֙יךָ֙ עִמָּ֔ךְ לֹ֥א חָסַ֖רְתָּ דָּבָֽר׃
8 ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರಿಗೆ ಗೊತ್ತಾಗದಂತೆ ಎಚ್ಚರಿಕೆಯಿಂದ ಅರಾಬದ ಮಾರ್ಗವನ್ನು ಬಿಟ್ಟು ಏಲತ್ ಮತ್ತು ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.
וַֽנַּעֲבֹ֞ר מֵאֵ֧ת אַחֵ֣ינוּ בְנֵי־עֵשָׂ֗ו הַיֹּֽשְׁבִים֙ בְּשֵׂעִ֔יר מִדֶּ֙רֶךְ֙ הָֽעֲרָבָ֔ה מֵאֵילַ֖ת וּמֵעֶצְיֹ֣ן גָּ֑בֶר ס וַנֵּ֙פֶן֙ וַֽנַּעֲבֹ֔ר דֶּ֖רֶךְ מִדְבַּ֥ר מוֹאָֽב׃
9 ಆಗ ಯೆಹೋವನು ನನಗೆ, “ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ” ಎಂದು ಆಜ್ಞಾಪಿಸಿದನು.
וַיֹּ֨אמֶר יְהוָ֜ה אֵלַ֗י אֶל־תָּ֙צַר֙ אֶת־מוֹאָ֔ב וְאַל־תִּתְגָּ֥ר בָּ֖ם מִלְחָמָ֑ה כִּ֠י לֹֽא־אֶתֵּ֨ן לְךָ֤ מֵֽאַרְצוֹ֙ יְרֻשָּׁ֔ה כִּ֣י לִבְנֵי־ל֔וֹט נָתַ֥תִּי אֶת־עָ֖ר יְרֻשָּֽׁה׃
10 ೧೦ ಏಮಿಯರು ಮೊದಲು ಆ ದೇಶದಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕೀಮ್ಯರಂತೆ ಎತ್ತರವಾದ ಪುರುಷರಾಗಿದ್ದರು.
הָאֵמִ֥ים לְפָנִ֖ים יָ֣שְׁבוּ בָ֑הּ עַ֣ם גָּד֥וֹל וְרַ֛ב וָרָ֖ם כָּעֲנָקִֽים׃
11 ೧೧ ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳುವುದುಂಟು; ಆದರೆ ಮೋವಾಬ್ಯರು ಅವರನ್ನು ಏಮಿಯರೆಂದು ಹೇಳುತ್ತಾರೆ.
רְפָאִ֛ים יֵחָשְׁב֥וּ אַף־הֵ֖ם כָּעֲנָקִ֑ים וְהַמֹּ֣אָבִ֔ים יִקְרְא֥וּ לָהֶ֖ם אֵמִֽים׃
12 ೧೨ ಹೋರಿಯರು ಸಹ ಪೂರ್ವಕಾಲದಲ್ಲಿ ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವನು ಕೊಟ್ಟ ದೇಶವನ್ನು ಹೇಗೆ ಸ್ವಾಧೀನಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ದೇಶದಲ್ಲಿ ವಾಸಮಾಡಿದರು.
וּבְשֵׂעִ֞יר יָשְׁב֣וּ הַחֹרִים֮ לְפָנִים֒ וּבְנֵ֧י עֵשָׂ֣ו יִֽירָשׁ֗וּם וַיַּשְׁמִידוּם֙ מִפְּנֵיהֶ֔ם וַיֵּשְׁב֖וּ תַּחְתָּ֑ם כַּאֲשֶׁ֧ר עָשָׂ֣ה יִשְׂרָאֵ֗ל לְאֶ֙רֶץ֙ יְרֻשָּׁת֔וֹ אֲשֶׁר־נָתַ֥ן יְהוָ֖ה לָהֶֽם׃
13 ೧೩ ಆಗ ನಾನು, “ಎದ್ದು ಜೆರೆದ್ ಹಳ್ಳವನ್ನು ದಾಟಿರಿ” ಎಂದು ಹೇಳಲು ನಾವು ಜೆರೆದ್ ಹಳ್ಳವನ್ನು ದಾಟಿದೆವು.
עַתָּ֗ה קֻ֛מוּ וְעִבְר֥וּ לָכֶ֖ם אֶת־נַ֣חַל זָ֑רֶד וַֽנַּעֲבֹ֖ר אֶת־נַ֥חַל זָֽרֶד׃
14 ೧೪ ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.
וְהַיָּמִ֞ים אֲשֶׁר־הָלַ֣כְנוּ ׀ מִקָּדֵ֣שׁ בַּרְנֵ֗עַ עַ֤ד אֲשֶׁר־עָבַ֙רְנוּ֙ אֶת־נַ֣חַל זֶ֔רֶד שְׁלֹשִׁ֥ים וּשְׁמֹנֶ֖ה שָׁנָ֑ה עַד־תֹּ֨ם כָּל־הַדּ֜וֹר אַנְשֵׁ֤י הַמִּלְחָמָה֙ מִקֶּ֣רֶב הַֽמַּחֲנֶ֔ה כַּאֲשֶׁ֛ר נִשְׁבַּ֥ע יְהוָ֖ה לָהֶֽם׃
15 ೧೫ ಯೆಹೋವನ ಹಸ್ತವು ಅವರಿಗೆ ವಿರುದ್ಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.
וְגַ֤ם יַד־יְהוָה֙ הָ֣יְתָה בָּ֔ם לְהֻמָּ֖ם מִקֶּ֣רֶב הַֽמַּחֲנֶ֑ה עַ֖ד תֻּמָּֽם׃
16 ೧೬ ಆ ಕಾಲದಲ್ಲಿ ಯುದ್ಧನಿಪುಣರಾಗಿದ್ದ ಸೈನಿಕರೆಲ್ಲರೂ ಸತ್ತುಹೋದರು.
וַיְהִ֨י כַאֲשֶׁר־תַּ֜מּוּ כָּל־אַנְשֵׁ֧י הַמִּלְחָמָ֛ה לָמ֖וּת מִקֶּ֥רֶב הָעָֽם׃ ס
17 ೧೭ ಆಗ ಯೆಹೋವನು ನನ್ನೊಂದಿಗೆ ಮಾತನಾಡಿ ನನಗೆ,
וַיְדַבֵּ֥ר יְהוָ֖ה אֵלַ֥י לֵאמֹֽר׃
18 ೧೮ “ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವವರಾಗಿದ್ದೀರಿ.
אַתָּ֨ה עֹבֵ֥ר הַיּ֛וֹם אֶת־גְּב֥וּל מוֹאָ֖ב אֶת־עָֽר׃
19 ೧೯ ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.”
וְקָרַבְתָּ֗ מ֚וּל בְּנֵ֣י עַמּ֔וֹן אַל־תְּצֻרֵ֖ם וְאַל־תִּתְגָּ֣ר בָּ֑ם כִּ֣י לֹֽא־אֶ֠תֵּן מֵאֶ֨רֶץ בְּנֵי־עַמּ֤וֹן לְךָ֙ יְרֻשָּׁ֔ה כִּ֥י לִבְנֵי־ל֖וֹט נְתַתִּ֥יהָ יְרֻשָּֽׁה׃
20 ೨೦ ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರನ್ನು ಜಂಜುಮ್ಯರೆಂದು ಹೇಳುತ್ತಾರೆ.
אֶֽרֶץ־רְפָאִ֥ים תֵּחָשֵׁ֖ב אַף־הִ֑וא רְפָאִ֤ים יָֽשְׁבוּ־בָהּ֙ לְפָנִ֔ים וְהָֽעַמֹּנִ֔ים יִקְרְא֥וּ לָהֶ֖ם זַמְזֻמִּֽים׃
21 ೨೧ ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕ್ಯರಂತೆ ಎತ್ತರವಾದ ಪುರುಷರೂ ಆಗಿದ್ದರು.
עַ֣ם גָּד֥וֹל וְרַ֛ב וָרָ֖ם כָּעֲנָקִ֑ים וַיַּשְׁמִידֵ֤ם יְהוָה֙ מִפְּנֵיהֶ֔ם וַיִּירָשֻׁ֖ם וַיֵּשְׁב֥וּ תַחְתָּֽם׃
22 ೨೨ ಆದರೆ ಹೇಗೆ ಯೆಹೋವನು ಸೇಯೀರಿನಲ್ಲಿರುವ ಏಸಾವ್ಯರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,
כַּאֲשֶׁ֤ר עָשָׂה֙ לִבְנֵ֣י עֵשָׂ֔ו הַיֹּשְׁבִ֖ים בְּשֵׂעִ֑יר אֲשֶׁ֨ר הִשְׁמִ֤יד אֶת־הַחֹרִי֙ מִפְּנֵיהֶ֔ם וַיִּֽירָשֻׁם֙ וַיֵּשְׁב֣וּ תַחְתָּ֔ם עַ֖ד הַיּ֥וֹם הַזֶּֽה׃
23 ೨೩ ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ನಾಡಿನಿಂದ ಹೊರಗೆ ಹೋಗುವಂತೆ ಮಾಡಿದನು. ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರಲ್ಲಿ ವಾಸಮಾಡ ತೊಡಗಿದರು.
וְהָֽעַוִּ֛ים הַיֹּשְׁבִ֥ים בַּחֲצֵרִ֖ים עַד־עַזָּ֑ה כַּפְתֹּרִים֙ הַיֹּצְאִ֣ים מִכַּפְתּ֔וֹר הִשְׁמִידֻ֖ם וַיֵּשְׁב֥וּ תַחְתָּֽם׃
24 ೨೪ “ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತುಹೋಗುವನು, ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಾನು ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.
ק֣וּמוּ סְּע֗וּ וְעִבְרוּ֮ אֶת־נַ֣חַל אַרְנֹן֒ רְאֵ֣ה נָתַ֣תִּי בְ֠יָדְךָ אֶת־סִיחֹ֨ן מֶֽלֶךְ־חֶשְׁבּ֧וֹן הָֽאֱמֹרִ֛י וְאֶת־אַרְצ֖וֹ הָחֵ֣ל רָ֑שׁ וְהִתְגָּ֥ר בּ֖וֹ מִלְחָמָֽה׃
25 ೨೫ ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು.
הַיּ֣וֹם הַזֶּ֗ה אָחֵל֙ תֵּ֤ת פַּחְדְּךָ֙ וְיִרְאָ֣תְךָ֔ עַל־פְּנֵי֙ הָֽעַמִּ֔ים תַּ֖חַת כָּל־הַשָּׁמָ֑יִם אֲשֶׁ֤ר יִשְׁמְעוּן֙ שִׁמְעֲךָ֔ וְרָגְז֥וּ וְחָל֖וּ מִפָּנֶֽיךָ׃
26 ೨೬ ಆಗ ನಾನು ಕೆದೇಮೋತಿನ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,
וָאֶשְׁלַ֤ח מַלְאָכִים֙ מִמִּדְבַּ֣ר קְדֵמ֔וֹת אֶל־סִיח֖וֹן מֶ֣לֶךְ חֶשְׁבּ֑וֹן דִּבְרֵ֥י שָׁל֖וֹם לֵאמֹֽר׃
27 ೨೭ “ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು.
אֶעְבְּרָ֣ה בְאַרְצֶ֔ךָ בַּדֶּ֥רֶךְ בַּדֶּ֖רֶךְ אֵלֵ֑ךְ לֹ֥א אָס֖וּר יָמִ֥ין וּשְׂמֹֽאול׃
28 ೨೮ ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಮತ್ತು ಕುಡಿಯಲಿಕ್ಕೆ ನೀರನ್ನೂ ಕೊಡಿರಿ.
אֹ֣כֶל בַּכֶּ֤סֶף תַּשְׁבִּרֵ֙נִי֙ וְאָכַ֔לְתִּי וּמַ֛יִם בַּכֶּ֥סֶף תִּתֶּן־לִ֖י וְשָׁתִ֑יתִי רַ֖ק אֶעְבְּרָ֥ה בְרַגְלָֽי׃
29 ೨೯ ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ” ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದೆನು.
כַּאֲשֶׁ֨ר עָֽשׂוּ־לִ֜י בְּנֵ֣י עֵשָׂ֗ו הַיֹּֽשְׁבִים֙ בְּשֵׂעִ֔יר וְהַמּ֣וֹאָבִ֔ים הַיֹּשְׁבִ֖ים בְּעָ֑ר עַ֤ד אֲשֶֽׁר־אֶֽעֱבֹר֙ אֶת־הַיַּרְדֵּ֔ן אֶל־הָאָ֕רֶץ אֲשֶׁר־יְהוָ֥ה אֱלֹהֵ֖ינוּ נֹתֵ֥ן לָֽנוּ׃
30 ೩೦ ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.
וְלֹ֣א אָבָ֗ה סִיחֹן֙ מֶ֣לֶךְ חֶשְׁבּ֔וֹן הַעֲבִרֵ֖נוּ בּ֑וֹ כִּֽי־הִקְשָׁה֩ יְהוָ֨ה אֱלֹהֶ֜יךָ אֶת־רוּח֗וֹ וְאִמֵּץ֙ אֶת־לְבָב֔וֹ לְמַ֛עַן תִּתּ֥וֹ בְיָדְךָ֖ כַּיּ֥וֹם הַזֶּֽה׃ ס
31 ೩೧ ತರುವಾಯ ಯೆಹೋವನು ನನಗೆ, “ಈಗ ನಾನು ಸೀಹೋನನನ್ನೂ ಮತ್ತು ಅವನ ದೇಶವನ್ನೂ ನಿಮಗೆ ವಶಪಡಿಸುವುದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಮಾಡಿರಿ” ಎಂದು ಹೇಳಿದನು.
וַיֹּ֤אמֶר יְהוָה֙ אֵלַ֔י רְאֵ֗ה הַֽחִלֹּ֙תִי֙ תֵּ֣ת לְפָנֶ֔יךָ אֶת־סִיחֹ֖ן וְאֶת־אַרְצ֑וֹ הָחֵ֣ל רָ֔שׁ לָרֶ֖שֶׁת אֶת־אַרְצֽוֹ׃
32 ೩೨ ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಜಿಗೆ ಹೊರಟುಬಂದನು.
וַיֵּצֵא֩ סִיחֹ֨ן לִקְרָאתֵ֜נוּ ה֧וּא וְכָל־עַמּ֛וֹ לַמִּלְחָמָ֖ה יָֽהְצָה׃
33 ೩೩ ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ, ಅವನ ಮಕ್ಕಳನ್ನೂ ಮತ್ತು ಜನರೆಲ್ಲರನ್ನೂ ಸಂಹರಿಸಿದೆವು.
וַֽיִּתְּנֵ֛הוּ יְהוָ֥ה אֱלֹהֵ֖ינוּ לְפָנֵ֑ינוּ וַנַּ֥ךְ אֹת֛וֹ וְאֶת־בנו וְאֶת־כָּל־עַמּֽוֹ׃
34 ೩೪ ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡು ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನು ಮತ್ತು ಮಕ್ಕಳನ್ನೂ ನಿಶ್ಶೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.
וַנִּלְכֹּ֤ד אֶת־כָּל־ עָרָיו֙ בָּעֵ֣ת הַהִ֔וא וַֽנַּחֲרֵם֙ אֶת־כָּל־עִ֣יר מְתִ֔ם וְהַנָּשִׁ֖ים וְהַטָּ֑ף לֹ֥א הִשְׁאַ֖רְנוּ שָׂרִֽיד׃
35 ೩೫ ಪಶುಗಳನ್ನು ಮಾತ್ರ ಉಳಿಸಿ ನಮ್ಮ ಸ್ವಂತಕ್ಕಾಗಿ ತೆಗೆದುಕೊಂಡು ಊರುಗಳನ್ನು ಸೂರೆಮಾಡಿಬಿಟ್ಟೆವು.
רַ֥ק הַבְּהֵמָ֖ה בָּזַ֣זְנוּ לָ֑נוּ וּשְׁלַ֥ל הֶעָרִ֖ים אֲשֶׁ֥ר לָכָֽדְנוּ׃
36 ೩೬ ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.
מֵֽעֲרֹעֵ֡ר אֲשֶׁר֩ עַל־שְׂפַת־נַ֨חַל אַרְנֹ֜ן וְהָעִ֨יר אֲשֶׁ֤ר בַּנַּ֙חַל֙ וְעַד־הַגִּלְעָ֔ד לֹ֤א הָֽיְתָה֙ קִרְיָ֔ה אֲשֶׁ֥ר שָׂגְבָ֖ה מִמֶּ֑נּוּ אֶת־הַכֹּ֕ל נָתַ֛ן יְהוָ֥ה אֱלֹהֵ֖ינוּ לְפָנֵֽינוּ׃
37 ೩೭ ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇ ಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನು.
רַ֛ק אֶל־אֶ֥רֶץ בְּנֵי־עַמּ֖וֹן לֹ֣א קָרָ֑בְתָּ כָּל־יַ֞ד נַ֤חַל יַבֹּק֙ וְעָרֵ֣י הָהָ֔ר וְכֹ֥ל אֲשֶׁר־צִוָּ֖ה יְהוָ֥ה אֱלֹהֵֽינוּ׃

< ಧರ್ಮೋಪದೇಶಕಾಂಡ 2 >