< ಧರ್ಮೋಪದೇಶಕಾಂಡ 20 >
1 ೧ ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.
Lorsque tu iras en guerre contre tes ennemis, et que tu verras des chevaux et des cavaliers et un peuple plus nombreux que toi, n'aie point de crainte? car le Seigneur ton Dieu, qui t'a fait sortir de la terre d'Egypte, est avec toi.
2 ೨ ನಿಮಗೆ ಯುದ್ಧ ಸಮೀಪಿಸಿದಾಗ ಯಾಜಕನು ಮುಂದೆ ಬಂದು ಭಟರ ಸಂಗಡ ಮಾತನಾಡಿ ಅವರಿಗೆ,
Au moment de combattre, le grand prêtre s'avancera et parlera au peuple disant:
3 ೩ “ಇಸ್ರಾಯೇಲರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗುಂದಬಾರದು, ದಿಗಿಲುಪಡಬಾರದು, ನಡುಗಬಾರದೂ ಮತ್ತು ಅವರಿಗೆ ಹೆದರಲೂಬಾರದು.
Ecoutez, enfants d'Israël: Vous allez livrer bataille à vos ennemis; conservez votre fermeté de cœur, n'ayez point de crainte, ne rompez pas les rangs, ne vous détournez pas de leur face.
4 ೪ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು” ಎಂದು ಹೇಳಬೇಕು.
Car le Seigneur votre Dieu, qui marche à votre tête, combattra vos ennemis et vous sauvera.
5 ೫ ಮತ್ತು ಸೈನ್ಯಾಧಿಪತಿಗಳು ಅವರಿಗೆ, “ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಪ್ರತಿಷ್ಠೆ ಮಾಡದಿದ್ದರೆ ಅವನು ಆ ಮನೆಗೆ ಹೋಗಲಿ, ಅವನು ಯುದ್ಧಕ್ಕೆ ಬಂದು ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಳ್ಳಬಹುದು.
Les scribes aussi parleront au peuple, disant: Est-il parmi vous un homme qui, ayant bâti une maison neuve, n'en ait point fait la dédicace? Qu'il parte, qu'il retourne en sa maison s'il craint de succomber en ce combat, et qu'un autre que lui ne fasse cette dédicace.
6 ೬ ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಬಹುದು.
Est-il un homme qui ait planté une vigne et n'en ait point joui? Qu'il parte, qu'il retourne en sa maison, s'il craint de succomber en ce combat, et qu'un autre que lui ne jouisse de sa vigne.
7 ೭ ಯಾವನಾದರೂ ತಾನು ಮದುವೆಗೆ ನಿಶ್ಚಯ ಮಾಡಿಕೊಂಡ ಹೆಣ್ಣನ್ನು ಇನ್ನೂ ಸೇರಿಸಿಕೊಳ್ಳದಿದ್ದರೆ ಅವನು ಮನೆಗೆ ಹೋಗಲಿ; ಅವನು ಯುದ್ಧದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳಬಹುದು” ಎಂದು ಹೇಳಬೇಕು.
Est-il un homme qui ait épousé une femme et ne l'ait pas encore possédée? Qu'il parte, qu'il retourne en sa maison, s'il craint de succomber en ce combat, et qu'un autre que lui ne possède sa femme.
8 ೮ ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು.
Et les scribes continueront de parler au peuple, disant: Est-il un homme qui tremble et qui en son cœur ait crainte? Qu'il parte, et qu'il retourne en sa maison pour qu'il ne rende pas craintif, comme le sien, le cœur de son frère.
9 ೯ ಸೈನ್ಯಾಧಿಪತಿಗಳು ಭಟರಿಗೆ ಈ ರೀತಿಯಾಗಿ ಹೇಳಿದ ನಂತರ ದಂಡಿನವರ ಮೇಲೆ ನಾಯಕರನ್ನು ನೇಮಿಸಬೇಕು.
Et, des que les scribes auront cessé de parler, ils placeront les chefs de l'armée à la tête du peuple.
10 ೧೦ ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.
Et si vous êtes près d'une ville pour donner l'assaut ou inviter les habitants à la paix:
11 ೧೧ ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.
S'ils vous répondent pacifiquement, s'ils vous ouvrent leurs portes, que tout ce peuple, que tous ceux par vous trouvés en cette ville, soient vos tributaires et vos sujets.
12 ೧೨ ಅವರು ನಿಮ್ಮ ಮಾತಿಗೆ ಸಮ್ಮತಿಸದೆ ಎದುರಿಸಿದರೆ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.
S'ils ne vous écoutent pas, s'ils prennent les armes, assiégez la ville.
13 ೧೩ ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ನಿಮಗೆ ವಶವಾಗುವಂತೆ ಮಾಡಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರಮಾಡಬೇಕು.
Et si le Seigneur vous la livre, faites périr par le glaive tous les mâles qu'elle renferme,
14 ೧೪ ಹೆಂಗಸರನ್ನೂ, ಮಕ್ಕಳನ್ನೂ, ದನಗಳನ್ನೂ ಮತ್ತು ಊರಿನಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.
Epargnez les femmes et le butin: emparez-vous de tout le bétail, de tout ce qui appartient à la ville, de toutes ses richesses, nourrissez-vous de toutes les provisions des ennemis que le Seigneur vous livre.
15 ೧೫ ಈ ದೇಶದ ಜನಾಂಗಗಳಿಗೆ ಸೇರದೆ ದೂರವಾಗಿರುವ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ನೀವು ಹಾಗೆಯೇ ನಡೆದುಕೊಳ್ಳಬೇಕು.
Traitez de même les villes lointaines, étrangères aux nations
16 ೧೬ ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.
Que le Seigneur vous livre pour vous donner leur terre comme héritage. Ne prenez vivant aucun des hommes qui les habitent.
17 ೧೭ ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು.
Frappez d'anathème: Hettéen, Amorrhéen, Chananén, Phérézéen, Evéen, Jébuséen et Gergéséen, comme vous l'a prescrit le Seigneur votre Dieu;
18 ೧೮ ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧವಾದ ಆಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಬಹುದು.
De peur qu'ils ne vous apprennent à pratiquer les abominations qu'ils commettent pour leurs dieux, et que vous ne deveniez coupables envers le Seigneur votre Dieu.
19 ೧೯ ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅದಕ್ಕೆ ಬಹುದಿನ ಮುತ್ತಿಗೆಹಾಕಿದಾಗ, ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಯಾರಿಗೂ ಶತ್ರುಗಳಲ್ಲ! ಅವುಗಳೊಡನೆ ಯುದ್ಧಮಾಡಬಹುದೇ?
Si vous avez investi une ville plusieurs jours pour la combattre jusqu'à ce qu'elle succombe, ne détruisez pas ses arbres en y mettant la cognée, mangez-en les fruits sans les abattre. L'arbre des champs est-il un homme, pour entrer devant toi dans ton retranchement?
20 ೨೦ ಮರಗಳು ತಿನ್ನತಕ್ಕ ಹಣ್ಣು ಕೊಡುವುದಿಲ್ಲವೆಂದು ನೀವು ತಿಳಿದಾಗ ಮಾತ್ರ ಅದನ್ನು ಕಡಿದು ನಾಶಮಾಡಬಹುದು. ಅವುಗಳಿಂದ ಯುದ್ಧಸಲಕರಣೆಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ನಾಶವಾಗುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.
Mais tu abattras les arbres que tu sais ne pas produire de fruits, tu en feras des palissades contre la ville qui te résiste, jusqu'à ce qu'elle te soit livrée.