< ಧರ್ಮೋಪದೇಶಕಾಂಡ 21 >
1 ೧ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆ ಹೋದರೆ,
“Ne mieva ɖo ŋugbedodonyigba la dzi, eye wofɔ ame aɖe si wowu da ɖe gbe me la ƒe kukua, eye ame aɖeke mekpɔ ame si wui o la,
2 ೨ ನಿಮ್ಮ ಹಿರಿಯರೂ ಮತ್ತು ನ್ಯಾಯಾಧಿಪತಿಗಳೂ ಬಂದು ಹತನಾದವನ ಶವದ ಸುತ್ತಲಿರುವ ಊರುಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳುವುದಕ್ಕೆ ಅಳತೆಮಾಡಬೇಕು.
ekema ele be miaƒe ametsitsiwo kple ʋɔnudrɔ̃lawo nadzidze didime si le teƒea kple du siwo te ɖe teƒea ŋu la dome.
3 ೩ ಯಾವ ಊರು ಹತ್ತಿರವಾಗಿದೆಯೋ ಆ ಊರಿನ ಹಿರಿಯರು ಇನ್ನೂ ನೊಗಕ್ಕೆ ಕಟ್ಟಲ್ಪಡದೆಯೂ, ಯಾವ ಕೆಲಸವನ್ನೂ ಮಾಡದೆಯೂ ಇರುವ ಒಂದು ಮಣಕವನ್ನು ತೆಗೆದುಕೊಳ್ಳಬೇಕು.
Mina du si te ɖe eŋu wu la ƒe ametsitsiwo natsɔ nyinɔe ɖeka si womede kɔkuti kɔ na kpɔ o la,
4 ೪ ಅವರು ಅದನ್ನು ಎಂದಿಗೂ ವ್ಯವಸಾಯಕ್ಕೆ ಉಪಯೋಗಿಸದಂಥ ಅಥವಾ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ತೆಗೆದುಕೊಂಡು ಹೋಗಿ, ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.
ayi balime si tɔsisi aɖe to, eye womede agble ɖi kpɔ o. Woaŋe kɔ nyinɔe la le afi ma.
5 ೫ ಲೇವಿ ಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಬರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಆರಿಸಿಕೊಂಡಿದ್ದಾನಲ್ಲಾ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸುವವರು, ಅವರ ಮಾತುಗಳನ್ನು ಕೇಳಿರಿ.
“Nunɔlawo, ame siwo Yehowa, wò Mawu la tia be woawɔ dɔ le yeƒe ŋkume, ayra amewo, adrɔ̃ ʋɔnu, eye woahe to na amewo la
6 ೬ ಹತನಾದ ಮನುಷ್ಯನಿಗೆ ಹತ್ತಿರವಿರುವ ಗ್ರಾಮದ ಹಿರಿಯರು, ತಗ್ಗಿನಲ್ಲಿ ಕುತ್ತಿಗೆ ಮುರಿಯಲ್ಪಟ್ಟ ಆ ಮಣಕದ ಮೇಲೆ ತಮ್ಮ ಕೈಗಳನ್ನು ತೊಳೆದುಕೊಂಡು,
nava klɔ asi ɖe nyinɔe la dzi,
7 ೭ “ನಮ್ಮ ಕೈಗಳು ಈ ಹತ್ಯವನ್ನು ಮಾಡಲಿಲ್ಲ, ನಮ್ಮ ಕಣ್ಣುಗಳು ನೋಡಲಿಲ್ಲ.
eye wòagblɔ be, ‘Menye míaƒe asiwoe kɔ ʋu sia ɖi o, eye míekpɔ hlɔ̃ sia dodo teƒe hã o.
8 ೮ ಯೆಹೋವನೇ ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷಮಿಸಬೇಕು; ಅನ್ಯಾಯವಾದ ನರಹತ್ಯದೋಷ ಫಲವು ನಿನ್ನ ಜನರಾದ ಇಸ್ರಾಯೇಲರಿಗೆ ತಗಲದಿರಲಿ” ಎಂದು ಹೇಳಬೇಕು.
O! Yehowa, tsɔ nu vɔ̃ ke wò dukɔ Israel, si wò ŋutɔ nèɖe, eye mègada ame maɖifɔ sia wuwu ɖe dukɔ la dzi o. Tsɔ ame sia ƒe ʋukɔkɔɖi ƒe nu vɔ̃ ke mí.’
9 ೯ ಆಗ ಆ ರಕ್ತಾಪರಾಧವು ಕ್ಷಮಿಸಲ್ಪಡುವುದು. ಹೀಗೆ ಯೆಹೋವನ ದೃಷ್ಟಿಯಲ್ಲಿ ಸರಿಯಾದುದನ್ನು ಮಾಡುವುದರಿಂದ ನೀವೇ ಅನ್ಯಾಯವಾದ ನರಹತ್ಯದೋಷವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವಿರಿ.
Ale nàɖe fɔɖiɖi sia ɖa le mia dome to Yehowa ƒe sewo dzi wɔwɔ me.”
10 ೧೦ ನೀವು ಶತ್ರುಗಳೊಡನೆ ಯುದ್ಧಮಾಡಲಾಗಿ ನಿಮ್ಮ ದೇವರಾದ ಯೆಹೋವನ ಅನುಗ್ರಹದಿಂದ ಅವರನ್ನು ಸೋಲಿಸಿದಾಗ ನೀವು ಅವರನ್ನು ಸೆರೆಯಾಗಿ ಒಯ್ಯಬೇಕು.
“Ne èyi aʋa, eye Yehowa, wò Mawu la na nèɖu futɔwo dzi,
11 ೧೧ ನಿಮ್ಮಲ್ಲಿ ಯಾವನಾದರೂ ಸೆರೆಯವರಲ್ಲಿ ಸುಂದರ ಸ್ತ್ರೀಯನ್ನು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ,
eye ne èkpɔ ɖetugbi dzetugbe aɖe le aʋaléleawo dome la,
12 ೧೨ ಅವಳನ್ನು ಮನೆಗೆ ಕರೆದುಕೊಂಡು ಬರಲಿ, ತರುವಾಯ ಅವಳು ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಳ್ಳುವಳು.
kplɔe yi wò aƒe me. Ele be wòaƒlɔ ta, aɖe fe,
13 ೧೩ ಅವಳು ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳಿನ ವರೆಗೆ ತಾಯಿ ಮತ್ತು ತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.
aɖe avɔ si wòta hafi wolée la da ɖi, ata avɔ bubu, eye wòanɔ wò aƒe me, afa fofoa kple dadaa ɣleti ɖeka blibo. Le esia megbe la, àte ŋu aɖee.
14 ೧೪ ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಸಂಗಮಿಸಿದ್ದರಿಂದ ಹಣ ಕೊಟ್ಟು ದಾಸತ್ವಕ್ಕೆ ಮಾರಲೂ ಬಾರದು, ದಾಸಿಯಂತೆ ನಡಿಸಲೂ ಬಾರದು.
Ke ne èɖee vɔ hafi va kpɔ be meganyo na ye o la, ele be nàna ablɔɖee. Mègadzrae o, eye mègawɔe wò ŋutɔ wò kluvi hã o, elabena ède asi eŋu xoxo.”
15 ೧೫ ಯಾವನಾದರು ಇಬ್ಬರು ಹೆಂಡತಿಯರನ್ನು ಮಾಡಿಕೊಂಡು ಅವರಲ್ಲಿ ಒಬ್ಬಳನ್ನು ಪ್ರೀತಿಸಿ, ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭ ಬಂದಾಗ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೆ,
“Ne srɔ̃ eve le ŋutsu aɖe si, ŋutsua lɔ̃ srɔ̃a ɖeka, ke melɔ̃ evelia o, evɔ nyɔnu eveawo katã dzi vi nɛ, eye Via ŋutsu tsitsitɔ dadae nye srɔ̃a si ŋutsu la melɔ̃ o la,
16 ೧೬ ತಂದೆಯಾದವನು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ತಾನು ಪ್ರೀತಿಸುವ ಹೆಂಡತಿಯ ಮಗನನ್ನೇ ಚೊಚ್ಚಲನೆಂದು ಭಾವಿಸಬಾರದು.
mele be ŋutsu la nana domenyinu Via ŋutsu ɖevitɔ, ame si dada wòlɔ̃ la wòasɔ gbɔ wu Via ŋutsu tsitsitɔ, ame si dadaa melɔ̃ o la tɔ o.
17 ೧೭ ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ.
Ele na ŋutsu la be wòawɔ dukɔa ƒe sea dzi, eye wòatsɔ Via ŋutsu suetɔ ƒe domenyinu ƒe teƒe eve ana Via ŋutsu tsitsitɔ, elabena eyae nye eƒe ŋusẽ ƒe gɔmetoto, eye etɔe nye ŋgɔgbevinyenye ƒe viɖewo katã, togbɔ be eyae nye srɔ̃ si fofoa melɔ̃ o la ƒe ŋutsuvi gbãtɔ hã.”
18 ೧೮ ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ ಶಿಕ್ಷಿಸಲ್ಪಟ್ಟರೂ, ಮೊಂಡನೂ ಮತ್ತು ಅವಿಧೇಯನೂ ಆಗಿ,
“Ne viŋutsu sẽto, dzeaglã aɖe le ŋutsu aɖe si, meɖoa to fofoa kple dadaa o, togbɔ be wohea to nɛ hafi hã la,
19 ೧೯ ಅವರ ಮಾತನ್ನು ಕೇಳದೆಹೋದರೆ ತಂದೆತಾಯಿಗಳು ಅವನನ್ನು ಹಿಡಿದು,
ekema fofoa kple dadaa nakplɔe ayi dumemetsitsiawo gbɔ,
20 ೨೦ ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, “ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ” ಎಂದು ಸಾಕ್ಷಿಹೇಳಬೇಕು.
agblɔ be, ‘Mía viŋutsu sia sẽa to, dzea aglã, eye mewɔa míaƒe gbe dzi o; gawu la, enye ame vlo kple ahanomunɔ.’
21 ೨೧ ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.
Ekema dua me tɔwo aƒu kpee wòaku. Ne miewɔ alea la, miaɖe nu vɔ̃ sia tɔgbi ɖa le mia dome, eye Israel ɖekakpuiwo katã ase nya si dzɔ eye vɔvɔ̃ aɖo wo.
22 ೨೨ ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರದ ಕಂಬಕ್ಕೆ ತೂಗುಹಾಕಿದರೆ,
“Ne ame aɖe wɔ nu si dze na ku, eye wode ka ve nɛ la,
23 ೨೩ ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.
mele be eƒe ŋutilã kukua natsi kadeveti la ŋuti ŋu nake o. Ele be woaɖii gbe ma gbe ke, elabena Mawu ƒo fi de ame sia ame si woatsi ɖe ati ŋuti. Mègagblẽ kɔ ɖo na anyigba si Yehowa, wò Mawu la na wò la o.”