< ಧರ್ಮೋಪದೇಶಕಾಂಡ 21 >

1 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆ ಹೋದರೆ,
כִּי־יִמָּצֵ֣א חָלָ֗ל בָּאֲדָמָה֙ אֲשֶׁר֩ יְהוָ֨ה אֱלֹהֶ֜יךָ נֹתֵ֤ן לְךָ֙ לְרִשְׁתָּ֔הּ נֹפֵ֖ל בַּשָּׂדֶ֑ה לֹ֥א נוֹדַ֖ע מִ֥י הִכָּֽהוּ׃
2 ನಿಮ್ಮ ಹಿರಿಯರೂ ಮತ್ತು ನ್ಯಾಯಾಧಿಪತಿಗಳೂ ಬಂದು ಹತನಾದವನ ಶವದ ಸುತ್ತಲಿರುವ ಊರುಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳುವುದಕ್ಕೆ ಅಳತೆಮಾಡಬೇಕು.
וְיָצְא֥וּ זְקֵנֶ֖יךָ וְשֹׁפְטֶ֑יךָ וּמָדְדוּ֙ אֶל־הֶ֣עָרִ֔ים אֲשֶׁ֖ר סְבִיבֹ֥ת הֶחָלָֽל׃
3 ಯಾವ ಊರು ಹತ್ತಿರವಾಗಿದೆಯೋ ಆ ಊರಿನ ಹಿರಿಯರು ಇನ್ನೂ ನೊಗಕ್ಕೆ ಕಟ್ಟಲ್ಪಡದೆಯೂ, ಯಾವ ಕೆಲಸವನ್ನೂ ಮಾಡದೆಯೂ ಇರುವ ಒಂದು ಮಣಕವನ್ನು ತೆಗೆದುಕೊಳ್ಳಬೇಕು.
וְהָיָ֣ה הָעִ֔יר הַקְּרֹבָ֖ה אֶל־הֶחָלָ֑ל וְלָֽקְח֡וּ זִקְנֵי֩ הָעִ֨יר הַהִ֜וא עֶגְלַ֣ת בָּקָ֗ר אֲשֶׁ֤ר לֹֽא־עֻבַּד֙ בָּ֔הּ אֲשֶׁ֥ר לֹא־מָשְׁכָ֖ה בְּעֹֽל׃
4 ಅವರು ಅದನ್ನು ಎಂದಿಗೂ ವ್ಯವಸಾಯಕ್ಕೆ ಉಪಯೋಗಿಸದಂಥ ಅಥವಾ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ತೆಗೆದುಕೊಂಡು ಹೋಗಿ, ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.
וְהוֹרִ֡דוּ זִקְנֵי֩ הָעִ֨יר הַהִ֤וא אֶת־הָֽעֶגְלָה֙ אֶל־נַ֣חַל אֵיתָ֔ן אֲשֶׁ֛ר לֹא־יֵעָבֵ֥ד בּ֖וֹ וְלֹ֣א יִזָּרֵ֑עַ וְעָֽרְפוּ־שָׁ֥ם אֶת־הָעֶגְלָ֖ה בַּנָּֽחַל׃
5 ಲೇವಿ ಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಬರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಆರಿಸಿಕೊಂಡಿದ್ದಾನಲ್ಲಾ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸುವವರು, ಅವರ ಮಾತುಗಳನ್ನು ಕೇಳಿರಿ.
וְנִגְּשׁ֣וּ הַכֹּהֲנִים֮ בְּנֵ֣י לֵוִי֒ כִּ֣י בָ֗ם בָּחַ֞ר יְהוָ֤ה אֱלֹהֶ֙יךָ֙ לְשָׁ֣רְת֔וֹ וּלְבָרֵ֖ךְ בְּשֵׁ֣ם יְהוָ֑ה וְעַל־פִּיהֶ֥ם יִהְיֶ֖ה כָּל־רִ֥יב וְכָל־נָֽגַע׃
6 ಹತನಾದ ಮನುಷ್ಯನಿಗೆ ಹತ್ತಿರವಿರುವ ಗ್ರಾಮದ ಹಿರಿಯರು, ತಗ್ಗಿನಲ್ಲಿ ಕುತ್ತಿಗೆ ಮುರಿಯಲ್ಪಟ್ಟ ಆ ಮಣಕದ ಮೇಲೆ ತಮ್ಮ ಕೈಗಳನ್ನು ತೊಳೆದುಕೊಂಡು,
וְכֹ֗ל זִקְנֵי֙ הָעִ֣יר הַהִ֔וא הַקְּרֹבִ֖ים אֶל־הֶחָלָ֑ל יִרְחֲצוּ֙ אֶת־יְדֵיהֶ֔ם עַל־הָעֶגְלָ֖ה הָעֲרוּפָ֥ה בַנָּֽחַל׃
7 “ನಮ್ಮ ಕೈಗಳು ಈ ಹತ್ಯವನ್ನು ಮಾಡಲಿಲ್ಲ, ನಮ್ಮ ಕಣ್ಣುಗಳು ನೋಡಲಿಲ್ಲ.
וְעָנ֖וּ וְאָמְר֑וּ יָדֵ֗ינוּ לֹ֤א שָֽׁפְכוּ֙ אֶת־הַדָּ֣ם הַזֶּ֔ה וְעֵינֵ֖ינוּ לֹ֥א רָאֽוּ׃
8 ಯೆಹೋವನೇ ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷಮಿಸಬೇಕು; ಅನ್ಯಾಯವಾದ ನರಹತ್ಯದೋಷ ಫಲವು ನಿನ್ನ ಜನರಾದ ಇಸ್ರಾಯೇಲರಿಗೆ ತಗಲದಿರಲಿ” ಎಂದು ಹೇಳಬೇಕು.
כַּפֵּר֩ לְעַמְּךָ֨ יִשְׂרָאֵ֤ל אֲשֶׁר־פָּדִ֙יתָ֙ יְהוָ֔ה וְאַל־תִּתֵּן֙ דָּ֣ם נָקִ֔י בְּקֶ֖רֶב עַמְּךָ֣ יִשְׂרָאֵ֑ל וְנִכַּפֵּ֥ר לָהֶ֖ם הַדָּֽם׃
9 ಆಗ ಆ ರಕ್ತಾಪರಾಧವು ಕ್ಷಮಿಸಲ್ಪಡುವುದು. ಹೀಗೆ ಯೆಹೋವನ ದೃಷ್ಟಿಯಲ್ಲಿ ಸರಿಯಾದುದನ್ನು ಮಾಡುವುದರಿಂದ ನೀವೇ ಅನ್ಯಾಯವಾದ ನರಹತ್ಯದೋಷವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವಿರಿ.
וְאַתָּ֗ה תְּבַעֵ֛ר הַדָּ֥ם הַנָּקִ֖י מִקִּרְבֶּ֑ךָ כִּֽי־תַעֲשֶׂ֥ה הַיָּשָׁ֖ר בְּעֵינֵ֥י יְהוָֽה׃ ס
10 ೧೦ ನೀವು ಶತ್ರುಗಳೊಡನೆ ಯುದ್ಧಮಾಡಲಾಗಿ ನಿಮ್ಮ ದೇವರಾದ ಯೆಹೋವನ ಅನುಗ್ರಹದಿಂದ ಅವರನ್ನು ಸೋಲಿಸಿದಾಗ ನೀವು ಅವರನ್ನು ಸೆರೆಯಾಗಿ ಒಯ್ಯಬೇಕು.
כִּֽי־תֵצֵ֥א לַמִּלְחָמָ֖ה עַל־אֹיְבֶ֑יךָ וּנְתָנ֞וֹ יְהוָ֧ה אֱלֹהֶ֛יךָ בְּיָדֶ֖ךָ וְשָׁבִ֥יתָ שִׁבְיֽוֹ׃
11 ೧೧ ನಿಮ್ಮಲ್ಲಿ ಯಾವನಾದರೂ ಸೆರೆಯವರಲ್ಲಿ ಸುಂದರ ಸ್ತ್ರೀಯನ್ನು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ,
וְרָאִיתָ֙ בַּשִּׁבְיָ֔ה אֵ֖שֶׁת יְפַת־תֹּ֑אַר וְחָשַׁקְתָּ֣ בָ֔הּ וְלָקַחְתָּ֥ לְךָ֖ לְאִשָּֽׁה׃
12 ೧೨ ಅವಳನ್ನು ಮನೆಗೆ ಕರೆದುಕೊಂಡು ಬರಲಿ, ತರುವಾಯ ಅವಳು ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಳ್ಳುವಳು.
וַהֲבֵאתָ֖הּ אֶל־תּ֣וֹךְ בֵּיתֶ֑ךָ וְגִלְּחָה֙ אֶת־רֹאשָׁ֔הּ וְעָשְׂתָ֖ה אֶת־צִפָּרְנֶֽיהָ׃
13 ೧೩ ಅವಳು ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳಿನ ವರೆಗೆ ತಾಯಿ ಮತ್ತು ತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.
וְהֵסִ֩ירָה֩ אֶת־שִׂמְלַ֨ת שִׁבְיָ֜הּ מֵעָלֶ֗יהָ וְיָֽשְׁבָה֙ בְּבֵיתֶ֔ךָ וּבָֽכְתָ֛ה אֶת־אָבִ֥יהָ וְאֶת־אִמָּ֖הּ יֶ֣רַח יָמִ֑ים וְאַ֨חַר כֵּ֜ן תָּב֤וֹא אֵלֶ֙יהָ֙ וּבְעַלְתָּ֔הּ וְהָיְתָ֥ה לְךָ֖ לְאִשָּֽׁה׃
14 ೧೪ ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಸಂಗಮಿಸಿದ್ದರಿಂದ ಹಣ ಕೊಟ್ಟು ದಾಸತ್ವಕ್ಕೆ ಮಾರಲೂ ಬಾರದು, ದಾಸಿಯಂತೆ ನಡಿಸಲೂ ಬಾರದು.
וְהָיָ֞ה אִם־לֹ֧א חָפַ֣צְתָּ בָּ֗הּ וְשִׁלַּחְתָּהּ֙ לְנַפְשָׁ֔הּ וּמָכֹ֥ר לֹא־תִמְכְּרֶ֖נָּה בַּכָּ֑סֶף לֹא־תִתְעַמֵּ֣ר בָּ֔הּ תַּ֖חַת אֲשֶׁ֥ר עִנִּיתָֽהּ׃ ס
15 ೧೫ ಯಾವನಾದರು ಇಬ್ಬರು ಹೆಂಡತಿಯರನ್ನು ಮಾಡಿಕೊಂಡು ಅವರಲ್ಲಿ ಒಬ್ಬಳನ್ನು ಪ್ರೀತಿಸಿ, ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭ ಬಂದಾಗ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೆ,
כִּֽי־תִהְיֶ֨יןָ לְאִ֜ישׁ שְׁתֵּ֣י נָשִׁ֗ים הָאַחַ֤ת אֲהוּבָה֙ וְהָאַחַ֣ת שְׂנוּאָ֔ה וְיָֽלְדוּ־ל֣וֹ בָנִ֔ים הָאֲהוּבָ֖ה וְהַשְּׂנוּאָ֑ה וְהָיָ֛ה הַבֵּ֥ן הַבְּכ֖וֹר לַשְּׂנִיאָֽה׃
16 ೧೬ ತಂದೆಯಾದವನು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ತಾನು ಪ್ರೀತಿಸುವ ಹೆಂಡತಿಯ ಮಗನನ್ನೇ ಚೊಚ್ಚಲನೆಂದು ಭಾವಿಸಬಾರದು.
וְהָיָ֗ה בְּיוֹם֙ הַנְחִיל֣וֹ אֶת־בָּנָ֔יו אֵ֥ת אֲשֶׁר־יִהְיֶ֖ה ל֑וֹ לֹ֣א יוּכַ֗ל לְבַכֵּר֙ אֶת־בֶּן־הָ֣אֲהוּבָ֔ה עַל־פְּנֵ֥י בֶן־הַשְּׂנוּאָ֖ה הַבְּכֹֽר׃
17 ೧೭ ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ.
כִּי֩ אֶת־הַבְּכֹ֨ר בֶּן־הַשְּׂנוּאָ֜ה יַכִּ֗יר לָ֤תֶת לוֹ֙ פִּ֣י שְׁנַ֔יִם בְּכֹ֥ל אֲשֶׁר־יִמָּצֵ֖א ל֑וֹ כִּי־הוּא֙ רֵאשִׁ֣ית אֹנ֔וֹ ל֖וֹ מִשְׁפַּ֥ט הַבְּכֹרָֽה׃ ס
18 ೧೮ ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ ಶಿಕ್ಷಿಸಲ್ಪಟ್ಟರೂ, ಮೊಂಡನೂ ಮತ್ತು ಅವಿಧೇಯನೂ ಆಗಿ,
כִּֽי־יִהְיֶ֣ה לְאִ֗ישׁ בֵּ֚ן סוֹרֵ֣ר וּמוֹרֶ֔ה אֵינֶ֣נּוּ שֹׁמֵ֔עַ בְּק֥וֹל אָבִ֖יו וּבְק֣וֹל אִמּ֑וֹ וְיסְּר֣וּ אֹת֔וֹ וְלֹ֥א יִשְׁמַ֖ע אֲלֵיהֶֽם׃
19 ೧೯ ಅವರ ಮಾತನ್ನು ಕೇಳದೆಹೋದರೆ ತಂದೆತಾಯಿಗಳು ಅವನನ್ನು ಹಿಡಿದು,
וְתָ֥פְשׂוּ ב֖וֹ אָבִ֣יו וְאִמּ֑וֹ וְהוֹצִ֧יאוּ אֹת֛וֹ אֶל־זִקְנֵ֥י עִיר֖וֹ וְאֶל־שַׁ֥עַר מְקֹמֽוֹ׃
20 ೨೦ ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, “ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ” ಎಂದು ಸಾಕ್ಷಿಹೇಳಬೇಕು.
וְאָמְר֞וּ אֶל־זִקְנֵ֣י עִיר֗וֹ בְּנֵ֤נוּ זֶה֙ סוֹרֵ֣ר וּמֹרֶ֔ה אֵינֶ֥נּוּ שֹׁמֵ֖עַ בְּקֹלֵ֑נוּ זוֹלֵ֖ל וְסֹבֵֽא׃
21 ೨೧ ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.
וּ֠רְגָמֻהוּ כָּל־אַנְשֵׁ֨י עִיר֤וֹ בָֽאֲבָנִים֙ וָמֵ֔ת וּבִֽעַרְתָּ֥ הָרָ֖ע מִקִּרְבֶּ֑ךָ וְכָל־יִשְׂרָאֵ֖ל יִשְׁמְע֥וּ וְיִרָֽאוּ׃ ס
22 ೨೨ ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರದ ಕಂಬಕ್ಕೆ ತೂಗುಹಾಕಿದರೆ,
וְכִֽי־יִהְיֶ֣ה בְאִ֗ישׁ חֵ֛טְא מִשְׁפַּט־מָ֖וֶת וְהוּמָ֑ת וְתָלִ֥יתָ אֹת֖וֹ עַל־עֵֽץ׃
23 ೨೩ ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.
לֹא־תָלִ֨ין נִבְלָת֜וֹ עַל־הָעֵ֗ץ כִּֽי־קָב֤וֹר תִּקְבְּרֶ֙נּוּ֙ בַּיּ֣וֹם הַה֔וּא כִּֽי־קִלְלַ֥ת אֱלֹהִ֖ים תָּל֑וּי וְלֹ֤א תְטַמֵּא֙ אֶת־אַדְמָ֣תְךָ֔ אֲשֶׁר֙ יְהוָ֣ה אֱלֹהֶ֔יךָ נֹתֵ֥ן לְךָ֖ נַחֲלָֽה׃ ס

< ಧರ್ಮೋಪದೇಶಕಾಂಡ 21 >