< ಧರ್ಮೋಪದೇಶಕಾಂಡ 22 >

1 ಸ್ವದೇಶದವನ ಎತ್ತಾಗಲಿ ಅಥವಾ ಕುರಿಯಾಗಲಿ ದಾರಿ ತಪ್ಪಿ ಹೋಗಿರುವುದನ್ನು ನೀವು ನೋಡಿಯೂ ನೋಡದಂತೆ ಅದನ್ನು ಬಿಟ್ಟು ಹೋಗಬಾರದು; ಅದನ್ನು ಅಟ್ಟಿಸಿಕೊಂಡು ಹೋಗಿ ಅವನಿಗೆ ಕೊಡಲೇಬೇಕು.
आपल्यापैकी कोणाचा बैल किंवा मेंढरू मोकाट भटकलेले आढळले तर तिकडे दुर्लक्ष न करता ते त्याच्या मालकाकडे पोचते करा.
2 ಅವನು ನಿಮಗೆ ದೂರವಾಗಿದ್ದರೆ ಇಲ್ಲವೆ ಅವನು ಯಾರೋ ಎಂದು ನಿಮಗೆ ತಿಳಿಯದೆ ಹೋದರೆ, ಆ ಪಶುವನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ ನೀವು ಅದನ್ನು ಅವನಿಗೆ ಹಿಂತಿರುಗಿ ಕೊಡಬೇಕು.
तो बंधू जर जवळपास राहत नसेल किंवा कोण आहे ते माहीत नसेल तर त्या जनावराला आपल्या घरी आणा. त्याचा मालक शोध करत आला की त्याचे त्यास परत कर.
3 ಅವನ ಕತ್ತೆಯಾಗಲಿ, ಬಟ್ಟೆಯಾಗಲಿ, ಅವನು ಕಳೆದುಕೊಂಡ ಯಾವ ವಸ್ತುವಾಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ನೋಡದಂತೆ ಇರಲೇ ಬಾರದು.
कोणाचे गाढव, कपडे किंवा इतर कोणतीही वस्तू अशी इकडे तिकडे दिसली तरी असेच करा, व त्या शेजाऱ्याला मदत कर.
4 ಸ್ವದೇಶದವನ ಕತ್ತೆಯಾಗಲಿ ಅಥವಾ ಎತ್ತಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಕಾಣದವರಂತೆ ಹೋಗದೆ ಅವನಿಗೆ ಸಹಾಯಮಾಡಿ ಎಬ್ಬಿಸಬೇಕು.
कोणाचे गाढव किंवा बैल रस्त्यात पडलेले आढळले तर तिकडे दुर्लक्ष करु नका. त्यास उठवून उभे राहायला मदत करा.
5 ಸ್ತ್ರೀಯು ಪುರುಷವೇಷವನ್ನಾಗಲಿ ಅಥವಾ ಪುರುಷನು ಸ್ತ್ರೀವೇಷವನ್ನಾಗಲಿ ಹಾಕಿಕೊಳ್ಳಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರು.
बायकांनी पुरुषांचा किंवा पुरुषांनी बायकांचा पेहेराव करु नये. तुमचा देव परमेश्वर ह्याला तसे करणाऱ्या प्रत्येकाचा विट आहे.
6 ನೀವು ದಾರಿಯಲ್ಲಿ ಹೋಗುವಾಗ ಮರದ ಮೇಲಾಗಲಿ ಅಥವಾ ನೆಲದ ಮೇಲಾಗಲಿ ಇರುವ ಒಂದು ಪಕ್ಷಿಯ ಗೂಡಿನೊಳಗೆ ಮರಿಗಳು ಅಥವಾ ಮೊಟ್ಟೆಗಳು ಇದ್ದು, ಅವುಗಳ ಮೇಲೆ ತಾಯಿ ಹೊದಗಿರುವುದನ್ನು ಕಂಡರೆ ಮರಿಗಳನ್ನು ತೆಗೆದುಕೊಳ್ಳಬಹುದೇ ಹೊರತು ತಾಯಿಯನ್ನು ಹಿಡಿದುಕೊಳ್ಳಬಾರದು.
वाटेत तुम्हास झाडावर किंवा जमिनीवर पक्ष्याचे घरटे आढळले आणि मादी अंडी उबवत किंवा पिल्लांवर बसलेली दिसली तर पिल्लांसकट तिला नेऊ नका.
7 ನೀವು ಹೀಗೆ ನಡೆದುಕೊಂಡರೆ ನಿಮಗೆ ಶ್ರೇಯಸ್ಸು ಉಂಟಾಗುವುದು, ಮತ್ತು ಬಹುಕಾಲ ಬಾಳುವಿರಿ.
हवी तर फक्त पिल्ले घ्या पण आईला सोडा. हे नियम पाळलेत तर तुमचे कल्याण होईल व तुम्ही चिरायू व्हाल.
8 ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.
नवीन घर बांधलेत तर त्याच्या छताला कठडा अवश्य करा. म्हणजे वरुन तोल जाऊन कोणी पडल्यास त्याच्या हत्येचे पातक तुम्हास लागणार नाही.
9 ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಆ ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ಆ ತೋಟದ ಎಲ್ಲಾ ಬೆಳೆಯನ್ನು ದೇವರಿಗೆ ಸಮರ್ಪಿಸಬೇಕು.
द्राक्षमळ्यात इतर धान्याचे बियाणे पेरू नये. त्यामुळे संपूर्ण कापणी पवित्र ठिकाणी दिली जाईल. धान्य आणि द्राक्षे यापैकी काहीच तुम्हास वापरता येणार नाही.
10 ೧೦ ಎತ್ತನ್ನೂ ಮತ್ತು ಕತ್ತೆಯನ್ನೂ ಜೊತೆಮಾಡಿ ನೇಗಿಲಿಗೆ ಕಟ್ಟಿ ಉಳಬಾರದು.
१०बैल आणि गाढव एका नांगराला जुंपू नका.
11 ೧೧ ನಾರು ಹಾಗು ಉಣ್ಣೆಯೂ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.
११लोकर आणि ताग यांच्या मिश्र विणीचे वस्त्र वापरू नका.
12 ೧೨ ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು.
१२वेगवेगळे धागे एकत्र करून त्यांचे गोंडे आपल्या पांघरायच्या वस्त्राला चारीही टोकांना लावा.
13 ೧೩ ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯನ್ನು ದ್ವೇಷಿಸಿ, ಅವಳ ವಿಷಯದಲ್ಲಿ ಇಲ್ಲಸಲ್ಲದ ಕೆಟ್ಟ ಮಾತುಗಳನ್ನು ಆಡಿ,
१३एखाद्या मनुष्यास लग्न केल्यावर पत्नीशी शरीरसंबंध ठेवल्यावर काही काळानंतर पत्नी आवडेनाशी झाली आणि
14 ೧೪ “ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಇವಳೊಡನೆ ಸಂಗಮಿಸಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು” ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ,
१४मी या स्त्रीशी लग्न केले पण ती कुमारी नसल्याचे आमच्या शरीरसंबंधाच्या वेळी मला आढळून आले असा खोटा आरोप त्याने तिच्यावर ठेवला तर लोकांमध्ये तिची बदनामी होईल.
15 ೧೫ ಅವಳ ತಾಯಿ ತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕವಿಲ್ಲದವಳು ಎಂಬುವುದಕ್ಕೆ ನಿದರ್ಶನವನ್ನು ಊರ ಬಾಗಿಲಿಗೆ ಹಿರಿಯರ ಮುಂದೆ ತಂದು ತೋರಿಸಬೇಕು.
१५तेव्हा त्या मुलीच्या आईवडीलांनी तिच्या कौमार्याचा पुरावा घेऊन गावच्या चावडीवर वडीलधाऱ्या पंचाकडे जावे.
16 ೧೬ ಆ ಸ್ತ್ರೀಯ ತಂದೆ ಅವರಿಗೆ, “ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟ ಮೇಲೆ
१६मुलीच्या वडिलाने वडिलांस म्हणावे या पुरुषाशी माझ्या मुलीचे लग्न लावून दिले आहे. पण आता ती त्यास नकोशी झाली आहे.
17 ೧೭ ಇವನು ಅವಳನ್ನು ದ್ವೇಷಿಸಿ, ಪರಪುರುಷನ ಸಂಪರ್ಕ ಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳ ಹೆಸರನ್ನು ಅವಮಾನಪಡಿಸುತ್ತಾನೆ. ಇಗೋ ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲ ಎಂಬುವುದಕ್ಕೆ ಇದೇ ಪ್ರಮಾಣ” ಎಂದು ಹೇಳಿ ಅವಳ ಹೊದಿಕೆಯನ್ನು ಆ ಊರಿನ ಹಿರಿಯರ ಮುಂದೆ ಇಡಬೇಕು.
१७त्याने तिच्यावर भलते सलते आरोप केले आहेत. आणि हा म्हणतो की कौमार्याची लक्षणे तिच्या ठायी आढळली नाहीत. पण हा घ्या माझ्या मुलीच्या कौमार्याचा पुरावा, असे मुलीच्या वडिलांनी तेथे सांगून, त्या गावच्या मंडळींना ती चादर दाखववावी.
18 ೧೮ ಆ ಊರಿನ ಹಿರಿಯರು ಅವನನ್ನು ಹಿಡಿಸಿ ಅವನನ್ನು ಹೊಡಿಸಬೇಕು.
१८यावर गावच्या वडिलांनी त्या नवऱ्याला धरुन शिक्षा करावी.
19 ೧೯ ಇಸ್ರಾಯೇಲಳಾದ ಹೆಣ್ಣಿನ ವಿಷಯದಲ್ಲಿ ಆ ಪುರುಷನು ನಿರಾಧಾರವಾದ ತಪ್ಪು ಹೊರಿಸಿದ್ದರಿಂದ, ಅವನಿಗೆ ನೂರು ಶೆಕೆಲ್ ಬೆಳ್ಳಿ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಆ ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.
१९त्यास शंभर शेकेल दंड वसुल करावा. एका इस्राएल कन्येवर ठपका ठेवून तिची बदनामी केल्याबद्दल ही रक्कम त्याने मुलीच्या वडीलांना द्यावी. त्याने पत्नी म्हणून तिचा स्विकार केला पाहिजे. तसेच जन्मभर त्याने तिचा त्याग करता कामा नये.
20 ೨೦ ಆದರೆ ಆ ಹೆಣ್ಣು ವಿವಾಹಕ್ಕೆ ಮುಂಚೆ ದೈಹಿಕವಾಗಿ ಪುರುಷಸಂಪರ್ಕ ಮಾಡಿದ್ದು ನಿಜ ಎಂದು ತಿಳಿದುಬಂದರೆ,
२०पण पत्नीबद्दल नवऱ्याने केलेला आरोप खराही असू शकतो. तिच्या कौमार्याचा पुरावा तिचे आईवडील दाखवू शकले नाहीत तर;
21 ೨೧ ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.
२१गावातील ज्येष्ठ मंडळींनी तिला आपल्या वडिलांच्या घराच्या दारापाशी आणावी आणि गावकऱ्यांनी तिला मरेपर्यंत दगडांनी मारावे. कारण तिने इस्राएलमध्ये ही मूर्खपणाची गोष्ट केली आहे. आपल्या वडिलांच्या घरी असतानाचे तिचे वर्तन वेश्येसमान आहे. हा कलंक आपल्यामधून तुम्ही धुवून काढलाच पाहिजे.
22 ೨೨ ಯಾವನಾದರೂ ಇನ್ನೊಬ್ಬನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.
२२एखाद्या पुरुषाचे दुसऱ्या विवाहित स्त्री बरोबर लैंगिक संबंध असतील तर दोघांनाही मृत्युदंड द्यावा. आणि इस्राएलातून या दुराचाराचे निमूर्लन करावे.
23 ೨೩ ಒಬ್ಬನಿಗೆ ನಿಶ್ಚಿತಳಾದ ಹೆಣ್ಣನ್ನು ಯಾವನಾದರೂ ಊರೊಳಗೆ ಮರುಳುಗೊಳಿಸಿ ಸಂಗಮಿಸಿದರೆ,
२३एखाद्या कुमारिकेची मागणी झालेली असताना गावातील दुसऱ्या एखाद्या पुरुषाने तिच्याशी लैंगिक संबंध ठेवलेले आढळले तर
24 ೨೪ ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ಕರೆತಂದು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
२४त्या दोघांना गावाच्या वेशीपाशी भर चौकात आणून दगडांनी मरेपर्यंत मारावे ती दुसऱ्याची पत्नी होणार होती. तिच्याशी शरीरसंबधं ठेवल्याबद्दल पुरुषाला आणि गावांत असून मदतीसाठी आरडाओरडा केला नाही म्हणून त्या मुलीला मरेपर्यंत दगडांनी मारावे. अशाप्रकारे आपल्या लोकांमधून हा दुराचार निपटून टाकावा.
25 ೨೫ ಆದರೆ ಆ ಪುರುಷನು ನಿಶ್ಚಿತಳಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗಮಿಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು.
२५पण अशा वाग्दत्त मुलीला एखाद्याने रानात गाठले आणि तिच्यावर बलात्कार केला तर मात्र फक्त त्या पुरुषाला मारावे.
26 ೨೬ ಆ ಸ್ತ್ರೀಗೆ ಯಾವ ಶಿಕ್ಷೆಯೂ ಆಗಬಾರದು; ಅವಳಲ್ಲಿ ಮರಣ ಶಿಕ್ಷೆಗೆ ಪಾತ್ರವಾದ ಅಪರಾಧವೇನೂ ಇಲ್ಲ. ಒಬ್ಬ ಮನುಷ್ಯನು ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಈ ಸಂಗತಿಯೂ ಹಾಗೆಯೇ ಎಂದು ತಿಳಿಯಬೇಕು.
२६त्या मुलीला काही करु नये. देहांत शासन व्हावे असा गुन्हा तिने केला नाही. कोणी आपल्या शेजाऱ्यावर चालून जाऊन त्याचा जीव घ्यावा तसेच हे झाले.
27 ೨೭ ಆ ಸ್ತ್ರೀಯು ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಗಿಕೊಂಡರೂ ತಪ್ಪಿಸುವವರು ಇರಲಿಲ್ಲ.
२७त्यास ही मुलगी रानात आढळली, त्याने तिच्यावर हात टाकला. कदाचित् तिने मदतीसाठी हाका मारल्याही असतील पण तिच्या बचावासाठी तिथे कोणी नव्हते. तेव्हा तिला शिक्षा करु नये.
28 ೨೮ ಯಾರಿಗೂ ನಿಶ್ಚಯವಾಗದೆ ಇರುವ ಸ್ತ್ರೀಯನ್ನು ಒಬ್ಬನು ಹಿಡಿದು ಸಂಗಮಿಸಿದ್ದು ತಿಳಿದು ಬಂದರೆ,
२८वाग्दत्त झालेली नाही अशी कुमारिका कोणाला आढळली आणि त्याने तिच्यावर बलात्कार केला हे लोकांनी पाहिल्यास
29 ೨೯ ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.
२९त्याने मुलीच्या वडीलांना पन्नास शेकेल रुपे द्यावी. आता ती त्याची पत्नी झाली. कारण त्याने तिच्याशी शरीरसंबंध ठेवल्याचे पाप केले आहे. तो आता तिचा जन्मभर त्याग करु शकत नाही.
30 ೩೦ ತಂದೆಗೆ ಹೆಂಡತಿಯಾದವಳನ್ನು ಸಂಗಮಿಸಲೇ ಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವುದು.
३०“आपल्या वडलांच्या पत्नीशी गमन करून कोणी त्यांच्या तोंडाला काळे फासू नये.”

< ಧರ್ಮೋಪದೇಶಕಾಂಡ 22 >