< ಧರ್ಮೋಪದೇಶಕಾಂಡ 22 >
1 ೧ ಸ್ವದೇಶದವನ ಎತ್ತಾಗಲಿ ಅಥವಾ ಕುರಿಯಾಗಲಿ ದಾರಿ ತಪ್ಪಿ ಹೋಗಿರುವುದನ್ನು ನೀವು ನೋಡಿಯೂ ನೋಡದಂತೆ ಅದನ್ನು ಬಿಟ್ಟು ಹೋಗಬಾರದು; ಅದನ್ನು ಅಟ್ಟಿಸಿಕೊಂಡು ಹೋಗಿ ಅವನಿಗೆ ಕೊಡಲೇಬೇಕು.
Vola svojega brata ali njegovo ovco ne boš gledal zaiti in se skril pred njimi. V vsakem primeru jih boš ponovno privedel k svojemu bratu.
2 ೨ ಅವನು ನಿಮಗೆ ದೂರವಾಗಿದ್ದರೆ ಇಲ್ಲವೆ ಅವನು ಯಾರೋ ಎಂದು ನಿಮಗೆ ತಿಳಿಯದೆ ಹೋದರೆ, ಆ ಪಶುವನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ ನೀವು ಅದನ್ನು ಅವನಿಗೆ ಹಿಂತಿರುಗಿ ಕೊಡಬೇಕು.
Če tvoj brat ni blizu tebe ali če ga ne poznaš, potem jo boš privedel v svojo lastno hišo in ta bo s teboj, dokler je tvoj brat ne gre iskat in mu jo boš ponovno vrnil.
3 ೩ ಅವನ ಕತ್ತೆಯಾಗಲಿ, ಬಟ್ಟೆಯಾಗಲಿ, ಅವನು ಕಳೆದುಕೊಂಡ ಯಾವ ವಸ್ತುವಾಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ನೋಡದಂತೆ ಇರಲೇ ಬಾರದು.
Na podoben način boš storil z njegovim oslom in tako boš storil z njegovim oblačilom in z vsemi izgubljenimi stvarmi svojega brata, ki jih je izgubil in si jih našel, boš podobno storil. Ne smeš se skriti.
4 ೪ ಸ್ವದೇಶದವನ ಕತ್ತೆಯಾಗಲಿ ಅಥವಾ ಎತ್ತಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಕಾಣದವರಂತೆ ಹೋಗದೆ ಅವನಿಗೆ ಸಹಾಯಮಾಡಿ ಎಬ್ಬಿಸಬೇಕು.
Osla svojega brata ali njegovega vola ne boš gledal pasti dol ob poti in se skril pred njima. Zagotovo mu boš pomagal, da jih ponovno dvigne.
5 ೫ ಸ್ತ್ರೀಯು ಪುರುಷವೇಷವನ್ನಾಗಲಿ ಅಥವಾ ಪುರುಷನು ಸ್ತ್ರೀವೇಷವನ್ನಾಗಲಿ ಹಾಕಿಕೊಳ್ಳಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರು.
Ženska ne bo nosila tega, kar pripada moškemu niti moški ne bo oblekel ženskega oblačila, kajti vsi, ki tako delajo, so ogabnost Gospodu, tvojemu Bogu.
6 ೬ ನೀವು ದಾರಿಯಲ್ಲಿ ಹೋಗುವಾಗ ಮರದ ಮೇಲಾಗಲಿ ಅಥವಾ ನೆಲದ ಮೇಲಾಗಲಿ ಇರುವ ಒಂದು ಪಕ್ಷಿಯ ಗೂಡಿನೊಳಗೆ ಮರಿಗಳು ಅಥವಾ ಮೊಟ್ಟೆಗಳು ಇದ್ದು, ಅವುಗಳ ಮೇಲೆ ತಾಯಿ ಹೊದಗಿರುವುದನ್ನು ಕಂಡರೆ ಮರಿಗಳನ್ನು ತೆಗೆದುಕೊಳ್ಳಬಹುದೇ ಹೊರತು ತಾಯಿಯನ್ನು ಹಿಡಿದುಕೊಳ್ಳಬಾರದು.
Če se ptičje gnezdo znajde pred teboj na poti, na kateremkoli drevesu ali na tleh, bodisi so mladiči ali jajca in mati sedi na mladičih ali na jajcih, ne boš vzel samice z mladiči,
7 ೭ ನೀವು ಹೀಗೆ ನಡೆದುಕೊಂಡರೆ ನಿಮಗೆ ಶ್ರೇಯಸ್ಸು ಉಂಟಾಗುವುದು, ಮತ್ತು ಬಹುಕಾಲ ಬಾಳುವಿರಿ.
temveč boš vsekakor pustil mater oditi in k sebi vzel mlade, da bo lahko dobro s teboj in da lahko podaljšaš svoje dni.
8 ೮ ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.
Ko gradiš novo hišo, potem boš naredil obzidek za svojo streho, da nad svojo hišo ne privedeš krvi, če katerikoli mož pade od tam.
9 ೯ ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಆ ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ಆ ತೋಟದ ಎಲ್ಲಾ ಬೆಳೆಯನ್ನು ದೇವರಿಗೆ ಸಮರ್ಪಿಸಬೇಕು.
Svojega vinograda ne boš sejal z različnimi semeni, da ne bi bil sad tvojega semena, ki si ga posejal in sad vinograda omadeževan.
10 ೧೦ ಎತ್ತನ್ನೂ ಮತ್ತು ಕತ್ತೆಯನ್ನೂ ಜೊತೆಮಾಡಿ ನೇಗಿಲಿಗೆ ಕಟ್ಟಿ ಉಳಬಾರದು.
Ne boš oral z volom in oslom skupaj.
11 ೧೧ ನಾರು ಹಾಗು ಉಣ್ಣೆಯೂ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.
Ne boš nosil obleke različnih vrst, kakor iz volne in lanu, skupaj.
12 ೧೨ ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು.
Sebi boš naredil rese na štirih četrtinah svoje suknje, s katero se pokrivaš.
13 ೧೩ ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯನ್ನು ದ್ವೇಷಿಸಿ, ಅವಳ ವಿಷಯದಲ್ಲಿ ಇಲ್ಲಸಲ್ಲದ ಕೆಟ್ಟ ಮಾತುಗಳನ್ನು ಆಡಿ,
Če katerikoli moški vzame ženo in gre noter k njej in jo zasovraži
14 ೧೪ “ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಇವಳೊಡನೆ ಸಂಗಮಿಸಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು” ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ,
in da priložnost za opravljanje zoper njo in nadnjo privede zlo ime ter reče: ›Vzel sem to žensko in ko sem prišel k njej, je nisem našel device, ‹
15 ೧೫ ಅವಳ ತಾಯಿ ತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕವಿಲ್ಲದವಳು ಎಂಬುವುದಕ್ಕೆ ನಿದರ್ಶನವನ್ನು ಊರ ಬಾಗಿಲಿಗೆ ಹಿರಿಯರ ಮುಂದೆ ತಂದು ತೋರಿಸಬೇಕು.
potem bosta oče gospodične in njena mati vzela in k starešinam v mestnih velikih vratih prinesla znamenja devištva gospodične
16 ೧೬ ಆ ಸ್ತ್ರೀಯ ತಂದೆ ಅವರಿಗೆ, “ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟ ಮೇಲೆ
in oče gospodične bo starešinam rekel: ›Svojo hčer sem dal temu možu za ženo, ta pa jo sovraži
17 ೧೭ ಇವನು ಅವಳನ್ನು ದ್ವೇಷಿಸಿ, ಪರಪುರುಷನ ಸಂಪರ್ಕ ಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳ ಹೆಸರನ್ನು ಅವಮಾನಪಡಿಸುತ್ತಾನೆ. ಇಗೋ ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲ ಎಂಬುವುದಕ್ಕೆ ಇದೇ ಪ್ರಮಾಣ” ಎಂದು ಹೇಳಿ ಅವಳ ಹೊದಿಕೆಯನ್ನು ಆ ಊರಿನ ಹಿರಿಯರ ಮುಂದೆ ಇಡಬೇಕು.
in glejte, dal je priložnosti za opravljanje zoper njo, rekoč: ›Tvoje hčere nisem našel device.‹ Vendar so to znamenja devištva moje hčere.‹ In obleko bosta razgrnila pred starešinami mesta.
18 ೧೮ ಆ ಊರಿನ ಹಿರಿಯರು ಅವನನ್ನು ಹಿಡಿಸಿ ಅವನನ್ನು ಹೊಡಿಸಬೇಕು.
In starešine tega mesta bodo vzele tega moškega in ga kaznovale
19 ೧೯ ಇಸ್ರಾಯೇಲಳಾದ ಹೆಣ್ಣಿನ ವಿಷಯದಲ್ಲಿ ಆ ಪುರುಷನು ನಿರಾಧಾರವಾದ ತಪ್ಪು ಹೊರಿಸಿದ್ದರಿಂದ, ಅವನಿಗೆ ನೂರು ಶೆಕೆಲ್ ಬೆಳ್ಳಿ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಆ ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.
in kaznovali ga bodo s sto šekli srebra in jih dali očetu gospodične, ker je nad Izraelovo devico privedel zlo ime in ona bo njegova žena vse svoje dni. Ne sme je odsloviti.
20 ೨೦ ಆದರೆ ಆ ಹೆಣ್ಣು ವಿವಾಹಕ್ಕೆ ಮುಂಚೆ ದೈಹಿಕವಾಗಿ ಪುರುಷಸಂಪರ್ಕ ಮಾಡಿದ್ದು ನಿಜ ಎಂದು ತಿಳಿದುಬಂದರೆ,
Toda če je ta stvar resnična in simboli devištva za gospodično niso bili najdeni,
21 ೨೧ ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.
potem bo gospodično privedel ven k vratom hiše njenega očeta in ljudje iz njenega mesta jo bodo kamnali s kamni, da ta umre. Ker je storila neumnost v Izraelu, da igra vlačugo v hiši svojega očeta. Tako boš izmed vas odstranil zlo.
22 ೨೨ ಯಾವನಾದರೂ ಇನ್ನೊಬ್ಬನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.
Če je moški najden, da leži z žensko, poročeno s soprogom, potem bosta oba umrla, oba, tako moški, ki je ležal z žensko, in ženska. Tako boš zlo odstranil iz Izraela.
23 ೨೩ ಒಬ್ಬನಿಗೆ ನಿಶ್ಚಿತಳಾದ ಹೆಣ್ಣನ್ನು ಯಾವನಾದರೂ ಊರೊಳಗೆ ಮರುಳುಗೊಳಿಸಿ ಸಂಗಮಿಸಿದರೆ,
Če je gospodična, ki je devica, zaročena k soprogu in jo moški najde v mestu in leži z njo,
24 ೨೪ ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ಕರೆತಂದು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
potem boš oba privedel ven, k velikim vratom tega mesta in kamnali ju boste s kamenjem, da umreta. Gospodično, ker ni kričala, kljub temu, da je bila v mestu in moškega, ker je ponižal ženo svojega bližnjega. Tako boš izmed sebe odstranil zlo.
25 ೨೫ ಆದರೆ ಆ ಪುರುಷನು ನಿಶ್ಚಿತಳಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗಮಿಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು.
Toda če moški najde zaročeno gospodično na polju in jo moški prisili in leži z njo, potem naj umre samo moški, ki je ležal z njo.
26 ೨೬ ಆ ಸ್ತ್ರೀಗೆ ಯಾವ ಶಿಕ್ಷೆಯೂ ಆಗಬಾರದು; ಅವಳಲ್ಲಿ ಮರಣ ಶಿಕ್ಷೆಗೆ ಪಾತ್ರವಾದ ಅಪರಾಧವೇನೂ ಇಲ್ಲ. ಒಬ್ಬ ಮನುಷ್ಯನು ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಈ ಸಂಗತಿಯೂ ಹಾಗೆಯೇ ಎಂದು ತಿಳಿಯಬೇಕು.
Toda gospodični ne boš ničesar storil. Tam, na gospodični, ni nobenega greha, vrednega smrti, kajti kakor ko se moški vzdiguje zoper svojega bližnjega in ga ubije, celo takšna je ta zadeva,
27 ೨೭ ಆ ಸ್ತ್ರೀಯು ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಗಿಕೊಂಡರೂ ತಪ್ಪಿಸುವವರು ಇರಲಿಲ್ಲ.
kajti našel jo je na polju in zaročena gospodična je vpila, pa ni bilo nikogar, da jo reši.
28 ೨೮ ಯಾರಿಗೂ ನಿಶ್ಚಯವಾಗದೆ ಇರುವ ಸ್ತ್ರೀಯನ್ನು ಒಬ್ಬನು ಹಿಡಿದು ಸಂಗಮಿಸಿದ್ದು ತಿಳಿದು ಬಂದರೆ,
Če moški najde gospodično, ki je devica, ki ni zaročena in jo prime in leži z njo in ju najdejo,
29 ೨೯ ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.
tedaj naj moški, ki je ležal z njo, očetu od gospodične izroči petdeset šeklov srebra in ona bo njegova žena; ker jo je ponižal, je vse svoje dni ne sme odsloviti.
30 ೩೦ ತಂದೆಗೆ ಹೆಂಡತಿಯಾದವಳನ್ನು ಸಂಗಮಿಸಲೇ ಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವುದು.
Mož ne bo vzel žene svojega očeta niti odkril krajca očetovega oblačila.