< ಧರ್ಮೋಪದೇಶಕಾಂಡ 23 >
1 ೧ ಬೀಜಹೊಡಿಸಿಕೊಂಡವರು ಅಥವಾ ರಹಸ್ಯಾಂಗವನ್ನು ಛೇದಿಸಿಕೊಂಡವರು ಯೆಹೋವನ ಸಭೆಯಲ್ಲಿ ಸೇರಬಾರದು.
Aquele que for emasculado por esmagamento ou corte não entrará na assembléia de Yahweh.
2 ೨ ಅನೈತಿಕ ಸಂಬಂಧದಿಂದ ಹುಟ್ಟಿದ ಸಂತತಿಯವರು, ಹತ್ತನೆಯ ತಲೆಯವರಾದರೂ ಅವರು ಯೆಹೋವನ ಸಭೆಗೆ ಸೇರಬಾರದು.
Uma pessoa nascida de uma união proibida não entrará na assembléia de Yahweh; mesmo a décima geração não entrará na assembléia de Yahweh.
3 ೩ ಅಮ್ಮೋನಿಯರಾಗಲಿ ಅಥವಾ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.
Um amonita ou um moabita não entrará na assembléia de Iavé; mesmo à décima geração ninguém pertencente a eles entrará para sempre na assembléia de Iavé,
4 ೪ ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.
because eles não o conheceram com pão e água no caminho quando você saiu do Egito, e porque contrataram contra você Balaão, filho de Beor de Pethor da Mesopotâmia, para amaldiçoá-lo.
5 ೫ ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.
Nevertheless Javé seu Deus não quis ouvir Balaão, mas Javé seu Deus transformou a maldição em uma bênção para você, porque Javé seu Deus o amava.
6 ೬ ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು.
Você não buscará a paz nem a prosperidade deles para sempre em todos os seus dias.
7 ೭ ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಮ್ಮ ಹತ್ತಿರ ಸಂಬಂಧಿಕರು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ.
Não abominareis um edomita, pois ele é vosso irmão. Não abominarás um egípcio, porque viveste como estrangeiro em sua terra.
8 ೮ ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಯೆಹೋವನ ಸಭೆಗೆ ಸೇರಬಹುದು.
As crianças da terceira geração que lhes nasceram podem entrar na assembléia de Yahweh.
9 ೯ ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುದ್ಧ ಕಾರ್ಯಗಳು ನಡೆಯದಂತೆ ಎಚ್ಚರದಿಂದಿರಬೇಕು.
Quando saírem e acamparem contra seus inimigos, então vocês se manterão afastados de toda coisa má.
10 ೧೦ ರಾತ್ರಿಕಾಲದಲ್ಲಿ ವೀರ್ಯಸ್ಖಲನದಿಂದ ಯಾವನಾದರೂ ಅಶುದ್ಧನಾದರೆ, ಅವನು ಪಾಳೆಯದೊಳಗೆ ಇರದೆ ಹೊರಗೆ ಇರಬೇಕು.
Se houver entre vocês algum homem que não esteja limpo por causa do que lhe acontece à noite, então ele deverá sair do acampamento. Ele não entrará dentro do acampamento;
11 ೧೧ ಅವನು ಸಂಜೆಯ ವೇಳೆಯಲ್ಲಿ ಸ್ನಾನಮಾಡಿ ಸೂರ್ಯನು ಮುಳುಗಿದ ಮೇಲೆ ಪಾಳೆಯದೊಳಗೆ ಬರಬಹುದು.
mas será, quando chegar a noite, que ele se banhará em água. Quando o sol se puser, ele virá dentro do acampamento.
12 ೧೨ ಪಾಳೆಯದ ಹೊರಗೆ ಪಾಯಖಾನೆಗಾಗಿ ಒಂದು ಸ್ಥಳವನ್ನು ಗೊತ್ತುಮಾಡಬೇಕು.
Você terá um lugar também fora do acampamento, onde irá se aliviar.
13 ೧೩ ಯುದ್ಧದ ಸಾಮಾನುಗಳಲ್ಲದೆ ನಿಮ್ಮ ಬಳಿಯಲ್ಲಿ ಸಲಿಕೆ ಇರಬೇಕು; ನೀವು ಬಹಿರ್ಭೂಮಿಗೆ ಹೋದಾಗ ಆ ಸಲಿಕೆಯಿಂದ ಅಗೆದು ಕಲ್ಮಷವನ್ನು ಮುಚ್ಚಿಬಿಡಬೇಕು.
Você terá uma colher de pedreiro entre suas armas. Será, quando você se aliviar, escavará com ela e voltará para trás e cobrirá seus excrementos;
14 ೧೪ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.
para Yahweh seu Deus caminha no meio de seu acampamento, para libertá-lo e para entregar seus inimigos diante de você. Portanto, seu acampamento será santo, para que ele não veja em você uma coisa impura, e se afaste de você.
15 ೧೫ ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು.
Você não deve entregar a seu senhor um servo que tenha escapado de seu senhor para você.
16 ೧೬ ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನಿರ್ಬಂಧಪಡಿಸಬಾರದು ಹಾಗೂ ನೀವು ಅವನನ್ನು ಮತ್ತೆ ಶೋಷಣೆಗೆ ಗುರಿಮಾಡಬಾರದು.
Ele habitará com vocês, entre vocês, no lugar que ele escolher dentro de um de seus portões, onde mais lhe agradar. Não o oprimirás.
17 ೧೭ ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಅಂತಹ ವೇಶ್ಯೆತನಕ್ಕೆ ಇಳಿಯಬಾರದು.
Não haverá nenhuma prostituta das filhas de Israel, nem haverá um sodomita dos filhos de Israel.
18 ೧೮ ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ.
Você não trará o aluguel de uma prostituta, ou o salário de um homem prostituto, para a casa de Javé seu Deus por qualquer voto; pois ambos são uma abominação para Javé seu Deus.
19 ೧೯ ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವುದನ್ನಾಗಲಿ ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು.
Você não deve emprestar juros a seu irmão: juros de dinheiro, juros de comida, juros de qualquer coisa que seja emprestada sobre juros.
20 ೨೦ ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.
Você pode cobrar juros de um estrangeiro; mas não cobrará juros de seu irmão, para que Yahweh seu Deus o abençoe em tudo a que você colocar sua mão, na terra onde você entrar para possuí-la.
21 ೨೧ ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.
Quando você faz um voto a Javé seu Deus, não será frouxo para pagá-lo, pois Javé seu Deus certamente o exigirá de você; e isso seria pecado em você.
22 ೨೨ ನೀವು ಹರಕೆಮಾಡದಿದ್ದರೆ ದೋಷವೇನೂ ಇರಲಿಲ್ಲ;
Mas se você se abster de fazer um voto, não será pecado em você.
23 ೨೩ ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.
Você deve observar e fazer o que saiu de seus lábios. O que quer que tenha prometido a Javé seu Deus como uma oferta de livre vontade, o que prometeu com sua boca, você deve fazer.
24 ೨೪ ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹೋಗುತ್ತಿರುವಾಗ ಇಷ್ಟಾನುಸಾರವಾಗಿ ಹಣ್ಣುಗಳನ್ನು ತಿನ್ನಬಹುದೇ ಹೊರತು ಪಾತ್ರೆಯಲ್ಲಿ ತುಂಬಿಕೊಂಡು ಹೋಗಬಾರದು.
Ao entrar na vinha de seu vizinho, você poderá comer a sua fartura de uvas a seu próprio prazer; mas não deve colocar nenhuma em seu recipiente.
25 ೨೫ ಮತ್ತೊಬ್ಬನ ಪೈರಿನಲ್ಲಿ ಹೋಗುತ್ತಿರುವಾಗ ತೆನೆಗಳನ್ನು ಕೈಯಿಂದ ಮುರಿದುಕೊಳ್ಳಬಹುದೇ ಹೊರತು ಆ ಪೈರಿಗೆ ಕುಡುಗೋಲು ಹಾಕಬಾರದು.
Ao entrar na vinha de seu vizinho, você poderá arrancar as espigas com a mão; mas não deverá usar uma foice no grão de seu vizinho.