< ಧರ್ಮೋಪದೇಶಕಾಂಡ 23 >

1 ಬೀಜಹೊಡಿಸಿಕೊಂಡವರು ಅಥವಾ ರಹಸ್ಯಾಂಗವನ್ನು ಛೇದಿಸಿಕೊಂಡವರು ಯೆಹೋವನ ಸಭೆಯಲ್ಲಿ ಸೇರಬಾರದು.
“Một người có tinh hoàn bị dập hay dương vật bị cắt thì không được vào cộng đồng dân Chúa Hằng Hữu.
2 ಅನೈತಿಕ ಸಂಬಂಧದಿಂದ ಹುಟ್ಟಿದ ಸಂತತಿಯವರು, ಹತ್ತನೆಯ ತಲೆಯವರಾದರೂ ಅವರು ಯೆಹೋವನ ಸಭೆಗೆ ಸೇರಬಾರದು.
Một người con hoang không được vào cộng đồng dân Chúa Hằng Hữu. Con cháu người này dù đến đời thứ mười cũng không được vào.
3 ಅಮ್ಮೋನಿಯರಾಗಲಿ ಅಥವಾ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.
Người Am-môn, người Mô-áp không được vào cộng đồng dân Chúa Hằng Hữu. Con cháu họ dù đến đời thứ mười cũng không được vào.
4 ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.
Vì họ đã không mang thực phẩm, nước uống ra tiếp đón Ít-ra-ên, khi anh em mới từ Ai Cập ra đi. Họ còn mướn Ba-la-am, con Bê-ô, người Phê-thô-rơ xứ A-ram Na-ha-ra-im, đi nguyền rủa anh em.
5 ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.
Tuy nhiên, Chúa Hằng Hữu, Đức Chúa Trời của anh em, đâu có nghe Ba-la-am, Ngài đã biến lời nguyền rủa ra lời chúc phước, vì Chúa Hằng Hữu, Đức Chúa Trời của anh em, yêu thương anh em.
6 ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು.
Đừng bao giờ giúp họ kiến tạo hòa bình, thịnh vượng.
7 ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಮ್ಮ ಹತ್ತಿರ ಸಂಬಂಧಿಕರು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ.
Đối với người Ê-đôm, không được khinh ghét, vì họ là anh em của anh em. Cũng đừng khinh ghét người Ai Cập, vì anh em đã kiều ngụ trong nước họ.
8 ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಯೆಹೋವನ ಸಭೆಗೆ ಸೇರಬಹುದು.
Cháu đời thứ ba của họ được phép vào cộng đồng dân Chúa Hằng Hữu.”
9 ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುದ್ಧ ಕಾರ್ಯಗಳು ನಡೆಯದಂತೆ ಎಚ್ಚರದಿಂದಿರಬೇಕು.
“Trong lúc chiến tranh với quân thù, phải gìn giữ doanh trại cho được tinh khiết.
10 ೧೦ ರಾತ್ರಿಕಾಲದಲ್ಲಿ ವೀರ್ಯಸ್ಖಲನದಿಂದ ಯಾವನಾದರೂ ಅಶುದ್ಧನಾದರೆ, ಅವನು ಪಾಳೆಯದೊಳಗೆ ಇರದೆ ಹೊರಗೆ ಇರಬೇಕು.
Nếu có ai bị mộng tinh, không được vào trại.
11 ೧೧ ಅವನು ಸಂಜೆಯ ವೇಳೆಯಲ್ಲಿ ಸ್ನಾನಮಾಡಿ ಸೂರ್ಯನು ಮುಳುಗಿದ ಮೇಲೆ ಪಾಳೆಯದೊಳಗೆ ಬರಬಹುದು.
Đến chiều, người ấy phải tắm rửa sạch sẽ, và chỉ vào lại doanh trại lúc mặt trời lặn.
12 ೧೨ ಪಾಳೆಯದ ಹೊರಗೆ ಪಾಯಖಾನೆಗಾಗಿ ಒಂದು ಸ್ಥಳವನ್ನು ಗೊತ್ತುಮಾಡಬೇಕು.
Dành một khu vực bên ngoài doanh trại để đi vệ sinh.
13 ೧೩ ಯುದ್ಧದ ಸಾಮಾನುಗಳಲ್ಲದೆ ನಿಮ್ಮ ಬಳಿಯಲ್ಲಿ ಸಲಿಕೆ ಇರಬೇಕು; ನೀವು ಬಹಿರ್ಭೂಮಿಗೆ ಹೋದಾಗ ಆ ಸಲಿಕೆಯಿಂದ ಅಗೆದು ಕಲ್ಮಷವನ್ನು ಮುಚ್ಚಿಬಿಡಬೇಕು.
Mỗi người phải có một xuổng con trong bộ dụng cụ cá nhân của mình mang theo. Khi đi đại tiện, phải đào lỗ, xong phải lấp đất lại.
14 ೧೪ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.
Vậy, doanh trại phải được thánh, vì Chúa đi giữa doanh trại để cứu giúp anh em, làm cho kẻ thù bại trận. Nếu doanh trại ô uế, Ngài sẽ bỏ đi.
15 ೧೫ ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು.
Nếu có một người nô lệ trốn khỏi nhà chủ chạy đến với anh em, không được giao trả người ấy cho chủ.
16 ೧೬ ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನಿರ್ಬಂಧಪಡಿಸಬಾರದು ಹಾಗೂ ನೀವು ಅವನನ್ನು ಮತ್ತೆ ಶೋಷಣೆಗೆ ಗುರಿಮಾಡಬಾರದು.
Phải cho người ấy ở với anh em, tại thành nào tùy ý người ấy chọn, không được bạc đãi.
17 ೧೭ ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಅಂತಹ ವೇಶ್ಯೆತನಕ್ಕೆ ಇಳಿಯಬಾರದು.
Trong toàn dân Ít-ra-ên không được có mãi dâm nam hay mãi dâm nữ.
18 ೧೮ ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ.
Không được đem tiền công của họ vào nhà của Chúa Hằng Hữu, Đức Chúa Trời của anh em, vì Ngài ghê tởm cả hai thứ này.
19 ೧೯ ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವುದನ್ನಾಗಲಿ ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು.
Không được cho anh em mình vay lấy lãi, dù cho vay tiền, thức ăn hay bất cứ vật gì khác.
20 ೨೦ ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.
Đối với người ngoại quốc, anh em được phép cho vay lấy lãi, nhưng không được lấy lãi người Ít-ra-ên. Như vậy, Chúa Hằng Hữu, Đức Chúa Trời của anh em, sẽ ban phước cho anh em trong đất hứa.
21 ೨೧ ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.
Khi hứa nguyện điều gì với Chúa Hằng Hữu, Đức Chúa Trời của anh em, phải làm theo điều mình đã hứa nguyện, phải dâng vật mình đã hứa. Vì Chúa đòi hỏi anh em thực hiện lời hứa nguyện mình. Nếu không, anh em mang tội.
22 ೨೨ ನೀವು ಹರಕೆಮಾಡದಿದ್ದರೆ ದೋಷವೇನೂ ಇರಲಿಲ್ಲ;
Nhưng nếu anh em dè dặt, không hứa nguyện, như thế không phải là tội.
23 ೨೩ ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.
Khi hứa nguyện rồi, phải thận trọng làm theo lời mình, vì anh em đã tự ý hứa nguyện với Chúa Hằng Hữu, Đức Chúa Trời của anh em.
24 ೨೪ ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹೋಗುತ್ತಿರುವಾಗ ಇಷ್ಟಾನುಸಾರವಾಗಿ ಹಣ್ಣುಗಳನ್ನು ತಿನ್ನಬಹುದೇ ಹೊರತು ಪಾತ್ರೆಯಲ್ಲಿ ತುಂಬಿಕೊಂಡು ಹೋಗಬಾರದು.
Khi vào vườn nho của người láng giềng, anh em có thể ăn bao nhiêu cũng được, tùy ý, nhưng không được hái đem về.
25 ೨೫ ಮತ್ತೊಬ್ಬನ ಪೈರಿನಲ್ಲಿ ಹೋಗುತ್ತಿರುವಾಗ ತೆನೆಗಳನ್ನು ಕೈಯಿಂದ ಮುರಿದುಕೊಳ್ಳಬಹುದೇ ಹೊರತು ಆ ಪೈರಿಗೆ ಕುಡುಗೋಲು ಹಾಕಬಾರದು.
Cũng thế, khi vào đồng lúa của người láng giềng, anh em được lấy tay ngắt lúa, chứ không được dùng lưỡi liềm cắt lúa.”

< ಧರ್ಮೋಪದೇಶಕಾಂಡ 23 >