< ಧರ್ಮೋಪದೇಶಕಾಂಡ 24 >

1 ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು.
如果一人娶了妻,佔有她之後,在她身上發現了什麼難堪的事,因而不喜悅她,便給她寫了休書,交在她手中,叫她離開他的家,
2 ಅವಳು ಮನೆಯಿಂದ ಹೋಗಿ ಮತ್ತೊಬ್ಬನನ್ನು ಮದುವೆಯಾಗಬಹುದು.
而這女子走出了他的家,又去嫁給了另一人為妻,
3 ಆಕೆ ಎರಡನೆಯ ಗಂಡನಿಂದಲೂ ತಿರಸ್ಕರಿಸಲ್ಪಟ್ಟು, ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಎರಡನೆಯ ಗಂಡನು ಸತ್ತರೆ,
如果後夫又憎惡她給她寫了休書,交在她手中,叫她離開他的家,或者娶她為妻的後夫死了,
4 ಆಗ ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ತನ್ನ ಹೆಂಡತಿಯಾಗಿ ಸ್ವೀಕರಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಸ್ವೀಕರಿಸುವುದು ಯೆಹೋವನಿಗೆ ಅಸಹ್ಯ ಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶಕೊಡಬಾರದು.
那麼,那休她的前夫,在她受了污辱之後,不能再娶她為妻,因為這在上主面前是可憎惡的事;你不可使上主你的天主賜給你作產業的土地陷於罪惡。
5 ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದ ವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ.
人娶了新婦,不應從軍出征,也不可派他擔任什麼職務;他應在加享受一年自由,使他新娶的妻子快活。
6 ಬೀಸುವ ಕಲ್ಲನ್ನು ಪೂರ್ತಿಯಾಗಲಿ ಅಥವಾ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವುದು.
不可拿人的磨,或上面的一塊磨石作抵押,因為這無異是拿人的性命作抵押。
7 ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.
若發現一人拐帶了以色列子民中的一個兄弟,叫他充當奴隸,或將他販賣於人,這拐子應處死刑:這樣你由中間剷除了這邪惡。
8 ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.
遇有癩病的情形,應全照肋未司祭指教你們的,謹慎遵行。我怎樣吩咐了他們,你們就怎樣遵守執行。
9 ನೀವು ಐಗುಪ್ತದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಯೆಹೋವನು ಮಿರ್ಯಾಮಳಿಗೆ ಮಾಡಿದ್ದನ್ನು ನೆನಪುಮಾಡಿಕೊಳ್ಳಿರಿ.
你應記得你們出埃及後,在途中,上主你的天主對米黎盎所做的事。
10 ೧೦ ಮತ್ತೊಬ್ಬನಿಗೆ ಸಾಲಕೊಡುವಾಗ ಒತ್ತೆಯನ್ನು ತೆಗೆದುಕೊಳ್ಳುವುದಕ್ಕೆ ಅವನ ಮನೆಯೊಳಕ್ಕೆ ಹೋಗದೆ ಹೊರಗೆ ಇರಬೇಕು.
幾時你借給你近人什麼,不可走進他家索取抵押;
11 ೧೧ ಸಾಲತೆಗೆದುಕೊಂಡವನೇ ಒತ್ತೆಯ ಸಾಮಾನುಗಳನ್ನು ತಂದುಕೊಡಬೇಕು.
應站在外面,等那借貸的人把抵押給你拿出來。
12 ೧೨ ಅವನು ಕೇವಲ ಬಡತನದಿಂದ ತನ್ನ ಕಂಬಳಿಯನ್ನೇ ಒತ್ತೆಯಾಗಿ ಇಟ್ಟ ಸಂದರ್ಭದಲ್ಲಿ ಹೊತ್ತುಮುಣುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು.
倘若他是個貧苦人,你不可帶著他的抵押去睡覺。
13 ೧೩ ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.
反之,在日落時,務要將抵押還給他,好叫他睡在自己的外衣裏祝福你;這在上主你的天主面前,算是你的功德。
14 ೧೪ ನೀವು ಸ್ವದೇಶದವರಲ್ಲಿಯಾಗಲಿ ಅಥವಾ ನಿಮ್ಮಲ್ಲಿರುವ ಅನ್ಯದೇಶದವರಲ್ಲಿಯಾಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ
貧苦可憐的傭工,不論是你的一個兄弟,或是你城鎮地區內的一個外方人,你不應欺壓他,
15 ೧೫ ಏನೂ ಅನ್ಯಾಯಮಾಡದೆ ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಣುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರುನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.
應在當天,交給他工錢,不要等到日落;因為他貧苦,他急需工錢用,免得他對你不滿而呼求上主,你就不免有罪了。
16 ೧೬ ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು.
不可為兒子的罪處死父親,亦不可為父親的罪處死兒子:每人應為自己的罪被處死刑。
17 ೧೭ ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.
不可侵犯外方人或孤兒的權利,不可拿寡婦的衣服作抵押;
18 ೧೮ ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬುವುದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.
應記得你在埃及曾做過奴隸,上主你的天主曾將你由那裏救出:為此我吩咐你應遵行這條命令。
19 ೧೯ ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.
當你在田間收割莊稼時,如在田中忘下了一捆,不要再回去拾取,要留下給外方人、孤兒和寡婦,好叫上主你的天主在你做的一切事上祝福你。
20 ೨೦ ಎಣ್ಣೆಯಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.
當你打橄欖樹時,不要再回去打樹枝上所剩的,應留給外方人、孤兒和寡婦。
21 ೨೧ ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.
當你收穫葡萄時,不要再摘取所剩下的,應留給外方人、孤兒和寡婦。
22 ೨೨ ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ.
總應記得你在埃及地曾做過奴隸:為此我吩咐你應遵行這條命令。

< ಧರ್ಮೋಪದೇಶಕಾಂಡ 24 >