< ಧರ್ಮೋಪದೇಶಕಾಂಡ 25 >
1 ೧ ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ, ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.
Naho mifandietse t’indaty roe naho miatre-jaka hizakà’ o mpizakao, le mañatò ty to iereo vaho mañozoñe ty nanao raty,
2 ೨ ಅಪರಾಧಿಗೆ ಪೆಟ್ಟಿನ ಶಿಕ್ಷೆ ತೀರ್ಮಾನವಾದರೆ ನ್ಯಾಯಾಧಿಪತಿಯು ಅವನನ್ನು ಮಲಗಿಸಿ, ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು.
ie amy zao naho mañeva lafaeñe i nanao ratiy le hampibabohe’ i mpizakay añatrefa’e vaho ho lafaeñe ami’ty hamaro’e mañeva i haratiañey.
3 ೩ ಪೆಟ್ಟುಗಳ ಶಿಕ್ಷೆಯು ನಲ್ವತ್ತಕ್ಕಿಂತ ಹೆಚ್ಚಿರಬಾರದು. ಅದಕ್ಕಿಂತ ಹೆಚ್ಚು ಪೆಟ್ಟುಗಳನ್ನು ನೀವು ಹೊಡಿಸಿದರೆ ನಿಮ್ಮ ಸ್ವದೇಶದವನನ್ನು ನೀವು ಕೇವಲ ನೀಚನನ್ನಾಗಿ ಕಂಡಂತೆ ಆಗುವುದು.
Mete ho lafae’e in-efapolo fa tsy handikoarañe hera, ie mandafa mandikoatse i somoritse rezay le ho po-engeñe am-pihaino’o i longo’oy.
4 ೪ ಕಣತುಳಿಯುವ ಎತ್ತಿನ ಬಾಯಿಯನ್ನು ಕಟ್ಟಬಾರದು.
Ko feoze’o ty añombe mandisañe.
5 ೫ ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ, ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನನು ಅವಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡು ಮೈದುನಧರ್ಮವನ್ನು ನೆರವೇರಿಸಬೇಕು.
Naho mitraok’ anjomba ty mpiroahalahy, vaho vilasy tsy aman-tiry ty raike, le tsy hengaen-dahy alafen-dongo’e i ramavoiñey. I rahalahim-bali’ey ty hañenga aze ho vali’e hañenefa’e i lilin-drahalahim-bali’ey.
6 ೬ ಅವಳಲ್ಲಿ ಹುಟ್ಟುವ ಚೊಚ್ಚಲಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು. ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರೊಳಗಿಂದ ಅಳಿಸಿ ಹೋಗುವುದಿಲ್ಲ.
Ie amy zao, hatao amy tahinan-drahalahi’e nivilasiy ty tañoloñoloñan’ ana’e soa tsy ho faoheñe am’ Israele i tahina’ey.
7 ೭ ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸದೆ ಹೋದರೆ ಅವಳು ಊರ ಬಾಗಿಲಿಗೆ ಹೋಗಿ ಅಲ್ಲಿಯ ಹಿರಿಯರಿಗೆ, “ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸುವುದಕ್ಕೆ ಸಿದ್ಧನಿಲ್ಲ. ಅವನು ಮೈದುನಧರ್ಮವನ್ನು ನಡೆಸುವುದಿಲ್ಲ ಅನ್ನುತ್ತಾನೆ” ಎಂದು ತಿಳಿಸಬೇಕು.
Aa naho malaiñe tsy te hañenga ty ramavoin-drahalahi’e indatiy, le soa re te hionjoñe mb’an-dalambey mb’ amo androanavio mb’eo i valin-drahalahi’ey hanao ty hoe, Mifoneñe tsy hañonjoñe ty tahinan-drahalahi’e am’ Israele ao i rahalahim-balikoy; tsy mete hanoe’e amako i lilim-balin-drahalahiy.
8 ೮ ಆಗ ಆ ಊರಿನ ಹಿರಿಯರು ಅವನನ್ನು ಕರೆಯಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, “ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ” ಎಂದು ಹೇಳುವ ಪಕ್ಷಕ್ಕೆ,
Le hikanjia’ o roandria’ i rovaio, vaho hisaontsiañe, f’ie mitoky ami’ty hoe, Tsy te hangalak’ aze iraho;
9 ೯ ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, “ಅಣ್ಣನಿಗೋಸ್ಕರ ಸಂತಾನವನ್ನು ವೃದ್ಧಿಗೊಳಿಸುವುದಕ್ಕೆ ಮನಸ್ಸಿಲ್ಲದವರೆಲ್ಲರಿಗೆ ಇಂಥ ಅವಮಾನವಾಗಲಿ” ಎಂದು ಹೇಳಬೇಕು.
le hiheo ama’e añatrefa’ o androanavio i ramavoin-drahalahi’ey le hafaha’e am-pandia’ indatiy i hana’ey le handrorà’e ty lahara’e, vaho hitsey ty hoe: Zao ty hanoañe t’indaty tsy mamboatse i akiban-drahalahi’ey.
10 ೧೦ ಇಸ್ರಾಯೇಲರಲ್ಲಿ ಆ ಮನುಷ್ಯನ ಮನೆಯವರಿಗೆ, “ಕೆರವನ್ನು ಬಿಚ್ಚಿಸಿಕೊಂಡವನ ಮನೆಯವರು” ಎಂದು ಹೆಸರುಂಟಾಗುವುದು.
Le hatao ty hoe: Ty kijà’ i nañafahan-kànay re e Israele ao.
11 ೧೧ ಇಬ್ಬರು ಜಗಳವಾಡುತ್ತಿರಲಾಗಿ ಅವರಲ್ಲಿ ಒಬ್ಬನ ಹೆಂಡತಿ ಬಂದು ತನ್ನ ಗಂಡನನ್ನು ಬಿಡಿಸಬೇಕೆಂದು ಆ ಪರಪುರುಷನ ಜನನೇಂದ್ರಿಯವನ್ನು ಹಿಡಿದುಕೊಂಡರೆ,
Naho mifangatotse t’indaty roe naho harinè’ ty vali’ ty raike hamotsora’e am-pità’ i mamofokey i vali’ey, vaho mañity tañañe mandrambe o tabiri’eo,
12 ೧೨ ಅವನು ಅವಳನ್ನು ಕನಿಕರಿಸದೆ ಅವಳ ಕೈಯನ್ನು ಕಡಿದುಹಾಕಬೇಕು.
le ho tampahe’o ty taña’e, fa tsy ho tretrezem-pihaino’o.
13 ೧೩ ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಳ್ಳಬಾರದು.
Ao tsy hanam-bato-pandanja tsy mira an-kontra’o ao: ty bey naho ty kede.
14 ೧೪ ಹೆಚ್ಚುಕಡಿಮೆಯಾದ ಎರಡು ವಿಧವಾದ ಸೇರುಗಳು ಹಾಗೂ ಮೋಸ ಮಾಡುವ ತೂಕದ ಕಲ್ಲುಗಳು ನಿಮ್ಮ ಮನೆಯಲ್ಲಿ ಇರಬಾರದು.
Ko mampisy fañaranañe tsy mira añ’akiba’o ao: ty bey naho ty kede.
15 ೧೫ ನಿಮ್ಮ ತೂಕದ ಕಲ್ಲೂ ಮತ್ತು ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.
Vato-pandanjàñe do’e naho mahity vaho fañaranañe do’e naho vantañe ty ho ama’o, soa t’ie ho lava haveloñe an-tane atolo’ Iehovà Andrianañahare’o azo.
16 ೧೬ ನ್ಯಾಯವಿರುದ್ಧವಾದ ಅಳತೆತೂಕಗಳನ್ನು ಮಾಡುವವರೆಲ್ಲರೂ ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರಾಗಿದ್ದಾರೆ.
Toe tiva am’ Iehovà Andrianañahare’o ze manao irezay, ze fonga mitolon-katsivokarañe.
17 ೧೭ ನೀವು ಐಗುಪ್ತದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ಯರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿರಿ.
Tiahio i nanoe’ i Amalek’ azo amy lia’o niavotse i Mitsraimeiy,
18 ೧೮ ಅವರು ದೇವರಲ್ಲಿ ಸ್ವಲ್ಪವೂ ಭಯಭಕ್ತಿಯಿಲ್ಲದವರಾಗಿ, ನೀವು ದಣಿದು ಮತ್ತು ಬಳಲಿದಾಗ ನಿಮ್ಮವರಲ್ಲಿ ಹಿಂದೆಬಿದ್ದ ಬಲಹೀನರನ್ನು ಸಂಹಾರ ಮಾಡಿದರು.
ie nifanampe ama’o an-dalañe eo naho nandafa o nitakatrotse ama’oo, o tam-boli’oo, ihe nidazidazìtse naho nitoirañe; ie tsy nañeveñe aman’ Añahare.
19 ೧೯ ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.
Aa ie nampitofà’ Iehovà Andrianañahare’o amo fonga rafelahi’o mañohok’ azoo an-tane nampandovae’ Iehovà Andrianañahare’o azo ho tavane’o le ho faopaohe’o ambane’ i likerañey ty faniahiañe i Amaleke; ko andikofa’o.