< ಧರ್ಮೋಪದೇಶಕಾಂಡ 26 >

1 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವನ್ನು ನೀವು ಸೇರಿ, ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ,
“Tukun kowos muta tari fin facl se su LEUM GOD lowos El asot nu suwos ac oakwuki we,
2 ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು.
kais sie suwos enenu in filiya fahko se meet ke kosrani lowos nu in sie fotoh, ac kowos fah usla ke kowos som nu ke acn sefanna LEUM GOD lowos El sulela tuh mwet uh in alu nu sel we.
3 ನೀವು ಅದನ್ನು ತೆಗೆದುಕೊಂಡುಹೋಗಿ ಆ ಕಾಲದಲ್ಲಿ ಇರುವ ಮಹಾಯಾಜಕನಿಗೆ, “ಯೆಹೋವನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಾವು ಸೇರಿದ್ದಾಯಿತೆಂದು ನೀನು ಸೇವಿಸುವ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾವು ಈಗ ಒಪ್ಪಿಕೊಂಡಿದ್ದೇವೆ” ಎಂದು ಹೇಳಬೇಕು.
Som nu yurin mwet tol su orekma in pacl sac ac fahk nu sel, ‘Inge nga lungse fahkak nu sin LEUM GOD luk lah nga utyak nu in facl se su El wuleang nu sin papa matu tumasr mu El ac ase nu sesr.’
4 ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮುಂದೆ ಇಡುವನು.
“Na mwet tol sac el fah eis fotoh sac, ac likiya ye mutun loang lun LEUM GOD lom.
5 ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.
Na kom fah fahk kas inge ye mutun LEUM GOD: ‘Papa matu tumuk el sie mwet Aram su takusrkasr ac usla sou lal nu Egypt in muta we. Elos tuh mwet na pu ke pacl se elos som nu we, na tok elos orala sie mutunfacl na lulap ac ku.
6 ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.
Mwet Egypt uh orekut arulana koluk ac sap ku nu sesr in orekma oana mwet kohs.
7 ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ, ನಮ್ಮ ದುರವಸ್ಥೆಯನ್ನೂ, ಕಷ್ಟವನ್ನೂ ಮತ್ತು ಉಪದ್ರವವನ್ನೂ ನೋಡಿದನು.
Na kut wowoyak ac suk kasru sin LEUM GOD lun papa matu tumasr. El porongekut ac liye lupan keok, orekma upa, ac ongoiya lasr.
8 ಆತನು ತನ್ನ ಭುಜಬಲವನ್ನೂ, ಶಿಕ್ಷಾಹಸ್ತವನ್ನೂ, ಮಹಾಭೀತಿಗಳನ್ನೂ, ಮಹತ್ಕಾರ್ಯಗಳನ್ನೂ ಮತ್ತು ಸೂಚಕಕಾರ್ಯಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದನು.
Ke ku lulap lal El molikutla liki Egypt. El orala mwenmen ac ma usrnguk, oayapa mwe aksangeng puspis.
9 ಅವನು ನಮ್ಮನ್ನು ಐಗುಪ್ತದೇಶದಿಂದ ಕರೆತಂದು ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿದ್ದಾನೆ.
El uskutme ac ase sie facl mut ac kasrup fohk we.
10 ೧೦ ಆದುದರಿಂದ ಯೆಹೋವನೇ, ನೀನು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ, ಅದನ್ನು ಸ್ವೀಕರಿಸಬೇಕು” ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿಟ್ಟು ಆತನನ್ನು ಆರಾಧಿಸಬೇಕು.
Inge nga use nu sin LEUM GOD fahko se meet ke kosrani ma El ase nu sik.’ “Na filiya fotoh sacn ye mutun LEUM GOD ac alu nu sel we.
11 ೧೧ ಆತನು ನಿಮಗೂ ಮತ್ತು ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ, ಲೇವಿಯರೂ ಮತ್ತು ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.
Kaksakin ma wo nukewa ma LEUM GOD lom El sot nu sum ac sou lom; ac lela mwet Levi ac mwetsac su muta inmasrlowos in wi kowos akfulatyal.
12 ೧೨ ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.
“Yac tolu nukewa kom in sang sie tafu singoul ke ma kom kosrani nu sin mwet Levi, mwetsac, mwet mukaimtal, ac katinmas, tuh in acn nukewa elos muta we elos fah ku in akfalye enenu lalos ke mwe mongo. Ke kom orala tari,
13 ೧೩ ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ನಾವು ಪ್ರತ್ಯೇಕಿಸಿದ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದಿದ್ದೇವೆ. ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರು, ಪರದೇಶಿಗಳು, ಅನಾಥರು, ವಿಧವೆಯರು ಇಂಥವರಿಗೆ ಕೊಟ್ಟಿದ್ದೇವೆ ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ ಮತ್ತು ಮರೆಯಲೂ ಇಲ್ಲ.
na kom fah fahk nu sin LEUM GOD, ‘Wangin ma lula ke sie tafu singoul ma mutal su srakna oan in lohm sik. Nga sang nu sin mwet Levi, mwetsac, mwet mukaimtal, ac katinmas, oana ke kom sapkin nu sik. Nga tiana seakos ku mulkunla kutena ma kom sapkin ke sie tafu singoul.
14 ೧೪ ನಾವು ಸತ್ತವರಿಗೋಸ್ಕರ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇಮಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.
Nga tia kangla kutena ma kac ke pacl nga eoksra. Nga tia usla kutena ma kac liki lohm sik ke pacl nga tia nasnas, ac nga tia sang kutena ma kac tuh in sie mwe kisa nu ke mwet misa. LEUM GOD, nga akos kom na. Nga oru ma nukewa kom sapkin in orek ke sie tafu singoul in ma luk.
15 ೧೫ ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಈ ಭೂಮಿಯನ್ನೂ ಆಶೀರ್ವದಿಸು ದೇವರೇ” ಎಂದು ಹೇಳಬೇಕು.
Ngeta liki acn mutal sum inkusrao, ac akinsewowoye mwet lom, mwet Israel. Akinsewowoye pac facl wolana ac kasrup fohk we ma kom ase nu sesr, oana kom tuh wuleang nu sin papa matu tumasr meet ah.
16 ೧೬ ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನಿಮಗೆ ಈಗ ಆಜ್ಞಾಪಿಸಿದ್ದಾನೆ. ಆದುದರಿಂದ ನೀವು ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.
“Misenge LEUM GOD lowos El sapkin nu suwos tuh kowos in akos ma sap lal nukewa. Ouinge kowos in oaru in akos ke insiowos nufon.
17 ೧೭ ನಮಗೆ ಯೆಹೋವನೇ ದೇವರಾಗಿರುವನೆಂದೂ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿಯಮಗಳನ್ನು ಕೈಕೊಂಡು, ಆತನ ಮಾತಿಗೆ ಲಕ್ಷ್ಯವಿಡುವೆವು ಎಂದು ನೀವು ಈಗ ಒಡಂಬಟ್ಟಿದ್ದೀರಿ.
Misenge kowos fahkak tari lah LEUM GOD El God lowos. Kowos wulela pac in aksol, in liyaung ma sap lal nukewa, ac in oru ma nukewa El sapkin.
18 ೧೮ ಯೆಹೋವನೋ ನಿಮ್ಮ ವಿಷಯದಲ್ಲಿ, “ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಕ್ಕೆ ಅನುಸಾರವಾಗಿ ನನಗೆ
Misenge LEUM GOD El eis kowos tuh kowos in mwet lal sifacna, oana ke El tuh wuleot nu suwos; ac El sapkin tuh kowos in akos ma sap lal nukewa.
19 ೧೯ ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.
El fah akfulatye kowos yohk liki kutena mutunfacl saya ma El orala, ac kowos fah oru tuh Inel in kaksakinyuk ac sunakinyuk. Kowos fah mwet lal sifacna, oana ma El wulela.”

< ಧರ್ಮೋಪದೇಶಕಾಂಡ 26 >