< ಧರ್ಮೋಪದೇಶಕಾಂಡ 27 >
1 ೧ ಮೋಶೆ ಮತ್ತು ಇಸ್ರಾಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ನಿಮಗೆ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.
摩西和以色列的眾長老吩咐百姓說:「你們要遵守我今日所吩咐的一切誡命。
2 ೨ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.
你們過約旦河,到了耶和華-你上帝所賜給你的地,當天要立起幾塊大石頭,墁上石灰,
3 ೩ ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಆ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು.
把這律法的一切話寫在石頭上。你過了河,可以進入耶和華-你上帝所賜你流奶與蜜之地,正如耶和華-你列祖之上帝所應許你的。
4 ೪ ನೀವು ಯೊರ್ದನ್ ನದಿಯನ್ನು ದಾಟಿದ ನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.
你們過了約旦河,就要在以巴路山上照我今日所吩咐的,將這些石頭立起來,墁上石灰。
5 ೫ “ಅಲ್ಲಿ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಲ್ಲುಗಳಿಂದ ಯಜ್ಞವೇದಿಯನ್ನು ಕಟ್ಟಿಸಬೇಕು.
在那裏要為耶和華-你的上帝築一座石壇;在石頭上不可動鐵器。
6 ೬ ಉಳಿ ಮುಂತಾದದ್ದನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯನ್ನು ಕಟ್ಟಿಸಬೇಕು.
要用沒有鑿過的石頭築耶和華-你上帝的壇,在壇上要將燔祭獻給耶和華-你的上帝。
7 ೭ ಅಲ್ಲಿ ಸರ್ವಾಂಗಹೋಮಗಳನ್ನೂ ಮತ್ತು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಸಹಭೋಜನಮಾಡಿ, ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.
又要獻平安祭,且在那裏吃,在耶和華-你的上帝面前歡樂。
8 ೮ ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಸ್ಪಷ್ಟವಾಗಿ ಬರೆಯಬೇಕು” ಎಂದು ಆಜ್ಞಾಪಿಸಿದನು.
你要將這律法的一切話明明地寫在石頭上。」
9 ೯ ಮೋಶೆ, ಯಾಜಕರು ಮತ್ತು ಲೇವಿಯರೊಡನೆ ಇಸ್ರಾಯೇಲರೆಲ್ಲರಿಗೆ, “ಇಸ್ರಾಯೇಲರೇ, ನಿಶ್ಯಬ್ದವಾಗಿದ್ದು ಕೇಳಿರಿ, ನೀವು ಈಗ ನಿಮ್ಮ ದೇವರಾದ ಯೆಹೋವನ ಜನರಾಗಿದ್ದೀರಷ್ಟೆ.
摩西和祭司利未人曉諭以色列眾人說:「以色列啊,要默默靜聽。你今日成為耶和華-你上帝的百姓了。
10 ೧೦ ಆದುದರಿಂದ ಈಗ ನಾನು ನಿಮಗೆ ಹೇಳುವ ನಿಮ್ಮ ದೇವರಾದ ಯೆಹೋವನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು” ಎಂದು ಹೇಳಿದನು.
所以要聽從耶和華-你上帝的話,遵行他的誡命律例,就是我今日所吩咐你的。」
11 ೧೧ ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ,
當日,摩西囑咐百姓說:
12 ೧೨ “ನೀವು ಯೊರ್ದನ್ ನದಿಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್ ಮತ್ತು ಬೆನ್ಯಾಮೀನ್ ಎಂಬ ಈ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು.
「你們過了約旦河,西緬、利未、猶大、以薩迦、約瑟、便雅憫六個支派的人都要站在基利心山上為百姓祝福。
13 ೧೩ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಎಂಬ ಈ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.
呂便、迦得、亞設、西布倫、但、拿弗他利六個支派的人都要站在以巴路山上宣布咒詛。
14 ೧೪ “ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಾಯೇಲರೆಲ್ಲರಿಗೂ,
利未人要向以色列眾人高聲說:
15 ೧೫ ‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.
「『有人製造耶和華所憎惡的偶像,或雕刻,或鑄造,就是工匠手所做的,在暗中設立,那人必受咒詛!』百姓都要答應說:『阿們!』
16 ೧೬ “ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
「『輕慢父母的,必受咒詛!』百姓都要說:『阿們!』
17 ೧೭ “ಅವರು, ಮತ್ತೊಬ್ಬನ ಗಡಿಮೇರೆಯನ್ನು ಮೀರಿಬಂದವನು ಶಾಪಗ್ರಸ್ತನು” ಎಂದು ಹೇಳಲು, “ಆಮೆನ್” ಅನ್ನಬೇಕು.
「『挪移鄰舍地界的,必受咒詛!』百姓都要說:『阿們!』
18 ೧೮ “ಅವರು, ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತನು” ಎಂದು ಹೇಳಲು, “ಆಮೆನ್” ಅನ್ನಬೇಕು.
「『使瞎子走差路的,必受咒詛!』百姓都要說:『阿們!』
19 ೧೯ “ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
「『向寄居的和孤兒寡婦屈枉正直的,必受咒詛!』百姓都要說:『阿們!』
20 ೨೦ “ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
「『與繼母行淫的,必受咒詛!因為掀開他父親的衣襟。』百姓都要說:『阿們!』
21 ೨೧ “ಅವರು, ಪಶುಸಂಗಮ ಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
「『與獸淫合的,必受咒詛!』百姓都要說:『阿們!』
22 ೨೨ “ಅವರು, ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
「『與異母同父,或異父同母的姊妹行淫的,必受咒詛!』百姓都要說:『阿們!』
23 ೨೩ “ಅವರು, ಅತ್ತೆಯನ್ನು ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
「『與岳母行淫的,必受咒詛!』百姓都要說:『阿們!』
24 ೨೪ “ಅವರು, ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
「『暗中殺人的,必受咒詛!』百姓都要說:『阿們!』
25 ೨೫ “ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು.
「『受賄賂害死無辜之人的,必受咒詛!』百姓都要說:『阿們!』
26 ೨೬ “ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
「『不堅守遵行這律法言語的,必受咒詛!』百姓都要說:『阿們!』」