< ಧರ್ಮೋಪದೇಶಕಾಂಡ 29 >
1 ೧ ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು.
Tato jsou slova smlouvy, kteráž přikázal Hospodin Mojžíšovi učiniti s syny Izraelskými v zemi Moábské, mimo onu smlouvu, kterouž učinil s nimi na Orébě.
2 ೨ ಮೋಶೆ ಇಸ್ರಾಯೇಲರನ್ನು ಕರೆದು, “ಯೆಹೋವನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಮುಂದೆ ಫರೋಹನಿಗೂ, ಅವನ ಪರಿವಾರದವರಿಗೂ ಮತ್ತು
I svolav Mojžíš všecken lid Izraelský, řekl jim: Vy sami viděli jste všecky věci, kteréž učinil Hospodin před očima vašima v zemi Egyptské, Faraonovi, i všechněm služebníkům jeho, i vší zemi jeho,
3 ೩ ಸಮಸ್ತ ಪ್ರಜೆಗಳಿಗೂ ಮಾಡಿದವುಗಳನ್ನು ನೋಡಿದ್ದೀರಿ. ಮಹಾಪರಿಶೋಧನೆ, ಉತ್ಪಾತ ಮತ್ತು ಮಹತ್ಕಾರ್ಯಗಳನ್ನು ನೀವು ನೋಡೇ ನೋಡಿದ್ದೀರಿ.
Zkušování veliká, kteráž viděly oči tvé, znamení i zázraky ty veliké.
4 ೪ ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ.
A však nedal vám Hospodin srdce k srozumění, a očí k vidění, a uší k slyšení až do tohoto dne.
5 ೫ ನಲ್ವತ್ತು ವರ್ಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪು ಹರಿಯಲ್ಲಿಲ್ಲ ಅಥವಾ ಕಾಲಿನಲ್ಲಿದ್ದ ಕೆರವಾಗಲಿ ಸವೆದು ಹೋಗಲಿಲ್ಲ;
A vedl jsem vás čtyřidceti let po poušti, nezvetšela roucha vaše na vás, a obuv vaše neztrhala se na nohách vašich.
6 ೬ ನೀವು ರೊಟ್ಟಿಯನ್ನು ತಿನ್ನಲಿಲ್ಲ, ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.
Chleba jste nejedli, vína a nápoje opojného jste nepili, abyste poznali, že já jsem Hospodin Bůh váš.
7 ೭ ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬರಲಾಗಿ ನಾವು ಅವರನ್ನು ಸೋಲಿಸಿದೆವು.
A když jste přišli na toto místo, vytáhl Seon, král Ezebon, a Og, král Bázan, proti nám k boji, a porazili jsme je,
8 ೮ ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ, ಗಾದ್ಯರಿಗೂ ಹಾಗು ಮನಸ್ಸೆ ಕುಲದವರಲ್ಲಿ ಅರ್ಧಜನರಿಗೂ ಸ್ವತ್ತಾಗಿ ಕೊಟ್ಟೆವಷ್ಟೆ.
A vzali jsme zemi jejich, i dali jsme ji v dědictví pokolení Rubenovu a Gádovu, a polovici pokolení Manassesova.
9 ೯ ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡಿಸುವ ಎಲ್ಲಾ ಕೆಲಸಗಳಲ್ಲಿಯೂ ಜಾಣರಾಗಿ ಅಭಿವೃದ್ಧಿಹೊಂದುವಿರಿ.
Ostříhejtež tedy slov smlouvy této a čiňte je, aby se vám šťastně vedlo všecko, což byste činili.
10 ೧೦ ಇಸ್ರಾಯೇಲ್ ಪುರುಷರೇ, ನೀವೆಲ್ಲರೂ ಈಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು,
Vy všickni dnes stojíte před Hospodinem Bohem svým, knížata vaše v pokoleních vašich, starší vaši a úředníci vaši, všickni muži Izraelští,
11 ೧೧ ಹೆಂಗಸರು, ಮಕ್ಕಳು, ನಿಮ್ಮ ಪಾಳೆಯದಲ್ಲಿರುವ ಅನ್ಯರಾದ ಕಟ್ಟಿಗೆ ಒಡೆಯುವವರು ಮತ್ತು ನೀರು ಸೇದುವವರು ಮುಂತಾದ ಆಳುಗಳು,
Dítky vaše i ženy vaše, i příchozí vaši, kteříž bydlejí u prostřed stanů vašich, i ten, kterýž dříví seká, i ten, kterýž váží vodu,
12 ೧೨ ಹೀಗೆ ನಿಮ್ಮೆಲ್ಲರ ಸಂಗಡ ಈ ಹೊತ್ತು ನಿಮ್ಮ ದೇವರಾದ ಯೆಹೋವನು ಪ್ರಮಾಣಪೂರ್ವಕವಾಗಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಾನೆ. ನೀವು ಅದರಲ್ಲಿ ಸೇರುವುದಕ್ಕಾಗಿ ಕೂಡಿಬಂದಿದ್ದೀರಿ. ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ,
Abyste vešli v smlouvu Hospodina Boha svého, a v přísahu jeho, v kteroužto smlouvu Hospodin Bůh tvůj dnes vchází s tebou,
13 ೧೩ ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ವಾಗ್ದಾನ ಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ, ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುತ್ತಾನೆ.
Aby tě sobě dnes postavil za lid, a on byl tobě za Boha, jakož mluvil tobě, a jakož s přísahou zaslíbil otcům tvým, Abrahamovi, Izákovi a Jákobovi.
14 ೧೪ “ಆತನು ಈ ಒಡಂಬಡಿಕೆಯನ್ನು ಕೇವಲ ನಮ್ಮೊಡನೆ ಮಾಡಿಕೊಳ್ಳುವುದಿಲ್ಲ.
A ne s vámi samými činím smlouvu tuto a přísahu tuto,
15 ೧೫ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮತ್ತು ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ.
Ale i s každým tím, jenž tuto dnes s námi stojí před Hospodinem Bohem naším, i s tím, jehož není tuto dnes s námi.
16 ೧೬ ನಾವು ಐಗುಪ್ತದೇಶದಲ್ಲಿ ವಾಸಮಾಡಿದ್ದೂ ಹಾಗೂ ಅನೇಕ ಜನಾಂಗಗಳ ಪ್ರದೇಶಗಳನ್ನು ದಾಟಿಬಂದದ್ದೂ ನಿಮಗೆ ತಿಳಿದೇ ಇದೆ.
Nebo vy víte, kterak jsme bydlili v zemi Egyptské, a kterak jsme šli prostředkem těch národů, až jsme naskrze prošli.
17 ೧೭ ಆ ಜನಾಂಗಗಳಲ್ಲಿ ನಡೆಯುವ ಅಸಹ್ಯವಾದ ಆಚಾರಗಳನ್ನೂ ಹಾಗು ಅವರು ಮರ, ಕಲ್ಲು, ಬೆಳ್ಳಿ ಮತ್ತು ಬಂಗಾರ ಇವುಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ನೋಡಿದ್ದೀರಿ.
A viděli jste ohavnosti jejich i modly jejich, dřevo i kámen, stříbro i zlato, kteréž jest při nich.
18 ೧೮ “ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.
Hleďtež, ať nebývá mezi vámi muže, aneb ženy, aneb čeledi, aneb pokolení, jehož by srdce odvrátilo se dnes od Hospodina Boha našeho, a šel by sloužiti bohům těch národů; ať nebývá mezi vámi kořene plodícího jed a hořkost.
19 ೧೯ ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.
I stalo by se, že uslyše takový slova zlořečení tohoto, dobrořečil by sobě v srdci svém, řka: Pokoj míti budu, bychť pak i chodil podlé žádosti srdce svého; i přidal by opilou žíznivé.
20 ೨೦ ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.
Nechceť Hospodin odpustiti takovému, nebo tehdáž rozpálí se prchlivost Hospodinova a zůřivost jeho proti takovému člověku, tak že připadne na něj všeliké zlořečení, o kterémž psáno jest v knize této; i vyhladí Hospodin jméno jeho pod nebem.
21 ೨೧ ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಯೆಹೋವನು ಅವನನ್ನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಪ್ರತ್ಯೇಕಿಸಿ ದಂಡಿಸುವನು.
A odloučí jej Hospodin s jeho zlým ode všech pokolení Izraelských, vedlé všech zlořečení smlouvy zapsané v této knize zákona,
22 ೨೨ “ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗ ಮತ್ತು ಉಪದ್ರವಗಳನ್ನು ಕಂಡು ಆಶ್ಚರ್ಯಪಡುವರು.
Tak že řekne věk potomní, synové vaši, kteříž povstanou po vás, i cizozemec, kterýž přijde z země daleké, (když uzří rány země této, i neduhy její, kteréž uvedl na ni Hospodin,
23 ೨೩ ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,
Sirou a solí vypálenou všecku tu zemi, a že se nemůž síti, ani co vzcházeti, ani jaké byliny růsti na ní, rovně jako na místě, kdež jest podvrácena Sodoma a Gomora, Adama a Seboim, kteréž podvrátil Hospodin v hněvě svém a v prchlivosti své),
24 ೨೪ ‘ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು?’ ಎಂಬುದಾಗಿ ವಿಚಾರಿಸುವರು.
Řeknou všickni národové: Proč jest tak učinil Hospodin zemi této? Kteraký jest to hněv prchlivosti jeho náramné?
25 ೨೫ ಅದಕ್ಕೆ ಜನರು, ‘ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.
A bude odpovědíno: Proto že opustili smlouvu Hospodina Boha otců svých, kterouž učinil s nimi, když je vyvedl z země Egyptské.
26 ೨೬ ಅವರು ತಮಗೆ ನೇಮಿಸಲ್ಪಡದೆಯೂ ಮತ್ತು ಗೊತ್ತಿಲ್ಲದೆಯೂ ಇದ್ದ ಇತರ ದೇವರುಗಳನ್ನು ಸೇವಿಸಿ ಪೂಜಿಸಿದ್ದರಿಂದ,
Nebo odcházejíce, sloužili bohům cizím a klaněli se jim, bohům, kterýchž neznali, kteříž se s nimi také ničímž dobrým nezdělili.
27 ೨೭ ಯೆಹೋವನು ಅವರ ದೇಶದ ಮೇಲೆ ಕೋಪಮಾಡಿ, ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದನು.
I rozhněvala se prchlivost Hospodinova na tu zemi, tak že uvedl na ni všecko zlořečení zapsané v knize této.
28 ೨೮ ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು.
Protož vyplénil je Hospodin z země jejich v hněvě, v rozpálení a v prchlivosti veliké, a vyvrhl je do země jiné, jakž to ukazuje dnešní den.
29 ೨೯ “ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.”
Věci skryté jsou Hospodina Boha našeho, věci pak zjevené ty jsou naše a synů našich, abychom plnili všecka slova zákona tohoto.