< ಧರ್ಮೋಪದೇಶಕಾಂಡ 3 >

1 ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಮೇಲಕ್ಕೆ ಹೋದಾಗ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈ ಊರಿಗೆ ಹೊರಟುಬಂದನು.
そしてわれわれは身をめぐらして、バシャンの道を上って行ったが、バシャンの王オグは、われわれを迎え撃とうとして、その民をことごとく率い、出てきてエデレイで戦った。
2 ಆಗ ಯೆಹೋವನು ನನಗೆ, “ಅವನಿಗೆ ಭಯಪಡಬೇಡ; ನಾನು ಅವನನ್ನೂ, ಅವನ ಸಮಸ್ತ ಜನರನ್ನೂ ಮತ್ತು ದೇಶವನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವನಿಗೂ ಮಾಡಬೇಕು” ಎಂದು ಆಜ್ಞಾಪಿಸಿದನು.
時に主はわたしに言われた、『彼を恐れてはならない。わたしは彼と、そのすべての民と、その地をおまえの手に渡している。おまえはヘシボンに住んでいたアモリびとの王シホンにしたように、彼にするであろう』。
3 ಬಾಷಾನಿನ ಅರಸನಾದ ಓಗನೂ ಅವನ ಜನರೆಲ್ಲರೂ ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಯೆಹೋವನು ಮಾಡಲಾಗಿ ಅವರಲ್ಲಿ ಒಬ್ಬರಾದರೂ ಉಳಿಯದಂತೆ ಅವರನ್ನು ಹತಮಾಡಿದೆವು.
こうしてわれわれの神、主はバシャンの王オグと、そのすべての民を、われわれの手に渡されたので、われわれはこれを撃ち殺して、ひとりをも残さなかった。
4 ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದೇ ಇದ್ದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.
その時、われわれは彼の町々を、ことごとく取った。われわれが取らなかった町は一つもなかった。取った町は六十。アルゴブの全地方であって、バシャンにおけるオグの国である。
5 ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ, ಕದಗಳಿಂದಲೂ, ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು.
これらは皆、高い石がきがあり、門があり、貫の木のある堅固な町であった。このほかに石がきのない町は、非常に多かった。
6 ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದಂತೆ ಇವುಗಳಿಗೂ ಮಾಡಿದೆವು. ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಸಂಪೂರ್ಣವಾಗಿ ನಾಶಮಾಡಿದೆವು.
われわれはヘシボンの王シホンにしたように、これらを全く滅ぼし、そのすべての町の男、女および子供をことごとく滅ぼした。
7 ಪಶುಗಳನ್ನು ಮಾತ್ರ ಉಳಿಸಿ ಸ್ವಂತಕ್ಕೆ ತೆಗೆದುಕೊಂಡು ಊರುಗಳನ್ನೆಲ್ಲಾ ಸೂರೆಮಾಡಿಬಿಟ್ಟೆವು.
ただし、そのすべての家畜と、その町々からのぶんどり物とは、われわれが獲て自分の物とした。
8 ಆ ಕಾಲದಲ್ಲಿ ನಾವು ಅರ್ನೋನ್ ನದಿ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ, ಯೊರ್ದನ್ ನದಿಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.
その時われわれはヨルダンの向こう側にいるアモリびとのふたりの王の手から、アルノン川からヘルモン山までの地を取った。
9 (ಹೆರ್ಮೋನ್ ಪರ್ವತಕ್ಕೆ ಚೀದೋನ್ಯರು ಸಿರ್ಯೋನ್ ಎಂದೂ ಮತ್ತು ಅಮೋರಿಯರು ಸೆನೀರ್ ಎಂದೂ ಕರೆಯುತ್ತಿದ್ದರು.)
(シドンびとはヘルモンをシリオンと呼び、アモリびとはこれをセニルと呼んでいる。)
10 ೧೦ ಹೀಗೆ ಮೀಶೊರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಗಿಲ್ಯಾದ್ ಸೀಮೆಯನ್ನೂ, ಓಗನ ರಾಜ್ಯವಾದ ಸಲ್ಕಾ ಮತ್ತು ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.
すなわち高原のすべての町、ギレアデの全地、バシャンの全地、サルカおよびエデレイまで、バシャンにあるオグの国の町々をことごとく取った。
11 ೧೧ (ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)
(バシャンの王オグはレパイムのただひとりの生存者であった。彼の寝台は鉄の寝台であった。これは今なおアンモンびとのラバにあるではないか。これは普通のキュビト尺で、長さ九キュビト、幅四キュビトである。)
12 ೧೨ ಆ ಕಾಲದಲ್ಲಿ ನಾವು ಆ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದ ವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು.
その時われわれは、この地を獲た。そしてわたしはアルノン川のほとりのアロエルから始まる地と、ギレアデの山地の半ばと、その町々とは、ルベンびとと、ガドびととに与えた。
13 ೧೩ ಗಿಲ್ಯಾದಿನ ಮಿಕ್ಕ ಭಾಗವನ್ನೂ ಓಗನ ರಾಜ್ಯವಾಗಿದ್ದ ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಬಾಷಾನ್ ದೇಶವನ್ನೂ ಮನಸ್ಸೆ ಕುಲದ ಅರ್ಧ ಜನರಿಗೆ ಕೊಟ್ಟೆನು.
わたしはまたギレアデの残りの地と、オグの国であったバシャンの全地とは、マナセの半部族に与えた。すなわちアルゴブの全地方である。(そのバシャンの全地はレパイムの国と唱えられる。
14 ೧೪ (ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.)
マナセの子ヤイルは、アルゴブの全地方を取って、ゲシュルびとと、マアカびとの境にまで達し、自分の名にしたがって、バシャンをハボテ・ヤイルと名づけた。この名は今日にまでおよんでいる。)
15 ೧೫ ನಾನು ಗಿಲ್ಯಾದ್ ದೇಶವನ್ನು ಮಾಕೀರನಿಗೂ ಗಿಲ್ಯಾದ್ ಮೊದಲುಗೊಂಡು (ದಕ್ಷಿಣದ) ಅರ್ನೋನ್ ತಗ್ಗಿನ ವರೆಗೂ,
またわたしはマキルにはギレアデを与えた。
16 ೧೬ (ಪೂರ್ವದ) ಯಬ್ಬೋಕ್ ನದಿಯ ವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ (ದಕ್ಷಿಣ) ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ನದಿಯು ಅವರ (ಪೂರ್ವದಿಕ್ಕಿನವರೆಗೆ) ಮೇರೆ.
ルベンびとと、ガドびととには、ギレアデからアルノン川までを与え、その川のまん中をもって境とし、またアンモンびとの境であるヤボク川にまで達せしめた。
17 ೧೭ ಅದಲ್ಲದೆ ಆರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ.
またヨルダンを境として、キンネレテからアラバの海すなわち塩の海まで、アラバをこれに与えて、東の方ピスガのふもとに達せしめた。
18 ೧೮ ಆ ಕಾಲದಲ್ಲಿ ನಾನು ನಿಮಗೆ, “ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವತ್ತಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಸೈನಿಕರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಹೊರಟು ಹೊಳೆ ದಾಟಿ ಹೋಗಬೇಕು.
その時わたしはあなたがたに命じて言った、『あなたがたの神、主はこの地をあなたがたに与えて、これを獲させられるから、あなたがた勇士はみな武装して、兄弟であるイスラエルの人々に先立って、渡って行かなければならない。
19 ೧೯ ನಿಮಗೆ ಬಹಳ ದನಕುರಿಗಳು ಉಂಟೆಂಬುದನ್ನು ನಾನು ಬಲ್ಲೆ. ನಿಮ್ಮ ದೇವರಾದ ಯೆಹೋವನು ಯೊರ್ದನ್ ನದಿಯ ಆಚೆ ನಿಮ್ಮ ಸಹೋದರರಿಗೆ ಕೊಡುವ ದೇಶವು ಅವರಿಗೆ ಸ್ವಾಧೀನವಾಗುವವರೆಗೆ ನಿಮ್ಮ ಹೆಂಡತಿ ಮಕ್ಕಳೂ, ದನಕುರಿಗಳೂ ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೇ ಇರಲಿ.
ただし、あなたがたの妻と、子供と、家畜とは、わたしが与えた町々にとどまらなければならない。(わたしはあなたがたが多くの家畜を持っているのを知っている。)
20 ೨೦ ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವತ್ತಿಗೆ ಹಿಂತಿರುಗಿ ಬರಬಹುದು” ಎಂದು ಆಜ್ಞಾಪಿಸಿದೆನು.
主がすでにあなたがたに与えられたように、あなたがたの兄弟にも安息を与えられて、彼らもまたヨルダンの向こう側で、あなたがたの神、主が与えられる地を獲るようになったならば、あなたがたはおのおのわたしがあなたがたに与えた領地に帰ることができる』。
21 ೨೧ ಆ ಕಾಲದಲ್ಲಿ ನಾನು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ನದಿ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು.
その時わたしはヨシュアに命じて言った、『あなたの目はあなたがたの神、主がこのふたりの王に行われたすべてのことを見た。主はまたあなたが渡って行くもろもろの国にも、同じように行われるであろう。
22 ೨೨ ನೀವು ಅವರಿಗೆ ಭಯಪಡಬೇಡಿರಿ; ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪರವಾಗಿ ಯುದ್ಧಮಾಡುವನು” ಎಂದು ಆಜ್ಞಾಪಿಸಿದೆನು.
彼らを恐れてはならない。あなたがたの神、主があなたがたのために戦われるからである』。
23 ೨೩ ಆ ಕಾಲದಲ್ಲಿ ನಾನು ಯೆಹೋವನಿಗೆ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹತ್ವವನ್ನೂ, ಭುಜಬಲವನ್ನೂ ನಿನ್ನ ದಾಸನಿಗೆ ತೋರಿಸಲಾರಂಭಿಸಿದಿ.
その時わたしは主に願って言った、
24 ೨೪ ನೀನು ನಡಿಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಬೇರೆ ಯಾವ ದೇವರು ನಡೆಸಲಾರನು?
『主なる神よ、あなたの大いなる事と、あなたの強い手とを、たった今、しもべに示し始められました。天にも地にも、あなたのようなわざをなし、あなたのような力あるわざのできる神が、ほかにありましょうか。
25 ೨೫ ಕರ್ತನೇ, ನಾನೂ ಈ ನದಿಯನ್ನು ದಾಟಿ ಆಚೆಯಿರುವ ಒಳ್ಳೆಯ ದೇಶವನ್ನು ಅಂದರೆ ಆ ಅಂದವಾದ ಬೆಟ್ಟದ ಸೀಮೆಯನ್ನೂ, ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬಿನ್ನವಿಸಿದೆನು.
どうぞ、わたしにヨルダンを渡って行かせ、その向こう側の良い地、あの良い山地、およびレバノンを見ることのできるようにしてください』。
26 ೨೬ ಆದರೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪವುಳ್ಳವನಾಗಿ ನನ್ನ ಮನವಿಯನ್ನು ಕೇಳದೆ, “ಸಾಕು, ಇದರ ವಿಷಯದಲ್ಲಿ ಇನ್ನು ನನ್ನ ಸಂಗಡ ಮಾತನಾಡಬೇಡ; ನೀನು ಯೊರ್ದನ್ ನದಿಯನ್ನು ದಾಟಬಾರದು.
しかし主はあなたがたのゆえにわたしを怒り、わたしに聞かれなかった。そして主はわたしに言われた、『おまえはもはや足りている。この事については、重ねてわたしに言ってはならない。
27 ೨೭ ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ ತುದಿಯಲ್ಲಿ ನಿಂತು, ನಾಲ್ಕು ದಿಕ್ಕುಗಳಲ್ಲಿ ಸುತ್ತಲೂ ಇರುವ ದೇಶವನ್ನು ಕಣ್ಣು ತುಂಬಾ ನೋಡಬಹುದು.
おまえはピスガの頂に登り、目をあげて西、北、南、東を望み見よ。おまえはこのヨルダンを渡ることができないからである。
28 ೨೮ ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೆ ಈ ಅಧಿಕಾರವನ್ನು ಕೊಡಬೇಕು; ಅವನು ದೃಢವಾಗುವಂತೆ ಅವನನ್ನು ಧೈರ್ಯಪಡಿಸಬೇಕು” ಎಂದು ಉತ್ತರಕೊಟ್ಟನು.
しかし、おまえはヨシュアに命じ、彼を励まし、彼を強くせよ。彼はこの民に先立って渡って行き、彼らにおまえの見る地を継がせるであろう』。
29 ೨೯ ಆಗ ನಾವು ಬೇತ್‍ಪೆಗೋರಿಗೆ ಮುಂದೆ ಇದ್ದ ಕಣಿವೆಯಲ್ಲಿ ವಾಸವಾಗಿದ್ದೆವು.
こうしてわれわれはベテペオルに対する谷にとどまっていた。

< ಧರ್ಮೋಪದೇಶಕಾಂಡ 3 >