< ಧರ್ಮೋಪದೇಶಕಾಂಡ 3 >
1 ೧ ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಮೇಲಕ್ಕೆ ಹೋದಾಗ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈ ಊರಿಗೆ ಹೊರಟುಬಂದನು.
Afei, yɛde yɛn ani kyerɛɛ Basan kwan so. Basanhene Og ne nʼasrafo nyinaa fi behyiaa yɛn wɔ Edrei ne yɛn koe.
2 ೨ ಆಗ ಯೆಹೋವನು ನನಗೆ, “ಅವನಿಗೆ ಭಯಪಡಬೇಡ; ನಾನು ಅವನನ್ನೂ, ಅವನ ಸಮಸ್ತ ಜನರನ್ನೂ ಮತ್ತು ದೇಶವನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವನಿಗೂ ಮಾಡಬೇಕು” ಎಂದು ಆಜ್ಞಾಪಿಸಿದನು.
Nanso Awurade ka kyerɛɛ me se, “Nsuro no, efisɛ mede ɔno ne nʼakofo ne nʼasase nyinaa ahyɛ wo nsa. Sɛnea woyɛɛ Amorihene Sihon a odii ade wɔ Hesbon dii no, yɛ no saa ara.”
3 ೩ ಬಾಷಾನಿನ ಅರಸನಾದ ಓಗನೂ ಅವನ ಜನರೆಲ್ಲರೂ ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಯೆಹೋವನು ಮಾಡಲಾಗಿ ಅವರಲ್ಲಿ ಒಬ್ಬರಾದರೂ ಉಳಿಯದಂತೆ ಅವರನ್ನು ಹತಮಾಡಿದೆವು.
Enti Awurade, yɛn Nyankopɔn, san de Basanhene Og ne nʼakofo nyinaa hyɛɛ yɛn nsa. Yɛbɔɔ wɔn gui a anka wɔn mu baako koraa.
4 ೪ ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದೇ ಇದ್ದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.
Saa bere no, yɛfaa ne nkuropɔn nyinaa. Nkuropɔn aduosia no mu baako koraa nni hɔ a yɛannye amfi wɔn nsam. Argob mantam a ɛyɛ Og ahemman wɔ Basan nyinaa.
5 ೫ ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ, ಕದಗಳಿಂದಲೂ, ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು.
Na wɔato afasu atenten afa saa nkuropɔn yi nyinaa ho de nnade apon atoto ano. Saa bere koro no ara mu, yɛfaa nkuraa a na wɔntoo afasu mfaa ho no bebree.
6 ೬ ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದಂತೆ ಇವುಗಳಿಗೂ ಮಾಡಿದೆವು. ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಸಂಪೂರ್ಣವಾಗಿ ನಾಶಮಾಡಿದೆವು.
Yɛsɛee Basan kuropɔn no pasaa sɛnea yɛsɛee Hesbonhene Sihon no. Yɛsɛee nkurow no ne mu mmarima, mmea ne mmofra nyinaa pasapasa.
7 ೭ ಪಶುಗಳನ್ನು ಮಾತ್ರ ಉಳಿಸಿ ಸ್ವಂತಕ್ಕೆ ತೆಗೆದುಕೊಂಡು ಊರುಗಳನ್ನೆಲ್ಲಾ ಸೂರೆಮಾಡಿಬಿಟ್ಟೆವು.
Nanso nkuropɔn no mu nyɛmmoa ne asade ahorow no de, yɛsoa kɔe.
8 ೮ ಆ ಕಾಲದಲ್ಲಿ ನಾವು ಅರ್ನೋನ್ ನದಿ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ, ಯೊರ್ದನ್ ನದಿಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.
Saa bere no, yɛfaa Amorifo ahemfo baanu no nsase a na ɛdeda Asubɔnten Yordan apuei fam no nyinaa; nsase a efi Arnon subon mu de kosi bepɔw Hermon so nyinaa.
9 ೯ (ಹೆರ್ಮೋನ್ ಪರ್ವತಕ್ಕೆ ಚೀದೋನ್ಯರು ಸಿರ್ಯೋನ್ ಎಂದೂ ಮತ್ತು ಅಮೋರಿಯರು ಸೆನೀರ್ ಎಂದೂ ಕರೆಯುತ್ತಿದ್ದರು.)
Sidonfo frɛ no Hermon Sirion na Amorifo frɛ no Senir.
10 ೧೦ ಹೀಗೆ ಮೀಶೊರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಗಿಲ್ಯಾದ್ ಸೀಮೆಯನ್ನೂ, ಓಗನ ರಾಜ್ಯವಾದ ಸಲ್ಕಾ ಮತ್ತು ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.
Yɛfaa nkuropɔn a ɛwɔ bepɔw no atifi no nyinaa so a Gilead ne Basan ka ho de kosi nkurow a ɛwɔ Saleka ne Edrei a na ɛyɛ Og ahemman wɔ Basan no nso ka ho bi.
11 ೧೧ (ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)
Abran no de, Basanhene Og nko na na waka. Ne dade mpa tenten boro anammɔn dumiɛnsa na ne trɛw yɛ anammɔn asia. Ɛda so wɔ Amonfo kuropɔn Raba mu mprempren ara.
12 ೧೨ ಆ ಕಾಲದಲ್ಲಿ ನಾವು ಆ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದ ವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು.
Nsase a yɛfaa no saa bere no, mede ne fa a ɛda fi Aroer Arnon subon mu ne ɔman a ɛda Gilead bepɔw no fa ne ne nkurow no maa Rubenfo ne Gadfo.
13 ೧೩ ಗಿಲ್ಯಾದಿನ ಮಿಕ್ಕ ಭಾಗವನ್ನೂ ಓಗನ ರಾಜ್ಯವಾಗಿದ್ದ ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಬಾಷಾನ್ ದೇಶವನ್ನೂ ಮನಸ್ಸೆ ಕುಲದ ಅರ್ಧ ಜನರಿಗೆ ಕೊಟ್ಟೆನು.
Afei, mede asase no nkae a ɛyɛ Gilead ne Basan nyinaa a na anka ɛyɛ Og ahemman no maa Manase abusua fa no. Na wɔfrɛ Argob mantam a ɛwɔ Basan no nyinaa se Abran asase.
14 ೧೪ (ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.)
Manase aseni bi a wɔfrɛ no Yair faa Argob mantam no nyinaa de kosii Gesurfo ne Maakatfo hye so. Ɔde ne din too asase no frɛɛ hɔ Hawot-Yair de besi nnɛ.
15 ೧೫ ನಾನು ಗಿಲ್ಯಾದ್ ದೇಶವನ್ನು ಮಾಕೀರನಿಗೂ ಗಿಲ್ಯಾದ್ ಮೊದಲುಗೊಂಡು (ದಕ್ಷಿಣದ) ಅರ್ನೋನ್ ತಗ್ಗಿನ ವರೆಗೂ,
Mede Gilead maa Makir,
16 ೧೬ (ಪೂರ್ವದ) ಯಬ್ಬೋಕ್ ನದಿಯ ವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ (ದಕ್ಷಿಣ) ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ನದಿಯು ಅವರ (ಪೂರ್ವದಿಕ್ಕಿನವರೆಗೆ) ಮೇರೆ.
Rubenfo ne Gadfo no, memaa wɔn asase bi a efi Gilead fa bi, kosi Arnon subon ho, de kosii Asubɔnten Yabok a ɛyɛ Amonfo hye no so.
17 ೧೭ ಅದಲ್ಲದೆ ಆರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ.
Atɔe hye no fi Asubɔnten Yordan a ɛda Araba a efi Kineret kosi Araba Po (a ɛne Nkyene Po no) wɔ Pisga bepɔw no ase.
18 ೧೮ ಆ ಕಾಲದಲ್ಲಿ ನಾನು ನಿಮಗೆ, “ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವತ್ತಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಸೈನಿಕರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಹೊರಟು ಹೊಳೆ ದಾಟಿ ಹೋಗಬೇಕು.
Na mehyɛɛ mo saa bere no se, “Awurade, mo Nyankopɔn, de asase yi ama mo sɛ momfa. Nanso mo mmarima akofo nyinaa nhyɛ akode nni mo nuanom Israelfo no anim ntwa Yordan.
19 ೧೯ ನಿಮಗೆ ಬಹಳ ದನಕುರಿಗಳು ಉಂಟೆಂಬುದನ್ನು ನಾನು ಬಲ್ಲೆ. ನಿಮ್ಮ ದೇವರಾದ ಯೆಹೋವನು ಯೊರ್ದನ್ ನದಿಯ ಆಚೆ ನಿಮ್ಮ ಸಹೋದರರಿಗೆ ಕೊಡುವ ದೇಶವು ಅವರಿಗೆ ಸ್ವಾಧೀನವಾಗುವವರೆಗೆ ನಿಮ್ಮ ಹೆಂಡತಿ ಮಕ್ಕಳೂ, ದನಕುರಿಗಳೂ ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೇ ಇರಲಿ.
Mo yerenom, mo mma ne mo nyɛmmoa bebrebe a minim sɛ mowɔ no de, mubetumi agyaw wɔ nkurow a mede ama mo no so.
20 ೨೦ ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವತ್ತಿಗೆ ಹಿಂತಿರುಗಿ ಬರಬಹುದು” ಎಂದು ಆಜ್ಞಾಪಿಸಿದೆನು.
Sɛ Awurade bɔ Israelfo a wɔaka no ho ban na wɔtena asase a Awurade de rema wɔn wɔ Asubɔnten Yordan agya no so a, ansa na mo mu biara betumi asan akɔ asase a mede ama mo no so.”
21 ೨೧ ಆ ಕಾಲದಲ್ಲಿ ನಾನು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ನದಿ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು.
Saa bere no, meka kyerɛɛ Yosua se, “Wode wʼani ahu nea Awurade, wo Nyankopɔn, ayɛ saa ahemfo baanu yi nyinaa. Saa ara na ɔbɛyɛ ahemman a ɛwɔ faako a morekɔ no nso.
22 ೨೨ ನೀವು ಅವರಿಗೆ ಭಯಪಡಬೇಡಿರಿ; ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪರವಾಗಿ ಯುದ್ಧಮಾಡುವನು” ಎಂದು ಆಜ್ಞಾಪಿಸಿದೆನು.
Nsuro wɔn, na Awurade, wo Nyankopɔn, bɛko ama wo.”
23 ೨೩ ಆ ಕಾಲದಲ್ಲಿ ನಾನು ಯೆಹೋವನಿಗೆ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹತ್ವವನ್ನೂ, ಭುಜಬಲವನ್ನೂ ನಿನ್ನ ದಾಸನಿಗೆ ತೋರಿಸಲಾರಂಭಿಸಿದಿ.
Saa bere no, mesrɛɛ Awurade se,
24 ೨೪ ನೀನು ನಡಿಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಬೇರೆ ಯಾವ ದೇವರು ನಡೆಸಲಾರನು?
“Otumfo Awurade, woafi ase reda wo kɛseyɛ ne wo nsa a ɛyɛ den no adi akyerɛ wʼakoa. Na onyame bɛn na ɔwɔ ɔsoro anaa asase so a obetumi ayɛ mmaninne te sɛ wo?
25 ೨೫ ಕರ್ತನೇ, ನಾನೂ ಈ ನದಿಯನ್ನು ದಾಟಿ ಆಚೆಯಿರುವ ಒಳ್ಳೆಯ ದೇಶವನ್ನು ಅಂದರೆ ಆ ಅಂದವಾದ ಬೆಟ್ಟದ ಸೀಮೆಯನ್ನೂ, ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬಿನ್ನವಿಸಿದೆನು.
Mesrɛ wo, ma mintwa Yordan nkɔhwɛ asase pa a ɛda hɔ no, Lebanon mmepɔw asase fɛfɛ no.”
26 ೨೬ ಆದರೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪವುಳ್ಳವನಾಗಿ ನನ್ನ ಮನವಿಯನ್ನು ಕೇಳದೆ, “ಸಾಕು, ಇದರ ವಿಷಯದಲ್ಲಿ ಇನ್ನು ನನ್ನ ಸಂಗಡ ಮಾತನಾಡಬೇಡ; ನೀನು ಯೊರ್ದನ್ ನದಿಯನ್ನು ದಾಟಬಾರದು.
Nanso esiane mo nti, Awurade bo fuw me. Na wantie me. Na Awurade ka kyerɛɛ me se, “Nka saa asɛm yi ho hwee bio nkyerɛ me.
27 ೨೭ ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ ತುದಿಯಲ್ಲಿ ನಿಂತು, ನಾಲ್ಕು ದಿಕ್ಕುಗಳಲ್ಲಿ ಸುತ್ತಲೂ ಇರುವ ದೇಶವನ್ನು ಕಣ್ಣು ತುಂಬಾ ನೋಡಬಹುದು.
Foro kɔ Pisga na hwɛ atɔe, atifi, anafo ne apuei. Esiane sɛ, worentwa Yordan no nti, wʼankasa fa wʼani hwɛ asase no.
28 ೨೮ ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೆ ಈ ಅಧಿಕಾರವನ್ನು ಕೊಡಬೇಕು; ಅವನು ದೃಢವಾಗುವಂತೆ ಅವನನ್ನು ಧೈರ್ಯಪಡಿಸಬೇಕು” ಎಂದು ಉತ್ತರಕೊಟ್ಟನು.
Nanso soma Yosua, hyɛ no nkuran na hyɛ no den, efisɛ ɔno na obedi saa nnipa yi anim atwa na wama wɔadi asase a wʼani tua yi.”
29 ೨೯ ಆಗ ನಾವು ಬೇತ್ಪೆಗೋರಿಗೆ ಮುಂದೆ ಇದ್ದ ಕಣಿವೆಯಲ್ಲಿ ವಾಸವಾಗಿದ್ದೆವು.
Ɛno nti, yɛtenaa subon a ɛbɛn Bet-Peor no mu.