< ಧರ್ಮೋಪದೇಶಕಾಂಡ 30 >

1 ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು,
Wakati baraka hizi zote pamoja na laana nilizoziweka mbele yako zitakapokujia, nawe ukazitafakari moyoni popote Bwana Mungu wako atakapokutawanya miongoni mwa mataifa,
2 ನಿಮ್ಮ ಮಕ್ಕಳ ಸಹಿತವಾಗಿ ನಿಮ್ಮ ದೇವರಾದ ಯೆಹೋವನ ಆಶ್ರಯಕ್ಕೆ ತಿರುಗಿ ಬಂದು, ನಾನು ಈಗ ನಿಮಗೆ ಬೋಧಿಸುವ ಆತನ ಮಾತುಗಳಿಗೆ ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ವಿಧೇಯರಾದರೆ,
hapo wewe na watoto wako mtakapomrudia Bwana Mungu wako, na kumtii kwa moyo wako wote na kwa roho yako yote kulingana na kila kitu ninachokuamuru leo,
3 ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ಪುನಃ ಕೂಡಿಸುವನು.
ndipo Bwana Mungu wako atakapokurudisha kutoka utumwani na kukuhurumia, naye atakukusanya tena kutoka mataifa yote kule alikutawanya.
4 ನಿಮ್ಮಲ್ಲಿ ಯಾರಾದರೂ ಭೂಲೋಕದ ಕಟ್ಟಕಡೆಯವರೆಗೆ ಒಯ್ಯಲ್ಪಟ್ಟರೂ, ಅಲ್ಲಿಂದಲೂ ನಿಮ್ಮ ದೇವರಾದ ಯೆಹೋವನು ಅವರನ್ನೂ ಕರೆದುಕೊಂಡು ಬರುವನು.
Hata kama umefukuziwa katika nchi ya mbali kiasi gani chini ya mbingu, kutoka huko Bwana Mungu wako atakukusanya na kukurudisha.
5 ನಿಮ್ಮ ಪೂರ್ವಿಕರಿಗೆ ಸ್ವತ್ತಾಗಿದ್ದ ದೇಶದಲ್ಲಿ ಸೇರಿಸಿ, ಅದು ನಿಮಗೂ ಸ್ವದೇಶವಾಗುವಂತೆ ಮಾಡಿ, ನಿಮಗೆ ಮೇಲನ್ನುಂಟುಮಾಡಿ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು.
Yeye Bwana atakurudisha katika nchi iliyokuwa mali ya baba zako, nawe utaimiliki. Naye atakufanya ufanikiwe sana na kukuzidisha kwa idadi kuliko baba zako.
6 ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.
Bwana Mungu wako ataitahiri mioyo yenu na mioyo ya wazao wenu ili mweze kumpenda kwa moyo wako wote na kwa roho yako yote ukaishi.
7 ನಿಮ್ಮ ದೇವರಾದ ಯೆಹೋವನು ಆ ಶಾಪಗಳನ್ನೆಲ್ಲಾ, ನಿಮ್ಮನ್ನು ದ್ವೇಷಿಸಿ ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.
Bwana Mungu wako ataweka laana hizi zote juu ya adui zako ambao wanakuchukia na kukutesa.
8 ನೀವಾದರೋ ಯೆಹೋವನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳಂತೆ ನಡೆಯುವಿರಿ.
Utamtii tena Bwana na kuzishika amri zake zote ninazokupa leo.
9 ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನು ಉಂಟುಮಾಡುವನು.
Ndipo Bwana Mungu wako atakapokufanikisha sana katika kazi zote za mikono yako na katika uzao wa tumbo lako, wadogo wa mifugo yako na mazao ya nchi yako. Bwana atakufurahia tena na kukufanikisha, kama alivyowafurahia baba zako,
10 ೧೦ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು, ಆತನು ನಿಮ್ಮ ಪೂರ್ವಿಕರ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರುಗಿ ಸಂತೋಷಪಟ್ಟು ನಿಮಗೆ ಮೇಲನ್ನು ಉಂಟುಮಾಡುವನು.
kama ukimtii Bwana Mungu wako, na kuzishika amri zake na maagizo yake ambayo yameandikwa katika Kitabu hiki cha Sheria, na kumgeukia Bwana Mungu wako kwa moyo wako wote na kwa roho yako yote.
11 ೧೧ ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶವು ನಿಮಗೆ ಗ್ರಹಿಸುವುದಕ್ಕೆ ಕಷ್ಟವಾದದ್ದು ಯಾವುದು ಇಲ್ಲ, ಅನುಸರಿಸುವುದಕ್ಕೆ ಅಸಾಧ್ಯವಾದದ್ದೂ ಅಲ್ಲ.
Ninachokuagiza leo sio kigumu sana kwako au usichokiweza.
12 ೧೨ ಇದು ಮೇಲಣ ಲೋಕದಲ್ಲಿರುವ ಮಾತಲ್ಲ. “ನಮಗೋಸ್ಕರ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೇಳಿ ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ.
Hakiko juu mbinguni, ili uulize, “Ni nani atakayepanda mbinguni kukileta na kututangazia ili tuweze kutii?”
13 ೧೩ ಮತ್ತು “ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.
Wala hakiko ngʼambo ya bahari, ili uulize, “Ni nani atakayevuka bahari kwenda kukichukua na kututangazia ili tupate kutii?”
14 ೧೪ ಈ ವಾಕ್ಯವು ನಿಮ್ಮ ಸಮೀಪದಲ್ಲಿಯೇ ಇದೆ; ಇದು ನಿಮ್ಮ ಬಾಯಲ್ಲಿಯೂ ಮತ್ತು ಹೃದಯದಲ್ಲಿಯೂ ಇದೆ; ಇದನ್ನು ಅನುಸರಿಸುವುದಕ್ಕೆ ಅವಕಾಶವುಂಟಷ್ಟೆ.
La hasha! Lile neno liko karibu sana nawe; liko kinywani mwako na ndani ya moyo wako ili uweze kulitii.
15 ೧೫ “ನೋಡಿರಿ, ಈಗ ನಾನು ಜೀವ ಮತ್ತು ಶುಭಗಳನ್ನೂ ಹಾಗೂ ಮರಣ ಮತ್ತು ಅಶುಭಗಳನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.
Tazama, naweka mbele yako leo uzima na mafanikio, mauti na maangamizo.
16 ೧೬ ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳಿದ ಮಾರ್ಗದಲ್ಲಿ ನಡೆದು, ಆತನ ಆಜ್ಞಾವಿಧಿ ನಿಯಮಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.
Ninakuamuru leo kwamba umpende Bwana Mungu wako, utembee katika njia zake, na kutunza maagizo yake, amri na sheria zake; ndipo utakapoishi na kuongezeka, naye Bwana Mungu wako atakubariki katika nchi unayoingia kuimiliki.
17 ೧೭ ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,
Lakini kama moyo wako ukigeukia mbali ukawa huna utii, kama umevutwa kuisujudia miungu mingine na kuiabudu,
18 ೧೮ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.
nakutangazia leo hii kwamba hakika utaangamizwa. Hutaishi maisha marefu katika nchi unayovuka Yordani kuiingia na kuimiliki.
19 ೧೯ ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.
Leo ninaziita mbingu na nchi kama mashahidi dhidi yako kwamba nimeweka mbele yako uzima na mauti, baraka na laana. Basi sasa chagueni uzima, ili wewe na watoto wako mpate kuishi,
20 ೨೦ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.
na ili upate kumpenda Bwana Mungu wako, uisikilize sauti yake na kuambatana naye. Kwa kuwa Bwana ndiye uzima wako, na atakupa wingi wa siku ili upate kuishi katika nchi aliyoapa kuwapa baba zako Abrahamu, Isaki na Yakobo.

< ಧರ್ಮೋಪದೇಶಕಾಂಡ 30 >