< ಧರ್ಮೋಪದೇಶಕಾಂಡ 30 >
1 ೧ ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು,
Vitu hivi vitakavyokuja juu yako, baraka na laana nilizoziweka mbele yako, na utakapozirejea akilini miongoni mwa mataifa mengine ambapo Yahwe Mungu wako kawapeleka,
2 ೨ ನಿಮ್ಮ ಮಕ್ಕಳ ಸಹಿತವಾಗಿ ನಿಮ್ಮ ದೇವರಾದ ಯೆಹೋವನ ಆಶ್ರಯಕ್ಕೆ ತಿರುಗಿ ಬಂದು, ನಾನು ಈಗ ನಿಮಗೆ ಬೋಧಿಸುವ ಆತನ ಮಾತುಗಳಿಗೆ ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ವಿಧೇಯರಾದರೆ,
na utakapomrudia Yahwe Mungu wako na kutii sauti yake, na kufuata yote ambayo nayokuamuru leo – wewe na watoto wako – kwa moyo wako wote na kwa nafsi yako yote,
3 ೩ ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ಪುನಃ ಕೂಡಿಸುವನು.
kisha Yahwe Mungu wako atageuza kutekwa kwako na kukuhurumia; atawarudisha na kuwakusanya kutoka kwa watu wote ambapo Yahwe Mungu wako aliwatawanya.
4 ೪ ನಿಮ್ಮಲ್ಲಿ ಯಾರಾದರೂ ಭೂಲೋಕದ ಕಟ್ಟಕಡೆಯವರೆಗೆ ಒಯ್ಯಲ್ಪಟ್ಟರೂ, ಅಲ್ಲಿಂದಲೂ ನಿಮ್ಮ ದೇವರಾದ ಯೆಹೋವನು ಅವರನ್ನೂ ಕರೆದುಕೊಂಡು ಬರುವನು.
Iwapo yeyote ya watu walio uhamishoni wapo katika sehemu za mbali sana chini ya mbingu, kutoka huko Yawhe Mungu wako atawakusanya, na kutoka huko atawarejesha.
5 ೫ ನಿಮ್ಮ ಪೂರ್ವಿಕರಿಗೆ ಸ್ವತ್ತಾಗಿದ್ದ ದೇಶದಲ್ಲಿ ಸೇರಿಸಿ, ಅದು ನಿಮಗೂ ಸ್ವದೇಶವಾಗುವಂತೆ ಮಾಡಿ, ನಿಮಗೆ ಮೇಲನ್ನುಂಟುಮಾಡಿ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು.
Yahwe Mungu wako atawaleta katika nchi ambayo mababu zenu walimiliki, nanyi mtaimiliki tena; atawatendea mema na kuwazidisha zaidi ya alivyofanya kwa mababu zenu.
6 ೬ ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.
Yahwe Mungu wako atatahiri moyo wako na moyo wa uzao wako, ili umpende Yahwe Mungu wako kwa moyo wako wote na kwa nafsi yako yote, ili kwamba uweze kuishi.
7 ೭ ನಿಮ್ಮ ದೇವರಾದ ಯೆಹೋವನು ಆ ಶಾಪಗಳನ್ನೆಲ್ಲಾ, ನಿಮ್ಮನ್ನು ದ್ವೇಷಿಸಿ ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.
Yahwe Mungu wako ataweka laana hizi zote kwa maadui zako na kwa wote wakuchukiayo, wale waliokutesa.
8 ೮ ನೀವಾದರೋ ಯೆಹೋವನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳಂತೆ ನಡೆಯುವಿರಿ.
Utarudi na kutii sauti ya Yahwe, nawe utatenda amri zake zote ambazo ninakuamuru leo.
9 ೯ ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನು ಉಂಟುಮಾಡುವನು.
Yahwe Mungu wako atakufanikisha katika kazi yote ya mkono wako, katika matunda ya mwili wako, katika matunda ya mifugo yako, na katika matunda ya nchi yako, kwa mafanikio; kwa maana Yahwe atafurahia tena mafanikio yako, kama alivyofurahia kwa baba zako.
10 ೧೦ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು, ಆತನು ನಿಮ್ಮ ಪೂರ್ವಿಕರ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರುಗಿ ಸಂತೋಷಪಟ್ಟು ನಿಮಗೆ ಮೇಲನ್ನು ಉಂಟುಮಾಡುವನು.
Atafanya hivi iwapo utatii sauti ya Yahwe Mungu wako, ili kuzishika amri zake na kanuni zake zilizoandikwa katika kitabu hiki cha sheria, iwapo utamgeukia Yahwe Mungu wako kwa moyo wako wote na kwa nafsi yako yote.
11 ೧೧ ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶವು ನಿಮಗೆ ಗ್ರಹಿಸುವುದಕ್ಕೆ ಕಷ್ಟವಾದದ್ದು ಯಾವುದು ಇಲ್ಲ, ಅನುಸರಿಸುವುದಕ್ಕೆ ಅಸಾಧ್ಯವಾದದ್ದೂ ಅಲ್ಲ.
Kwa maana amri hii nayokuamuru leo sio ngumu sana, wala haipo nje ya uwezo wako kufikia.
12 ೧೨ ಇದು ಮೇಲಣ ಲೋಕದಲ್ಲಿರುವ ಮಾತಲ್ಲ. “ನಮಗೋಸ್ಕರ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೇಳಿ ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ.
Haipo mbinguni, ili usije ukasema, “Nani atayekwenda kwa ajili yetu mbinguni na kutuletea kwetu na kutufanya tuisikie, ili tuweze kutekeleza?”
13 ೧೩ ಮತ್ತು “ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.
Wala haipo ng’ambo ya bahari, ili usije ukasema, “Nani atakwenda ng’ambo ya pili ya bahari kwa ajili yetu na kutuletea kwetu na kutufanya tuisikie, ili tuweze kuifanya?”.
14 ೧೪ ಈ ವಾಕ್ಯವು ನಿಮ್ಮ ಸಮೀಪದಲ್ಲಿಯೇ ಇದೆ; ಇದು ನಿಮ್ಮ ಬಾಯಲ್ಲಿಯೂ ಮತ್ತು ಹೃದಯದಲ್ಲಿಯೂ ಇದೆ; ಇದನ್ನು ಅನುಸರಿಸುವುದಕ್ಕೆ ಅವಕಾಶವುಂಟಷ್ಟೆ.
Lakini neno lipo karibu sana kwako, katika kinywa chako na moyo wako, ili uweze kutekeleza.
15 ೧೫ “ನೋಡಿರಿ, ಈಗ ನಾನು ಜೀವ ಮತ್ತು ಶುಭಗಳನ್ನೂ ಹಾಗೂ ಮರಣ ಮತ್ತು ಅಶುಭಗಳನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.
Tazama, leo nimeweka mbele yako uzima na wema, mauti na uovu.
16 ೧೬ ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳಿದ ಮಾರ್ಗದಲ್ಲಿ ನಡೆದು, ಆತನ ಆಜ್ಞಾವಿಧಿ ನಿಯಮಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.
Iwapo utatii maagizo ya Yahwe Mungu wako, ambayo ninakuamuru leo kumpenda Yahwe Mungu wako, kutembea katika njia zake, na kushikilia amri zake, kanuni zake, na sheria zake, utaishi na kuongezeka, na Yahwe Mungu wako atakubariki katika nchi ambayo unaingia kumiliki.
17 ೧೭ ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,
Lakini moyo wako ukigeuka, na usisikilize na badala yake unavutwa na kusujudia miungu mingine na kuwaabudu,
18 ೧೮ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.
basi leo nakutangazia kwako ya kwamba hakika utaangamia; siku zako hazitaongezeka katika nchi unayoipita juu ya Yordani kuingia na kumiliki.
19 ೧೯ ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.
Naziita mbingu na nchi kushuhudia dhidi yako ya kuwa nimeweka mbele yako uzima na mauti, baraka na laana; kwa hiyo chagua uzima ili kwamba uweze kuishi, wewe na uzao wako.
20 ೨೦ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.
Fanya hivi ili umpende Yahwe Mungu wako, kutii sauti yake, na kung’ang’ania kwake. Kwa maana yeye ni uzima wako na urefu wa siku zako; fanya hivi ili kwamba uweze kuishi katika nchi ambayo Yahwe aliapa kwa mababu zako, kwa Abrahamu, kwa Isaka, na kwa Yakobo, kuwapatia.