< ಧರ್ಮೋಪದೇಶಕಾಂಡ 31 >
1 ೧ ಮೋಶೆ ಹೋಗಿ ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ತಿಳಿಸಿದನು.
To pacoengah Mosi mah Israel kaminawk boih khaeah caeh moe, hae loknawk hae a thuih pae.
2 ೨ ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.
Mosi mah nihcae khaeah, Kai loe vaihi saning cumvaito pacoeng, pumphaeto ka oh boeh pongah, nangcae zaehhoih hanah angcoeng thai ai boeh; Angraeng mah doeh kai khaeah, Nang loe hae Jordan vapui nang kat thai mak ai, tiah ang naa boeh.
3 ೩ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.
Nangmacae ih Angraeng Sithaw to nangcae hma ah caeh ueloe, haeah kaom prae kaminawk to nangmacae hma roe ah na hum pae ueloe, nihcae ih prae to na toep o tih: Angraeng mah thuih ih lok baktih toengah, Joshua loe nangcae hma ah caeh tih.
4 ೪ ಯೆಹೋವನು ಅಮೋರಿಯರ ಅರಸನಾದ ಸೀಹೋನ್ ಮತ್ತು ಓಗರನ್ನು ನಾಶಮಾಡಿ, ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವನು.
Amor kaminawk ih siangpahrang Sihon hoi Og ih, prae nuiah amrohaih phaksak baktih toengah, Angraeng mah to kaminawk nuiah sah toeng tih.
5 ೫ ಯೆಹೋವನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.
Nihcae to Angraeng mah nangcae khaeah paek ueloe, kang paek ih lok baktih toengah, nihcae nuiah na sah o tih.
6 ೬ ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.
Na thacak o sak ah loe, misahoihaih hoiah om oh; mawn o hmah loe, nihcae to zii o hmah; na Angraeng Sithaw loe nangcae hoi nawnto caeh tih, anih mah na caeh o taak mak ai ueloe, pahnawt sut mak ai, tiah a naa.
7 ೭ ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;
To pacoengah Mosi mah Joshua to kawk moe, Israel kaminawk boih hma ah, Na thacaksak ah loe, misahoihaih hoiah om ah; nang loe hae kaminawk khaeah paek hanah, Angraeng mah ampanawk khaeah lokkam ih prae thungah, hae kaminawk hae na caeh haih ueloe, nihcae han qawk na toepsak tih.
8 ೮ ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.
Angraeng angmah roe nangcae hmaa ah caeh ueloe, anih na om o thui tih; anih mah na caehtaak mak ai ueloe, pahnawt sut mak ai; zii o hmah loe, palung doeh boeng o sak hmah, tiah a naa.
9 ೯ ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.
Mosi mah hae kaaloknawk tarik pacoengah, Angraeng lokkamhaih thingkhong apu kami, Levi acaeng, qaimanawk hoi Israel kacoehtanawk khaeah paek.
10 ೧೦ ಆತನು ಅವರಿಗೆ, “ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ ಪರ್ಣಶಾಲೆಗಳ ಜಾತ್ರೆಯಲ್ಲಿ
To pacoengah Mosi mah nihcae khaeah, saning sarihto boeng boeh moe, misong loisakhaih saning, kahni im raenghhaih atue phak naah,
11 ೧೧ ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲರೆಲ್ಲರು ಆತನ ಸನ್ನಿಧಿಗೆ ಕೂಡಿಬಂದಾಗ ನೀವು ಅವರೆಲ್ಲರಿಗೆ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.
Israel kaminawk boih Angraeng angmah qoih ih ahmuen ah, Angraeng Sithaw hmaa ah amtueng hanah nang zoh o naah, Israel kaminawk mah thaih o boih hanah, nihcae hma ah hae kaaloknawk hae kroek pae oh.
12 ೧೨ ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಯರನ್ನೂ, ಪುರುಷರನ್ನೂ, ಮಕ್ಕಳನ್ನೂ ಮತ್ತು ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.
Nongpa, nongpata, nawktanawk hoi na vangpui thungah kaom angvinnawk boih mah thaih o moe, panoek o thai han, na Angraeng Sithaw to zit o moe, hae kaaloknawk hae pazui o thai boih hanah, kaminawk to nawnto amkhuengsak ah;
13 ೧೩ ಮತ್ತು ಯೆಹೋವನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರೂ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ವಾಸವಾಗಿರುವವರೆಗೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವುದಕ್ಕೆ ಕಲಿತುಕೊಳ್ಳುವರು” ಎಂದು ಹೇಳಿದನು.
to tiah sak nahaeloe kaalok panoek ai kaminawk ih caanawk mah thaih o ueloe, Jordan vapui nang kat o moe, na toep o han ih prae thungah na oh o nathung, na Angraeng Sithaw zithaih to amtuk o tih, tiah a naa.
14 ೧೪ ಯೆಹೋವನು ಮೋಶೆಗೆ, “ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು” ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.
Angraeng mah Mosi khaeah, Na duek han ih atue loe zoi boeh; Joshua to kawk ah loe kaminawk amkhuenghaih kahni im ah angzo haih ah, to ah lok ka thuih pae han, tiah a naa. To pongah Mosi hoi Joshua loe angzoh hoi moe, kaminawk amkhuenghaih kahni im ah a caeh hoi.
15 ೧೫ ಅಲ್ಲಿ ಯೆಹೋವನು ಮೇಘಸ್ತಂಭದಲ್ಲಿ ಕಾಣಿಸಿದನು; ಆ ಮೇಘಸ್ತಂಭವು ಗುಡಾರದ ಬಾಗಿಲಿನ ಬಳಿಯಲ್ಲಿ ನಿಂತಿತು.
To naah Angraeng loe kahni imthung ah tamai tung baktiah amtueng; tamai tung loe kahni im thok nuiah angdoet pae.
16 ೧೬ ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
To naah Angraeng mah Mosi khaeah, Khenah, Nang loe nam panawk khaeah nang hak tih boeh; hae kaminawk loe angthawk o ueloe, a caeh o han ih prae thungah kaom kaminawk ih sithawnawk khaeah a takpum zaw o tih; kai to pahnawt o ueloe, nihcae hoi ka sak ih ka lokmaihaih doeh amkhraeng o taak tih.
17 ೧೭ ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.
To na niah loe nihcae nuiah palung ka phui moe, nihcae to ka pahnawt sut han; nihcae khae hoi mikhmai ka hawk naah loe, nihcae to amro o tih, nihcae nuiah paroeai sethaih hoi raihaihnawk to pha tih; to naah nihcae mah aicae ih Sithaw loe aicae khaeah om ai boeh pongah na ai maw hae baktih raihaih hae aicae nuiah oh? tiah thui o tih.
18 ೧೮ ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು.
Nihcae loe kalah sithawnawk khaeah angqoi o ving moe, a sak o ih zaehaih boih pongah, to na niah loe nihcae khae hoi mikhmai ka hawk ving tangtang han.
19 ೧೯ “ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲರಿಗೆ ವಿರುದ್ಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠಮಾಡಿಸು.
To pongah vaihi hae laa hae tarik hoih, Israel kaminawk ih pakha thungah suem paeh loe, amtuksak ah; hae laa loe Israel kaminawk ih misa ah ka ohhaih hnukung ah om tih.
20 ೨೦ ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.
Tahnutui hoi khoitui longhaih prae, ampanawk khaeah paek han lokkam ih prae thungah nihcae to ka hoih; nihcae mah zok kamhah ah buh to caak o moe, thawk o hruk naah loe, kai palungphuisak hanah, ka lokkamhaih to amkhraeng o taak ving tih, kalah sithawnawk khaeah angqoi o ueloe, a tok to sah pae o tih.
21 ೨೧ ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.
Nihcae nuiah paroeai sethaih hoi raihaihnawk phak naah, nihcae ih misa ah ka ohhaih to hae laa mah amtuengsak tih; nihcae ih caanawk mah hae laa hae pahnet o mak ai; ka lokkamhaih prae thungah nihcae ka caeh haih ai naah, vaihi roe nihcae poekhaih to ka panoek pae boeh, tiah a naa.
22 ೨೨ ಆದಕಾರಣ ಮೋಶೆ ಆ ದಿನದಲ್ಲೇ ಈ ಪದ್ಯವನ್ನು ಬರೆದು ಇಸ್ರಾಯೇಲರಿಗೆ ಕಲಿಸಿದನು.
To pongah Mosi mah to na ni roe ah laa to tarik moe, Israel caanawk to patuk.
23 ೨೩ ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.
Angraeng mah Nun capa Joshua khaeah, Na thacaksak ah loe, misahoihaih hoiah om ah; nihcae khaeah lokkam ih prae thungah Israel kaminawk to na caeh haih tih; to naah Kai nangcae hoi nawnto ka oh han, tiah a naa.
24 ೨೪ ಮೋಶೆ ಈ ಧರ್ಮಶಾಸ್ತ್ರವನ್ನು ಗ್ರಂಥರೂಪವಾಗಿ ಬರೆದು ಪೂರೈಸಿದಾಗ,
Mosi mah hae ih kaaloknawk boeng khoek to cabu pongah tarik pacoengah,
25 ೨೫ ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಿಗೆ,
Mosi mah Angraeng lokkamhaih thingkhong apu, Levi acaengnawk khaeah,
26 ೨೬ “ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ.
hae ih kaalok cabu hae la oh loe, na Angraeng Sithaw lokkamhaih thingkhong taengah suem oh; anih loe to ah nangcae ih misa ah ka ohhaih hnukung ah om tih.
27 ೨೭ ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.
Nangcae loe lokaek thaih kami hoi palungthah kami ah na oh o, tito ka panoek; khenah, vaihniah nangcae hoi nawnto ka hing nathuem ah mataeng doeh, Angraeng ih lok to na aek o nahaeloe, ka duek pacoeng naah cae loe, kawkruk maw lok na aek o tih?
28 ೨೮ ನಿಮ್ಮ ಕುಲಗಳ ಹಿರಿಯರನ್ನೂ, ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರುದ್ಧವಾಗಿ ಸಾಕ್ಷಿಗಳಾಗುವುದಕ್ಕೆ ಭೂಮಿ ಮತ್ತು ಆಕಾಶಗಳನ್ನು ಕರೆಯುವೆನು.
Na caeng thung ih kacoehtanawk hoi ukkungnawk to ka hma ah amkhuengsak boih ah; nihcae thaih naah hae loknawk hae ka thuih moe, nihcae ih misa ah ka ohhaih panoekkung ah van hoi long to ka kawk han.
29 ೨೯ ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.
Nangcae loe ka duek pacoengah nam ro o ueloe, kang paek ih loklam to nang qoi o taak tih, tito ka panoek; hnukkhuem niah, Angraeng mikhnuk ah kahoih ai hmuennawk to na sah o ueloe, na ban hoi sak ih hmuennawk mah anih palung na phui o sak pongah, nangcae nuiah amrohaih to pha tih, tiah a naa.
30 ೩೦ ಆಗ ಮೋಶೆ ಇಸ್ರಾಯೇಲರ ಸರ್ವಸಮೂಹದವರಿಗೆ ಕೇಳಿಸುವಂತೆ ಈ ಪದ್ಯದ ಮಾತುಗಳನ್ನೆಲ್ಲಾ ಹೇಳಿದನು.
To pacoengah Mosi mah Israel kaminawk khaeah, hae laa loknawk hae takung hoi tadong khoek to thuih pae boih.