< ಧರ್ಮೋಪದೇಶಕಾಂಡ 4 >

1 ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.
Mverani inu Aisraeli, malangizo ndi malamulo amene ndikuphunzitseni. Muwatsatire kuti mukhale ndi moyo ndi kuti mulowe ndi kutenga dziko limene Yehova Mulungu wa makolo anu akukupatsani.
2 ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.
Musawonjezere pa zimene ndikukulamulirani ndipo musachotserepo, koma muwasunge malamulo a Yehova Mulungu wanu amene ndikukupatsani.
3 ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ಗಮನಿಸಿದ್ದೀರಿ. ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದ್ದಾನೆ.
Inu munaona ndi maso anu zimene Yehova anachita ku Baala-Peori. Yehova Mulungu wanu anawononga aliyense amene anatsata Baala wa ku Peori pakati panu.
4 ನಿಮ್ಮ ದೇವರಾದ ಯೆಹೋವನನ್ನು ನೀವು ನಂಬಿ ನಡೆದುದರಿಂದ ನೀವಾದರೋ ಇಂದಿನವರೆಗೂ ಉಳಿದಿದ್ದೀರಿ.
Koma inu nonse amene munagwiritsitsa Yehova Mulungu wanu mukanali ndi moyo mpaka lero.
5 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.
Taonani, ndakuphunzitsani malangizo ndi malamulo monga Yehova Mulungu wanga anandilamulira kuti inuyo muwatsatire mʼdziko limene mukulowa ndi kulitengali.
6 ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.
Muwasunge mosamalitsa pakuti zimenezi zidzaonetsa nzeru zanu ndi kuzindikira kwanu kwa anthu a mitundu ina, amene adzamva za malangizo onsewa nati, “Ndithudi, mtundu waukulu uwu ndi wa anthu anzeru ndi ozindikira.”
7 ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು?
Mtundu wina wa anthu ndi uti umene uli waukulu chomwechi, woti ukhoza kukhala ndi milungu yawo pafupi monga mmene alili Yehova Mulungu wathu ndi ife nthawi zonse pamene tipemphera kwa Iye?
8 ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು?
Ndipo ndi mtundu uti mwa mitundu ya anthu umene ndi waukulu chotere kuti nʼkukhala ndi malangizo ndi malamulo olungama ngati malamulo amene ndikuyika pamaso panu lero?
9 ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.
Inu mungosamala ndi kudziyangʼanira kwambiri nokha kuti musayiwale zimene maso anu aona. Musalole kuti zichoke mʼmitima mwanu pa moyo wanu wonse. Zimenezi muziphunzitse kwa ana anu ndi zidzukulu zanu ngakhale mʼtsogolo.
10 ೧೦ ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು.
Kumbukirani tsiku limene munayimirira pamaso pa Yehova Mulungu wanu ku Horebu, pamene anati kwa ine, “Sonkhanitsa anthu pamaso panga kuti amve mawu anga ndi kuti aphunzire kundilemekeza mʼmoyo wawo onse mʼdzikomo ndi kuti ana awo aziwaphunzitsa zimenezi.”
11 ೧೧ ಆ ದಿನದಲ್ಲಿ ನೀವು ಹತ್ತಿರ ಬಂದು ಬೆಟ್ಟದ ಬುಡದಲ್ಲಿ ನಿಂತುಕೊಂಡಿರಲು ಕತ್ತಲೂ, ಮೋಡವೂ, ಕಾರ್ಗತ್ತಲೂ ಕವಿದು ಆ ಬೆಟ್ಟವು ಆಕಾಶದ ತುದಿಯವರೆಗೂ ಬೆಂಕಿಯಿಂದ ಉರಿಯಿತು.
Munabwera pafupi ndi kuyima pa tsinde pa phiri pamene phirilo limayaka moto umene umafika mpaka kumwamba. Panalinso mtambo wakuda ndi mdima wambiri.
12 ೧೨ ಆಗ ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದನು. ಆತನು ಮಾತನಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸಲ್ಲಿಲ್ಲ.
Kenaka Yehova anayankhula nanu kuchokera mʼmotowo. Inu munamva mawu ake okha koma simunamuone pakuti panali mawu chabe.
13 ೧೩ ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು.
Iye anakuwuzani Malamulo Khumi omwe ndi pangano lake limene anakulamulirani kuti mutsatire. Ndipo anawalemba malamulowo pa mapale awiri a miyala.
14 ೧೪ ನೀವು ನದಿ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದನ್ನು ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು.
Ndipo Yehova anandilamula nthawi imene ija kuti ndikuphunzitseni malangizo ndi malamulo amene muyenera kutsata mʼdziko limene mutenge mukawoloka Yorodani.
15 ೧೫ ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.
Tsiku limene Yehova anayankhula nanu ku Horebu mʼmoto uja, simunaone thupi lake. Choncho mudziyangʼanire nokha mosamalitsa,
16 ೧೬ ನೀವು ಸ್ತ್ರೀಪುರುಷರ ರೂಪವನ್ನಾಗಲಿ,
kuti musasokonezeke ndi kudzipangira nokha fano kapena chifanizo cha mtundu uliwonse, kaya chokhala ngati mwamuna kapena ngati mkazi,
17 ೧೭ ಭೂಮಿಯ ಮೇಲೆ ಸಂಚರಿಸುವ ಮೃಗದ ರೂಪವನ್ನಾಗಲಿ, ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪವನ್ನಾಗಲಿ,
kaya chokhala ngati nyama iliyonse ya pa dziko lapansi kapena mbalame iliyonse yowuluka mlengalenga.
18 ೧೮ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪವನ್ನಾಗಲಿ ಮತ್ತು ಭೂಮಿಯ ಕೆಳಗಣ ನೀರಿನಲ್ಲಿರುವ ಮೀನಿನ ರೂಪವನ್ನಾಗಲಿ ದೇವರ ಸ್ವರೂಪವೆಂದು ಮಾಡಿಕೊಂಡು ಭ್ರಷ್ಟರಾಗಬಾರದು.
Kapena cholengedwa chilichonse choyenda pa nthaka kapena nsomba ya mʼmadzi akuya.
19 ೧೯ ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.
Ndipo pamene muyangʼana kumwamba muona dzuwa, mwezi ndi nyenyezi, zonse zakumwambazo musakopeke kuti muzigwadire ndi kumapembedza zinthu zimene Yehova wapereka kwa anthu a mitundu yonse pa dziko lapansi.
20 ೨೦ ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.
Koma inuyo, Yehova anakutengani ndi kukutulutsani mʼngʼanjo yosungunulira zitsulo, ku Igupto kuti mukhale anthu olandira chuma chake monga mmene mulili tsopano.
21 ೨೧ ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ,
Yehova anakwiya nane chifukwa cha inu, ndipo analumbira kwathunthu kuti sindidzawoloka Yorodani ndi kulowa mʼdziko labwinolo limene Yehova Mulungu wanu akukupatsani inu ngati cholowa chanu.
22 ೨೨ ಇಲ್ಲಿಯೇ ಸಾಯಬೇಕೆಂದು ಖಂಡಿತವಾಗಿ ಹೇಳಿದನು. ನೀವಾದರೋ ನದಿದಾಟಿ ಆ ಒಳ್ಳೆಯ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
Ine ndifera mʼdziko lino, sindiwoloka Yorodani. Koma inu mwatsala pangʼono kuwoloka ndi kukatenga dziko labwinolo.
23 ೨೩ ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.
Samalani, musayiwale pangano limene Yehova Mulungu wanu anapangana nanu ndipo musadzipangire nokha fano la chinthu chilichonse chimene Yehova Mulungu wanu waletsa.
24 ೨೪ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.
Pakuti Yehova Mulungu wanu ndi moto wonyeketsa ndipo ndi Mulungu wansanje.
25 ೨೫ ನೀವು ಮಕ್ಕಳನ್ನೂ ಮತ್ತು ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು, ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ,
Mukadzakhala nthawi yayitali mʼdzikomo ndi kubereka ana ndi kukhala ndi zidzukulu ndipo mukadzasokonekera ndi kupanga fano la mtundu uliwonse, nʼkumachita zoyipa pamaso pa Yehova Mulungu wanu ndi kumukwiyitsa,
26 ೨೬ ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.
ine ndi kuti kumwamba ndi dziko lapansi zikhale mboni lero zokutsutsani kuti mudzawonongedwa msanga ndipo mudzachotsedwa mʼdziko limene mutenge mukawoloka Yorodani. Simudzakhalitsa kumeneko koma mudzawonongedwa ndithu.
27 ೨೭ ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.
Yehova adzakubalalitsani pakati pa anthu ena. Ochepa okha pakati panu ndi amene adzapulumuke pakati pa anthu a mitundu ina kumene Yehova adzakupirikitsireniko.
28 ೨೮ ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.
Kumeneko mudzapembedza milungu ya mitengo ndi miyala yopangidwa ndi anthu, imene singaone kapena kumva kapena kudya kapena kununkhiza.
29 ೨೯ ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.
Mukanali komweko, ngati mudzamufunafuna Yehova Mulungu wanu mudzamupeza koma ngati mutamufunafuna ndi mtima wanu wonse ndi moyo wanu wonse.
30 ೩೦ ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.
Mukadzakhala pa chipsinjo ndipo zonsezi zikadzakuchitikirani, ndi pamene pambuyo pake mudzabwerera kwa Yehova Mulungu wanu ndi kumumvera Iye.
31 ೩೧ ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ.
Pakuti Yehova Mulungu wanu ndi Mulungu wachifundo, Iye sadzakutayani kapena kukuwonongani kapena kuyiwala pangano lake ndi makolo anu, limene analitsimikiza mwa lumbiro.
32 ೩೨ ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.
Tsopano tafunsani za masiku a mʼmbuyomu, zakale inu musanabadwe, kuyambira tsiku limene Mulungu analenga munthu pa dziko lapansi. Tafufuzani kuyambira kumapeto mpaka mapeto anzake a thambo. Kodi chinachitikako china chachikulu ngati ichi, kapena chinayamba chamvekako chokhala ngati ichi?
33 ೩೩ ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?
Kodi uliponso mtundu wina wa anthu umene unamva mawu a Mulungu akuyankhula kuchokera mʼmoto nʼkukhala ndi moyo monga mwachitira inumu?
34 ೩೪ ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.
Kodi alipo mulungu amene anayeserapo kudzitengera mtundu wa anthu kuwachotsa mu mtundu unzake mwa mayesero, zizindikiro zozizwitsa, nkhondo, komanso mwa mphamvu zake zopanda malire, kapena mwa zochita zazikulu ndi zochititsa mantha, monga zimene Yehova Mulungu wanu anakuchitirani ku Igupto inu mukupenya?
35 ೩೫ ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಿದ್ದಾನೆ.
Iye anakuonetsani zonsezi kuti inu muzindikire kuti Yehova ndiye Mulungu, palibenso wina wofanana naye.
36 ೩೬ ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.
Kuchokera kumwamba, Iye anafuna kuti inu mumve mawu ake ndi kuti mukhale osunga mwambo. Pa dziko lapansi anakuonetsani moto waukulu, ndipo inu munamva mawu ake kuchokera mʼmotomo.
37 ೩೭ ಆತನು ನಿಮ್ಮ ಪೂರ್ವಿಕರನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನು ಆರಿಸಿಕೊಂಡು,
Popeza anakonda makolo anu ndi kusankha adzukulu awo, a pambuyo pawo, anakutulutsani kuchoka ku Igupto ali pakati panu ndi mphamvu yake,
38 ೩೮ ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು ಸಂಕಲ್ಪಿಸಿ, ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.
kuti akupirikitsireni mayiko akuluakulu ndi amphamvu kuposa inu, ndi kukubweretsani inu ku dziko lawo kuti likhale lanu, monga liliri lero.
39 ೩೯ ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.
Vomerezani lero ndipo dziwani mu mtima mwanu kuti Yehova ndiye Mulungu kumwamba ndi pa dziko lapansi. Palibenso wina.
40 ೪೦ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.
Sungani malangizo ake ndi malamulo ake amene ndikukupatsani lero lino, kuti zikuyendereni bwino inu ndi ana anu kutsogoloko, ndi kuti mukhalitse mʼdziko limene Yehova Mulungu wanu akukupatsani kwa nthawi zonse.
41 ೪೧ ಆ ಕಾಲದಲ್ಲಿ ಮೋಶೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ಪಟ್ಟಣಗಳನ್ನು ಗೊತ್ತುಮಾಡಿದನು.
Kenaka Mose anapatula mizinda itatu cha kummawa kwa Yorodani,
42 ೪೨ ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇಮಿಸಿದನು.
kumene aliyense amene wapha munthu akhoza kuthawirako ngati wopha munthuyo sanaphe mnzakeyo mwadala ndi maganizo oyipa. Iye akhoza kuthawira ku umodzi mwa mizinda imeneyi napulumutsa moyo wake.
43 ೪೩ ಅವು ಯಾವುವೆಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್ ಮತ್ತು ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಪಟ್ಟಣಗಳು.
Mizindayo inali iyi: ku fuko la Rubeni, unali mzinda wa Bezeri ku mapiri a ku chipululu; ku fuko la Gadi, unali Ramoti ku Giliyadi; ndipo ku fuko la Manase, unali Golani ku Basani.
44 ೪೪ ಮೋಶೆ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವು ಇದೇ.
Awa ndi malamulo amene Mose anapereka kwa Aisraeli.
45 ೪೫ ಇಸ್ರಾಯೇಲರು ಐಗುಪ್ತ ದೇಶದಿಂದ ಬಂದಾಗ ಮೋಶೆಯು ಇಸ್ರಾಯೇಲರಿಗೆ ತಿಳಿಸಿದ ಆಜ್ಞಾವಿಧಿನಿಯಮಗಳು ಇವೇ.
Izi ndi ndondomeko, malangizo ndi malamulo amene Mose anawapatsa iwo pamene anatuluka ku Igupto.
46 ೪೬ ಅವರು ಯೊರ್ದನ್ ನದಿಯ ಆಚೆ ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದರು. ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯೂ ಮತ್ತು ಇಸ್ರಾಯೇಲರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.
Anali ku chigwa cha kufupi ndi Beti-Peori mbali ya kummawa kwa Yorodani, mʼdziko la Sihoni mfumu ya Aamori amene ankalamulira ku Hesiboni ndipo anagonjetsedwa ndi Mose ndi Aisraeli pamene ankachokera ku Igupto.
47 ೪೭ ಅವರು ಅವನ ರಾಜ್ಯವನ್ನೂ, ಬಾಷಾನ್ ದೇಶದ ಅರಸನಾದ ಓಗನ ರಾಜ್ಯವನ್ನೂ ಮತ್ತು ಯೊರ್ದನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನು ಗೆದ್ದುಕೊಂಡಿದ್ದರು.
Iye anamulanda dziko lake ndi dziko la Ogi mfumu ya ku Basani. Awa anali mafumu awiri Aamori a kummawa kwa Yorodani.
48 ೪೮ ಅಂತು ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮೊದಲುಗೊಂಡು ಹೆರ್ಮೋನ್ ಎಂಬ ಸೀಯೋನ್ ಪರ್ವತದವರೆಗೂ ಮತ್ತು
Dziko ili linayambira ku Aroeri cha kumphepete kwa khwawa la Arinoni ku phiri la Siyoni (limeneli ndi phiri la Herimoni),
49 ೪೯ ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬ್ ಸಮುದ್ರದ ವರೆಗೆ ಯೊರ್ದನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು.
ndi kuphatikizapo dziko lonse la Araba cha kummawa kwa Yorodani mpaka kukafika ku Nyanja ya Araba, kumunsi kwa Phiri la Pisiga.

< ಧರ್ಮೋಪದೇಶಕಾಂಡ 4 >