< ಧರ್ಮೋಪದೇಶಕಾಂಡ 4 >
1 ೧ ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.
Apre sa, Moyiz di pèp la: -Koulye a, nou menm pèp Izrayèl, se pou nou kenbe tout lòd ak tout prensip mwen te moutre nou yo. Se pou nou mache dapre lòd sa yo pou nou ka viv, pou nou ka antre nan peyi Seyè a, Bondye zansèt nou yo, ap ban nou an.
2 ೨ ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.
Piga nou mete, piga nou wete anyen sou sa mwen mande nou fè a. Se pou nou kenbe tout kòmandman Seyè a, Bondye nou an, jan mwen te moutre nou yo a.
3 ೩ ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ಗಮನಿಸಿದ್ದೀರಿ. ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದ್ದಾನೆ.
Nou menm, nou te wè sa Seyè a te fè bò mòn Peyò a, lè li te touye tout moun nan mitan nou ki te al fè sèvis pou Baal sou mòn lan.
4 ೪ ನಿಮ್ಮ ದೇವರಾದ ಯೆಹೋವನನ್ನು ನೀವು ನಂಬಿ ನಡೆದುದರಿಂದ ನೀವಾದರೋ ಇಂದಿನವರೆಗೂ ಉಳಿದಿದ್ದೀರಿ.
Men, nou menm ki pa t' lage pye Seyè a, Bondye nou an, nou tout la byen vivan toujou.
5 ೫ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.
Gade! Mwen te moutre nou tout lòd ak tout regleman, jan Seyè a, Bondye mwen an, te mande m' fè l' la, pou nou te ka viv dapre lòd sa yo nan peyi nou pral pran pou nou an.
6 ೬ ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.
Se pou nou kenbe yo, se pou nou fè tou sa yo mande nou fè ladan yo. Paske, se konsa n'a fè lòt nasyon yo wè jan nou gen konprann, jan nou gen lespri. Lè y'a rive tande pale tout lòd sa yo, y'a di: Ala yon gwo pèp, papa! Pèp sa a gen tan gen konprann, yo gen tan gen lespri!
7 ೭ ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು?
Paske pa gen lòt nasyon, li te mèt gran kou l' gran, ki gen yon Bondye toupre yo, yon Bondye k'ap kanpe la avèk yo, tankou Seyè a, Bondye nou an, fè l' pou nou chak fwa nou rele l'.
8 ೮ ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು?
Pa gen lòt nasyon, li te mèt gran kou l' gran, ki gen bon lòd ak bon prensip pou regle tout bagay san patipri tankou lalwa mwen mete devan nou jòdi a.
9 ೯ ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.
Tansèlman, veye kò nou! Atansyon pou nou pa janm bliye bagay nou te wè ak pwòp je nou, pou nou pa janm wete yo nan lide nou pandan tout lavi nou. Okontrè, se pou nou moutre pitit nou ak pitit pitit nou yo tout bagay sa yo.
10 ೧೦ ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು.
Pa bliye jou nou te kanpe sou mòn Orèb la, devan Seyè a, Bondye nou an. Lè sa a, li te di mwen: Sanble tout pèp la pou m' ka fè yo tande pawòl mwen gen pou m' di yo, pou yo aprann respekte m' pandan tout lavi yo sou latè, lèfini pou yo moutre pitit yo fè menm bagay la tou.
11 ೧೧ ಆ ದಿನದಲ್ಲಿ ನೀವು ಹತ್ತಿರ ಬಂದು ಬೆಟ್ಟದ ಬುಡದಲ್ಲಿ ನಿಂತುಕೊಂಡಿರಲು ಕತ್ತಲೂ, ಮೋಡವೂ, ಕಾರ್ಗತ್ತಲೂ ಕವಿದು ಆ ಬೆಟ್ಟವು ಆಕಾಶದ ತುದಿಯವರೆಗೂ ಬೆಂಕಿಯಿಂದ ಉರಿಯಿತು.
N'a di yo ki jan nou te pwoche bò pye mòn lan. Lè sa a, gwo flanm dife t'ap soti sou mòn lan, yo t'ap moute byen wo nan syèl la.
12 ೧೨ ಆಗ ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದನು. ಆತನು ಮಾತನಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸಲ್ಲಿಲ್ಲ.
Seyè a rete nan mitan dife a li pale ak nou. Se bri bouch li ase nou te tande ap pale.
13 ೧೩ ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು.
Seyè a te fè nou konnen kontra li te pase ak nou an. Li mande nou pou nou kenbe l'. Li te ekri dis kòmandman yo sou de wòch plat yo, li mande pou nou swiv yo.
14 ೧೪ ನೀವು ನದಿ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದನ್ನು ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು.
Lè sa a, Seyè a pase m' lòd pou m' moutre nou tout lwa ak tout prensip nou gen pou nou swiv nan peyi kote nou pral antre a, peyi nou pral pran pou nou an.
15 ೧೫ ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.
Veye kò nou, tande! Se pou byen nou wi! Lè Seyè a te pale ak nou nan mitan dife a, sou mòn Orèb la, nou pa t' wè anyen ki ta sanble ak yon bagay.
16 ೧೬ ನೀವು ಸ್ತ್ರೀಪುರುಷರ ರೂಪವನ್ನಾಗಲಿ,
Piga nou fè sa nou pa dwe fè. Piga n' al fè ankenn zidòl pou nou adore, kit li gen fòm gason, osinon fòm fanm,
17 ೧೭ ಭೂಮಿಯ ಮೇಲೆ ಸಂಚರಿಸುವ ಮೃಗದ ರೂಪವನ್ನಾಗಲಿ, ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪವನ್ನಾಗಲಿ,
kit li gen fòm zannimo oswa fòm zwazo,
18 ೧೮ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪವನ್ನಾಗಲಿ ಮತ್ತು ಭೂಮಿಯ ಕೆಳಗಣ ನೀರಿನಲ್ಲಿರುವ ಮೀನಿನ ರೂಪವನ್ನಾಗಲಿ ದೇವರ ಸ್ವರೂಪವೆಂದು ಮಾಡಿಕೊಂಡು ಭ್ರಷ್ಟರಾಗಬಾರದು.
kit li gen fòm bèt k'ap trennen sou vant yo osinon fòm pwason.
19 ೧೯ ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.
Konsa tou, lè nou leve je nou nan syèl la, nou wè solèy la, lalin lan, zetwal yo ak tout lòt bagay ki anwo nan syèl la. Pa kite yo vire tèt nou pou nou fè sèvis pou yo. Pa al mete ajenou devan yo. Bondye mete yo la pou sèvis tout moun ki sou latè.
20 ೨೦ ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.
Kanta nou menm, Seyè a te pran nou, li fè nou soti kite peyi Lejip ki te pou nou tankou yon gwo fou dife kote yo fonn fè, epi li fè nou tounen sa nou ye koulye a: yon pèp ki rele l' pa l'.
21 ೨೧ ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ,
Men, Seyè a, Bondye nou an, te fache sou mwen poutèt nou. Li fè sèman li p'ap kite m' janbe lòt bò larivyè Jouden an, ni li p'ap kite m' mete pwent pye m' nan bon peyi li menm, Seyè a, Bondye nou an, ap fè nou kado a.
22 ೨೨ ಇಲ್ಲಿಯೇ ಸಾಯಬೇಕೆಂದು ಖಂಡಿತವಾಗಿ ಹೇಳಿದನು. ನೀವಾದರೋ ನದಿದಾಟಿ ಆ ಒಳ್ಳೆಯ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
Se konsa, mwen menm, m'ap mouri bò isit la, mwen p'ap janbe lòt bò larivyè Jouden an. Men, nou menm, n'ap janbe lòt bò larivyè a, nou pral pran bon peyi sa a pou nou.
23 ೨೩ ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.
Veye kò nou pou nou pa janm bliye kontra Seyè a, Bondye nou an, te pase ak nou an. Piga nou janm fè ankenn zidòl, ankenn pòtre bagay Seyè a, Bondye nou an, te defann nou fè.
24 ೨೪ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.
Paske Seyè a, Bondye nou an, se yon Bondye ki fè jalouzi anpil, li tankou yon dife k'ap boule tout bagay kote l' pase.
25 ೨೫ ನೀವು ಮಕ್ಕಳನ್ನೂ ಮತ್ತು ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು, ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ,
Lè n'a gen pitit ak pitit pitit, lè n'a fin vye granmoun nan peyi a, piga nou fè sa nou pa t' dwe fè. Piga nou fè estati osinon pòtre ankenn bagay pou nou fè sèvis pou yo. Piga nou fè sa ki mal nan je Seyè a, Bondye nou an, pou nou fè l' fache.
26 ೨೬ ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.
Si nou fè bagay konsa, men m'ap pran syèl la ak latè a pou temwen pou yo tande sa m'ap di nou jòdi a: N'ap rete konsa, n'ap disparèt nan peyi nou pral pran pou nou lòt bò larivyè Jouden an. Nou p'ap rete lontan nan peyi a, paske nou tout pral disparèt nèt.
27 ೨೭ ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.
Seyè a pral gaye nou toupatou nan mitan lòt nasyon yo. Se yon ti ponyen moun ase nan nou ki p'ap mouri nan peyi kote Seyè a pral mennen nou an.
28 ೨೮ ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.
Lè n'a rive nan peyi sa yo, nou pral fè sèvis pou bondye moun fè ak men yo, pou zidòl fèt an bwa, osinon an wòch, zidòl ki pa ka wè, ki pa ka tande, ki pa ka manje, ki pa ka pran sant anyen.
29 ೨೯ ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.
Men, lè sa a, n'a pran chache Seyè a, Bondye nou an. Si nou chache l' ak tout kè nou, n'a jwenn li.
30 ೩೦ ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.
Men, lè n'a gen kè sere, lè tout bagay sa yo va rive nou vre, bout pou bout yon jou n'a tounen nan pye Seyè a, Bondye nou an. N'a koute tou sa l' t'ap di nou an.
31 ೩೧ ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ.
Paske Seyè a, Bondye nou an, se yon Bondye ki gen bon kè, li p'ap lage nou, ni li p'ap detwi nou. Li p'ap janm bliye kontra li menm li te pase ak zansèt nou yo, kontra li te fè sèman l'ap toujou kenbe a.
32 ೩೨ ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.
Chache konnen sa ki te pase nan tan lontan, nan tan ki te la anvan nou te fèt, depi lè Bondye te mete moun sou latè. Ale toupatou sou latè, mande si yon gwo bagay konsa te janm rive. Eske yo janm tande yon gwo koze tankou koze sa a?
33 ೩೩ ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?
Eske janm gen yon pèp ki te tande Bondye rete nan mitan dife pou pale ak yo, jan nou menm nou te tande l' la, epi ki pa mouri apre sa?
34 ೩೪ ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.
Eske te janm gen yon bondye ki te penmèt li al chache yon pèp nan mitan yon lòt pèp pou fè li tounen pèp pa li, yon bondye ki te janm fè tout mirak ak tout bèl bagay sa yo, yon bondye ki te janm goumen tout goumen sa yo ak fòs ponyèt li, ak gwo kouraj li epi ki te fè anpil bagay pou fè moun tranble jan Seyè a, Bondye nou an, te fè l' pou nou devan je nou nan peyi Lejip la?
35 ೩೫ ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಿದ್ದಾನೆ.
Se nou menm sèl Seyè a te fè wè tou sa pou nou te ka konnen se Seyè a ki sèl Bondye tout bon an, pa gen lòt ankò.
36 ೩೬ ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.
Li rete nan syèl la, li fè nou tande vwa l' pou l' te ka moutre nou anpil bagay. Sou latè menm, li fè nou wè yon gwo dife, epi li rete nan mitan dife a, li pale ak nou.
37 ೩೭ ಆತನು ನಿಮ್ಮ ಪೂರ್ವಿಕರನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನು ಆರಿಸಿಕೊಂಡು,
Li te renmen zansèt nou yo, li te chwazi pitit pitit yo apre yo, kifè li te fè yo santi li la ak yo, li fè yo wè gwo pouvwa li, li fè yo soti kite peyi Lejip.
38 ೩೮ ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು ಸಂಕಲ್ಪಿಸಿ, ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.
Lèfini, li fè yon bann nasyon ki pi gran, ki pi fò pase nou kouri mete deyò pou fè plas ban nou. Li fè nou antre nan peyi yo. Li ban nou yo pou yo rele nou pa nou, jan sa ye jouk jòdi a.
39 ೩೯ ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.
Bon. Koulye a, konprann sa byen. Pa janm bliye se Seyè a ki Bondye anwo nan syèl la ak isit la sou latè. Wi, se li menm, pa gen lòt.
40 ೪೦ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.
Se pou nou swiv tout lòd ak tout kòmandman mwen ban nou jòdi a. Konsa, ni nou menm, ni tout pitit nou yo apre nou, n'a viv lontan ak kè kontan nan peyi Seyè a, Bondye nou an, ap ban nou pou rele nou pa nou pou tout tan.
41 ೪೧ ಆ ಕಾಲದಲ್ಲಿ ಮೋಶೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ಪಟ್ಟಣಗಳನ್ನು ಗೊತ್ತುಮಾಡಿದನು.
Apre sa, Moyiz chwazi twa lavil lòt bò larivyè Jouden, sou bò solèy leve,
42 ೪೨ ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇಮಿಸಿದನು.
lavil kote moun gen dwa kouri al kache si li ta touye yon moun pèp Izrayèl parèy li san li pa fè espre, san li pa janm gen anyen avè l'. Li gen dwa al kache kò l' nan yonn nan lavil sa yo pou yo pa touye l'.
43 ೪೩ ಅವು ಯಾವುವೆಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್ ಮತ್ತು ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಪಟ್ಟಣಗಳು.
Pou moun branch fanmi Woubenn yo, se te lavil Bezè nan dezè ki anwo sou platon an. Pou moun branch fanmi Gad yo, se te lavil Ramòt nan zòn Galarad la. Pou moun fanmi Manase yo, se te lavil Golan nan peyi Bazan.
44 ೪೪ ಮೋಶೆ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವು ಇದೇ.
Men lalwa Moyiz te mete devan moun pèp Izrayèl yo.
45 ೪೫ ಇಸ್ರಾಯೇಲರು ಐಗುಪ್ತ ದೇಶದಿಂದ ಬಂದಾಗ ಮೋಶೆಯು ಇಸ್ರಾಯೇಲರಿಗೆ ತಿಳಿಸಿದ ಆಜ್ಞಾವಿಧಿನಿಯಮಗಳು ಇವೇ.
Men kòmandman, lòd ak prensip Moyiz te ba yo apre yo te fin soti kite peyi Lejip.
46 ೪೬ ಅವರು ಯೊರ್ದನ್ ನದಿಯ ಆಚೆ ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದರು. ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯೂ ಮತ್ತು ಇಸ್ರಾಯೇಲರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.
Lè sa a, yo te deja rive lòt bò larivyè Jouden, sou bò solèy leve, nan fon ki anfas Bètpeyò a, nan peyi wa Siyon an. Siyon sa a te wa peyi Amori a, li te rete lavil Esbon. Men, Moyiz ak moun pèp Izrayèl yo te bat li apre yo te fin soti kite peyi Lejip la.
47 ೪೭ ಅವರು ಅವನ ರಾಜ್ಯವನ್ನೂ, ಬಾಷಾನ್ ದೇಶದ ಅರಸನಾದ ಓಗನ ರಾಜ್ಯವನ್ನೂ ಮತ್ತು ಯೊರ್ದನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನು ಗೆದ್ದುಕೊಂಡಿದ್ದರು.
Yo pran peyi a nan men l'. Yo fè menm bagay la tou nan peyi Bazan, kote wa Og t'ap gouvènen an. De wa peyi Amori sa yo t'ap viv lòt bò larivyè Jouden, sou bò solèy leve.
48 ೪೮ ಅಂತು ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮೊದಲುಗೊಂಡು ಹೆರ್ಮೋನ್ ಎಂಬ ಸೀಯೋನ್ ಪರ್ವತದವರೆಗೂ ಮತ್ತು
Peyi yo te pran an te konmanse depi lavil Awoyè ki sou tèt falèz toupre larivyè Anon an, li rive jouk mòn Siryon. Yo rele mòn sa a mòn Emon tou.
49 ೪೯ ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬ್ ಸಮುದ್ರದ ವರೆಗೆ ಯೊರ್ದನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು.
Yo te pran tou tout zòn Araba a, ki sou bò solèy leve larivyè Jouden an, rive lanmè Mouri a nan pye mòn Pisga.