< ಧರ್ಮೋಪದೇಶಕಾಂಡ 5 >

1 ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.
וַיִּקְרָ֣א מֹשֶׁה֮ אֶל־כָּל־יִשְׂרָאֵל֒ וַיֹּ֣אמֶר אֲלֵהֶ֗ם שְׁמַ֤ע יִשְׂרָאֵל֙ אֶת־הַחֻקִּ֣ים וְאֶת־הַמִּשְׁפָּטִ֔ים אֲשֶׁ֧ר אָנֹכִ֛י דֹּבֵ֥ר בְּאָזְנֵיכֶ֖ם הַיֹּ֑ום וּלְמַדְתֶּ֣ם אֹתָ֔ם וּשְׁמַרְתֶּ֖ם לַעֲשֹׂתָֽם׃
2 ನಮ್ಮ ದೇವರಾದ ಯೆಹೋವನು ಹೋರೇಬಿನಲ್ಲಿ ನಮ್ಮ ಸಂಗಡ ನಿಬಂಧನೆಯನ್ನು ಮಾಡಿದನು.
יְהוָ֣ה אֱלֹהֵ֗ינוּ כָּרַ֥ת עִמָּ֛נוּ בְּרִ֖ית בְּחֹרֵֽב׃
3 ಆತನು ನಮ್ಮ ಪೂರ್ವಿಕರ ಸಂಗಡ ಈ ನಿಬಂಧನೆಯನ್ನು ಮಾಡದೆ, ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡಲೇ ಇದನ್ನು ಮಾಡಿದನು.
לֹ֣א אֶת־אֲבֹתֵ֔ינוּ כָּרַ֥ת יְהוָ֖ה אֶת־הַבְּרִ֣ית הַזֹּ֑את כִּ֣י אִתָּ֗נוּ אֲנַ֨חְנוּ אֵ֥לֶּה פֹ֛ה הַיֹּ֖ום כֻּלָּ֥נוּ חַיִּֽים׃
4 ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ಞಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತನಾಡಿದನು.
פָּנִ֣ים ׀ בְּפָנִ֗ים דִּבֶּ֨ר יְהוָ֧ה עִמָּכֶ֛ם בָּהָ֖ר מִתֹּ֥וךְ הָאֵֽשׁ׃
5 ನೀವು ಆ ಬೆಂಕಿಯ ಜ್ವಾಲೆಯ ದೆಸೆಯಿಂದ ಭಯಪಟ್ಟು, ಬೆಟ್ಟವನ್ನು ಹತ್ತದೆ ಇದ್ದುದರಿಂದ ನಾನು ಯೆಹೋವನಿಗೂ ಮತ್ತು ನಿಮಗೂ ನಡುವೆ ನಿಂತು ಆತನು ಹೇಳಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಆತನು ಹೇಳಿದ್ದೇನೆಂದರೆ,
אָ֠נֹכִי עֹמֵ֨ד בֵּין־יְהוָ֤ה וּבֵֽינֵיכֶם֙ בָּעֵ֣ת הַהִ֔וא לְהַגִּ֥יד לָכֶ֖ם אֶת־דְּבַ֣ר יְהוָ֑ה כִּ֤י יְרֵאתֶם֙ מִפְּנֵ֣י הָאֵ֔שׁ וְלֹֽא־עֲלִיתֶ֥ם בָּהָ֖ר לֵאמֹֽר׃ ס
6 “ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.
אָֽנֹכִי֙ יְהוָ֣ה אֱלֹהֶ֔יךָ אֲשֶׁ֧ר הֹוצֵאתִ֛יךָ מֵאֶ֥רֶץ מִצְרַ֖יִם מִבֵּ֣ית עֲבָדִֽ֑ים׃
7 ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.
לֹ֣א יִהְיֶ֥ה־לְךָ֛֩ אֱלֹהִ֥֨ים אֲחֵרִ֖֜ים עַל־פָּנָֽ֗יַ׃
8 “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.
לֹֽ֣א־תַעֲשֶׂ֥ה־לְךָ֥֣ פֶ֣֙סֶל֙ ׀ כָּל־תְּמוּנָ֔֡ה אֲשֶׁ֤֣ר בַּשָּׁמַ֣֙יִם֙ ׀ מִמַּ֔֡עַל וַאֲשֶׁ֥ר֩ בָּאָ֖֨רֶץ מִתָּ֑֜חַת וַאֲשֶׁ֥ר בַּמַּ֖֣יִם ׀ מִתַּ֥֣חַת לָאָֽ֗רֶץ׃
9 ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.
לֹא־תִשְׁתַּחֲוֶ֥֣ה לָהֶ֖ם֮ וְלֹ֣א תָעָבְדֵ֑ם֒ כִּ֣י אָנֹכִ֞י יְהוָ֤ה אֱלֹהֶ֙יךָ֙ אֵ֣ל קַנָּ֔א פֹּ֠קֵד עֲוֹ֨ן אָבֹ֧ות עַל־בָּנִ֛ים וְעַל־שִׁלֵּשִׁ֥ים וְעַל־רִבֵּעִ֖ים לְשֹׂנְאָֽ֑י׃
10 ೧೦ ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೋಸ್ಕರ ಸಾವಿರ ತಲೆಗಳವರೆಗೆ ದಯೆತೋರಿಸುವವನಾಗಿಯೂ ಇದ್ದೇನೆ.
וְעֹ֤֥שֶׂה חֶ֖֙סֶד֙ לֽ͏ַאֲלָפִ֑֔ים לְאֹהֲבַ֖י וּלְשֹׁמְרֵ֥י מִצְוֹתֹו (מִצְוֹתָֽי)׃ ס
11 ೧೧ “ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
לֹ֥א תִשָּׂ֛א אֶת־שֵֽׁם־יְהוָ֥ה אֱלֹהֶ֖יךָ לַשָּׁ֑וְא כִּ֣י לֹ֤א יְנַקֶּה֙ יְהוָ֔ה אֵ֛ת אֲשֶׁר־יִשָּׂ֥א אֶת־שְׁמֹ֖ו לַשָּֽׁוְא׃ ס
12 ೧೨ “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್‍ ದಿನವನ್ನು ದೇವರ ದಿನವೆಂದು ಆಚರಿಸಬೇಕು.
שָׁמֹ֣֛ור אֶת־יֹ֥ום֩ הַשַּׁבָּ֖֨ת לְקַדְּשֹׁ֑֜ו כַּאֲשֶׁ֥ר צִוְּךָ֖֣ ׀ יְהוָ֥֣ה אֱלֹהֶֽ֗יךָ
13 ೧೩ ಆರು ದಿನಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.
שֵׁ֤֣שֶׁת יָמִ֣ים֙ תּֽ͏ַעֲבֹ֔ד֮ וְעָשִׂ֖֣יתָ כָּֿל־מְלַאכְתֶּֽךָ֒׃
14 ೧೪ ಏಳನೆಯ ದಿನ ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ, ಪಶುಗಳು ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.
וְיֹ֙ום֙ הַשְּׁבִיעִ֜֔י שַׁבָּ֖֣ת ׀ לַיהוָ֖֣ה אֱלֹהֶ֑֗יךָ לֹ֣א תַעֲשֶׂ֣ה כָל־מְלָאכָ֡ה אַתָּ֣ה וּבִנְךָֽ־וּבִתֶּ֣ךָ וְעַבְדְּךָֽ־וַ֠אֲמָתֶךָ וְשֹׁורְךָ֨ וַחֲמֹֽרְךָ֜ וְכָל־בְּהֶמְתֶּ֗ךָ וְגֵֽרְךָ֙ אֲשֶׁ֣ר בִּשְׁעָרֶ֔יךָ לְמַ֗עַן יָנ֛וּחַ עַבְדְּךָ֥ וַאֲמָתְךָ֖ כָּמֹֽ֑וךָ׃
15 ೧೫ ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್‍ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.
וְזָכַרְתָּ֞֗ כִּ֣י־עֶ֤֥בֶד הָיִ֣֙יתָ֙ ׀ בְּאֶ֣רֶץ מִצְרַ֔֗יִם וַיֹּצִ֨אֲךָ֜֩ יְהוָ֤֨ה אֱלֹהֶ֤֙יךָ֙ מִשָּׁ֔ם֙ בְּיָ֤֥ד חֲזָקָ֖ה֙ וּבִזְרֹ֣עַ נְטוּיָ֑֔ה עַל־כֵּ֗ן צִוְּךָ֙ יְהוָ֣ה אֱלֹהֶ֔יךָ לַעֲשֹׂ֖ות אֶת־יֹ֥ום הַשַּׁבָּֽת׃ ס
16 ೧೬ “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.
כַּבֵּ֤ד אֶת־אָבִ֙יךָ֙ וְאֶת־אִמֶּ֔ךָ כַּאֲשֶׁ֥ר צִוְּךָ֖ יְהוָ֣ה אֱלֹהֶ֑יךָ לְמַ֣עַן ׀ יַאֲרִיכֻ֣ן יָמֶ֗יךָ וּלְמַ֙עַן֙ יִ֣יטַב לָ֔ךְ עַ֚ל הָֽאֲדָמָ֔ה אֲשֶׁר־יְהוָ֥ה אֱלֹהֶ֖יךָ נֹתֵ֥ן לָֽךְ׃ ס
17 ೧೭ “ನರಹತ್ಯ ಮಾಡಬಾರದು.
לֹ֥֖א תִּֿרְצָֽח׃ ס
18 ೧೮ “ವ್ಯಭಿಚಾರ ಮಾಡಬಾರದು.
וְלֹ֖֣א תִּֿנְאָֽ֑ף׃ ס
19 ೧೯ “ಕದಿಯಬಾರದು.
וְלֹ֖֣א תִּֿגְנֹֽ֔ב׃ ס
20 ೨೦ “ಮತ್ತೊಬ್ಬನ ಮೇಲೆ ಸುಳ್ಳು ಸಾಕ್ಷಿ ಹೇಳಬಾರದು.
וְלֹֽא־תַעֲנֶ֥ה בְרֵֽעֲךָ֖ עֵ֥ד שָֽׁוְא׃ ס
21 ೨೧ “ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.”
וְלֹ֥א תַחְמֹ֖ד אֵ֣שֶׁת רֵעֶ֑ךָ ס וְלֹ֨א תִתְאַוֶּ֜ה בֵּ֣ית רֵעֶ֗ךָ שָׂדֵ֜הוּ וְעַבְדֹּ֤ו וַאֲמָתֹו֙ שֹׁורֹ֣ו וַחֲמֹרֹ֔ו וְכֹ֖ל אֲשֶׁ֥ר לְרֵעֶֽךָ׃ ס
22 ೨೨ ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.
אֶֽת־הַדְּבָרִ֣ים הָאֵ֡לֶּה דִּבֶּר֩ יְהוָ֨ה אֶל־כָּל־קְהַלְכֶ֜ם בָּהָ֗ר מִתֹּ֤וךְ הָאֵשׁ֙ הֶֽעָנָ֣ן וְהָֽעֲרָפֶ֔ל קֹ֥ול גָּדֹ֖ול וְלֹ֣א יָסָ֑ף וַֽיִּכְתְּבֵ֗ם עַל־שְׁנֵי֙ לֻחֹ֣ת אֲבָנִ֔ים וַֽיִּתְּנֵ֖ם אֵלָֽי׃
23 ೨೩ ಆ ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ ಆ ಕತ್ತಲೊಳಗಿಂದ ದೇವರ ಸ್ವರವನ್ನು ಕೇಳಿ, ನೀವು ಅಂದರೆ ನಿಮ್ಮ ಕುಲಾಧಿಪತಿಗಳೂ ಮತ್ತು ಹಿರಿಯರೂ ನನ್ನ ಬಳಿಗೆ ಬಂದು,
וַיְהִ֗י כְּשָׁמְעֲכֶ֤ם אֶת־הַקֹּול֙ מִתֹּ֣וךְ הַחֹ֔שֶׁךְ וְהָהָ֖ר בֹּעֵ֣ר בָּאֵ֑שׁ וַתִּקְרְב֣וּן אֵלַ֔י כָּל־רָאשֵׁ֥י שִׁבְטֵיכֶ֖ם וְזִקְנֵיכֶֽם׃
24 ೨೪ “ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಈ ಹೊತ್ತು ನಮಗೆ ತಿಳಿಯಬಂತು.
וַתֹּאמְר֗וּ הֵ֣ן הֶרְאָ֜נוּ יְהוָ֤ה אֱלֹהֵ֙ינוּ֙ אֶת־כְּבֹדֹ֣ו וְאֶת־גָּדְלֹ֔ו וְאֶת־קֹלֹ֥ו שָׁמַ֖עְנוּ מִתֹּ֣וךְ הָאֵ֑שׁ הַיֹּ֤ום הַזֶּה֙ רָאִ֔ינוּ כִּֽי־יְדַבֵּ֧ר אֱלֹהִ֛ים אֶת־הָֽאָדָ֖ם וָחָֽי׃
25 ೨೫ ಆದರೂ ಈ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿ ಬಿಟ್ಟಿತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ಪುನಃ ಕೇಳಿದರೆ ಸತ್ತೇವು.
וְעַתָּה֙ לָ֣מָּה נָמ֔וּת כִּ֣י תֹֽאכְלֵ֔נוּ הָאֵ֥שׁ הַגְּדֹלָ֖ה הַזֹּ֑את אִם־יֹסְפִ֣ים ׀ אֲנַ֗חְנוּ לִ֠שְׁמֹעַ אֶת־קֹ֨ול יְהוָ֧ה אֱלֹהֵ֛ינוּ עֹ֖וד וָמָֽתְנוּ׃
26 ೨೬ ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?
כִּ֣י מִ֣י כָל־בָּשָׂ֡ר אֲשֶׁ֣ר שָׁמַ֣ע קֹול֩ אֱלֹהִ֨ים חַיִּ֜ים מְדַבֵּ֧ר מִתֹּוךְ־הָאֵ֛שׁ כָּמֹ֖נוּ וַיֶּֽחִי׃
27 ೨೭ ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು” ಎಂದು ಹೇಳಿದಿರಿ.
קְרַ֤ב אַתָּה֙ וּֽשֲׁמָ֔ע אֵ֛ת כָּל־אֲשֶׁ֥ר יֹאמַ֖ר יְהוָ֣ה אֱלֹהֵ֑ינוּ וְאַ֣תְּ ׀ תְּדַבֵּ֣ר אֵלֵ֗ינוּ אֵת֩ כָּל־אֲשֶׁ֨ר יְדַבֵּ֜ר יְהוָ֧ה אֱלֹהֵ֛ינוּ אֵלֶ֖יךָ וְשָׁמַ֥עְנוּ וְעָשִֽׂינוּ׃
28 ೨೮ ನಿಮ್ಮ ಮಾತುಗಳನ್ನು ಯೆಹೋವನು ಕೇಳಿ ನನಗೆ, “ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಆ ಮಾತುಗಳೆಲ್ಲಾ ಒಳ್ಳೆಯವೇ.
וַיִּשְׁמַ֤ע יְהוָה֙ אֶת־קֹ֣ול דִּבְרֵיכֶ֔ם בְּדַבֶּרְכֶ֖ם אֵלָ֑י וַיֹּ֨אמֶר יְהוָ֜ה אֵלַ֗י שָׁ֠מַעְתִּי אֶת־קֹ֨ול דִּבְרֵ֜י הָעָ֤ם הַזֶּה֙ אֲשֶׁ֣ר דִּבְּר֣וּ אֵלֶ֔יךָ הֵיטִ֖יבוּ כָּל־אֲשֶׁ֥ר דִּבֵּֽרוּ׃
29 ೨೯ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”
מִֽי־יִתֵּ֡ן וְהָיָה֩ לְבָבָ֨ם זֶ֜ה לָהֶ֗ם לְיִרְאָ֥ה אֹתִ֛י וְלִשְׁמֹ֥ר אֶת־כָּל־מִצְוֹתַ֖י כָּל־הַיָּמִ֑ים לְמַ֨עַן יִיטַ֥ב לָהֶ֛ם וְלִבְנֵיהֶ֖ם לְעֹלָֽם׃
30 ೩೦ “‘ನಿಮ್ಮ ನಿಮ್ಮ ಡೇರೆಗಳಿಗೆ ಹಿಂತಿರುಗಿ ಹೋಗಿರಿ’ ಎಂದು ಅವರಿಗೆ ಆಜ್ಞಾಪಿಸು.
לֵ֖ךְ אֱמֹ֣ר לָהֶ֑ם שׁ֥וּבוּ לָכֶ֖ם לְאָהֳלֵיכֶֽם׃
31 ೩೧ ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು” ಎಂದು ಹೇಳಿದನು.
וְאַתָּ֗ה פֹּה֮ עֲמֹ֣ד עִמָּדִי֒ וַאֲדַבְּרָ֣ה אֵלֶ֗יךָ אֵ֧ת כָּל־הַמִּצְוָ֛ה וְהַחֻקִּ֥ים וְהַמִּשְׁפָּטִ֖ים אֲשֶׁ֣ר תְּלַמְּדֵ֑ם וְעָשׂ֣וּ בָאָ֔רֶץ אֲשֶׁ֧ר אָנֹכִ֛י נֹתֵ֥ן לָהֶ֖ם לְרִשְׁתָּֽהּ׃
32 ೩೨ ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.
וּשְׁמַרְתֶּ֣ם לַעֲשֹׂ֔ות כַּאֲשֶׁ֥ר צִוָּ֛ה יְהוָ֥ה אֱלֹהֵיכֶ֖ם אֶתְכֶ֑ם לֹ֥א תָסֻ֖רוּ יָמִ֥ין וּשְׂמֹֽאל׃
33 ೩೩ ಆಗ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಸುಕ್ಷೇಮದಿಂದ ಬದುಕಿಕೊಳ್ಳುವಂತೆ, ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.
בְּכָל־הַדֶּ֗רֶךְ אֲשֶׁ֨ר צִוָּ֜ה יְהוָ֧ה אֱלֹהֵיכֶ֛ם אֶתְכֶ֖ם תֵּלֵ֑כוּ לְמַ֤עַן תִּֽחְיוּן֙ וְטֹ֣וב לָכֶ֔ם וְהַאֲרַכְתֶּ֣ם יָמִ֔ים בָּאָ֖רֶץ אֲשֶׁ֥ר תִּֽירָשֽׁוּן׃

< ಧರ್ಮೋಪದೇಶಕಾಂಡ 5 >