< ಧರ್ಮೋಪದೇಶಕಾಂಡ 7 >
1 ೧ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.
१जो देश वतन करून घ्यायला तुम्ही निघाला आहात तेथे तुमचा देव परमेश्वर तुम्हास नेईल. आणि हित्ती, गिर्गाशी, अमोरी, कनानी, परिज्जी, हिव्वी, यबूसी अशा तुमच्यापेक्षा मोठ्या आणि बलाढ्य अशा सात राष्ट्रांना तुमच्यासमोरून घालवून देईल.
2 ೨ ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.
२तुमचा देव परमेश्वर त्यांना तुमच्या अधिपत्याखाली आणेल आणि तुम्ही त्यांचा पराभव कराल तेव्हा तुम्ही त्यांचा समूळ विध्वंस करा. त्यांच्याशी कुठलाही करार करु नका. त्यांना दया दाखवू नका.
3 ೩ ಅವರೊಡನೆ ಬೀಗತನಮಾಡಬಾರದು; ಅವರ ಗಂಡು ಮಕ್ಕಳಿಗೆ ನಿಮ್ಮ ಹೆಣ್ಣುಮಕ್ಕಳನ್ನು ಕೊಡಲೂಬಾರದು ಮತ್ತು ಅವರ ಹೆಣ್ಣುಮಕ್ಕಳನ್ನು ನಿಮ್ಮ ಗಂಡುಮಕ್ಕಳಿಗೆ ತರಲೂಬಾರದು.
३त्यांच्याशी सोयरीक जुळवू नका. आपल्या मुली त्यांना देऊ नका. त्याच्या मुली आपल्या मुलांना करून घेऊ नका.
4 ೪ ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ಯ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು.
४कारण ते लोक तुमच्या मुलांना माझ्यापासून विचलीत करतील. त्यामुळे तुमची मुले अन्य दैवतांचे भजन पूजन करतील. अशाने परमेश्वराचा तुमच्यावर कोप होईल व तो तात्काळ तुमचा नाश करील. खोट्या देवांचा नाश करा
5 ೫ ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
५त्या देशात तुम्ही असे करा. त्यांच्या वेद्या पाडून टाका. त्यांचे स्मारकस्तंभ फोडून टाका. अशेरा दैवताचे स्तंभ उपटून टाका, मूर्ती जाळून टाका.
6 ೬ ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.
६कारण तुम्ही तुमचा देव परमेश्वराची पवित्र प्रजा आहात. जगाच्या पाठीवरील सर्व लोकांमधून त्याने आपली खास प्रजा म्हणून तुमचीच निवड केली आहे.
7 ೭ ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಜನರು ಎಂದು ಇಷ್ಟಪಟ್ಟು ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಅಲ್ಪಸಂಖ್ಯಾತರು.
७परमेश्वराने प्रेमाने तुम्हासच का निवडले? तुम्ही एखाद्या मोठ्या राष्ट्रातील होता म्हणून नव्हे. उलट तुम्ही संख्येने सगळ्यात कमी होता.
8 ೮ ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.
८पण सर्व सामर्थ्यानिशी तुम्हास दास्यातून मुक्त करून परमेश्वराने तुम्हास मिसर देशाबाहेर आणले, फारो राजाच्या अंमलातून सुटका केली. याचे कारण हेच की तुमच्यावर त्याचे प्रेम आहे आणि तुमची पूर्वजांना दिलेले वचन त्यास पाळायचे होते.
9 ೯ ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು
९तेव्हा लक्षात ठेवा तुमचा देव परमेश्वर हाच एक देव आहे. त्यावर विश्वास ठेवा. तो आपला करार पाळतो. त्याच्यावर प्रेम करणाऱ्या आणि त्याच्या आज्ञा पाळणाऱ्या लोकांवर व त्यांच्या पुढच्या हजारो पिढ्यांवर तो दया करतो.
10 ೧೦ ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.
१०पण त्याचा द्वेष करणाऱ्यांना तो शासन करतो. तो त्यांचा नाश करील. त्याचा द्वेष करणाऱ्यांना शासन करण्यास तो विलंब करणार नाही.
11 ೧೧ ಆದಕಾರಣ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು.
११तेव्हा ज्या आज्ञा व विधी, नियम आज मी सांगितले त्यांचे काळजीपूर्वक पालन करा.
12 ೧೨ ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ಒಡಂಬಡಿಕೆಯನ್ನು ನಂಬಿಗಸ್ತಿಕೆಯಿಂದ ನೆರವೇರಿಸುವವನಾಗಿದ್ದಾನೆ.
१२मग असे होईल की, तुम्ही हे विधी ऐकले, पाळले, व आचरले तर त्यामुळे तुमचा देव परमेश्वर याने तुमच्या पुर्वजांशी शपथपूर्वक केलेला करार व प्रेमदया तो तुमच्यावरही राखील.
13 ೧೩ ಆತನು ನಿಮ್ಮನ್ನು ಪ್ರೀತಿಸಿ, ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ, ವ್ಯವಸಾಯವನ್ನೂ, ನಿಮಗಿರುವ ದವಸ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ನಿಮ್ಮ ದನ ಮತ್ತು ಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.
१३तो तुमच्यावर प्रेम करील, तुम्हास आशीर्वाद देईल. तुमच्या राष्ट्राची तो वाढ करील. तो तुमच्या मुलाबाळांना आर्शीवाद देईल. तुमची शेते पिके तो आशीर्वादीत करील. तो तुम्हास धान्य, नवीन द्राक्षरस व तेल देईल. तुमची गुरेढोरे व शेरडेमेंढरे ह्यांना तो आशीर्वाद देईल. तुमच्या पूर्वजांना वचन दिलेल्या प्रदेशात हे सर्व आशीर्वाद तो तुम्हास देईल.
14 ೧೪ ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ, ಹೆಣ್ಣುಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ.
१४इतरांपेक्षा तुम्ही जास्त आशीर्वादीत व्हाल. प्रत्येक दांपत्याला मुले आणि मुली होतील. गाई वासरांना जन्म देतील.
15 ೧೫ ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.
१५परमेश्वर सर्व आजार काढून टाकील. मिसर देशात तुम्हास माहीत असलेली कोणतीही भयंकर रोगराई इथे होणार नाही. हे रोग परमेश्वर तुमच्या शत्रूंवर आणील.
16 ೧೬ ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.
१६तुमचा देव परमेश्वर ह्याने तुमच्या हाती सोपवलेल्या सर्वांचा तुम्ही पराभव करून विध्वंस करा. त्यांच्याबाबतीत वाईट वाटून घेऊ नका. त्यांच्या दैवतांची सेवा करु नका. कारण ती दैवते म्हणजे तुम्हास अडकवणारा सापळा आहे. त्याने तुमच्या आयुष्याचा नाश होईल.
17 ೧೭ ಆ ಜನಗಳು ನಮಗಿಂತ ಹೆಚ್ಚಾಗಿದ್ದಾರೆ; ಅವರನ್ನು ಹೊರಡಿಸುವುದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ.
१७ही राष्ट्रे आपल्यापेक्षा बलवान आहेत, त्यांना आम्ही कसे घालवून देऊ असा विचारही मनात आणू नका.
18 ೧೮ ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಮತ್ತು ಐಗುಪ್ತ್ಯರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ.
१८त्यांची मुळीच भीती बाळगू नका. आपल्या परमेश्वर देवाने फारोचे आणि मिसर देशाचे काय केले ते आठवा.
19 ೧೯ ಆಗ ನೀವು ಕಣ್ಣಾರೆ ನೋಡಿದ ಪ್ರಕಾರ ಆತನು ವಿಶೇಷ ಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲಾ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು.
१९त्यांच्यावर कशी भयंकर संकटे आणली, काय चमत्कार केले हे तुम्ही पाहिलेले आहे. तुम्हास मिसर देशा बाहेर काढतानाचे त्याचे प्रताप व सामर्थ्य तुम्हास माहीत आहेत. ज्या लोकांची तुम्हास भीती वाटत आहे त्यांच्याविरुध्द तुमचा देव परमेश्वर असेच सामर्थ्य वापरील.
20 ೨೦ ಅದು ಮಾತ್ರವಲ್ಲದೆ ನಿಮ್ಮ ದೇವರಾದ ಯೆಹೋವನು ಕಣಜದ ಹುಳಗಳನ್ನು ಅವರ ನಡುವೆ ಕಳುಹಿಸುವನು. ಮರೆಯಾಗಿದ್ದು ಉಳಿದವರು ಆ ಹುಳಗಳ ದೆಸೆಯಿಂದ ನಾಶವಾಗಿ ನಿಮಗೆ ಕಾಣದೆ ಹೋಗುವರು.
२०याव्यतिरिक्त, जे तुमच्या तावडीतून निसटतील, लपून बसतील त्यांच्या मागावर परमेश्वर आपला देव गांधीलमाश्या पाठवील. त्यामुळे त्यांचाही नाश होईल.
21 ೨೧ ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ನಮ್ಮ ಭಕ್ತಿಗೆ ಪ್ರತಿಕಾರವಾಗಿ ವಿಸ್ಮಯ ಹುಟ್ಟಿಸುವ ದೇವರಾಗಿದ್ದಾನೆ.
२१तेव्हा त्यांना घाबरु नका. कारण परमेश्वर आपला देव तुमच्याबरोबर आहे. तो महान आणि भययोग्य देव आहे.
22 ೨೨ ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪಸ್ವಲ್ಪವಾಗಿ ಹೊರಟು ಹೋಗುವಂತೆ ಮಾಡುವನು. ನೀವು ಅವರನ್ನು ಒಂದೇ ಬಾರಿಗೆ ನಿರ್ಮೂಲಮಾಡಬಾರದು. ಹಾಗೆ ಮಾಡಿದರೆ ಕಾಡುಮೃಗಗಳು ಹೆಚ್ಚಿ ಅವು ನಿಮಗೆ ತೊಂದರೆಯನ್ನು ಉಂಟುಮಾಡುತ್ತವೆ.
२२त्या राष्ट्रांना आपला देव परमेश्वर हळूहळू घालवून देईल. त्यांचा तुम्ही एकाच वेळी विध्वंस करणार नाही. कारण तसे झाले तर वन्यपशूंची संख्या फार वाढेल व ते तुम्हास त्रास देतील.
23 ೨೩ ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮಿಂದ ಸೋಲಿಸಿ, ಬಹಳವಾಗಿ ಗಲಿಬಿಲಿಮಾಡಿ ಕಡೆಗೆ ಅವರನ್ನು ಇಲ್ಲದಂತೆ ಮಾಡುವನು.
२३पण त्या राष्ट्रांचा बिमोड करण्यात तुमचा देव परमेश्वर तुम्हास साहाय्य करील. युद्धात त्यांच्यात गोंधळ माजवील आणि शेवटी त्यांचा नाश होईल.
24 ೨೪ ಆತನು ಅವರ ಅರಸರನ್ನು ನಿಮ್ಮ ಕೈಗೆ ಸಿಗುವಂತೆ ಮಾಡಿ, ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ; ನೀವು ಎಲ್ಲರನ್ನೂ ನಾಶಮಾಡುವಿರಿ.
२४परमेश्वराच्या मदतीने तुम्ही त्यांच्या राजांचा पराभव कराल, त्यांना ठार कराल आणि जगाच्या आठवणीतूनही ते पुसले जातील. कोणीही तुम्हास अडवू शकणार नाही. तुम्ही सर्वांचा विध्वंस कराल!
25 ೨೫ ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.
२५त्यांच्या दैवतांच्या मूर्ती तुम्ही आगीत टाकून जाळून टाका. त्या मूर्तीवरच्या चांदीसोन्याचा मोह धरू नका, ते घेऊ नका, कारण तो सापळाच आहे, त्याने तुमचे आयुष्य बरबाद होईल. आपला देव परमेश्वर याला त्यांचा वीट आहे.
26 ೨೬ ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.
२६त्या अमंगळ, हानिकारक मूर्ती तुम्ही घरीही आणू नका. त्यांचा अव्हेर कर, कारण ती नाशास पात्र ठरलेली वस्तू आहे.