< ಧರ್ಮೋಪದೇಶಕಾಂಡ 8 >
1 ೧ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿ ಅಭಿವೃದ್ಧಿಹೊಂದುವಿರಿ, ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
౧“మీరు జీవించి, ఫలించి యెహోవా మీ పితరులకు వాగ్దానం చేసిన దేశంలో ప్రవేశించి దాన్ని స్వాధీనం చేసుకునేలా ఈ రోజు నేను మీకు ఆజ్ఞాపించిన ఆజ్ఞలన్నిటిని పాటించాలి.
2 ೨ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.
౨మీరు ఆయన ఆజ్ఞలను పాటిస్తారో లేదో మిమ్మల్ని పరీక్షించి మీ హృదయాన్ని తెలుసుకోడానికీ, మిమ్మల్ని లోబరచుకోడానికీ మీ యెహోవా దేవుడు అరణ్యంలో ఈ 40 సంవత్సరాలు మిమ్మల్ని నడిపించిన సంగతి జ్ఞాపకం చేసుకోండి.
3 ೩ ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.
౩రొట్టె వలన మాత్రమే కాక యెహోవా పలికిన ప్రతి మాట వలన మనుషులు జీవిస్తారని మీకు తెలిసేలా చేయడానికి ఆయన మిమ్మల్ని అణగదొక్కి, మీకు ఆకలి కలిగించి, మీరు గాని, మీ పూర్వీకులు గాని ఎప్పుడూ చూడని మన్నాతో మిమ్మల్ని పోషించాడు.
4 ೪ ಆ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹಳೇಯದಾಗಲಿಲ್ಲ; ನಿಮ್ಮ ಕಾಲುಗಳು ಬಾತುಹೋಗಲಿಲ್ಲ.
౪ఈ 40 సంవత్సరాలు మీరు వేసుకున్న బట్టలు పాతబడిపోలేదు, మీ కాళ్ళు బరువెక్కలేదు.
5 ೫ ತಂದೆಯು ಮಗನನ್ನು ಹೇಗೆ ಶಿಕ್ಷಿಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನು ಎಂಬುವುದನ್ನು ನೀವು ತಿಳಿದುಕೊಳ್ಳಿರಿ.
౫ఒక వ్యక్తి తన సొంత కొడుకుని ఏవిధంగా శిక్షిస్తాడో అదే విధంగా మీ దేవుడైన యెహోవా మిమ్మల్ని శిక్షిస్తాడని మీరు తెలుసుకోవాలి.
6 ೬ ನೀವು ಆತನ ಆಜ್ಞೆಗಳನ್ನು ಅನುಸರಿಸುವವರಾಗಿ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.
౬ఆయన మార్గాల్లో నడుస్తూ ఆయనకు భయపడుతూ మీ యెహోవా దేవుని ఆజ్ఞలను పాటించాలి.
7 ೭ ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬುಗ್ಗೆಗಳಿಂದ ನೀರು ಉಕ್ಕುತ್ತದೆ.
౭ఆయన నిన్ను ప్రవేశపెడుతున్న ఈ మంచి దేశం నీటి వాగులు, లోయలు కొండల నుండి పారే ఊటలు, అగాధ జలాలు గల దేశం.
8 ೮ ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ.
౮దానిలో గోదుమలు, బార్లీ, ద్రాక్షచెట్లు, అంజూరపు చెట్లు, దానిమ్మ పండ్లు ఉంటాయి. అది ఒలీవ నూనె, తేనె లభించే దేశం.
9 ೯ ಅಲ್ಲಿ ನೀವು ದುರ್ಭಿಕ್ಷವನ್ನು ಕಾಣದೆ ಸಮೃದ್ಧಿಯಾಗಿ ಊಟಮಾಡಿ, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು.
౯మీరు తినడానికి ఆహారం పుష్కలంగా లభించే దేశం. అందులో మీకు దేనికీ కొదువ ఉండదు. అది ఇనపరాళ్లు గల దేశం. దాని కొండల్లో మీరు రాగిని తవ్వి తీయవచ్చు.
10 ೧೦ ನೀವು ಹೊಟ್ಟೆ ತುಂಬಾ ಊಟಮಾಡಿ ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟಿದ್ದಕ್ಕಾಗಿ ಆತನನ್ನು ಸ್ತುತಿಸಬೇಕು.
౧౦మీరు తిని తృప్తి పొంది మీ యెహోవా దేవుడు మీకిచ్చిన మంచి దేశాన్నిబట్టి ఆయన్ను స్తుతించాలి.
11 ೧೧ ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿಯಮಗಳನ್ನು ಕೈಕೊಳ್ಳದವರೂ, ಆತನನ್ನು ಮರೆಯುವವರೂ ಆಗಬೇಡಿರಿ.
౧౧ఈ రోజు నేను మీకాజ్ఞాపించే ఆయన ఆజ్ఞలను, విధులను, కట్టడలను నిర్లక్ష్యం చేసి మీ దేవుడైన యెహోవాను మరచిపోకుండా జాగ్రత్త పడండి.
12 ೧೨ ನೀವು ಹೊಟ್ಟೆತುಂಬಾ ಊಟಮಾಡಿ, ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು,
౧౨మీరు కడుపారా తిని, మంచి ఇళ్ళు కట్టించుకుని వాటిలో నివసిస్తారు.
13 ೧೩ ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ ನಿಮ್ಮ ದನಗಳೂ, ಆಡು ಕುರಿಗಳೂ, ನಿಮ್ಮ ಬೆಳ್ಳಿ ಮತ್ತು ಬಂಗಾರವೂ,
౧౩మీ పశువులు, గొర్రెలు, మేకలు వృద్ధి చెంది, మీ వెండి బంగారాలు విస్తరించి, మీకు కలిగినదంతా వర్ధిల్లుతుంది.
14 ೧೪ ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ.
౧౪అప్పుడు మీ మనస్సు గర్వించి, బానిసల ఇల్లైన ఐగుప్తు దేశం నుండి మిమ్మల్ని రప్పించిన మీ దేవుడు యెహోవాను మరచిపోతారేమో.
15 ೧೫ ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ.
౧౫బాధ కలిగించే పాములు, తేళ్లతో నిండి, నీళ్ళు లేని ఎడారిలాంటి భయంకరమైన ఆ గొప్ప అరణ్యంలో ఆయన మిమ్మల్ని నడిపించాడు. రాతిబండ నుండి మీకు నీళ్లు రప్పించాడు.
16 ೧೬ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು
౧౬చివరికి మీకు మేలు చేయాలని ఆయన మిమ్మల్ని అణగదొక్కి, మీకు ఆకలి కలిగించి, మీరు గాని మీ పూర్వీకులు గాని ఎప్పుడూ ఎరగని మన్నాతో మిమ్మల్ని పోషించాడు.
17 ೧೭ ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ.
౧౭అయితే మీరు, ‘మా సామర్ధ్యం, మా బాహుబలమే మాకింత ఐశ్వర్యం కలిగించాయి’ అనుకుంటారేమో.
18 ೧೮ ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.
౧౮కాబట్టి మీరు దేవుడైన యెహోవాను జ్ఞాపకం చేసుకోవాలి. ఎందుకంటే తాను మీ పూర్వీకులతో వాగ్దానం చేసినట్టు తన నిబంధనను ఈ రోజులాగా స్థాపించాలని మీరు ఐశ్వర్యం సంపాదించుకోడానికి మీకు సామర్ధ్యం కలిగించేవాడు ఆయనే.
19 ೧೯ ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.
౧౯మీరు మీ యెహోవా దేవుణ్ణి మరచిపోయి ఇతర దేవుళ్ళను అనుసరించి, వారిని పూజించి నమస్కరిస్తే మీరు తప్పకుండా నశించి పోతారని ఈ రోజు మీ విషయంలో నేను సాక్ష్యం పలుకుతున్నాను.
20 ೨೦ ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಇತರ ಜನಾಂಗಗಳಂತೆಯೇ ನೀವೂ ಆತನಿಂದ ನಾಶವಾಗಿ ಹೋಗುವಿರಿ.
౨౦యెహోవా మీ ఎదుట ఉండకుండా నాశనం చేస్తున్న ఇతర జాతుల ప్రజలు విననట్టు మీ దేవుడైన యెహోవా మాట వినకపోతే మీరు కూడా వారిలాగానే నాశనమౌతారు.”