< ಪ್ರಸಂಗಿ 10 >

1 ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು. ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ.
זְב֣וּבֵי מָ֔וֶת יַבְאִ֥ישׁ יַבִּ֖יעַ שֶׁ֣מֶן רוֹקֵ֑חַ יָקָ֛ר מֵחָכְמָ֥ה מִכָּב֖וֹד סִכְל֥וּת מְעָֽט׃
2 ಜ್ಞಾನಿಯ ಬುದ್ಧಿಯು ಅವನ ಬಲಗಡೆಯಿರುವುದು. ಅಜ್ಞಾನಿಯ ಬುದ್ಧಿಯು ಅವನ ಎಡಗಡೆಯಿರುವುದು.
לֵ֤ב חָכָם֙ לִֽימִינ֔וֹ וְלֵ֥ב כְּסִ֖יל לִשְׂמֹאלֽוֹ׃
3 ಇದಲ್ಲದೆ ಹುಚ್ಚನು ಬುದ್ಧಿತಪ್ಪಿ ತಿರುಗುವ ದಾರಿಯಲ್ಲಿ ತನ್ನ ಹುಚ್ಚುತನವನ್ನು ಎಲ್ಲರಿಗೆ ಪ್ರಕಟಮಾಡುವನು.
וְגַם־בַּדֶּ֛רֶךְ כְּשֶׁסָּכָ֥ל הֹלֵ֖ךְ לִבּ֣וֹ חָסֵ֑ר וְאָמַ֥ר לַכֹּ֖ל סָכָ֥ל הֽוּא׃
4 ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.
אִם־ר֤וּחַ הַמּוֹשֵׁל֙ תַּעֲלֶ֣ה עָלֶ֔יךָ מְקוֹמְךָ֖ אַל־תַּנַּ֑ח כִּ֣י מַרְפֵּ֔א יַנִּ֖יחַ חֲטָאִ֥ים גְּדוֹלִֽים׃
5 ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ಆಳುವವನ ಸಮ್ಮುಖದಿಂದ ಹೊರಟುಬರುವ ಹಾಗೆಯೇ ತೋರುತ್ತದೆ.
יֵ֣שׁ רָעָ֔ה רָאִ֖יתִי תַּ֣חַת הַשָּׁ֑מֶשׁ כִּשְׁגָגָ֕ה שֶׁיֹּצָ֖א מִלִּפְנֵ֥י הַשַּׁלִּֽיט׃
6 ಮೂಢರಿಗೆ ಮಹಾ ಪದವಿ ದೊರೆಯುವುದು. ಘನವಂತರೂ ಹೀನಸ್ಥಿತಿಯಲ್ಲಿರುವರು.
נִתַּ֣ן הַסֶּ֔כֶל בַּמְּרוֹמִ֖ים רַבִּ֑ים וַעֲשִׁירִ֖ים בַּשֵּׁ֥פֶל יֵשֵֽׁבוּ׃
7 ಆಳುಗಳು ಕುದುರೆ ಸವಾರಿ ಮಾಡುವುದನ್ನೂ, ಪ್ರಭುಗಳು ಆಳುಗಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ.
רָאִ֥יתִי עֲבָדִ֖ים עַל־סוּסִ֑ים וְשָׂרִ֛ים הֹלְכִ֥ים כַּעֲבָדִ֖ים עַל־הָאָֽרֶץ׃
8 ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಗೋಡೆಯನ್ನು ಒಡೆಯುವವನಿಗೆ, ಹಾವು ಕಚ್ಚುವುದು.
חֹפֵ֥ר גּוּמָּ֖ץ בּ֣וֹ יִפּ֑וֹל וּפֹרֵ֥ץ גָּדֵ֖ר יִשְּׁכֶ֥נּוּ נָחָֽשׁ׃
9 ಯಾವನು ಕಲ್ಲುಗಳನ್ನು ಕೀಳುವನೋ ಅವನಿಗೆ ಹಾನಿ ಆಗುವುದು. ಮರವನ್ನು ಕಡೆಯುವವನಿಗೆ ಅಪಾಯವಿದೆ.
מַסִּ֣יעַ אֲבָנִ֔ים יֵעָצֵ֖ב בָּהֶ֑ם בּוֹקֵ֥עַ עֵצִ֖ים יִסָּ֥כֶן בָּֽם׃
10 ೧೦ ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.
אִם־קֵהָ֣ה הַבַּרְזֶ֗ל וְהוּא֙ לֹא־פָנִ֣ים קִלְקַ֔ל וַחֲיָלִ֖ים יְגַבֵּ֑ר וְיִתְר֥וֹן הַכְשֵׁ֖ר חָכְמָֽה׃
11 ೧೧ ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಯಾವ ಪ್ರಯೋಜನವೂ ಇಲ್ಲ.
אִם־יִשֹּׁ֥ךְ הַנָּחָ֖שׁ בְּלוֹא־לָ֑חַשׁ וְאֵ֣ין יִתְר֔וֹן לְבַ֖עַל הַלָּשֽׁוֹן׃
12 ೧೨ ಜ್ಞಾನಿಯ ಮಾತು ಹಿತ. ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವುದು.
דִּבְרֵ֥י פִי־חָכָ֖ם חֵ֑ן וְשִׂפְת֥וֹת כְּסִ֖יל תְּבַלְּעֶֽנּוּ׃
13 ೧೩ ಅಜ್ಞಾನಿಯ ಮಾತುಗಳು ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರಳುತನ.
תְּחִלַּ֥ת דִּבְרֵי־פִ֖יהוּ סִכְל֑וּת וְאַחֲרִ֣ית פִּ֔יהוּ הוֹלֵל֖וּת רָעָֽה׃
14 ೧೪ ಮನುಷ್ಯನು ಮುಂದೆ ಆಗುವುದನ್ನು ತಿಳಿಯನು. ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.
וְהַסָּכָ֖ל יַרְבֶּ֣ה דְבָרִ֑ים לֹא־יֵדַ֤ע הָאָדָם֙ מַה־שֶׁיִּֽהְיֶ֔ה וַאֲשֶׁ֤ר יִֽהְיֶה֙ מֵֽאַחֲרָ֔יו מִ֖י יַגִּ֥יד לֽוֹ׃
15 ೧೫ ಪಟ್ಟಣದ ದಾರಿ ತಿಳಿಯದವನಿಗೆ ಮೂಢರು ತಿಳಿಸಲು, ಪಡುವ ಪ್ರಯಾಸದಿಂದ ಆಯಾಸವೇ.
עֲמַ֥ל הַכְּסִילִ֖ים תְּיַגְּעֶ֑נּוּ אֲשֶׁ֥ר לֹֽא־יָדַ֖ע לָלֶ֥כֶת אֶל־עִֽיר׃
16 ೧೬ ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ!
אִֽי־לָ֣ךְ אֶ֔רֶץ שֶׁמַּלְכֵּ֖ךְ נָ֑עַר וְשָׂרַ֖יִךְ בַּבֹּ֥קֶר יֹאכֵֽלוּ׃
17 ೧೭ ದೇಶದ ಅರಸನು ಕುಲೀನನಾಗಿದ್ದರೆ, ಪ್ರಭುಗಳು ಅಮಲಿಗಾಗಿ ಅಲ್ಲ, ಆದರೆ ಶಕ್ತಿಗಾಗಿ ಸಕಾಲದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ!
אַשְׁרֵ֣יךְ אֶ֔רֶץ שֶׁמַּלְכֵּ֖ךְ בֶּן־חוֹרִ֑ים וְשָׂרַ֙יִךְ֙ בָּעֵ֣ת יֹאכֵ֔לוּ בִּגְבוּרָ֖ה וְלֹ֥א בַשְּׁתִֽי׃
18 ೧೮ ಸೋಮಾರಿತನದಿಂದ ತೊಲೆಗಳು ಬೊಗ್ಗುವವು. ಜೋಲುಗೈಯಿಂದ ಮನೆ ಸೋರುವುದು.
בַּעֲצַלְתַּ֖יִם יִמַּ֣ךְ הַמְּקָרֶ֑ה וּבְשִׁפְל֥וּת יָדַ֖יִם יִדְלֹ֥ף הַבָּֽיִת׃
19 ೧೯ ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು.
לִשְׂחוֹק֙ עֹשִׂ֣ים לֶ֔חֶם וְיַ֖יִן יְשַׂמַּ֣ח חַיִּ֑ים וְהַכֶּ֖סֶף יַעֲנֶ֥ה אֶת־הַכֹּֽל׃
20 ೨೦ ಮನಸ್ಸಿನಲ್ಲಿಯೂ ಅರಸನನ್ನು ದೂಷಿಸದಿರು. ಮಲಗುವ ಕೋಣೆಯಲ್ಲಿಯೂ ಧನಿಕನನ್ನು ಬಯ್ಯದಿರು. ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸುವವು; ಪಕ್ಷಿಯು ಆ ವಿಷಯವನ್ನು ತಿಳಿಸುವುದು.
גַּ֣ם בְּמַדָּֽעֲךָ֗ מֶ֚לֶךְ אַל־תְּקַלֵּ֔ל וּבְחַדְרֵי֙ מִשְׁכָּ֣בְךָ֔ אַל־תְּקַלֵּ֖ל עָשִׁ֑יר כִּ֣י ע֤וֹף הַשָּׁמַ֙יִם֙ יוֹלִ֣יךְ אֶת־הַקּ֔וֹל וּבַ֥עַל כְּנָפַ֖יִם יַגֵּ֥יד דָּבָֽר׃

< ಪ್ರಸಂಗಿ 10 >