< ಪ್ರಸಂಗಿ 11 >
1 ೧ ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು.
Dhiyo adhiya nyime gitimo timbe mabeyo, to bangʼe notimni ngʼwono.
2 ೨ ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.
Chiw achiwa mwanduni ni ji mangʼeny, nikech ikia gima kiny notimreni.
3 ೩ ಮಳೆ ತುಂಬಿದ ಮೋಡಗಳು, ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು.
Ka polo odudo, to koth chue e piny. Kata ka yien olwar yo milambo kata yo nyandwat, kama olwarieno, kanyo ema iyude.
4 ೪ ಗಾಳಿಯನ್ನು ನೋಡುತ್ತಲೇ ಇರುವವನು ಬೀಜವನ್ನು ಬಿತ್ತುವುದಿಲ್ಲ, ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರನ್ನು ಕೊಯ್ಯುವುದಿಲ್ಲ.
Ngʼama osiko mana ka ngʼiyo kor polo ok nokom; to ngʼama rito mana ni mondo koth ochwe, ok noke.
5 ೫ ಗಾಳಿಯ ಮಾರ್ಗವನ್ನೂ, ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ.
Mana kaka ok inyal ngʼeyo kama yamo luwo, kata ngʼeyo kaka nyathi chakore ei min, omiyo ok inyal ngʼeyo gima Nyasaye ma jachwech gik moko duto timo.
6 ೬ ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು.
Chwo kodhi mari gokinyi, to godhiambo kik iwe lweti bed maonge tich, nimar ok ingʼeyo kata gibiro twi, giduto maber.
7 ೭ ನಿಜವಾಗಿ ಬೆಳಕು ಇಂಪಾಗಿಯೂ, ಮತ್ತು ಸೂರ್ಯನನ್ನು ಕಾಣುವುದು ಕಣ್ಣಿಗೆ ಹಿತವಾಗಿಯೂ ಇರುವುದು.
Ler ber kendo omiyo wangʼ neno maber.
8 ೮ ಬಹಳ ವರ್ಷ ಬದುಕುವವನು, ಅವುಗಳಲ್ಲೆಲ್ಲಾ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವ್ಯರ್ಥವೇ.
To kuom higni mangʼeny ma dhano nyalo dak, we mondo obed mamor kuom hignigo duto. Makmana wiye kik wil gi ndalo mag mudho nikech kosetho to ndalo mag mudho nobed mangʼeny moloyo. Gimoro amora mabiro bangʼe onge tiende.
9 ೯ ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.
Bed mamor, in wuowi matin, ka pod in rawera kendo tim gik moko duto ma chunyi dwaro. Tim gik moko duto ma chunyi gombo kendo wangʼi nyalo neno, to kata kamano nyaka ingʼe ni Nyasaye nongʼadni bura kuom gik moko duto mitimo.
10 ೧೦ ನಿನ್ನ ಹೃದಯದಿಂದ ದುಃಖವನ್ನೂ, ದೇಹದಿಂದ ಶ್ರಮೆಯನ್ನೂ ತೊಲಗಿಸು, ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ.
Omiyo koro, gol gombo duto oko e chunyi kendo kik iwe gombo mag ringruok thagi, nikech bedo rawera maratego bende onge tiende.