< ಪ್ರಸಂಗಿ 12 >
1 ೧ ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.
Ingatlah akan Penciptamu pada masa mudamu, sebelum tiba hari-hari yang malang dan mendekat tahun-tahun yang kaukatakan: "Tak ada kesenangan bagiku di dalamnya!",
2 ೨ ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು.
sebelum matahari dan terang, bulan dan bintang-bintang menjadi gelap, dan awan-awan datang kembali sesudah hujan,
3 ೩ ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು.
pada waktu penjaga-penjaga rumah gemetar, dan orang-orang kuat membungkuk, dan perempuan-perempuan penggiling berhenti karena berkurang jumlahnya, dan yang melihat dari jendela semuanya menjadi kabur,
4 ೪ ಬೀದಿಯ ಬಾಗಿಲುಗಳು ಮುಚ್ಚಿರುವವು, ಅರೆಯುವ ಶಬ್ದವು ನಿಲ್ಲುವುದು, ಮನುಷ್ಯನು ಹಕ್ಕಿಯ ಧ್ವನಿಗೆ ಎದ್ದೇಳುವನು, ಗಾಯಕಿಯರೆಲ್ಲಾ ಕುಗ್ಗುವರು.
dan pintu-pintu di tepi jalan tertutup, dan bunyi penggilingan menjadi lemah, dan suara menjadi seperti kicauan burung, dan semua penyanyi perempuan tunduk,
5 ೫ ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.
juga orang menjadi takut tinggi, dan ketakutan ada di jalan, pohon badam berbunga, belalang menyeret dirinya dengan susah payah dan nafsu makan tak dapat dibangkitkan lagi--karena manusia pergi ke rumahnya yang kekal dan peratap-peratap berkeliaran di jalan,
6 ೬ ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು, ಚಿನ್ನದ ಬಟ್ಟಲು ಜಜ್ಜಿಹೋಗುವುದು, ಮಡಿಕೆಯು ಬುಗ್ಗೆಯ ಹತ್ತಿರ ಒಡೆಯುವುದು, ಬಾವಿಯ ರಾಟೆ ಮುರಿಯುವುದು,
sebelum rantai perak diputuskan dan pelita emas dipecahkan, sebelum tempayan dihancurkan dekat mata air dan roda timba dirusakkan di atas sumur,
7 ೭ ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
dan debu kembali menjadi tanah seperti semula dan roh kembali kepada Allah yang mengaruniakannya.
8 ೮ “ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ” ಎಂದು ಪ್ರಸಂಗಿಯು ಹೇಳುತ್ತಾನೆ.
Kesia-siaan atas kesia-siaan, kata Pengkhotbah, segala sesuatu adalah sia-sia.
9 ೯ ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.
Selain Pengkhotbah berhikmat, ia mengajarkan juga kepada umat itu pengetahuan. Ia menimbang, menguji dan menyusun banyak amsal.
10 ೧೦ ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.
Pengkhotbah berusaha mendapat kata-kata yang menyenangkan dan menulis kata-kata kebenaran secara jujur.
11 ೧೧ ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ.
Kata-kata orang berhikmat seperti kusa dan kumpulan-kumpulannya seperti paku-paku yang tertancap, diberikan oleh satu gembala.
12 ೧೨ ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ.
Lagipula, anakku, waspadalah! Membuat banyak buku tak akan ada akhirnya, dan banyak belajar melelahkan badan.
13 ೧೩ ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.
Akhir kata dari segala yang didengar ialah: takutlah akan Allah dan berpeganglah pada perintah-perintah-Nya, karena ini adalah kewajiban setiap orang.
14 ೧೪ ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.
Karena Allah akan membawa setiap perbuatan ke pengadilan yang berlaku atas segala sesuatu yang tersembunyi, entah itu baik, entah itu jahat.