< ಪ್ರಸಂಗಿ 12 >

1 ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.
پس آفریننده خود را در روزهای جوانی ات بیاد آور قبل از آنکه روزهای بلا برسد و سالها برسد که بگویی مرا از اینهاخوشی نیست.۱
2 ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು.
قبل از آنکه آفتاب و نور و ماه وستارگان تاریک شود و ابرها بعد از باران برگردد؛۲
3 ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು.
در روزی که محافظان خانه بلرزند و صاحبان قوت، خویشتن را خم نمایند و دستاس کنندگان چونکه کم‌اند باز ایستند و آنانی که از پنجره هامی نگرند تاریک شوند.۳
4 ಬೀದಿಯ ಬಾಗಿಲುಗಳು ಮುಚ್ಚಿರುವವು, ಅರೆಯುವ ಶಬ್ದವು ನಿಲ್ಲುವುದು, ಮನುಷ್ಯನು ಹಕ್ಕಿಯ ಧ್ವನಿಗೆ ಎದ್ದೇಳುವನು, ಗಾಯಕಿಯರೆಲ್ಲಾ ಕುಗ್ಗುವರು.
و درها در کوچه بسته شود و آواز آسیاب پست گردد و از صدای گنجشک برخیزد و جمیع مغنیات ذلیل شوند.۴
5 ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.
واز هر بلندی بترسند و خوفها در راه باشد ودرخت بادام شکوفه آورد و ملخی بار سنگین باشد و اشتها بریده شود. چونکه انسان به خانه جاودانی خود می‌رود و نوحه‌گران در کوچه گردش می‌کنند.۵
6 ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು, ಚಿನ್ನದ ಬಟ್ಟಲು ಜಜ್ಜಿಹೋಗುವುದು, ಮಡಿಕೆಯು ಬುಗ್ಗೆಯ ಹತ್ತಿರ ಒಡೆಯುವುದು, ಬಾವಿಯ ರಾಟೆ ಮುರಿಯುವುದು,
قبل از آنکه مفتول نقره گسیخته شود و کاسه طلا شکسته گردد و سبو نزدچشمه خرد شود و چرخ بر چاه منکسر گردد،۶
7 ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
وخاک به زمین برگردد به طوری که بود. و روح نزدخدا که آن را بخشیده بود رجوع نماید.۷
8 “ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ” ಎಂದು ಪ್ರಸಂಗಿಯು ಹೇಳುತ್ತಾನೆ.
باطل اباطیل جامعه می‌گوید همه‌چیز بطالت است.۸
9 ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.
و دیگر چونکه جامعه حکیم بود باز هم معرفت را به قوم تعلیم می‌داد و تفکر نموده، غوررسی می‌کرد و مثل های بسیار تالیف نمود.۹
10 ೧೦ ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.
جامعه تفحص نمود تا سخنان مقبول را پیداکند و کلمات راستی را که به استقامت مکتوب باشد.۱۰
11 ೧೧ ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ.
سخنان حکیمان مثل سکهای گاورانی است و کلمات ارباب جماعت مانند میخهای محکم شده می‌باشد، که از یک شبان داده شود.۱۱
12 ೧೨ ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ.
و علاوه بر اینها، ای پسر من پند بگیر. ساختن کتابهای بسیار انتها ندارد و مطالعه زیاد، تعب بدن است.۱۲
13 ೧೩ ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.
پس ختم تمام امر را بشنویم. از خدابترس و اوامر او را نگاه دار چونکه تمامی تکلیف انسان این است.۱۳
14 ೧೪ ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.
زیرا خدا هر عمل را با هر کارمخفی خواه نیکو و خواه بد باشد، به محاکمه خواهد آورد.۱۴

< ಪ್ರಸಂಗಿ 12 >