< ಪ್ರಸಂಗಿ 2 >
1 ೧ ನಾನು ಮನಸ್ಸಿನಲ್ಲಿ, “ಈಗ ಬಾ, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು. ಸುಖವನ್ನು ಅನುಭವಿಸು” ಅಂದುಕೊಂಡೆನು. ಆಹಾ! ಇದು ವ್ಯರ್ಥವೇ.
Mekaa wɔ me koma mu se, “Afei bra, mede anigye bɛsɔ wo ahwɛ na yɛahu nea eye.” Nanso ankosi hwee.
2 ೨ “ನಗುವುದು ಹುಚ್ಚುತನ, ಸಂತೋಷದಿಂದ ಏನನ್ನು ಸಾಧಿಸುವೆನು?” ಅಂದುಕೊಂಡೆನು.
Mekae se, “Ɔserew yɛ nkwaseade. Na dɛn na anigye tumi yɛ?”
3 ೩ ಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.
Mepɛɛ sɛ mihu nea eye pa ara ma yɛn wɔ bere tiaa a yɛwɔ wɔ asase yi so no. Enti meyɛɛ mʼadwene sɛ mede nsa bɛsɛpɛw me ho na mahwehwɛ, ahu nkwaseasɛm nkyerɛase, a na nyansa da so bɔ mʼankasa mʼadwene ho ban.
4 ೪ ನಾನು ಮಹತ್ಕಾರ್ಯಗಳನ್ನು ನಡೆಸಿದೆನು. ಮನೆಗಳನ್ನು ಕಟ್ಟಿಕೊಂಡೆನು ಮತ್ತು ದ್ರಾಕ್ಷಿತೋಟಗಳನ್ನು ನೆಟ್ಟನು.
Mede me nsa hyɛɛ nnwuma akɛse ase; misisii adan yɛɛ bobe nturo.
5 ೫ ತೋಟಗಳನ್ನೂ ಮತ್ತು ಉದ್ಯಾನವನಗಳನ್ನೂ ಮಾಡಿಸಿ; ಅವುಗಳಲ್ಲಿ ಸಕಲ ವಿಧವಾದ ಫಲವೃಕ್ಷಗಳನ್ನು ನೆಟ್ಟೆನು.
Meyɛɛ nturo ne ahomegyebea na miduaduaa nnuaba ahorow bebree wɔ mu.
6 ೬ ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವುದಕ್ಕಾಗಿ ಕುಂಟೆಗಳನ್ನು ತೋಡಿಸಿದೆನು.
Misisii nsukorae a mɛtwe nsu afi mu, de agugu nnua a ɛrenyin no so.
7 ೭ ಗಂಡು ಮತ್ತು ಹೆಣ್ಣಾಳುಗಳನ್ನು ಕೊಂಡುಕೊಂಡೆನು; ನನ್ನ ಅರಮನೆಯಲ್ಲಿ ಇವರಿಂದ ಗುಲಾಮರು ಹುಟ್ಟಿದರು. ಇದಲ್ಲದೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಹಳ ಸಂಪತ್ತುವುಳ್ಳವನಾಗಿ ದನಕುರಿಗಳ ಮಂದೆಯನ್ನು ಹೊಂದಿದೆನು.
Metɔɔ nkoa ne mfenaa, na minyaa ebinom nso a wɔwoo wɔn wɔ me fi. Afei nso, minyaa anantwi ne nguan bebree sen obiara a wadi mʼanim wɔ Yerusalem.
8 ೮ ನಾನು ಬೆಳ್ಳಿಬಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯರಾದ ಅನೇಕ ಸ್ತ್ರೀಯರನ್ನು ಸಂಪಾದಿಸಿಕೊಂಡೆನು.
Mepɛɛ dwetɛ ne sikakɔkɔɔ, gyigyee ahemfo ne amantam no ademude kaa ho. Mefaa mmarima ne mmea nnwontofo, pɛɛ mmea atenae nso; nea ɛyɛ ɔbarima koma anigyede biara.
9 ೯ ಹೀಗೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ಅಭಿವೃದ್ಧಿಹೊಂದಿ ದೊಡ್ಡವನಾದೆನು. ಇದಲ್ಲದೆ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು.
Migyee din sen obiara a wadi mʼanim wɔ Yerusalem. Eyinom nyinaa mu no me nimdeɛ kɔɔ so yɛɛ adwuma.
10 ೧೦ ನನ್ನ ಕಣ್ಣು ಬಯಸಿದ್ದೆಲ್ಲವನ್ನು, ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ.
Nea mʼani hwehwɛe biara mamfa ankame no; mansiw me koma anigye ho kwan. Me koma ani gyee me nnwuma nyinaa ho, na eyi yɛ mʼadwumayɛ so akatua.
11 ೧೧ ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.
Nanso sɛ mehwɛ nea me nsa ayɛ nyinaa ne nea mabrɛ anya a, ne nyinaa nka hwee, ɛte sɛnea wotu mmirika taa mframa mannya mfaso biara wɔ owia yi ase.
12 ೧೨ ಜ್ಞಾನವನ್ನೂ ನೋಡುವುದಕ್ಕೆ ತಿರುಗಿಕೊಂಡೆನು, ಮರುಳುತನವನ್ನೂ ಬುದ್ಧಿಹೀನತೆಯನ್ನೂ ನೋಡುವುದಕ್ಕೆ ತಿರುಗಿಕೊಂಡೆನು. ರಾಜನ ಪ್ರಯತ್ನವೇ ಹೀಗಾದ ಮೇಲೆ ಮತ್ತೊಬ್ಬನಿಂದ ಏನಾದೀತು? ಆದದ್ದೇ ಆಗುತ್ತದೆ ಎಂದುಕೊಂಡೆ.
Mede mʼadwene kɔɔ nimdeɛ, adammɔsɛm ne nkwaseasɛm so. Dɛn bio na nea wadi ɔhene ade betumi ayɛ asen nea wɔayɛ dedaw no?
13 ೧೩ ಜ್ಞಾನವು ಮೂಢತ್ವಕ್ಕಿಂತ ಶ್ರೇಷ್ಠವೆಂದು ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವುದೆಂದು ಗೋಚರವಾಯಿತು.
Mihuu sɛ nimdeɛ ye sen nkwaseasɛm, sɛnea hann yɛ sen sum no.
14 ೧೪ ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು.
Onyansafo ani wɔ ne tirim, na ɔkwasea de, ɔnantew sum mu; nanso mihuu sɛ wɔn nyinaa nkrabea yɛ pɛ.
15 ೧೫ ಆಗ ನಾನು ನನ್ನ ಹೃದಯದಲ್ಲಿ, “ಮೂಢನಿಗೆ ಸಂಭವಿಸುವ ಗತಿಯು, ನನಗೂ ಸಂಭವಿಸುವುದು. ನನ್ನ ಹೆಚ್ಚು ಜ್ಞಾನದಿಂದ ಲಾಭವೇನು?” ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.
Afei misusuw wɔ me koma mu se, “Ɔkwasea nkrabea bɛto me nso. Enti sɛ mihu nyansa a mfaso bɛn na minya?” Mekaa wɔ me koma mu se, “Eyi nso nka hwee.”
16 ೧೬ ಏಕೆಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ಬಹಳ ದಿನಗಳವರೆಗೆ ಮರೆತುಹೋಗುವನು. ಈಗಿನ ಜನರು ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರು. ಆಹಾ! ಮೂಢನಂತೆ ಜ್ಞಾನಿಯೂ ಸಾಯುವನು.
Te sɛ ɔkwasea no, onyansafo nso, wɔrenkae no daa; nna a ɛreba no mu, wɔrenkae wɔn baanu no. Te sɛ ɔkwasea no, onyansafo nso bewu!
17 ೧೭ ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.
Ɛno nti asetena fonoo me, na adwuma a yɛyɛ wɔ owia yi ase no haw me. Ne nyinaa yɛ ahuhude, te sɛnea wotu mmirika taa mframa.
18 ೧೮ ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು.
Mikyii nea mayɛ adwuma apɛ nyinaa wɔ owia yi ase, efisɛ ɛsɛ sɛ migyaw hɔ ma nea obedi mʼade.
19 ೧೯ ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ.
Na hena na onim sɛ onipa ko no bɛyɛ onyansafo anaa ɔkwasea? Nanso nea mabiri me mogya ani apɛ wɔ owia yi ase nyinaa bɛkɔ ne nsam. Eyi nso yɛ ahuhude.
20 ೨೦ ಹೀಗಿರಲು ನಾನು ಲೋಕದಲ್ಲಿ ಪ್ರಯಾಸಪಟ್ಟ ಕೆಲಸದ ವಿಷಯವಾಗಿ ನಿರಾಶೆಗೊಳಗಾದೆನು.
Enti mepaa abaw wɔ owia yi ase adwumaden ho.
21 ೨೧ ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ.
Na onipa befi ne nimdeɛ, nyansa ne adwumayɛ ho nimdeɛ mu ayɛ nʼasɛde, na afei ɛsɛ sɛ ogyaw nʼadwumayɛ so aba ma obi a ɔnyɛɛ adwuma biara. Eyi nso yɛ ahuhude, na ɛhaw adwene.
22 ೨೨ ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು?
Dɛn na onipa nya fi ne brɛ ne dadwen a ɔde yɛ adwuma wɔ owia yi ase mu?
23 ೨೩ ಅವನ ದಿನಗಳೆಲ್ಲಾ ವ್ಯಸನವೇ. ಅವನ ಕೆಲಸವು ತೊಂದರೆಯೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಸಹ ವ್ಯರ್ಥವೇ.
Ne nkwanna nyinaa, nʼadwumayɛ yɛ ɔyaw ne ɔhaw; anadwo mpo nʼadwene yɛ adwuma. Eyi nso yɛ ahuhude.
24 ೨೪ ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.
Biribiara nsen sɛ onipa bedidi na wanom na wanya ahotɔ wɔ adwumayɛ mu. Eyi nso mihuu sɛ efi Onyankopɔn,
25 ೨೫ ಆತನಿಲ್ಲದೆ ಯಾರು ಭೋಜನ ಮಾಡಿ ಸುಖವನ್ನು ಅನುಭವಿಸುವರು?
efisɛ ɛnyɛ ɔno a anka hena na obetumi adidi anaasɛ obenya ahotɔ?
26 ೨೬ ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
Onipa a ɔsɔ Onyankopɔn ani no, ɔma no nimdeɛ, nyansa ne anigye, nanso omumɔyɛfo de, ɔma ɔboaboa ahonyade ano ma nea ɔsɔ Onyankopɔn ani. Eyi nso yɛ ahuhude, sɛnea wɔde mmirikatu taa mframa no.