< ಪ್ರಸಂಗಿ 3 >
1 ೧ ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.
事事有時節,天下任何事皆有定時:
2 ೨ ಹುಟ್ಟುವ ಸಮಯ, ಸಾಯುವ ಸಮಯ, ನೆಡುವ ಸಮಯ, ನೆಟ್ಟದ್ದನ್ನು ಕಿತ್ತುಹಾಕುವ ಸಮಯ,
生有時,死有時,栽種有時,拔除栽種的亦有時;
3 ೩ ಕೊಲ್ಲುವ ಸಮಯ, ಸ್ವಸ್ಥಮಾಡುವ ಸಮಯ ಕೆಡುವಿಬಿಡುವ ಸಮಯ, ಕಟ್ಟುವ ಸಮಯ,
殺戮有時,治療有時,拆毀有時,建築有時;
4 ೪ ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,
哭有時,笑有時,哀悼有時,舞蹈有時;
5 ೫ ಕಲ್ಲುಗಳನ್ನು ಚೆಲ್ಲುವ ಸಮಯ, ಕಲ್ಲುಗಳನ್ನು ಕೂಡಿಸುವ ಸಮಯ, ಅಪ್ಪಿಕೊಳ್ಳುವ ಸಮಯ ಅಪ್ಪಿಕೊಳ್ಳದಿರುವ ಸಮಯ,
拋石有時,堆石有時;擁抱有時,戒避擁抱亦有時;
6 ೬ ಸಂಪಾದಿಸುವ ಸಮಯ, ಕಳೆದುಕೊಳ್ಳುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ,
尋找有時,遺失有時;保存有時,捨棄有時;
7 ೭ ಹರಿಯುವ ಸಮಯ, ಹೊಲಿಯುವ ಸಮಯ, ಸುಮ್ಮನಿರುವ ಸಮಯ, ಮಾತನಾಡುವ ಸಮಯ,
撕裂有時,縫綴有時;緘默有時,言談有時,
8 ೮ ಪ್ರೀತಿಸುವ ಸಮಯ, ದ್ವೇಷಿಸುವ ಸಮಯ, ಯುದ್ಧದ ಸಮಯ, ಸಮಾಧಾನದ ಸಮಯ.
愛慕有時,憎恨有時;作戰有時,和睦有時。
9 ೯ ದುಡಿಯುವವನಿಗೆ ಅವನ ಪ್ರಯಾಸದಿಂದ ಲಾಭವೇನು?
工作的人,從勞苦中得了什麼利益﹖
10 ೧೦ ಮನುಷ್ಯನಿಗೆ ಕರ್ತವ್ಯವೆಂದು ದೇವರು ನೇಮಿಸಿರುವ ಪ್ರಯಾಸವನ್ನು ನೋಡಿದ್ದೇನೆ.
我觀察了天主交予人類所應從事的事務,得知:
11 ೧೧ ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ. ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ. ಆದರೂ ದೇವರು ನಡೆಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.
天主所行的一切事宜,都很適時,並賜給人認識時事的經歷,但人仍不能明瞭,天主自始至終所做的工作。
12 ೧೨ ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ.
於是我明瞭:人類的幸福,只有在此生歡樂享受;
13 ೧೩ ಇದಲ್ಲದೆ ಪ್ರತಿಯೊಬ್ಬನೂ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ನಾನಾ ಪ್ರಯಾಸಗಳಲ್ಲಿಯೂ ಸುಖವನ್ನನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ಗೊತ್ತಿದೆ.
但人人有吃有喝,享受自己一切勞苦之所得,也是天主的恩賜。
14 ೧೪ ದೇವರ ಕಾರ್ಯವೆಲ್ಲವು ನಿತ್ಯವೆಂದು ಬಲ್ಲೆನು. ಅದಕ್ಕೆ ಯಾವುದನ್ನೂ ಸೇರಿಸಲಾರೆವು. ಅದರಿಂದ ಯಾವುದನ್ನೂ ತೆಗೆಯಲಾರೆವು. ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕೆಂಬುದೇ ಕಾರಣ.
我知道:凡天主所行的事,永恒不變,無一可增,無一可減。天主這樣作,是為叫人敬畏他。
15 ೧೫ ಈಗಿನದು ಹಿಂದೆ ಇತ್ತು; ಮುಂದಿನದು ಈಗಲೂ ಇದೆ. ಗತಿಸಿ ಹೋದದ್ದನ್ನು ದೇವರು ತಿರುಗಿ ಬರಮಾಡುವನು.
現今所有的,早已有過;將來所有有,先前已有過;因為天主必追尋已往的事。
16 ೧೬ ಇದಲ್ಲದೆ ನಾನು ಲೋಕದಲ್ಲಿ ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ, ಧರ್ಮಸ್ಥಾನದಲ್ಲಿಯೂ ಅಧರ್ಮವಿರುವುದೆಂದು ನೋಡಿದೆನು.
我在太陽下還看見:正義之處有不義,公平之處有不平。
17 ೧೭ ಆಗ ನಾನು ಮನಸ್ಸಿನಲ್ಲಿ, “ದೇವರು ನೀತಿವಂತನಿಗೂ, ಅನೀತಿವಂತನಿಗೂ ನ್ಯಾಯತೀರಿಸುವನು. ಆತನ ನ್ಯಾಯಕ್ರಮಗಳಿಗೂ, ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟು” ಎಂದು ಅಂದುಕೊಂಡೆನು.
我心裏想天主必要審判義人和惡人,因為各種事情和行為,在天主那裏都有其定時。
18 ೧೮ ನಾನು ನನ್ನ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು, “ದೇವರು ಮನುಷ್ಯರನ್ನು ಪರೀಕ್ಷಿಸಿ, ಅವರು ಪಶುಗಳಿಗೆ ಸಮಾನರು ಎಂಬುದನ್ನು ತೋರಿಸುತ್ತಾನೆ.”
我想,天主藉此是為使世人認清自己是誰,看清自己與走獸無異。
19 ೧೯ ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ. ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವುದು. ಎಲ್ಲಕ್ಕೂ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವು ವ್ಯರ್ಥವೇ.
的確,世人的命運,同走獸的命運,都是一樣:前者怎樣死,後者也怎樣死;氣息都一樣,人並不優於走獸:因為都是虛無。
20 ೨೦ ಎಲ್ಲಾ ಪ್ರಾಣಿಗಳು ಒಂದೇ ಸ್ಥಳಕ್ಕೆ ಹೋಗುವವು. ಎಲ್ಲವು ಮಣ್ಣಿನಿಂದಾದವು. ಎಲ್ಲವೂ ಮಣ್ಣಿಗೆ ಪುನಃ ಸೇರುವವು.
都同歸於一處;既都出於塵土,也都歸於塵土。
21 ೨೧ ಮನುಷ್ಯನ ಆತ್ಮವು ಮೇಲಕ್ಕೆ ಏರುತ್ತದೋ, ಪಶುವಿನ ಆತ್ಮವು ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ ಯಾರಿಗೆ ಗೊತ್ತು?
人的氣息是否向上高升,走獸的氣息是否下降地下,有誰知道﹖
22 ೨೨ ಈ ಪ್ರಕಾರ ನಾನು ಯೋಚಿಸಿ ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದ ನಂತರ ಸಂಭವಿಸುವವುಗಳನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?
因此,我看出:人最好還是享受自己勞苦之所得,因為這是他的命運;有誰能領他去看自己身後的事呢﹖