< ಪ್ರಸಂಗಿ 6 >
1 ೧ ಈ ಲೋಕದಲ್ಲಿ ಮನುಷ್ಯರಿಗೆ ವಿಪರೀತವಾಗಿ ಉಂಟಾಗಿರುವ ದುರಾವಸ್ಥೆಯನ್ನು ಕಂಡೆನು.
Ada suatu kemalangan yang telah kulihat di bawah matahari, yang sangat menekan manusia:
2 ೨ ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.
orang yang dikaruniai Allah kekayaan, harta benda dan kemuliaan, sehingga ia tak kekurangan suatupun yang diingininya, tetapi orang itu tidak dikaruniai kuasa oleh Allah untuk menikmatinya, melainkan orang lain yang menikmatinya! Inilah kesia-siaan dan penderitaan yang pahit.
3 ೩ ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.
Jika orang memperoleh seratus anak dan hidup lama sampai mencapai umur panjang, tetapi ia tidak puas dengan kesenangan, bahkan tidak mendapat penguburan, kataku, anak gugur lebih baik dari pada orang ini.
4 ೪ ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲಿ ಮರೆಯಾಗುತ್ತದೆ. ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ.
Sebab anak gugur itu datang dalam kesia-siaan dan pergi dalam kegelapan, dan namanya ditutupi kegelapan.
5 ೫ ಅದು ಸೂರ್ಯನನ್ನು ಕಂಡಿಲ್ಲ. ಅದಕ್ಕೆ ತಿಳಿವಳಿಕೆಯೇ ಇಲ್ಲ. ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು.
Lagipula ia tidak melihat matahari dan tidak mengetahui apa-apa. Ia lebih tenteram dari pada orang tadi.
6 ೬ ಎರಡು ಸಾವಿರ ವರ್ಷ ಅವನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸಲಿಲ್ಲ. ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರೆ.
Biarpun ia hidup dua kali seribu tahun, kalau ia tidak menikmati kesenangan: bukankah segala sesuatu menuju satu tempat?
7 ೭ ಮನುಷ್ಯನು ಪಡುವ ಪ್ರಯಾಸವೆಲ್ಲಾ ತನ್ನ ಹೊಟ್ಟೆಗಾಗಿಯೇ, ಆದರೂ ಅವನಿಗೆ ತೃಪ್ತಿಯಿಲ್ಲ.
Segala jerih payah manusia adalah untuk mulutnya, namun keinginannya tidak terpuaskan.
8 ೮ ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? ಜನರ ಮುಂದೆ ಸರಿಯಾಗಿ ನಡೆದುಕೊಳ್ಳಲು ತಿಳಿಯದೇ ಇರುವ ಬಡವನಿಗೆ ಲಾಭವೇನು?
Karena apakah kelebihan orang yang berhikmat dari pada orang yang bodoh? Apakah kelebihan orang miskin yang tahu berperilaku di hadapan orang?
9 ೯ ಬಗೆಬಗೆಯಾಗಿ ಆಶಿಸುವುದಕ್ಕಿಂತ ಕಣ್ಣೆದುರಿಗಿರುವುದನ್ನು ಅನುಭವಿಸುವುದೇ ಒಳ್ಳೇಯದು. ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
Lebih baik melihat saja dari pada menuruti nafsu. Inipun kesia-siaan dan usaha menjaring angin.
10 ೧೦ ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.
Apapun yang ada, sudah lama disebut namanya. Dan sudah diketahui siapa manusia, yaitu bahwa ia tidak dapat mengadakan perkara dengan yang lebih kuat dari padanya.
11 ೧೧ ಮಾತು ಹೆಚ್ಚಿದಷ್ಟು ಪರಿಣಾಮ ಕಡಿಮೆ, ಅವುಗಳಿಂದ ಮನುಷ್ಯನಿಗೆ ಏನು ಪ್ರಯೋಜನ?
Karena makin banyak kata-kata, makin banyak kesia-siaan. Apakah faedahnya untuk manusia?
12 ೧೨ ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು?
Karena siapakah yang mengetahui apa yang baik bagi manusia sepanjang waktu yang pendek dari hidupnya yang sia-sia, yang ditempuhnya seperti bayangan? Siapakah yang dapat mengatakan kepada manusia apa yang akan terjadi di bawah matahari sesudah dia?