< ಪ್ರಸಂಗಿ 6 >

1 ಈ ಲೋಕದಲ್ಲಿ ಮನುಷ್ಯರಿಗೆ ವಿಪರೀತವಾಗಿ ಉಂಟಾಗಿರುವ ದುರಾವಸ್ಥೆಯನ್ನು ಕಂಡೆನು.
Ima zlo koje vidjeh pod suncem i èesto je meðu ljudima:
2 ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.
Nekome Bog da bogatstvo i blago i slavu, te duša njegova ima sve što god želi, ali mu ne da Bog da to uživa, nego uživa drugi. To je taština i ljuto zlo.
3 ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.
Da bi ko rodio sto sinova i živio mnogo godina i dani bi se vijeka njegova veoma namnožili, a duša se njegova ne bi nasitila dobra, te ni pogreba ne bi imao, kažem da je bolje nedonošèe od njega.
4 ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲಿ ಮರೆಯಾಗುತ್ತದೆ. ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ.
Jer uzalud doðe i u tamu otide i ime mu je tamom pokriveno;
5 ಅದು ಸೂರ್ಯನನ್ನು ಕಂಡಿಲ್ಲ. ಅದಕ್ಕೆ ತಿಳಿವಳಿಕೆಯೇ ಇಲ್ಲ. ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು.
Ni sunca ne vidje, niti što pozna, a poèiva bolje nego onaj.
6 ಎರಡು ಸಾವಿರ ವರ್ಷ ಅವನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸಲಿಲ್ಲ. ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರೆ.
I da bi živio dvije tisuæe godina, a dobra ne bi uživao, ne odlaze li svi na jedno mjesto?
7 ಮನುಷ್ಯನು ಪಡುವ ಪ್ರಯಾಸವೆಲ್ಲಾ ತನ್ನ ಹೊಟ್ಟೆಗಾಗಿಯೇ, ಆದರೂ ಅವನಿಗೆ ತೃಪ್ತಿಯಿಲ್ಲ.
Sav je trud èovjeèji za usta njegova, ali se ne može nasititi duša njegova.
8 ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? ಜನರ ಮುಂದೆ ಸರಿಯಾಗಿ ನಡೆದುಕೊಳ್ಳಲು ತಿಳಿಯದೇ ಇರುವ ಬಡವನಿಗೆ ಲಾಭವೇನು?
Jer šta ima mudri više nego bezumni? šta li siromah, koji se umije vladati meðu živima?
9 ಬಗೆಬಗೆಯಾಗಿ ಆಶಿಸುವುದಕ್ಕಿಂತ ಕಣ್ಣೆದುರಿಗಿರುವುದನ್ನು ಅನುಭವಿಸುವುದೇ ಒಳ್ಳೇಯದು. ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
Bolje je vidjeti oèima negoli željeti; i to je taština i muka duhu.
10 ೧೦ ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.
Što je ko, davno je tijem nazvan; i zna se da je èovjek i da se ne može suditi s jaèim od sebe.
11 ೧೧ ಮಾತು ಹೆಚ್ಚಿದಷ್ಟು ಪರಿಣಾಮ ಕಡಿಮೆ, ಅವುಗಳಿಂದ ಮನುಷ್ಯನಿಗೆ ಏನು ಪ್ರಯೋಜನ?
Kad dakle ima mnogo stvari koje umnožavaju taštinu, kaka je korist èovjeku?
12 ೧೨ ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು?
Jer ko zna što je dobro èovjeku u životu, za malo dana taštega života njegova, koji mu prolaze kao sjen? ili ko æe kazati èovjeku šta æe biti poslije njega pod suncem?

< ಪ್ರಸಂಗಿ 6 >