< ಪ್ರಸಂಗಿ 7 >
1 ೧ ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ, ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು.
नेक नामी बेशबहा 'इत्र से बेहतर है, और मरने का दिन पैदा होने के दिन से।
2 ೨ ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು.
मातम के घर में जाना दावत के घर में दाख़िल होने से बेहतर है क्यूँकि सब लोगों का अन्जाम यही है, और जो ज़िन्दा है अपने दिल में इस पर सोचेगा।
3 ೩ ನಗೆಗಿಂತ ದುಃಖವು ವಾಸಿ, ಮುಖವು ಸಪ್ಪಗಿರುವಲ್ಲಿ ಹೃದಯಕ್ಕೆ ಮೇಲು.
ग़मगीनी हँसी से बेहतर है, क्यूँकि चेहरे की उदासी से दिल सुधर जाता है।
4 ೪ ದುಃಖದ ಮನೆಯು ಜ್ಞಾನಿಗಳ ಮನಸ್ಸಿಗೆ ನೆಲೆ, ಉಲ್ಲಾಸದ ಮನೆಯು ಮೂಢರ ಮನಸ್ಸಿಗೆ ನಿವಾಸ.
दाना का दिल मातम के घर में है लेकिन बेवक़ूफ़ का जी 'इश्रतखाने से लगा है।
5 ೫ ಮೂಢರ ಗಾನಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.
इंसान के लिए 'अक़्लमन्द की सरज़निश सुनना बेवकूफ़ों का राग सुनने से बेहतर है।
6 ೬ ಮೂಢರ ನಗುವು ಮಡಿಕೆಯ ಕೆಳಗೆ ಉರಿಯುವ ಮುಳ್ಳಿನ ಚಟಪಟ ಶಬ್ದದ ಹಾಗೆಯೇ. ಇದೂ ಕೂಡ ವ್ಯರ್ಥ.
जैसा हाँडी के नीचे काँटों का चटकना वैसा ही बेवकूफ़ का हँसना है; ये भी बेकार है।
7 ೭ ದಬ್ಬಾಳಿಕೆಯು ಜ್ಞಾನಿಯನ್ನು ಮೂರ್ಖನನ್ನಾಗಿಸುತ್ತದೆ, ಲಂಚವು ಹೃದಯವನ್ನು ಕೆಡಿಸುತ್ತದೆ.
यक़ीनन ज़ुल्म 'अक़्लमन्द आदमी को दीवाना बना देता है और रिश्वत 'अक़्ल को तबाह करती है।
8 ೮ ಆದಿಗಿಂತ ಅಂತ್ಯವು ಲೇಸು; ಅಹಂಕಾರಿಗಿಂತ ತಾಳ್ಮೆಯುಳ್ಳವನು ಉತ್ತಮ.
किसी बात का अन्जाम उसके आग़ाज़ से बेहतर है और बुर्दबार मुतकब्बिर मिज़ाज से अच्छा है।
9 ೯ ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.
तू अपने जी में ख़फ़ा होने में जल्दी न कर, क्यूँकि ख़फ़्गी बेवक़ूफ़ों के सीनों में रहती है।
10 ೧೦ ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ. ನೀನು ಈ ವಿಷಯದಲ್ಲಿ ವಿಚಾರಿಸುವುದು ಜ್ಞಾನಕಾರ್ಯವಲ್ಲ.
तू ये न कह कि, अगले दिन इनसे क्यूँकर बेहतर थे? क्यूँकि तू 'अक़्लमन्दी से इस अम्र की तहक़ीक़ नहीं करता।
11 ೧೧ ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ. ಇದು ಲೋಕದಲ್ಲಿ ಜೀವಿಸುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ.
हिकमत खू़बी में मीरास के बराबर है, और उनके लिए जो सूरज को देखते हैं ज़्यादा सूदमन्द है।
12 ೧೨ ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.
क्यूँकि हिकमत वैसी ही पनाहगाह है जैसे रुपया, लेकिन 'इल्म की ख़ास खू़बी ये है कि हिकमत साहिब — ए — हिकमत की जान की मुहाफ़िज़ है।
13 ೧೩ ದೇವರ ಕಾರ್ಯವನ್ನು ನೋಡು; ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವುದಕ್ಕೆ ಯಾರಿಂದಾದೀತು?
ख़ुदा के काम पर ग़ौर कर, क्यूँकि कौन उस चीज़ को सीधा कर सकता है जिसको उसने टेढ़ा किया है?
14 ೧೪ ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ.
इक़बालमन्दी के दिन ख़ुशी में मशग़ूल हो, लेकिन मुसीबत के दिन में सोच; बल्कि ख़ुदा ने इसको उसके मुक़ाबिल बना रख्खा है, ताकि इंसान अपने बाद की किसी बात को दरियाफ़्त न कर सके।
15 ೧೫ ನೀತಿವಂತನು ತನ್ನ ನೀತಿಯಲ್ಲಿಯೇ ನಶಿಸುವುದುಂಟು. ದುಷ್ಟನು ತನ್ನ ದುಷ್ಟತನದಲ್ಲಿಯೇ ಬಹಳ ದಿನ ಬದುಕುವುದುಂಟು. ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.
मैंने अपनी बेकारी के दिनों में ये सब कुछ देखा; कोई रास्तबाज़ अपनी रास्तबाज़ी में मरता है, और कोई बदकिरदार अपनी बदकिरदारी में उम्र दराज़ी पाता है।
16 ೧೬ ನೀನು ಅತಿಯಾಗಿ ನೀತಿವಂತನಾಗಿರಬೇಡ, ನಿನ್ನ ದೃಷ್ಟಿಯಲ್ಲಿ ನೀನು ಜ್ಞಾನಿಯಾಗಿರಬೇಡ. ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ?
हद से ज़्यादा नेकोकार न हो, और हिकमत में 'एतदाल से बाहर न जा; इसकी क्या ज़रूरत है कि तू अपने आप को बर्बाद करे?
17 ೧೭ ನೀನು ಅತಿಯಾಗಿ ದುಷ್ಟನಾಗಿರಬೇಡ ಇಲ್ಲವೇ ಮೂರ್ಖನಾಗಿರಬೇಡ, ಏಕೆ ಅಕಾಲ ಮರಣವನ್ನು ಹೊಂದುವಿ?
हद से ज़्यादा बदकिरदार न हो, और बेवक़ूफ़ न बन; तू अपने वक़्त से पहले काहे को मरेगा?
18 ೧೮ ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು.
अच्छा है कि तू इसको भी पकड़े रहे, और उस पर से भी हाथ न उठाए; क्यूँकि जो ख़ुदा तरस है इन सब से बच निकलेगा।
19 ೧೯ ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನಿಗೆ ಜ್ಞಾನದಿಂದ ಉಂಟಾಗುವ ಬಲವು ಹೆಚ್ಚು.
हिकमत साहिब — ए — हिकमत को शहर के दस हाकिमों से ज़्यादा ताक़तवर बना देती है।
20 ೨೦ ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.
क्यूँकि ज़मीन पर ऐसा कोई रास्तबाज़ इंसान नहीं कि नेकी ही करे और ख़ता न करे।
21 ೨೧ ಆಡುವ ಮಾತುಗಳನ್ನೆಲ್ಲಾ ಲಕ್ಷ್ಯಕ್ಕೆ ತಾರದಿರು, ನಿನ್ನ ಆಳು ನಿನ್ನನ್ನು ಶಪಿಸುವುದು ಕಿವಿಗೆ ಬಿದ್ದೀತು.
नीज़ उन सब बातों के सुनने पर जो कही जाएँ कान न लगा, ऐसा न हो कि तू सुन ले कि तेरा नौकर तुझ पर ला'नत करता है;
22 ೨೨ ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದಿ ಎಂಬುದಕ್ಕೆ ನಿನ್ನ ಮನಸ್ಸೇ ಸಾಕ್ಷಿ.
क्यूँकि तू तो अपने दिल से जानता है कि तूने आप इसी तरह से औरों पर ला'नत की है
23 ೨೩ ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದೆನು. “ನಾನು ಜ್ಞಾನಿಯಾಗುವೆನು” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು.
मैंने हिकमत से ये सब कुछ आज़माया है। मैंने कहा, मैं 'अक़्लमन्द बनूँगा, लेकिन वह मुझ से कहीं दूर थी।
24 ೨೪ ಜ್ಞಾನವು ಬಹಳ ದೂರದಲ್ಲಿಯೂ, ಅಗಾಧದಲ್ಲಿಯೂ ಇದೆ. ಅದನ್ನು ಯಾರು ಕಂಡುಕೊಂಡಾರು?
जो कुछ है सो दूर और बहुत गहरा है, उसे कौन पा सकता
25 ೨೫ ನಾನು ತಿರುಗಿಕೊಂಡು, ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು.
मैंने अपने दिल को मुतवज्जिह किया कि जानूँ और तफ़्तीश करूँ और हिकमत और ख़िरद को दरियाफ़्त करूँ और समझूँ कि बुराई हिमाक़त है और हिमाक़त दीवानगी।
26 ೨೬ ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ. ಅವಳ ಹೃದಯವು ಉರುಲುಗಳೂ, ಬಲೆಗಳೂ, ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.
तब मैंने मौत से तल्ख़तर उस 'औरत को पाया, जिसका दिल फंदा और जाल है और जिसके हाथ हथकड़ियाँ हैं। जिससे ख़ुदा ख़ुश है वह उस से बच जाएगा, लेकिन गुनहगार उसका शिकार होगा।
27 ೨೭ ಪ್ರಸಂಗಿಯು ಹೀಗೆ ಹೇಳುತ್ತಾನೆ, “ನೋಡು, ನಾನು ಇದನ್ನು ಹುಡುಕಿ ಕಂಡುಕೊಂಡಿದ್ದೇನೆ” ಮತ್ತೊಂದು ಸಂಶೋಧನೆಯನ್ನು ಎಷ್ಟು ನಡೆಸಿದರೂ ಉತ್ತರ ಸಿಕ್ಕಲಿಲ್ಲ.
देख, वा'इज़ कहता है, मैंने एक दूसरे से मुक़ाबला करके ये दरियाफ़्त किया है।
28 ೨೮ ಸಹಸ್ರ ಪುರುಷರಲ್ಲಿ ಯೋಗ್ಯನೊಬ್ಬನನ್ನು ಕಂಡಿದ್ದರೂ ಕಂಡಿರಬಹುದು, ಆದರೆ ಸಹಸ್ರ ಸ್ತ್ರೀಯರಲ್ಲಿ ಯೋಗ್ಯಳೊಬ್ಬಳನ್ನೂ ಕಂಡಿಲ್ಲ.
जिसकी मेरे दिल को अब तक तलाश है पर मिला नहीं। मैंने हज़ार में एक मर्द पाया, लेकिन उन सभों में 'औरत एक भी न मिली।
29 ೨೯ ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.
लो मैंने सिर्फ़ इतना पाया कि ख़ुदा ने इंसान को रास्त बनाया, लेकिन उन्होंने बहुत सी बन्दिशें तज्वीज़ कीं।