< ಪ್ರಸಂಗಿ 8 >
1 ೧ ಜ್ಞಾನಿಯ ಹಾಗೆ ಇರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವುದು, ಒರಟು ಮುಖವು ಬದಲಾಗುವುದು.
Wie is er aan den wijze gelijk; Wie kent de verklaring der dingen? ‘s Mensen wijsheid doet zijn aangezicht stralen, En verandert de stuursheid van zijn gelaat.
2 ೨ ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬುದು ನನ್ನ ಬೋಧನೆ.
Neem het bevel van den koning in acht, Om de aan God gezworen eed;
3 ೩ ಅರಸನ ಸನ್ನಿಧಿಯಿಂದ ತೊಲಗಿಬಿಡಲು ಆತುರಪಡಬೇಡ. ದ್ರೋಹಕ್ಕೆ ಸೇರದಿರು. ಅವನು ಇಷ್ಟಬಂದಂತೆ ಮಾಡಬಲ್ಲನು.
Val niet roekeloos van hem af, En laat u niet in met gevaarlijke zaken. Want de koning doet, wat hij wil; Zijn woord is oppermachtig;
4 ೪ ಅರಸನ ಮಾತಿಗೆ ಅಧಿಕಾರವುಂಟು “ನೀನು ಏನು ಮಾಡುತ್ತಿರುವೆ?” ಎಂದು ಅವನನ್ನು ಯಾರು ತಾನೇ ಕೇಳಬಹುದು.
Wie kan hem zeggen: wat doet gij?
5 ೫ ಅರಸನ ಆಜ್ಞೆಗಳನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸುವುದಿಲ್ಲ. ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ.
Wie de wet onderhoudt, zal geen kwaad ondervinden. Een verstandig mens denkt aan de tijd van het oordeel;
6 ೬ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲ ಮತ್ತು ಒಂದು ಕ್ರಮ ಇರುತ್ತದೆಯಲ್ಲವೇ, ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ.
Want de tijd van het oordeel breekt voor iedereen aan. Maar de boosheid legt een benauwende druk op den mens;
7 ೭ ಮುಂದೆ ಏನಾಗುವುದು ಯಾರಿಗೂ ಗೊತ್ತಿಲ್ಲ. ಮುಂದೆ ಆಗುವುದನ್ನು ಅವನಿಗೆ ವಿವರಿಸಬಲ್ಲವರು ಯಾರು?
Want hij weet niet, wat hem nog wacht, En niemand kan hem zeggen, wanneer het zal komen.
8 ೮ ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ, ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ. ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತನದಿಂದ ಬಿಡುಗಡೆಯೇ ಇಲ್ಲ.
Geen mens is meester van zijn leven, Niemand heeft de levensgeest in zijn macht; Hij is geen heer over de dag van zijn dood. Niemand wordt vrijgesteld van die strijd, En zeker wordt niemand gered door zijn slechtheid.
9 ೯ ನಾನು ಇದನ್ನೆಲ್ಲಾ ನೋಡಿ, ಈ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ಅಧಿಕಾರ ನಡೆಸಿ ಅವನಿಗೆ ಹಾನಿಯನ್ನು ಉಂಟುಮಾಡುವ ಕಾಲವೂ ಇದೆ.
Dit alles heb ik gezien, Toen ik aandacht schonk aan alles, Wat er onder de zon gebeurt. Soms gebruikt de mens zijn macht tot nadeel van anderen.
10 ೧೦ ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವುದನ್ನು ಕಂಡೆನು. ಅವರು ಸುಖವಾಗಿ ಗತಿಸುವರು. ಧಾರ್ಮಿಕರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದೂ ವ್ಯರ್ಥವೇ.
Zo zag ik, dat goddelozen een begrafenis kregen, Terwijl zij, die goed hadden gehandeld, Ver van de heilige plaats moesten wegtrekken, En in de stad werden vergeten. Ook dat is ijdelheid!
11 ೧೧ ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.
Omdat de straf niet onmiddellijk op de zonde volgt, Daarom zint het hart van den mens op kwaad.
12 ೧೨ ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.
Maar al blijft soms de zondaar lange tijd leven, Ofschoon hij honderdmaal kwaad doet: Toch weet ik zeker, dat het hùn goed gaat, Die Gods aanschijn vrezen.
13 ೧೩ ಆದರೆ ದುಷ್ಟನಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ.
Maar den zondaar gaat het niet goed; Zijn dagen worden vluchtig als een schaduw, Omdat hij Gods aanschijn niet vreest.
14 ೧೪ ಲೋಕದಲ್ಲಿ ನಡೆಯುವ ವ್ಯರ್ಥಕಾರ್ಯವು ಒಂದುಂಟು. ದುಷ್ಟರ ನಡತೆಗೆ ತಕ್ಕ ಗತಿಯು ಶಿಷ್ಟನಿಗೆ ಆಗುವುದು. ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಟರಿಗೆ ಆಗುವುದು. ಇದು ವ್ಯರ್ಥವೆಂದು ನಾನು ಹೇಳಿದೆನು.
Toch doet zich op aarde deze ijdelheid voor: Soms gaat het de braven naar de werken der bozen, En de zondaars soms naar de werken der braven. En ik dacht: ook dat is ijdelheid.
15 ೧೫ ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.
Daarom prees ik de vreugde; Want er is voor den mens geen ander geluk onder de zon, Dan te eten en te drinken en zich te verheugen. Moge dit bij zijn zwoegen hem steeds vergezellen Alle levensdagen, die God hem geeft onder de zon.
16 ೧೬ ನಾನು ನನ್ನ ಹೃದಯದಲ್ಲಿ ಜ್ಞಾನವನ್ನು ಪಡೆಯಲು, ಲೋಕದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ, ನಾನು ಕಂಡುಕೊಂಡ ಸಂಗತಿಯೇನೆಂದರೆ, “ಒಬ್ಬನು ರಾತ್ರಿಹಗಲು ಕಣ್ಣುಗಳಿಗೆ ನಿದ್ರೆಕೊಡದೆ ಕೆಲಸ ಮಾಡಿದರೂ,
Toen ik mij beijverde, wijsheid te verwerven, En de moeite bezag, die de mens zich op aarde getroost, En hoe dag en nacht zijn ogen geen slaap zien:
17 ೧೭ ದೇವರ ಎಲ್ಲಾ ಕಾರ್ಯಗಳನ್ನೂ ಮತ್ತು ಲೋಕದಲ್ಲಿ ಮಾಡುವ ಕೆಲಸಗಳನ್ನೂ ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಪ್ರಯಾಸಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಅದನ್ನು ಗ್ರಹಿಸಿಕೊಳ್ಳಲು ಯೋಚಿಸಿದರೂ ಅವನು ಅದನ್ನು ಗ್ರಹಿಸಲಾರನು.”
Toen begreep ik, dat het enkel Gods werk is, En dat de mens geen verklaring kan vinden Van wat er plaats grijpt onder de zon. Daarom tobt de mens zich af met zoeken, Maar hij zal het niet vinden; En al meent de wijze het ook te verstaan, Hij kan het niet vatten.