< ಪ್ರಸಂಗಿ 9 >
1 ೧ ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
Nga nunak yohk ke ma inge nukewa ke pacl na loeloes, ac nga liye lah God pa nununku mukuikui lun mwet lalmwetmet ac mwet suwoswos, finne nu ke lungse lalos ac srunga lalos. Wangin sie mwet etu lah mea oan meeto.
2 ೨ ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ಮತ್ತು ದುಷ್ಟನಿಗೂ, ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ, ಶುದ್ಧನಿಗೂ ಮತ್ತು ಅಶುದ್ಧನಿಗೂ, ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು. ಆಣೆಯಿಡುವವನು ಹೇಗೋ ಹಾಗೆಯೇ ಆಣೆಗೆ ಭಯಪಡುವವನೂ ಇರುವನು.
Oana sie ma nukewa. Lumah sefanna ac tuku nu sin mwet suwoswos ac mwet sesuwos, nu sin mwet wo ac nu sin mwet koluk, nu sin mwet alu ac nu sin mwet tia alu, nu sin mwet orek kisa ac mwet tia orek kisa. Ma su sikyak nu sin sie mwet wo ac sikyak pacna nu sin sie mwet koluk. Sie mwet su orek wulela nu sin God el oapana mwet se ma tia orek wulela nu sin God.
3 ೩ ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.
Saflaiyen moul lun mwet nukewa ac oana sie, ac ma se inge tiana suwohs. Ke lusenna moul lun mwet uh, nunak lalos sessesla ke nunak koluk ac wel, na elos misa.
4 ೪ ಜೀವಿತರ ಗುಂಪಿನಲ್ಲಿ ಸೇರಿದವನಿಗೆ ನಿರೀಕ್ಷೆಯುಂಟು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.
Tusruktu kutena mwet su moul inmasrlon ma moul uh, oasr finsrak yorolos. Soko kosro ngalngul ma moul, wo liki soko lion ma misa.
5 ೫ ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ.
Aok, mwet moul etu lah elos ac misa, a mwet misa wangin ma elos etu. Wangin mwe usru elos ac sifil eis. Mulkinyukla na pwaye elos.
6 ೬ ಅವರು ಸತ್ತಾಗಲೇ ಅವರ ಪ್ರೀತಿಯೂ, ಹಗೆಯೂ, ಹೊಟ್ಟೆಕಿಚ್ಚು ಅಳಿದುಹೋಗಿವೆ. ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ ಅವರಿಗೆ ಇನ್ನೆಂದಿಗೂ ಪಾಲು ಇಲ್ಲ.
Lungse lalos, srunga lalos, kena lalos, nufonna welulos na misa. Ac fah tia sifilpa oasr ma kunalos ke kutena ma su sikyak fin faclu.
7 ೭ ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.
Ouinge kom in kang mongo nom ac engan. Nim wain nimom ke inse pwar. God El nuna oaki in ouinge.
8 ೮ ನಿನ್ನ ಬಟ್ಟೆಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.
Pacl nukewa kom in naweyukla ac akmusrala in fal nu ke pacl in engan.
9 ೯ ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.
Engankin moul lom yurin mutan kiom su kom lungse, ke lusenna moul lusrongten ma God El sot nu sum fin faclu. Engankin kais sie len lusrongten inge, mweyen pa na ingan ma kom ac eis ke orekma kemkatu nukewa lom.
10 ೧೦ ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ. (Sheol )
Kutena ma kom oru, oru ke kuiyom mweyen ac fah wangin mukuikui, wangin nunak, wangin etauk, wangin lalmwetmet in facl sin mwet misa, tuh pa ingan acn se kom ac som nu we uh. (Sheol )
11 ೧೧ ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.
Oasr sie pac ma nga akilen ke moul lasr faclu: mwet mui uh tia eis kutangla pacl nukewa, ac mwet pulaik uh tia eis kutangla ke mweun pacl nukewa. Mwet lalmwetmet uh tia eis kasrpalos pacl nukewa, mwet usrnguk uh tia kasrup pacl nukewa, ac mwet ma fas ke orekma tia eis wal fulat pacl nukewa. Ma ongla ouiya uh sikyak nu sin mwet nukewa.
12 ೧೨ ಮನುಷ್ಯನೋ ತನ್ನ ಕಾಲ ಗತಿಯನ್ನು ತಿಳಿಯನಷ್ಟೆ. ಮೀನುಗಳು ಕೆಟ್ಟ ಬಲೆಗೂ, ಪಕ್ಷಿಗಳು ಉರುಲಿನಲ್ಲಿ ಸಿಕ್ಕಿಬೀಳುವ ಹಾಗೆ ಮನುಷ್ಯರು ಪ್ರಾಣಿಗಳ ಹಾಗೆ ತಮ್ಮ ಮೇಲೆ ತಟ್ಟನೆ ಬೀಳುವ ಕೇಡಿನ ಕಾಲಕ್ಕೆ ಸಿಕ್ಕಿಕೊಳ್ಳುವರು.
Kom tia ku in etu lah pacl lom uh ac tuku ngac. Oana won ma sremla ke sruhf in kitin pacl na, ku oana ik ma sremla ke kwa, kut ac sremla pac ke sie pacl na koluk ma kut tiana etu kac.
13 ೧೩ ನಾನು ಲೋಕದಲ್ಲಿ ಜ್ಞಾನವನ್ನು ಈ ವಿಧವಾಗಿಯೂ ಕಂಡುಕೊಂಡೆನು. ಅದು ದೊಡ್ಡದೆಂದು ತೋಚಿತು.
Oasr pac sie ma nga liye, sie mwe srikasrak na wo ke nunkeyen lalmwetmet uh sin mwet faclu.
14 ೧೪ ಇಗೋ, ಒಂದು ಚಿಕ್ಕ ಪಟ್ಟಣ. ಅದರಲ್ಲಿ ಸ್ವಲ್ಪ ಜನರು ಇದ್ದರು. ಒಬ್ಬ ದೊಡ್ಡ ಅರಸನು ಅದಕ್ಕೆ ವಿರುದ್ಧವಾಗಿ ಬಂದು ಮುತ್ತಿಗೆ ಹಾಕಿ ಅಲ್ಲಿ ದೊಡ್ಡ ದಿಬ್ಬಗಳನ್ನು ಹಾಕಿದನು.
Oasr sie siti srisrik ma mwet na pu muta we. Na sie tokosra na ku tuku mweuni acn sac. El kuhlusya ac akoo in fokolak pot uh ac utyak.
15 ೧೫ ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು. ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ.
Oasr sie mukul wi muta in acn sac. El sukasrup, tuh el lalmwetmet, ac el ku na in molela siti sac. Tusruktu wanginna mwet lohang nu sel.
16 ೧೬ ನಾನು ಇದನ್ನು ನೋಡಿ ಬಲಕ್ಕಿಂತ ಜ್ಞಾನವೇ ಶ್ರೇಷ್ಠ, ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರ ಮಾಡಿ ಅವನ ಮಾತುಗಳನ್ನು ಗಮನಿಸುವುದಿಲ್ಲ ಅಂದುಕೊಂಡೆನು.
Nga fahk pacl nukewa lah lalmwetmet uh wo liki ku, tusruktu wangin mwet nunku mu mwet sukasrup ku in lalmwetmet, pwanang elos tiana lohang nu ke ma mwet sukasrup uh fahk.
17 ೧೭ ಹುಚ್ಚರನ್ನು ಆಳುವವನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಕೇಳಿಸುತ್ತದೆ.
Wo in porongo pusra fisrasr lun sie mwet lalmwetmet, liki pusren wowoyak lun sie mwet kol inmasrlon mwet lalfon.
18 ೧೮ ಯುದ್ಧದ ಆಯುಧಗಳಿಗಿಂತಲೂ ಜ್ಞಾನವೇ ಉತ್ತಮ. ಆದರೆ ಒಬ್ಬ ಪಾಪಿಯು ಬಹಳ ಶುಭವನ್ನು ಹಾಳುಮಾಡುತ್ತಾನೆ.
Yohk ma wo tuku ke lalmwetmet liki na kufwen mwe mweun, tusruk sie mwet koluk el ku in forteya ma wo puspis.