< ಎಫೆಸದವರಿಗೆ ಬರೆದ ಪತ್ರಿಕೆ 3 >

1 ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ.
Hessa gisho, taani, Phawuloosi, Ayhude gidonna hintte gisho Kiristtoos Yesuusan qasho asi gidas.
2 ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ,
Ta hinttena maaddana mela Xoossay ba aadho keehatethan taw immida ha oosuwabaa hintte loythi si7ideta.
3 ಆತನು ಮರ್ಮವನ್ನು ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ.
Ta hinttew kase qanthan xaafidayssada Xoossay ba xuuraa qonccethan taw qonccisis.
4 ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು.
Ta xaafidayssa hintte nabbabiya wode Kiristtoosa xuuraa ta ay mela eridaakko hintte akeekanaw dandda7eeta.
5 ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.
Ha xuuray geeshsha hawaaretasinne nabetas ha77i Ayyaana baggara qonccidayssada beni wode asaas hessada qonccisibeenna.
6 ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.
Xuuray hayssa: Ayhude gidonna asay Wonggelaa baggara Isra7eeletara issife Xoossaa anjjuwaa laattoosona. Isra7eeletara issi keetha asi gidoosona; Kiristtoos Yesuusa baggaara Xoossaa ufayssa qaala ekkoosona.
7 ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.
Xoossay ba oothiya wolqqaa baggara taw immida aadho keehatethan ha Wonggelas oosanchcho gidas.
8 ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ
Taani geeshshata ubbaafe laafa gidikkoka Ayhude gidonna asaas zawi baynna Kiristtoosa duretethaa Wonggelaa odana mela ha aadho keehatethay taw imettis.
9 ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು. (aiōn g165)
Qassi kase wodiyan ubbaa medhdhida Xoossan qosettidi de7iya xuuras, Xoossaa qofay aybeekko qonccisanaw aadho keehatethay taw imettis. (aiōn g165)
10 ೧೦ ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು. (aiōn g165)
Xoossay hessa oothiday ha77i wodiyan woosa keetha baggara salo sohuwan de7iya halaqatasinne haareyssatas ba dumma dumma qonccethaa erisanaassa.
11 ೧೧
Xoossay ba merinaa qofaa nu Godaa Kiristtoos Yesuusa baggara polanaw hessa oothis. (aiōn g165)
12 ೧೨ ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.
Nu ammanon yashshi baynna Xoossako shiiqana mela Kiristtoosi nuus minotethinne la77atethi immis.
13 ೧೩ ಆದ್ದರಿಂದ ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.
Taani hintte gisho waaye ekkiya gisho, hintte ta waayan yeellatonnaada hinttena woossays; taani hintte bonchchuwas waayettays.
14 ೧೪ ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು,
Taani aawa sinthan gulbbatada woossey hessa gishossa.
15 ೧೫
Saloninne sa7an de7iya issi issi soo asay iyan sunthettees.
16 ೧೬ ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ,
Xoossay ba bonchcho duretethaafe hintte garssa asatethaa minthiya wolqqaa ba Ayyaana baggara immana mela hinttew woossays.
17 ೧೭ ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.
Qassi ammanon Kiristtoosi hintte wozanan daana melanne hintte siiqon xapho yeddidi minnidi daana mela woossays.
18 ೧೮ ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ,
Hessadakka, Kiristtoosa siiqoy ay mela dalggeko, adusseeko, dhoqqekonne ciimmooko geeshshata ubbaara eriya wolqqaa hintte akeekana mela woossays.
19 ೧೯ ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
Eratethaafe aadhdhiya Kiristtoosa siiquwa hintte erana mela qassi de7o immiya Xoossaa wolqqan hintte kumana mela ta woossays.
20 ೨೦ ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ
Hiza, nu giddon oothiya ba wolqqaa baggara nuuni woosseyssafe woykko qoppeyssafe aathidi oothanaw dandda7iya Xoossaas,
21 ೨೧ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್. (aiōn g165)
woosa keethaninne Kiristtoos Yesuusan wode ubban merinaappe merinaa gakkanaw bonchchoy gido. Amin7i. (aiōn g165)

< ಎಫೆಸದವರಿಗೆ ಬರೆದ ಪತ್ರಿಕೆ 3 >