< ಎಫೆಸದವರಿಗೆ ಬರೆದ ಪತ್ರಿಕೆ 4 >

1 ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
Antele nkashile yagaliliwe hwa jili ya Gosi, embalabhe mjende shinzashinza na uwite ambao Ungolobhe abhakwizizwe.
2 ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
Mukhale esha wishindishe eshi Gosi no hogowe no ujimbi. Mwejelanaje esha ganane.
3 ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.
Umbaji ajimbizwe na bheshe umoja uwe Roho katieshefungo eshe lyeteho.
4 ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,
Huli ubele gume ne Roho emo neshe shamli antele mwali mkwiziwe eshi uhakika upambamle umo uwewite wenyu.
5 ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ,
Ugosi aliumo ulyeteho lumo, ulwuzwo lumo. Ungolobhe omo
6 ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.
na uBaba wabhonti. Umwahale we mambo gonti na gonti gali mhati yakwe.
7 ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ.
Shilo muntu apewewe eshipawa afwatane neshipimo esha pawa esha Kristi.
8 ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”
Neshe nsimbo shaziyanga: “Alushile amwanya eshi alogozwezwe abhe pinywe uwe utumwa. Afumizi evipawa wa bhantu.”
9 “ಏರಿಹೋದನೆಂದು” ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ?
Yenu emana ya, “Alushe,” isipokuwa ahishile epande zwonti ezwa pasi pa dunia?
10 ೧೦ ಇಳಿದು ಬಂದಾತನು, ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ.
Umwahule ahishile yoyola umuntu ambaye nantele alushile patali juu ye mwanya zwonti. Abhombile esho ili abhehwakwe uwe kati evintu vyonti.
11 ೧೧ ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.
Kristi afumizwe evipawa kama neshe asontizi akuwa abhanjilisti, adimi, amwalimwa.
12 ೧೨ ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ,
Abhombile eshe abhawezeshe abhalyeteho ili embombo eyuzeje ubele ugwa Kristi.
13 ೧೩ ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು.
Abhomba eshi hadi ate tenti tifishile undwemo uwe lyeteho na amaalifa aga mwana wakwe Ungolobhe. Abhombile esho hadi tiwezwe akhome neshe bhala bhabhafishie ekimo kamili esha Kristi.
14 ೧೪ ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,
Ene antele tigaje bhebhana tigaje ruswe ruswe ohu no hwo ili tigaje ahwegwe na kila aina eye hala elyefundisho, age hila ezwa bhantu hu njelenje uwa khopehanye wautejile.
15 ೧೫ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ.
Eshi tiyanje elyoli eye lugano nakule zayidi hwidala lyonti mhati yakwe itwe yo Kristi.
16 ೧೬ ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.
Kristi abhonganisizwe pandwemo ubele ugwa bhoziwa guunganisiwe ubele gwonti gukwe nazenjeshe gwogwo hulugano.
17 ೧೭ ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.
Antale eyanga eli, embalabha hwa Gosi: Mgaje ajende antele neshe abhantu abhamataifa wabhajenda muubatiuli uwenjele zwao.
18 ೧೮ ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ.
Bhaponyizwe enkisi museo zwao bhatagwilwe afume huwomi uwa Ngolobhe hulema wauli mhati yao kwa sabu ya ukhome uwe moyo gao.
19 ೧೯ ಅವರು ಲಜ್ಜೆಗೆಟ್ಟವರಾಗಿ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ.
Sebha hwiyovwa esoni bhahwikabizizwe bhebho huntavu humatendo gao age ntavu, kila aina ya uwimi.
20 ೨೦ ನೀವಾದರೋ ಕ್ರಿಸ್ತನ ಬೋಧನೆಯನ್ನು ಅಂಥದೆಂದು ಕಲಿತುಕೊಳ್ಳಲಿಲ್ಲ.
Nantele eshi seshasho shamwanyiye ahusu Kristi.
21 ೨೧ ಆತನಿಂದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ.
Elola antele mwovzwe ahusu umwahale elola aje mwali mmanyiziwa hwamwahale neshe elyoli yilimuhati ya Yesu.
22 ೨೨ ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.
Lazima mwaule amambo gonti gagajendelela ne njendelelo zweyu ezwe mwaha, uuntu uwemwaha uuntu uwemwaha waubhola afwate ne tamaa ezwe hopelo.
23 ೨೩ ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.
Auli untu wenyu uwemwaha ili nkaombwe shipya huroho eye njele zwenyu.
24 ೨೪ ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.
Bhombi eshe muwezwalane no Ngolobhe. Ubhombwelwe hehaki eye uzelu uwe lyoli.
25 ೨೫ ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.
Eshi bheshi patali ukhopelaji. “Yangaji elyoli, shila muntu no jirani wakwe,” afwanaje tili bhaputi aje shila munti hwa wamwao.
26 ೨೬ “ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.
Mbhaje ne nguru, lelo mgayejeswe sumlinazwe nguru zwenyu.
27 ೨೭ ಸೈತಾನನಿಗೆ ಅವಕಾಶಕೊಡಬೇಡಿರಿ.
Mganje hupele usetano moyo.
28 ೨೮ ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.
Yeyonti yahwibha lazima gajewibhe antele. Badala yakwe lazima abhombe embombo. Abhombe ambombo efaida humakhono gakwe ili awezwe humwavwe umuntu yalineshida.
29 ೨೯ ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.
Ekauli embibhi egaje afume mumalomo genyu. Badala yakwe enongwa lazima gafume mumalomu genyu abhapele efaida bhala bhabhahavwa.
30 ೩೦ ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
Nantele mgaje hunkungubhazwe Roho ufije uwa Ngolobhe hwa mwahale mubhehwelye muwaule hunsiku eye waule.
31 ೩೧ ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.
Lazima mubheshe hutali ukhali wonti, nelyoyo ne nkuni ibho na endigo pandwemo na shila namna eye mbibhi bhaji bhinza mwemwe hwa mwemwe.
32 ೩೨ ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
Mubhanje ne huruma msajilana je mwemwe hwa mwemwe, neshe shila Ungolobhe ashilile Kristi shabha sajiye amwe.

< ಎಫೆಸದವರಿಗೆ ಬರೆದ ಪತ್ರಿಕೆ 4 >