< ಎಫೆಸದವರಿಗೆ ಬರೆದ ಪತ್ರಿಕೆ 5 >
1 ೧ ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.
Kwa hiyo, mfuateni Mungu kama watoto wapendwao,
2 ೨ ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
mkiishi maisha ya upendo, kama vile Kristo alivyotupenda sisi akajitoa kwa ajili yetu kuwa sadaka yenye harufu nzuri na dhabihu kwa Mungu.
3 ೩ ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.
Lakini uasherati, usitajwe miongoni mwenu, wala uchafu wa aina yoyote, wala tamaa, kwa sababu mambo haya hayastahili miongoni mwa watakatifu.
4 ೪ ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.
Wala pasiwepo mazungumzo machafu ya aibu, au maneno ya upuzi au mzaha, ambayo hayafai, badala yake mshukuruni Mungu.
5 ೫ ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.
Kwa habari ya mambo haya mjue hakika kwamba: Msherati, wala mtu mwovu, wala mwenye tamaa mbaya, mtu kama huyo ni mwabudu sanamu, kamwe hataurithi Ufalme wa Kristo na wa Mungu.
6 ೬ ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.
Mtu yeyote na asiwadanganye kwa maneno matupu, kwa kuwa hasira ya Mungu huwaka kwa sababu ya mambo kama haya juu ya wale wasiomtii.
7 ೭ ಆದುದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ.
Kwa hiyo, msishirikiane nao.
8 ೮ ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.
Kwa maana zamani ninyi mlikuwa giza, lakini sasa ninyi ni nuru katika Bwana. Enendeni kama watoto wa nuru
9 ೯ ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.
(kwa kuwa tunda la nuru hupatikana katika wema wote, haki na kweli),
10 ೧೦ ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ.
nanyi tafuteni yale yanayompendeza Bwana.
11 ೧೧ ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.
Msishiriki matendo ya giza yasiyofaa, bali yafichueni.
12 ೧೨ ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.
Kwa maana ni aibu hata kutaja mambo yale ambayo wasiotii wanayafanya sirini.
13 ೧೩ ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ.
Lakini kila kitu kilichowekwa nuruni, huonekana,
14 ೧೪ ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.
kwa kuwa nuru ndiyo hufanya kila kitu kionekane. Hii ndiyo sababu imesemekana: “Amka, wewe uliyelala, ufufuke kutoka kwa wafu, naye Kristo atakuangazia.”
15 ೧೫ ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.
Kwa hiyo angalieni sana jinsi mnavyoenenda, si kama watu wasio na hekima, bali kama wenye hekima,
16 ೧೬ ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.
mkiukomboa wakati, kwa sababu nyakati hizi ni za uovu.
17 ೧೭ ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.
Kwa hiyo msiwe wajinga, bali mpate kujua nini mapenzi ya Bwana.
18 ೧೮ ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,
Pia msilewe kwa mvinyo, ambamo ndani yake mna upotovu, bali mjazwe Roho.
19 ೧೯ ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.
Msemezane ninyi kwa ninyi kwa zaburi, nyimbo na tenzi za rohoni, mkimwimbia na kumsifu Bwana mioyoni mwenu,
20 ೨೦ ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.
siku zote mkimshukuru Mungu Baba kwa kila jambo katika Jina la Bwana wetu Yesu Kristo.
21 ೨೧ ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.
Nyenyekeaneni ninyi kwa ninyi kwa heshima kwa ajili ya Kristo.
22 ೨೨ ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
Ninyi wake, watiini waume zenu kama kumtii Bwana.
23 ೨೩ ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.
Kwa maana mume ni kichwa cha mkewe kama vile Kristo alivyo kichwa cha Kanisa, ambalo ni mwili wake, naye Kristo ni Mwokozi wake.
24 ೨೪ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.
Basi, kama vile Kanisa linavyomtii Kristo, vivyo hivyo na wake nao imewapasa kuwatii waume zao kwa kila jambo.
25 ೨೫ ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
Ninyi waume, wapendeni wake zenu, kama vile Kristo alivyolipenda Kanisa akajitoa kwa ajili yake
26 ೨೬ ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
kusudi alifanye takatifu, akilitakasa kwa kuliosha kwa maji katika Neno lake,
27 ೨೭ ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.
apate kujiletea Kanisa tukufu lisilo na doa wala kunyanzi au waa lolote, bali takatifu na lisilo na hatia.
28 ೨೮ ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.
Vivyo hivyo imewapasa waume kuwapenda wake zao kama miili yao wenyewe. Ampendaye mkewe hujipenda mwenyewe.
29 ೨೯ ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ.
Hakuna mtu anayeuchukia mwili wake mwenyewe, bali huulisha na kuutunza vizuri, kama Kristo anavyolitunza Kanisa lake.
30 ೩೦ ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.
Sisi tu viungo vya mwili wake.
31 ೩೧ “ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ.
“Kwa sababu hii, mwanaume atamwacha baba yake na mama yake, naye ataambatana na mkewe, na hao wawili watakuwa mwili mmoja.”
32 ೩೨ ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.
Siri hii ni kubwa, bali mimi nanena kuhusu Kristo na Kanisa.
33 ೩೩ ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.
Hata hivyo, kila mmoja wenu ampende mkewe kama anavyoipenda nafsi yake mwenyewe, naye mke lazima amheshimu mumewe.