< ಎಫೆಸದವರಿಗೆ ಬರೆದ ಪತ್ರಿಕೆ 6 >

1 ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು.
A hana, cukunoni anu tarsa a ka co barki Asere ane ini imum iriri.
2 ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,
Utarsa a co nan ka ino ine ini imum ituba intaa na nu cwnti.
3 ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.”
Barki riye tiwe me tiwi joko une.
4 ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
Shi, aka co kati iwu mu riba ma hana ashime mu corno me, wuza ni anime bati i hunguko we wa rusi tize nan nu tarsa Asere.
5 ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.
Arere, tarsani a ka co tikura ti shi me ikuri i nya niwe a ce gusi u tarsa u Yesu uni izini.
6 ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.
Azo uguna wa wu ma ruba muron uganiya sa wa hira shi a hira uwuza u ka tum, ca kacukuno katuma ka Yesu mani nicw ni meme, wa nu imum besa Asere a nyara a mu eiba mi shi me.
7 ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ.
Wu zani katuma ka iri barki Asere azo agi barki ana buu.
8 ಯಾಕೆಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ.
Rin hini debe sa ma wuza katuma ka riri madi kabi imum besanma wiza ahira Asere, urere mani unu ge be sanma zo me nqn Asere ba.
9 ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.
Shi ak co ati kura wuzani arere ashi me imum iriei sarki vat ti ushime a co udang mani madi nya shi imum be sizi.
10 ೧೦ ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
Vat in ani me una ni kara a hira Asere a nyimo u zina umeme.
11 ೧೧ ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
So kini tironga tini kono ta Asere i wusi fi kara nan una bi be bi zenze bi hino me.
12 ೧೨ ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. (aiōn g165)
Azo uguna, ti kara tiru ti ni pum nan maye mani, nan nibe izenze ini wan na Agomo ibe ima re sa iraa ati hira sasas. (aiōn g165)
13 ೧೩ ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
Barki ani me, soki ni vat yi runga yini kono ta Asere bati ikem itonno Asesere ibe iburi uganiya iburu i geme, tonno ni gangang.
14 ೧೪ ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,
Barki ani me tonno ni ini kara itaesi ni kadure nan ma hene ma huma.
15 ೧೫ ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
Soki a kpatak barki tanu ti boo tize tu runta i cukuno a huma.
16 ೧೬ ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.
U, inmta uwaga u ka dundure, une uni kpahiza ti irra ti nu bibe bi zen ze bi gino me.
17 ೧೭ ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.
Zika, bi tagiya bi ti ciku ti runta wani vira ubi bi niriri, une uni tize ta Asere.
18 ೧೮ ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.
A nyimo a biringara, nan nu ubari Asere, be ni i irri u kabirka be sa Asere madi kabirka shi barki, anu age me sa wa ceki me.
19 ೧೯ ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
Barki, ani me wunani mi biringara bika kadure ka ge be sa in di nya, inki ma poko anyo imum me sa ma buka atize ta Aseee i cukuno i mum u kaba ahira anu.
20 ೨೦ ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.
Sa in zi una kadura a nyimo inyang, u denge uni uriri me sa in rani imboo tize ini riba ihuma.
21 ೨೧ ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು.
I cukuno anu rusa vat imum be sa in rani a nyimo me, tycikus, uhenu unu hem, ino nu, una ka dumduda ahira Assre modo nuki shi bay imum me si izi.
22 ೨೨ ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
Ine ini ya wuna ma tuburko me barki ka ge katunama me, i rusi imum besa ti ra ni a nyimo me, ma kuri ma tarsi in shi a nyimo a mu riba mushi me.
23 ೨೩ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ.
I cukuno merum nan ni henu in taa ni a ce a nyimo uhbindirko usuro Asere aco nan Asere Yesu una bura uru.
24 ೨೪ ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.
Urunta ucukuno nan de besa ma Tafina nan Asere unu bina uru, wanu Tafina uge be sa uzonu in ni we numara.

< ಎಫೆಸದವರಿಗೆ ಬರೆದ ಪತ್ರಿಕೆ 6 >