< ಎಫೆಸದವರಿಗೆ ಬರೆದ ಪತ್ರಿಕೆ 6 >
1 ೧ ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು.
I barn, varer hörige edra föräldrar i Herranom; ty det är rättvist.
2 ೨ ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,
Hedra din fader och moder; hvilket är det första bud, som löfte med sig hafver:
3 ೩ ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.”
På det dig skall väl gå, och du må blifva långlifvad på jordene.
4 ೪ ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
I fäder, reter icke edor barn till vrede; utan uppföder dem i tukt och Herrans förmaning.
5 ೫ ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.
I tjenare, varer hörige edrom lekamligom herrom med räddhåga och bäfvan, i edor hjertas enfaldighet, såsom Christo;
6 ೬ ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.
Icke tjenande allena för ögonen, såsom menniskom till vilja; utan såsom Christi tjenare, görande det Gud vill utaf hjertat.
7 ೭ ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ.
Med välviljoghet låter eder tycka, att I tjenen Herranom, och icke menniskom;
8 ೮ ಯಾಕೆಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ.
Vetande, att hvad godt hvar och en gör, det skall han igenfå af Herranom, ehvad han är tjenare eller fri.
9 ೯ ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.
Och I herrar, görer ock detsamma emot dem, och öfvergifver trug; vetande, att ock edar Herre är i himmelen, och för honom är intet anseende till personen.
10 ೧೦ ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
På det sista, käre bröder, varer starke i Herranom, och i hans starkhets magt.
11 ೧೧ ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
Ikläder eder allt Guds harnesk, på det I mågen stå emot djefvulens listiga anlopp.
12 ೧೨ ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. (aiōn )
Ty vi hafvom icke strid emot kött och blod; utan emot Förstar och väldiga, nämliga emot verldenes herrar, de som regera i denna verldenes mörker, emot de onda andar under himmelen. (aiōn )
13 ೧೩ ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
Derföre, tager på eder allt Guds harnesk, att I mågen emotstå i den onda dagen, och all ting väl uträtta, och beståndande blifva.
14 ೧೪ ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,
Så står nu omgjordade kringom edra länder med sanningene, och iklädde rättfärdighetenes kräfveto;
15 ೧೫ ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
Och fötterna skodde, att I mågen redo vara till fridsens Evangelium.
16 ೧೬ ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.
Men öfver all ting tager trones sköld, med hvilkom I kunnen utsläcka all hins ondas glödande skott.
17 ೧೭ ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.
Och tager på eder salighetenes hjelm, och Andans svärd, som är Guds ord;
18 ೧೮ ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.
I all bön och åkallan, alltid bedjande i Andanom; och vaker dertill, med all idkelighet, och bön för all helgon;
19 ೧೯ ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
Och för mig, att mig måtte gifvet varda tala dristeliga med öppen mun, att jag måtte kunniga göra Evangelii hemlighet;
20 ೨೦ ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.
Hvilkets bådskap jag är i denna kedjon; på det jag deruti må fri tala, som mig bör tala.
21 ೨೧ ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು.
Men på det I mågen ock veta, huru med oss tillstår, och hvad jag gör, skall Tychicus, min älskelige broder och trogne tjenare i Herranom, eder undervisa;
22 ೨೨ ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
Hvilken jag derföre sände till eder, att I skolen få veta, huru med mig tillstår; och att han skulle trösta edor hjerta.
23 ೨೩ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ.
Frid vare bröderna, och kärlek med trone, af Gud Fader och Herranom Jesu Christo.
24 ೨೪ ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.
Nåd vare med allom, som vår Herra Jesum Christum rättsinneliga kär hafva. Amen.