< ಎಫೆಸದವರಿಗೆ ಬರೆದ ಪತ್ರಿಕೆ 1 >
1 ೧ ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ,
Me bulus udura u vana Asere a hira katuma ka Asere, uhana ahira anu uzatu madinisa wa ra u Afisus, nan an de sa wa hem in vana Asere.
2 ೨ ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು ಶಾಂತಿಯೂ ಉಂಟಾಗಲಿ.
Imum iriri a hira a shi me, nan kadura ka riri u suru ahira Asere aco aru nan vana Asere.
3 ೩ ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
Nan imum iriri ya Asere nan aco nan vana Asere, de sa ma nya duru imum iriri na ko de ya imum iriri a nymo a vana Asere.
4 ೪ ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.
Kasi sa ma zaukan be duru a nyimo ameme, uganiya sa da ma mu tuba unee ba, barki ti cukuno anu a lau, anu zatu madini a nyimo a meme nan a nyio u su.
5 ೫ ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು.
Uganiya sa mamu, kurzon duru ti cukuno ahana a meme, usuru u Yesu vana Asere, kasi u ira u meme.
6 ೬ ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.
A wuzi imumu i geme vat, barki a norziko niza na Asere, ige sa a nyanki duru, barki u hem u vana uru.
7 ೭ ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.
A hira ame ani ta kem ubura a hira a maye ma me, u ceki u ti mum ti zenzen turu, ahira u kem ti mumu ti riri ta Asere.
8 ೮ ಈ ಕೃಪೆಯನ್ನು ಆತನು ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ.
ge sa ma nya duru, unu rusa u meme.
9 ೯ ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.
Ma bezin duru imum be sa ya ra iriba imeme, ti mumu ti riri tu meme sa ma nya ma nyinca ahira a vana umeme.
10 ೧೦ ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.
Vat imum ige me ubarka, uni barki u myinca uganiya sa mu sa ti mum ahira a vana umemu ti mum a hira be a vana Asere.
11 ೧೧ ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.
A hira a me ani a kurzo duru a hana a kura Asere, a kurzon duru ani me barki de sa ma boo ti mumu tige sa ma nyari uwuza me.
12 ೧೨ ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.
Barki haru sa ta tubi nya iriba ahira a meme ti wuzi ti cukun ti ni nonzo nu meme.
13 ೧೩ ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.
A yimo ame ani ta kuri ti kunna tize ti huma, tize tu kaba uru, anyimo a meme sa ta nya mu riba muru.
14 ೧೪ ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ.
Me mani unu bezizi, uru ti mumu u hana uganiya sa ta kem me, barki ani me, ni nonzo nu me nini.
15 ೧೫ ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ,
Barki ani me ma kunna tize ti huma ti shi me ahira Yesu vana Asere, nan uhem uru me, ahana alau.
16 ೧೬ ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ.
Daki ma diri unonzo Asere barki shi ba, vat uganiya sain zin nu wuza u shi biringara.
17 ೧೭ ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.
Unu guna Asere avana u Yesu, aco unu dang, ma nya shi bibe bu gamara nan bi boo urusa Asere.
18 ೧೮ ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,
In kuru in wu shi irusi eje iriba, barki irusi nyanini tize ti gino me ta titan duru ni, nan nyanini gwardan sa i eze barki ana lau.
19 ೧೯ ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ.
Nan ko di nyanini imumu i dandang i rusa anu zatu bata sa ma zinu boo me, ahira aru aru, haru anu nya iriba, i boo a nyimo ani kara nu meme.
20 ೨೦ ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ
De sa ma boo ahira Asere uganiya sa ma wu ahirza me a nya me a hira ucukuno a tari tina reh tu meme a. yimo Asesere.
21 ೨೧ ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು. (aiōn )
A nyimo a ni za ni ti Gomo nanu bari wan ni kara, vat tiza tu neh, a zo tiza sa adi nya nueh cas, uhana i wono. (aiōn )
22 ೨೨ ಇದಲ್ಲದೆ ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು.
Aseri a nya ti mumu a tari tu bari uvana Asere, ma kuri ma nya a nyimo udenge Asere i cukuno unu inta u ti mumu vat.
23 ೨೩ ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.
Udenge Asere une uni ni pum ni vana Asere, u nyinca unu nyinca u ti mumu.