< ಎಸ್ತೇರಳು 1 >
1 ೧ ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.
and to be in/on/with day Ahasuerus he/she/it Ahasuerus [the] to reign from India and till Cush seven and twenty and hundred province
2 ೨ ಅಹಷ್ವೇರೋಷ ರಾಜನು ಶೂಷನ್ ಕೋಟೆಯಲ್ಲಿ ತನ್ನ ರಾಜಸಿಂಹಾಸದಲ್ಲಿ ಆಸೀನನಾಗಿ ಆಡಳಿತ ನಡೆಸುತ್ತಿದ್ದನು.
in/on/with day [the] they(masc.) like/as to dwell [the] king Ahasuerus upon throne royalty his which in/on/with Susa [the] palace
3 ೩ ಅವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಸರದಾರರಿಗೋಸ್ಕರವೂ ಮತ್ತು ಪರಿವಾರದವರಿಗಾಗಿ ಒಂದು ಔತಣ ಏರ್ಪಡಿಸಿದ್ದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ, ಪ್ರಧಾನರೂ ಮತ್ತು ಸಂಸ್ಥಾನದ ಅಧಿಕಾರಿಗಳೂ, ರಾಜನ ಸನ್ನಿಧಿಗೆ ಸೇರಿ ಬಂದಿದ್ದರು.
in/on/with year three to/for to reign him to make: offer feast to/for all ruler his and servant/slave his strength: soldiers Persia and Media [the] noble and ruler [the] province to/for face: before his
4 ೪ ಅವನು ಅನೇಕ ದಿನ ಅಂದರೆ, ನೂರ ಎಂಭತ್ತು ದಿನಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮತ್ತು ಮಹಾಮಹಿಮೆಯ ವೈಭವದ ಪ್ರತಾಪಗಳನ್ನೂ ಪ್ರದರ್ಶಿಸಿದನು.
in/on/with to see: see he [obj] riches glory royalty his and [obj] preciousness beauty greatness his day many eighty and hundred day
5 ೫ ಆ ನಂತರ ಅರಸನು ಶೂಷನ್ ಕೋಟೆಯಲ್ಲಿದ್ದ ಎಲ್ಲಾ ಶ್ರೇಷ್ಠರಿಗೂ ಮತ್ತು ಕನಿಷ್ಠರಿಗೂ ಅರಮನೆಯ ತೋಟದ ಆವರಣದಲ್ಲಿ ಏಳು ದಿನಗಳವರೆಗೂ ಔತಣಮಾಡಿಸಿದನು.
and in/on/with to fill [the] day [the] these to make: offer [the] king to/for all [the] people [the] to find in/on/with Susa [the] palace to/for from great: large and till small feast seven day in/on/with court garden palace [the] king
6 ೬ ಆ ತೋಟದ ಆವರಣವು ಬಿಳೀ ನೂಲಿನ ಬಟ್ಟೆಗಳೂ, ನೀಲಿಬಟ್ಟೆಗಳೂ, ಧೂಮ್ರವರ್ಣವುಳ್ಳ ನಾರಿನ ದಾರಗಳು ಮತ್ತು ಅಮೃತಶಿಲೆಯ ಕಲ್ಲುಕಂಬಗಳಿಗೆ ಕಟ್ಟಲಾದ ಬೆಳ್ಳಿಯ ಉಂಗುರ ಇವುಗಳಿಂದ ಅಲಂಕೃತವಾಗಿತ್ತು. ಜರತಾರಿ ಕಸೂತಿ ಹಾಕಿರುವ ಬೆಳ್ಳಿ ಬಂಗಾರದ ಸುಖಾಸನಗಳು, ಅವುಗಳನ್ನು ಕೆಂಪು, ಬಿಳಿ, ಹಳದಿ ಮತ್ತು ಕಪ್ಪು ಬಣ್ಣಗಳುಳ್ಳ ಅಮೃತಶಿಲೆಗಳ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲಾಗಿತ್ತು.
white fine linen and blue to grasp in/on/with cord fine linen and purple upon circuit silver: money and pillar alabaster bed gold and silver: money upon pavement porphyry and alabaster and mother-of-pearl and stone
7 ೭ ಬಂಗಾರದ ಪಾನ ಪಾತ್ರೆಗಳು ನಾನಾ ಆಕಾರದಲ್ಲಿದ್ದವು. ರಾಜದ್ರಾಕ್ಷಾರಸದ ಔತಣ ಕೂಟವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು.
and to water: drink in/on/with article/utensil gold and article/utensil from article/utensil to change and wine royalty many like/as hand: to [the] king
8 ೮ “ಪಾನಮಾಡುವುದರಲ್ಲಿ ಯಾರಿಗೂ ಒತ್ತಾಯಮಾಡಬಾರದು” ಎಂದು ರಾಜಾಜ್ಞೆಯಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದಂತೆ ಕೊಡಬೇಕೆಂದು ರಾಜನು ತನ್ನ ಎಲ್ಲಾ ಮನೆವಾರ್ತೆಯವರಿಗೆ ಆಜ್ಞಾಪಿಸಿದ್ದನು.
and [the] drinking like/as law nothing to compel for so to found [the] king upon all chief house: home his to/for to make: do like/as acceptance man and man
9 ೯ ವಷ್ಟಿ ರಾಣಿಯೂ ಅಹಷ್ವೇರೋಷ ರಾಜನ ಅರಮನೆಯಲ್ಲಿ ಸ್ತ್ರೀಯರಿಗೋಸ್ಕರ ಔತಣಮಾಡಿಸಿದಳು.
also Vashti [the] queen to make: offer feast woman house: home [the] royalty which to/for king Ahasuerus
10 ೧೦ ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ,
in/on/with day [the] seventh like/as be pleasing heart [the] king in/on/with wine to say to/for Mehuman Biztha Harbona Bigtha and Abagtha Zethar and Carkas seven [the] eunuch [the] to minister with face: before [the] king Ahasuerus
11 ೧೧ “ವಷ್ಟಿ ರಾಣಿಯು ರಾಜಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ” ಎಂದು ಆಜ್ಞಾಪಿಸಿದನು. ಅವಳು ಅತಿ ಸೌಂದರ್ಯವತಿಯಾಗಿದ್ದಳು.
to/for to come (in): bring [obj] Vashti [the] queen to/for face: before [the] king in/on/with crown royalty to/for to see: see [the] people and [the] ruler [obj] beauty her for pleasant appearance he/she/it
12 ೧೨ ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು.
and to refuse [the] queen Vashti to/for to come (in): come in/on/with word [the] king which in/on/with hand: to [the] eunuch and be angry [the] king much and rage his to burn: burn in/on/with him
13 ೧೩ ವಿಧಿನಾಯ್ಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.
and to say [the] king to/for wise to know [the] time for so Chronicles [the] king to/for face: before all to know law and judgment
14 ೧೪ ಅರಸನಾದ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಮತ್ತು ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಪಾರಸಿಯ ಮತ್ತು ಮೇದ್ಯ ದೇಶಗಳ ರಾಜ ಪ್ರಮುಖರಾಗಿದ್ದರು.
and [the] near to(wards) him Carshena Shethar Admatha Tarshish Meres Marsena Memucan seven ruler Persia and Media to see: see face [the] king [the] to dwell first in/on/with royalty
15 ೧೫ ಅವನು ಸಮುಯೋಚಿತ ಜ್ಞಾನವುಳ್ಳವರಾದ ಇವರನ್ನು, “ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಗೊಳ್ಳದೆ ಹೋದ ವಷ್ಟಿ ರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು?” ಎಂದು ಕೇಳಿದನು.
like/as law what? to/for to make: do in/on/with queen Vashti upon which not to make: do [obj] command [the] king Ahasuerus in/on/with hand: to [the] eunuch
16 ೧೬ ಆಗ ಮೆಮೂಕಾನನು ಅರಸನ ಮತ್ತು ಸರದಾರರ ಮುಂದೆ, “ವಷ್ಟಿ ರಾಣಿಯ ಅಪರಾಧವು ಅರಸನೊಬ್ಬನಿಗೇ ವಿರುದ್ಧವಾದುದಲ್ಲ.
and to say (Memucan *Q(k)*) to/for face: before [the] king and [the] ruler not upon [the] king to/for alone him to pervert Vashti [the] queen for upon all [the] ruler and upon all [the] people which in/on/with all province [the] king Ahasuerus
17 ೧೭ ರಾಣಿಯ ನಡತೆಯು ಎಲ್ಲಾ ಸ್ತ್ರೀಯರಿಗೂ ಗೊತ್ತಾಗಿ ಅವರೂ ತಮ್ಮ ಗಂಡಂದಿರ ಮಾತನ್ನು ನಿರಾಕರಿಸುವುದಕ್ಕೆ ಮತ್ತು ತಿರಸ್ಕರಿಸುವುದಕ್ಕೆ ಇದು ಕಾರಣವಾಗಬಹುದು. ಅವರು ‘ಅರಸನಾದ ಅಹಷ್ವೇರೋಷನು ವಷ್ಟಿ ರಾಣಿಯನ್ನು ರಾಜಸನ್ನಿಧಿಗೆ ಬರಬೇಕೆಂದು ಹೇಳಿಕಳುಹಿಸಿದಾಗ ಆಕೆಯು ಹೋಗಲಿಲ್ಲವಲ್ಲಾ’ ಅನ್ನುವರು.
for to come out: speak word: deed [the] queen upon all [the] woman to/for to despise master: husband their in/on/with eye: appearance their in/on/with to say they [the] king Ahasuerus to say to/for to come (in): bring [obj] Vashti [the] queen to/for face: before his and not to come (in): come
18 ೧೮ ರಾಣಿಯ ಮಾತನ್ನು ಕೇಳಿದ ಪಾರಸಿಯ ಮತ್ತು ಮೇದ್ಯ ಕುಲೀನ ಸ್ತ್ರೀಯರು ಈ ಹೊತ್ತೇ ಅದನ್ನು ಅರಸನ ಎಲ್ಲಾ ಸರದಾರರಿಗೂ ಹೇಳುವರು. ಹೀಗೆ ಎಷ್ಟೋ ತಿರಸ್ಕಾರವೂ ಮತ್ತು ಕೋಪವೂ ಉಂಟಾಗುವುದು.
and [the] day: today [the] this to say princess Persia and Media which to hear: hear [obj] word: deed [the] queen to/for all ruler [the] king and like/as sufficiency contempt and wrath
19 ೧೯ ಅರಸನು ಒಪ್ಪುವುದಾದರೆ ವಷ್ಟಿಯು ಪುನಃ ಅಹಷ್ವೇರೋಷ ರಾಜನು ಸನ್ನಿಧಿಗೆ ಬರಲೇ ಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯ ಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಳಿಗೆ ಕೊಡಲಿ.
if upon [the] king pleasant to come out: come word royalty from to/for face: before his and to write in/on/with law Persia and Mede and not to pass which not to come (in): come Vashti to/for face: before [the] king Ahasuerus and royalty her to give: give [the] king to/for neighbor her [the] pleasant from her
20 ೨೦ ಈ ರಾಜನಿರ್ಣಯವು ಬಹು ವಿಸ್ತಾರವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ, ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವ ಸಲ್ಲಿಸುವರು” ಎಂದು ಹೇಳಿದನು.
and to hear: proclaim edict [the] king which to make in/on/with all royalty his for many he/she/it and all [the] woman to give: give preciousness to/for master: husband their to/for from great: large and till small
21 ೨೧ ಈ ಮಾತು ಅರಸನಿಗೂ, ಅವನ ಸರದಾರರಿಗೂ ಒಳ್ಳೆಯದೆಂದು ತೋರಿದಾಗ ಅರಸನು ಮೆಮೂಕಾನನ ಮಾತಿನಂತೆಯೇ ಮಾಡಿದನು.
and be good [the] word in/on/with eye: appearance [the] king and [the] ruler and to make: do [the] king like/as word Memucan
22 ೨೨ ಅವನು, “ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿರುವನು ಮತ್ತು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕು” ಎಂಬುದಾಗಿ ಎಲ್ಲಾ ರಾಜ ಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು.
and to send: depart scroll: document to(wards) all province [the] king to(wards) province and province like/as writing her and to(wards) people and people like/as tongue: language his to/for to be all man to rule in/on/with house: household his and to speak: speak like/as tongue: language people his