< ಎಸ್ತೇರಳು 10 >

1 ಅಹಷ್ವೇರೋಷ್ ರಾಜನು ತನ್ನ ರಾಜ್ಯಕ್ಕೆ ಸೇರಿರುವ ಎಲ್ಲಾ ದೇಶಗಳಿಗೂ ಮತ್ತು ಸಮುದ್ರದ್ವೀಪಗಳಿಗೂ ತೆರಿಗೆಯನ್ನು ವಿಧಿಸಿದನು.
וַיָּשֶׂם֩ הַמֶּ֨לֶךְ אחשרש ׀ מַ֛ס עַל־הָאָ֖רֶץ וְאִיֵּ֥י הַיָּֽם׃
2 ಅವನ ಬಲ ಪ್ರತಾಪಯುಕ್ತವಾದ ಕೃತ್ಯಗಳೂ, ಅವನ ಅನುಗ್ರಹದಿಂದ ಮೊರ್ದೆಕೈಗೆ ಪ್ರಾಪ್ತವಾದ ದೊಡ್ಡಸ್ತಿಕೆಯ ವಿವರಗಳು ಮೇದ್ಯ ಮತ್ತು ಪಾರಸಿಯ ರಾಜಕಾಲ ವೃತ್ತಾಂತಗ್ರಂಥದಲ್ಲಿ ಬರೆದಿರುತ್ತವೆ.
וְכָל־מַעֲשֵׂ֤ה תָקְפּוֹ֙ וּגְב֣וּרָת֔וֹ וּפָרָשַׁת֙ גְּדֻלַּ֣ת מָרְדֳּכַ֔י אֲשֶׁ֥ר גִּדְּל֖וֹ הַמֶּ֑לֶךְ הֲלוֹא־הֵ֣ם כְּתוּבִ֗ים עַל־סֵ֙פֶר֙ דִּבְרֵ֣י הַיָּמִ֔ים לְמַלְכֵ֖י מָדַ֥י וּפָרָֽס׃
3 ಯೆಹೂದ್ಯನಾದ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನ ದ್ವಿತೀಯ ಸ್ಥಾನದವನೂ, ಯೆಹೂದ್ಯರಲ್ಲಿ ಸನ್ಮಾನಿತನೂ, ತನ್ನ ಬಂಧುಬಳಗಕ್ಕೆ ಪ್ರೀತಿಪಾತ್ರನೂ, ಸ್ವಜನರ ಹಿತಚಿಂತಕನೂ ಮತ್ತು ಸ್ವಕುಲದವರೆಲ್ಲರಿಗೂ ಶಾಂತಿದೂತನೂ, ಪ್ರಾರ್ಥನಾಪರನೂ ಆಗಿದ್ದನು.
כִּ֣י ׀ מָרְדֳּכַ֣י הַיְּהוּדִ֗י מִשְׁנֶה֙ לַמֶּ֣לֶךְ אֲחַשְׁוֵר֔וֹשׁ וְגָדוֹל֙ לַיְּהוּדִ֔ים וְרָצ֖וּי לְרֹ֣ב אֶחָ֑יו דֹּרֵ֥שׁ טוֹב֙ לְעַמּ֔וֹ וְדֹבֵ֥ר שָׁל֖וֹם לְכָל־זַרְעֽוֹ׃

< ಎಸ್ತೇರಳು 10 >