< ಎಸ್ತೇರಳು 10 >
1 ೧ ಅಹಷ್ವೇರೋಷ್ ರಾಜನು ತನ್ನ ರಾಜ್ಯಕ್ಕೆ ಸೇರಿರುವ ಎಲ್ಲಾ ದೇಶಗಳಿಗೂ ಮತ್ತು ಸಮುದ್ರದ್ವೀಪಗಳಿಗೂ ತೆರಿಗೆಯನ್ನು ವಿಧಿಸಿದನು.
Raja Ahasweros memberlakukan pembayaran pajak kepada rakyatnya yang berada di seluruh wilayah kerajaannya dari daerah daratan, pesisir hingga ke daerah kepulauan.
2 ೨ ಅವನ ಬಲ ಪ್ರತಾಪಯುಕ್ತವಾದ ಕೃತ್ಯಗಳೂ, ಅವನ ಅನುಗ್ರಹದಿಂದ ಮೊರ್ದೆಕೈಗೆ ಪ್ರಾಪ್ತವಾದ ದೊಡ್ಡಸ್ತಿಕೆಯ ವಿವರಗಳು ಮೇದ್ಯ ಮತ್ತು ಪಾರಸಿಯ ರಾಜಕಾಲ ವೃತ್ತಾಂತಗ್ರಂಥದಲ್ಲಿ ಬರೆದಿರುತ್ತವೆ.
Dan semua keberhasilan yang sudah dicapai Raja Ahasweros karena kehebatannya dan kekuasaannya dicatat dalam buku sejarah raja-raja Media Persia. Berbagai hal yang dilaksanakan oleh Mordekai, orang yang sudah diberikan kewenangan oleh raja, juga tercatat dalam buku tersebut.
3 ೩ ಯೆಹೂದ್ಯನಾದ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನ ದ್ವಿತೀಯ ಸ್ಥಾನದವನೂ, ಯೆಹೂದ್ಯರಲ್ಲಿ ಸನ್ಮಾನಿತನೂ, ತನ್ನ ಬಂಧುಬಳಗಕ್ಕೆ ಪ್ರೀತಿಪಾತ್ರನೂ, ಸ್ವಜನರ ಹಿತಚಿಂತಕನೂ ಮತ್ತು ಸ್ವಕುಲದವರೆಲ್ಲರಿಗೂ ಶಾಂತಿದೂತನೂ, ಪ್ರಾರ್ಥನಾಪರನೂ ಆಗಿದ್ದನು.
Mordekai, orang Yahudi yang menjadi orang kedua di bawah Raja Ahasweros, dianggap sebagai orang hebat oleh semua orang Yahudi. Mereka sangat menghormatinya, karena kesejahteraan dan perdamaian yang sudah diperjuangkannya bagi seluruh bangsanya.