< ಎಸ್ತೇರಳು 3 >
1 ೧ ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ, ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು, ತನ್ನ ಆಸ್ಥಾನದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮ ಸ್ಥಾನವನ್ನು ಅನುಗ್ರಹಿಸಿದನು.
Bangʼ ka gigi nosetimore, ruoth Ahasuerus nomiyo Haman wuod Hamedatha, ja-Agag duongʼ moloyo jodongo duto.
2 ೨ ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ.
Jotich joka ruoth duto mane ni e rangach ne goyo chonggi piny ka gimiyo Haman duongʼ gi luor, nikech ruoth noseketo chik mondo otimne kamano. To Modekai to ne odagi goyone chonge piny kamiyego duongʼ.
3 ೩ ಅರಮನೆಯ ದ್ವಾರಪಾಲಕರು ಮೊರ್ದೆಕೈಗೆ, “ನೀನು ರಾಜಾಜ್ಞೆಯನ್ನು ಮೀರುವುದೇಕೆ?” ಎಂದು ಪ್ರತಿದಿನ ಅವನನ್ನು ಎಚ್ಚರಿಸುತ್ತಿದ್ದರು.
Eka jotich joka ruoth mane ni e rangach nopenjo Modekai niya, “Angʼo momiyo idagi timo chik ma ruoth oketo?”
4 ೪ ಮೊರ್ದೆಕೈಯು ತಾನು ಯೆಹೂದ್ಯನೆನ್ನುವ ಹೆಮ್ಮೆಯ ಹಾಗೂ ಮಾನವನಿಗೆ ಸಾಷ್ಟಾಂಗನಮಸ್ಕಾರ ಮಾಡುವುದಿಲ್ಲ ಎಂಬ ಅವನ ಹಟ ಸಾಗುವುದೇನೋ ನೋಡೋಣ ಎಂದುಕೊಂಡು ಅವರು ಅದನ್ನು ಹಾಮಾನನಿಗೆ ತಿಳಿಸಿದರು.
Pile ka pile ne giwuoyo kode, to nodagi timo kaka chik dwaro. Omiyo neginyiso Haman wachno mondo one anena kaka tim Modekai-ni inyalo yiego nimar nosewachonegi ni en ja-Yahudi.
5 ೫ ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು.
Kane Haman oneno ni Modekai ok nyal goyone chonge piny kata miye luor, mirima nomake.
6 ೬ ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವುದು ಸಾಲದೆಂದೆಣಿಸಿ, ಇವನು ಯೆಹೂದ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಬಳಗದವರನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.
To kaka ne osengʼeyo oganda ma Modekai ae, ne ochayo wach nego mana Modekai kende. Kar timo mano, Haman nodwaro yo monyalo tiekogo oganda gi Modekai duto, ma gin jo-Yahudi, e pinyruodh Ahasuerus duto.
7 ೭ ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭ ಮಾಸವು ಮತ್ತು ಶುಭದಿನವು ಯಾವುದೆಂದು ತಿಳಿದುಕೊಳ್ಳುವುದಕ್ಕೆ “ಪೂರ್” ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.
E higa mar apar gariyo mar ruoth Ahasuerus, e dwe mokwongo, miluongo ni Nisan negigoyo ombulu (miluongo ni pur) e nyim Haman mondo giyier odiechiengʼ gi dwe. To ombulu nolwar e dwe mar apar gariyo dwe miluongo ni Adar.
8 ೮ ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.
Eka Haman nowachone ruoth Ahasuerus niya, “Nitie oganda moro moke e kind ogendini manie pinyruodhi ma timbegi opogore gi mag ogendini duto ma ok oluoro kata mana chike mag ruoth; omiyo ok en wach maber ka ruoth oweyogi aweya.
9 ೯ ಅರಸನ ಚಿತ್ತವಾದರೆ ಅವರನ್ನು ಸಂಹರಿಸಬೇಕು ಎಂಬ ಆಜ್ಞೆಯು ಹೊರಡಲಿ; ಹಾಗೆ ಮಾಡಿದರೆ ನಾನು ರಾಜಭಂಡಾರಕ್ಕಾಗಿ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು” ಎಂದು ಹೇಳಿದನು.
Ka ber ne ruoth to mondo ogol chik mondo otiekgi, an to abiro golo fedha maromo kilo alufu mia angʼwen mondo okete kar keno mar joka ruoth mondo ochul joma biro tiyo tijno.”
10 ೧೦ ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದ್ಯರ ದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿದನು.
Eka ruoth nogolo terene e lwete mi omiyo Haman wuod Hamedatha, ja-Agag, ma jawasik jo-Yahudi.
11 ೧೧ ಅರಸನು ಹಾಮಾನನಿಗೆ ಕೊಟ್ಟು, “ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು” ಎಂದು ಹೇಳಿದನು.
Ruoth nowachone Haman niya, “We golo pesani, to timne jogo gima in ema ihero.”
12 ೧೨ ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.
Kane ochopo tarik apar gadek mar dwe mokwongo, noluong jogoro mag joka ruoth. Negindiko barupe madhi e piny ka piny kendo e dhok mar oganda ka oganda gik mane Haman ochiko mondo ondiki ne jotelo morito pinje mopogore opogore gi jodongo mag ogendini. Barupegi nondik gi nying ruoth Ahasuerus owuon mi ogo sei gi tere mar ruoth.
13 ೧೩ ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ. ಅವರ ಸೊತ್ತನ್ನು ಸೂರೆಮಾಡಿರಿ” ಎಂದೂ ಬರೆದಿತ್ತು.
Joote matero barupegi noor e pinje duto manie bwo loch ruoth kogolo chik ni jo-Yahudi duto nyaka negi matiek pep, bed ni gin jomatindo, joma oti, mon gi nyithindo matindo e odiechiengʼ achiel tarik apar gadek, dwe mar apar gariyo, miluongo ni Adar, kendo mondo oyak mwandugi.
14 ೧೪ ಅದು ಮಾತ್ರವಲ್ಲದೆ, “ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಹೊರಡಿಸಿ ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಎಲ್ಲಾ ಜನರಿಗೆ ತಿಳಿಯುವಂತೆ ಪ್ರಕಟಿಸಬೇಕು” ಎಂದು ಬರೆಯಲಾಗಿತ್ತು.
Nondik wechegi moketgi kaka chik e pinje duto mondo oland ne ogendini gi dhout pinje mondo obed moikore ne chiengʼno.
15 ೧೫ ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನನೊಡನೆ ಮದ್ಯಪಾನ ಮಾಡುವುದಕ್ಕೆ ಕುಳಿತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.
Kaluwore gi chik ruoth, jootego nowuok piyo piyo mine oket milomeno e ohinga mar dala Susa. Ruoth gi Haman nobet piny mondo omethi, to dala maduongʼ mar Susa nobwok kowinjo wachno.