< ಎಸ್ತೇರಳು 3 >

1 ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ, ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು, ತನ್ನ ಆಸ್ಥಾನದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮ ಸ್ಥಾನವನ್ನು ಅನುಗ್ರಹಿಸಿದನು.
چندی بعد، خشایارشا به یکی از وزیران خود به نام هامان، پسر همداتای اجاجی، ارتقاء مقام داده او را رئیس وزرای خود ساخت.
2 ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ.
به دستور پادشاه همهٔ مقامات دربار در حضور هامان سر تعظیم فرود می‌آوردند؛ ولی مردخای به او تعظیم نمی‌کرد.
3 ಅರಮನೆಯ ದ್ವಾರಪಾಲಕರು ಮೊರ್ದೆಕೈಗೆ, “ನೀನು ರಾಜಾಜ್ಞೆಯನ್ನು ಮೀರುವುದೇಕೆ?” ಎಂದು ಪ್ರತಿದಿನ ಅವನನ್ನು ಎಚ್ಚರಿಸುತ್ತಿದ್ದರು.
درباریان به مردخای گفتند: «چرا تو از فرمان پادشاه سرپیچی می‌کنی؟» او در جواب گفت: «من یک یهودی هستم و نمی‌توانم به هامان تعظیم کنم.»
4 ಮೊರ್ದೆಕೈಯು ತಾನು ಯೆಹೂದ್ಯನೆನ್ನುವ ಹೆಮ್ಮೆಯ ಹಾಗೂ ಮಾನವನಿಗೆ ಸಾಷ್ಟಾಂಗನಮಸ್ಕಾರ ಮಾಡುವುದಿಲ್ಲ ಎಂಬ ಅವನ ಹಟ ಸಾಗುವುದೇನೋ ನೋಡೋಣ ಎಂದುಕೊಂಡು ಅವರು ಅದನ್ನು ಹಾಮಾನನಿಗೆ ತಿಳಿಸಿದರು.
هر چند آنها هر روز از او می‌خواستند این کار را بکند، ولی او قبول نمی‌کرد. پس ایشان موضوع را به هامان اطلاع دادند تا ببینند چه تصمیمی خواهد گرفت، زیرا به ایشان گفته بود که او یهودی است.
5 ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು.
وقتی هامان فهمید که مردخای از تعظیم نمودن او خودداری می‌کند، خشمگین شد؛
6 ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವುದು ಸಾಲದೆಂದೆಣಿಸಿ, ಇವನು ಯೆಹೂದ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಬಳಗದವರನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.
و چون دریافت که مردخای یهودی است تصمیم گرفت نه فقط او را بکشد، بلکه تمام یهودیانی را نیز که در قلمرو سلطنت خشایارشا بودند، نابود کند.
7 ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭ ಮಾಸವು ಮತ್ತು ಶುಭದಿನವು ಯಾವುದೆಂದು ತಿಳಿದುಕೊಳ್ಳುವುದಕ್ಕೆ “ಪೂರ್” ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.
در سال دوازدهم سلطنت خشایارشا در ماه نیسان که ماه اول سال است، هامان دستور داد قرعه (که به آن «پور» می‌گفتند) بیاندازند تا تاریخ قتل عام یهودیان معلوم شود. قرعه روز سیزدهم ماه اَدار یعنی ماه دوازدهم را نشان داد.
8 ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.
سپس هامان نزد پادشاه رفت و گفت: «قومی در تمام قلمرو سلطنتی‌تان پراکنده‌اند که قوانین‌شان با قوانین سایر قومها فرق دارد. آنها از قوانین پادشاه سرپیچی می‌کنند. بنابراین، زنده ماندنشان به نفع پادشاه نیست.
9 ಅರಸನ ಚಿತ್ತವಾದರೆ ಅವರನ್ನು ಸಂಹರಿಸಬೇಕು ಎಂಬ ಆಜ್ಞೆಯು ಹೊರಡಲಿ; ಹಾಗೆ ಮಾಡಿದರೆ ನಾನು ರಾಜಭಂಡಾರಕ್ಕಾಗಿ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು” ಎಂದು ಹೇಳಿದನು.
اگر پادشاه را پسند آید فرمانی صادر کنند تا همهٔ آنها کشته شوند و من ده هزار وزنهٔ نقره بابت هزینهٔ این کار به خزانهٔ سلطنتی خواهم پرداخت.»
10 ೧೦ ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದ್ಯರ ದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿದನು.
پادشاه انگشترش را بیرون آورده به هامان که دشمن یهود بود، داد و گفت:
11 ೧೧ ಅರಸನು ಹಾಮಾನನಿಗೆ ಕೊಟ್ಟು, “ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು” ಎಂದು ಹೇಳಿದನು.
«این قوم و دارایی‌شان در اختیار تو هستند، هر طور صلاح می‌دانی با آنها عمل کن.»
12 ೧೨ ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.
پس در روز سیزدهم ماه اول، هامان کاتبان دربار را احضار نمود. آنها به دستور هامان نامه‌هایی به خطها و زبانهای رایج مملکت برای حاکمان، استانداران و مقامات سراسر مملکت نوشتند. این نامه‌ها به اسم پادشاه نوشته و با انگشتر مخصوص او مهر شد
13 ೧೩ ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ. ಅವರ ಸೊತ್ತನ್ನು ಸೂರೆಮಾಡಿರಿ” ಎಂದೂ ಬರೆದಿತ್ತು.
و به‌وسیلۀ قاصدان به تمام استانها فرستاده شد، با این دستور که باید تمام یهودیان، زن و مرد، پیر و جوان در روز سیزدهم ماه اَدار قتل عام شوند و دارایی آنها به غنیمت گرفته شود.
14 ೧೪ ಅದು ಮಾತ್ರವಲ್ಲದೆ, “ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಹೊರಡಿಸಿ ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಎಲ್ಲಾ ಜನರಿಗೆ ತಿಳಿಯುವಂತೆ ಪ್ರಕಟಿಸಬೇಕು” ಎಂದು ಬರೆಯಲಾಗಿತ್ತು.
محتوای این نامه‌ها می‌بایست در هر استان به اطلاع تمام مردم می‌رسید تا همه در روز تعیین شده آماده شوند.
15 ೧೫ ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನನೊಡನೆ ಮದ್ಯಪಾನ ಮಾಡುವುದಕ್ಕೆ ಕುಳಿತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.
این دستور در شوش اعلام شد و قاصدان به فرمان پادشاه آن را به سرعت به سراسر مملکت رساندند. آنگاه پادشاه و هامان مشغول عیش و نوش شدند ولی شهر شوش در پریشانی فرو رفت.

< ಎಸ್ತೇರಳು 3 >