< ಎಸ್ತೇರಳು 4 >
1 ೧ ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ತಲೆಯ ಮೇಲೆ ಹಾಕಿಕೊಂಡು, ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ಮಹಾದುಃಖದಿಂದ ಗೋಳಾಡಿದನು.
Esi Mordekai se nya si dzɔ la, edze eƒe awuwo, ta akpanya, si dzowɔ ɖe ŋuti, eye wòyi dua me henɔ avi fam sesĩe nublanuitɔe.
2 ೨ ಗೋಣಿತಟ್ಟು ಕಟ್ಟಿಕೊಂಡವರು ಅರಮನೆಯ ಒಳಗೆ ಹೋಗಬಾರದೆಂದು ಅಪ್ಪಣೆಯಾಗಿತ್ತು. ಆದುದರಿಂದ ಅವನು ಅರಮನೆಯ ಹೆಬ್ಬಾಗಿಲಿನ ಮುಂದೆ ಬಂದನು.
Etsi tsitre ɖe fiasã la ƒe agbo nu, elabena womeɖe mɔ be ame aɖeke nanɔ akpanya me age ɖe fiasã la me o.
3 ೩ ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು.
Yudatɔwo ta akpanya mlɔ afi ma, tsi nu dɔ, fa avi kple ɣli, eye dzi ɖe le wo ƒo le nutowo katã me le anyigba blibo la dzi le ɖoɖo si fia la wɔ la ta.
4 ೪ ಎಸ್ತೇರಳ ಸೇವಕಿಯರೂ ಕಂಚುಕಿಗಳೂ ರಾಣಿಯಾದ ಆಕೆಯ ಬಳಿಗೆ ಬಂದು ಈ ವಿಚಾರವನ್ನು ತಿಳಿಸಿದಾಗ ಆಕೆಯು ಬಹಳವಾಗಿ ಕಳವಳಗೊಂಡು ಮೊರ್ದೆಕೈಗೆ ವಸ್ತ್ರಗಳನ್ನು ಕಳುಹಿಸಿ, “ಗೋಣಿತಟ್ಟನ್ನು ತೆಗೆದುಬಿಟ್ಟು, ಇವುಗಳನ್ನು ಧರಿಸಿಕೋ” ಎಂದು ಹೇಳಿಕಳುಹಿಸಿದಳು. ಆದರೆ ಅವನು ಅವುಗಳನ್ನು ಸ್ವೀಕರಿಸಲಿಲ್ಲ.
Esi Ester ƒe nyɔnudɔlawo kple ŋutsu tata siwo le edzi kpɔm la va gblɔ nu si Mordekai nɔ wɔwɔm nɛ la, exa nu, eye wòɖo awuwo ɖee be wòatsɔ aɖɔli akpanya si wòta la, gake melɔ̃ o.
5 ೫ ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇಮಿಸಲ್ಪಟ್ಟಿದ್ದ ಹತಾಕನೆಂಬ ರಾಜ ಕಂಚುಕಿಯನ್ನು ಕರೆಯಿಸಿ, “ನೀನು ಮೊರ್ದೆಕೈಯ ಬಳಿಗೆ ಹೋಗಿ, ಇದಕ್ಕೆ ಕಾರಣವೇನು ಎಂದು ವಿಚಾರಿಸಿಕೊಂಡು ಬಾ” ಎಂದು ಹೇಳಿಕಳುಹಿಸಿದಳು.
Azɔ Ester ɖo Hatak, ŋutsu tata si wotia be wòasubɔe la ɖa be wòayi Mordekai gbɔ, abia nu si le fu ɖem nɛ kple nu si tae.
6 ೬ ಹತಾಕನು ಅರಮನೆಯ ಬಾಗಿಲಿನ ಮುಂದಿರುವ ಪಟ್ಟಣದ ಬಯಲಿಗೆ ಮೊರ್ದೆಕೈಯ ಹತ್ತಿರ ಹೋದನು.
Ale Hatak do go yi ablɔ dzi, eye wòkpɔ Mordekai le fiasã la ƒe agboa godo.
7 ೭ ಮೊರ್ದೆಕೈಯು ತನಗೆ ಸಂಭವಿಸಿದ್ದೆಲ್ಲವನ್ನೂ, ಹಾಮಾನನು ಯೆಹೂದ್ಯರನ್ನು ನಾಶಮಾಡಲು ರಾಜಭಂಡಾರಕ್ಕೆ ಕೊಡುತ್ತೇನೆಂದು ನಿಗದಿಪಡಿಸಿದ ಬೆಳ್ಳಿಯ ಹಣ ಇಷ್ಟೆಂಬುದನ್ನೂ ಅವನಿಗೆ ತಿಳಿಸಿದನು.
Tete Mordekai gblɔ nu siwo katã dzɔ la nɛ kple ga home si ŋugbe Haman do be yeatsɔ ade fia la ƒe gadzraɖoƒe me hena Yudatɔwo wuwu.
8 ೮ ಅದರೊಂದಿಗೆ ತಮ್ಮನ್ನು ಸಂಹರಿಸುವುದಕ್ಕೋಸ್ಕರ ಶೂಷನಿನಲ್ಲಿ ಪ್ರಕಟವಾದ ರಾಜಶಾಸನದ ಒಂದು ಪ್ರತಿಯನ್ನು ಕೊಟ್ಟು, “ಇದನ್ನು ಎಸ್ತೇರಳಿಗೆ ತೋರಿಸಿ ವಿವರಿಸು; ಮತ್ತು ಆಕೆಯು ಅರಸನ ಬಳಿಗೆ ಹೋಗಿ ಅವನು ಕೃಪೆ ತೋರಿಸುವಂತೆ ಅವನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹ ಮಾಡಲಿ” ಎಂದು ಹೇಳಿಕಳುಹಿಸಿದನು.
Mordekai tsɔ agbalẽ si me fia la ƒe se si wòde le Susa be woatsrɔ̃ Yudatɔwo katã le la na Hatak, eye wòbia tso esi be wòatsɔe afia Ester. Egblɔ na Hatak be wòagblɔ nya si dzɔ la na Ester, eye wòabia tso esi be wòayi fia la gbɔ, aɖe kuku nɛ be wòakpɔ nublanui na eƒe amewo.
9 ೯ ಹತಾಕನು ಹಿಂದಿರುಗಿ ಬಂದು ಎಸ್ತೇರಳಿಗೆ ಮೊರ್ದೆಕೈಯ ಮಾತುಗಳನ್ನು ತಿಳಿಸಿದನು.
Ale Hatak trɔ yi Ester gbɔ, eye wògblɔ nya si Mordekai be wòagblɔ nɛ la nɛ.
10 ೧೦ ಎಸ್ತೇರಳು ಅವನನ್ನು ಪುನಃ ಮೊರ್ದೆಕೈಯ ಬಳಿಗೆ ಕಳುಹಿಸಿ,
Ester gblɔ na Hatak be wòayi aɖagblɔ na Mordekai be,
11 ೧೧ “ಅರಸನು ತನ್ನ ಬಳಿಗೆ ಬರಲು ಹೇಳಿದ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀಪುರುಷರಿಗುಂಟು. ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು ಎಂಬುದು ಅರಸನ ಎಲ್ಲಾ ಸೇವಕರಿಗೂ ಮತ್ತು ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತು. ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವಾಗಲಿಲ್ಲ” ಎಂದು ಹೇಳಿಸಿದಳು.
“Fia la ƒe dɔnunɔlawo katã kple ame siwo katã le nutowo me la nya be ne ŋutsu alo nyɔnu aɖe yi ɖe fia la gbɔ le xɔ titinatɔ me, evɔ fia la meyɔe o la, se ɖeka si le nu sia ŋuti koe nye be woawu amea. Negbe ɖeko fia la tsɔ eƒe sikatikplɔ ɖo ɖee hafi wòaɖe eƒe agbe. Ke ŋkeke blaetɔ̃e nye esi fia la meɖo du ɖem o.”
12 ೧೨ ಹತಾಕನು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದನು.
Ale Hatak yi ɖagblɔ Ester ƒe nya la na Mordekai,
13 ೧೩ ಅವನು ಎಸ್ತೇರಳಿಗೆ, “ಯೆಹೂದ್ಯರೆಲ್ಲಾ ನಾಶವಾದರೂ ನಾನೊಬ್ಬಳು ಅರಮನೆಯಲ್ಲಿರುವುದರಿಂದ ಉಳಿಯುವೆನು ಎಂದು ಭಾವಿಸಿಕೊಳ್ಳಬೇಡ.
eye Mordekai ɖo eŋu ɖo ɖe Ester be, “Ɖe nèbu be ye ya yeanɔ dedie le afi ma, le fiasã la me, ne wowu Yudatɔwo katã?
14 ೧೪ ನೀನು ಈಗ ಸುಮ್ಮನಿದ್ದುಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ, ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು” ಎಂದು ಹೇಳಿಕಳುಹಿಸಿದನು.
Ne èzi ɖoɖoe le ɣeyiɣi sia tɔgbi me la, Mawu ato mɔ bubu aɖe dzi aɖe Yudatɔwo, ke wò kple fofowò ƒe aƒemetɔwo miatsrɔ̃. Gawu la, ame kae nya be Mawu ŋutɔe da wò ɖe teƒe sia le fiasã la me le ɣeyiɣi sia tɔgbi me?”
15 ೧೫ ಆಗ ಎಸ್ತೇರಳು ಮೊರ್ದೆಕೈಗೆ, “ನೀನು ಹೋಗಿ ಶೂಷನಿನಲ್ಲಿ ಸಿಕ್ಕುವ ಎಲ್ಲಾ ಯೆಹೂದ್ಯರನ್ನು ಕೂಡಿಸು;
Ester ɖo ame ɖa be woagblɔ na Mordekai be:
16 ೧೬ ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.
“Yi nàƒo Yudatɔ siwo katã le Susa la nu ƒu, eye miatsi nu dɔ ɖe tanye, migaɖu nu alo miano nu o, ŋkeke etɔ̃ kple zã etɔ̃. Nye kple nye subɔlawo hã míawɔ nenema ke. Ekema, togbɔ be wode se sesẽ aɖe ɖe eŋu hã la, mayi aɖakpɔ fia la kpɔ. Ne meku la, maku faa!”
17 ೧೭ ಮೊರ್ದೆಕೈ ಹಿಂದಿರುಗಿ ಹೋಗಿ ಎಸ್ತೇರಳು ಹೇಳಿದಂತೆಯೇ ಮಾಡಿದನು.
Ale Mordekai wɔ nu si Ester ɖo nɛ.